ಮಳೆ ಹಾನಿಗೀಡಾದ ಪ್ರದೇಶಗಳಿಗೆ ಜಿ.ಪಂ.ಸಿಇಓ ಯೋಗೀಶ್ ಭೇಟಿ ಪರಿಶೀಲನೆ


Team Udayavani, Nov 25, 2021, 5:39 PM IST

30rain

ಹುಣಸೂರು: ತಾಲೂಕಿನಾದ್ಯಂತ ಕಳೆದ ಎರಡು ತಿಂಗಳಲ್ಲಿ ಸುರಿದ ಅಕಾಲಿಕ ಮಳೆಯಿಂದ ಹಾನಿಗೊಳಗಾಗಿರುವ ಶಾಲೆ-ಅಂಗನವಾಡಿ ಹಾಗೂ ಕೆರೆ ಕಟ್ಟೆಗಳಿಗೆ ಜಿಲ್ಲಾ ಪಂಚಾಯ್ತಿ ಸಿಇಓ ಯೋಗೀಶ್‌ರವರು ಸ್ಥಳೀಯ ಅಧಿಕಾರಿಗಳೊಂದಿಗೆ ಭೇಟಿಯಾಗಿ ಪರಿಶೀಲನೆ ನಡೆಸಿದರು.

ಬುಧವಾರ ತಾ.ಪಂ. ಇಓ ಗಿರೀಶ್ ಮತ್ತಿತರ ಅಧಿಕಾರಿಗಳೊಂದಿಗೆ ತಾಲೂಕಿನ ಬಿಳಿಕೆರೆ ಹೋಬಳಿಯ ಹಳೇಬೀಡು ಅಂಗನವಾಡಿ, ಹುಸೇನಪುರ ಗ್ರಾ.ಪಂ.ನ ತೆಂಕಲಕೊಪ್ಪಲು ಗ್ರಾಮದ ಪ್ರೌಢಶಾಲೆ, ಹೊಸರಾಮೇನಹಳ್ಳಿಯ ಹಿರಿಯ ಪ್ರಾಥಮಿಕ ಶಾಲೆ, ಕೃಷ್ಟಾಪುರ ಸರಕಾರಿ ಪ್ರಾಥಮಿಕ ಶಾಲೆ, ಗಾವಡಗೆರೆ ಹಿರಿಯ ಪ್ರಾಥಮಿಕ ಶಾಲೆಗಳಿಗೆ ಭೇಟಿ ಇತ್ತು ಹಾನಿಯನ್ನು ಪರಿಶೀಲಿಸಿದರು.

ಇದೇ ವೇಳೆ ಮೈದನಹಳ್ಳಿ ಗ್ರಾಮದ ಗೌಡನಕಟ್ಟೆ ಕೆರೆ ಏರಿ ರಸ್ತೆ ಮಳೆಯಿಂದ ಸಂಪೂರ್ಣ ಹಾನಿಯಾಗಿರುವುದನ್ನು ಪರಿಶೀಲಿಸಿ, ನರೇಗಾ ಮತ್ತು ವಿಪತ್ತು ನಿರ್ವಹಣೆ ಯೋಜನೆಯಡಿ ದುರಸ್ತಿ ಮಾಡುವಂತೆ, ದೊಡ್ಡ ಶಾಲಾ ಆವರಣವಿರುವೆಡೆಗಳಲ್ಲಿ ನರೇಗಾ ಯೋಜನೆ ಬಳಸಿ ತರಕಾರಿ ಬೆಳೆಯುವಂತೆ ಸಿ.ಇ.ಓ.ಯೋಗೀಶ್ ಸೂಚಿಸಿದರು.

98 ಶಾಲಾ ಕೊಠಡಿಗೆ ಹಾನಿ

ತಾಲೂಕಿನಲ್ಲಿ ಈವರೆಗೆ ಒಟ್ಟು 98 ಶಾಲಾ ಕೊಠಡಿಗಳಿಗೆ ಹಾನಿಯಾಗಿದ್ದು, ಬಹುತೇಕ ಕಡೆಗಳಲ್ಲಿ ತರಗತಿಗಳನ್ನು ನಡೆಸಲಾಗದ ಸ್ಥಿತಿ ಇದೆ ಎಂದು ಬಿಇಓ ನಾಗರಾಜ್ ಸಿಇಓಗೆ ಮಾಹಿತಿ ನೀಡಿದರೆ, ಸಿಡಿಪಿಓ ರಶ್ಮಿ ತಾಲೂಕಿನಲ್ಲಿ ಒಟ್ಟು 26 ಅಂಗನವಾಡಿಗಳಿಗೆ ಹಾನಿಯಾಗಿದೆ ಎಂದು ತಿಳಿಸಿದರು.

ಇದನ್ನೂ ಓದಿ:ರಾಷ್ಟ್ರದಲ್ಲಿ ದೇವರನ್ನು ಕಾಣುತ್ತಿದ್ದ ಪೇಜಾವರ ಶ್ರೀ

ಪ್ರಸ್ತಾವನೆಗೆ ಸೂಚನೆ

ತಾಲೂಕಿನಲ್ಲಿ ಅತಿಯಾದ ಮಳೆಯಿಂದಾಗಿ ಹಾನಿಗೊಂಡಿರುವ ಶಾಲಾ-ಅಂಗನವಾಡಿ ಕಟ್ಟಡಗಳನ್ನು ಪರಿವೀಕ್ಷಣೆ ನಡೆಸಿ, ವಾಸ್ತವ ಸ್ಥಿತಿಯನ್ನು ವಿಡಿಯೋ ಚಿತ್ರೀಕರಿಸಿ, ಛಾಯಾ ಚಿತ್ರ ಹಾಗೂ ಅಗತ್ಯ ದಾಖಲಾತಿಗಳೊಂದಿಗೆ ಪ್ರಸ್ತಾವನೆ ಸಲ್ಲಿಸುವಂತೆ ಬಿಇಓ ನಾಗರಾಜ್, ಸಿಡಿಪಿಓ ರಶ್ಮಿ ಹಾಗೂ ಎಇಇ ಪ್ರಭಾಕರ್‌ಗೆ ಸೂಚಿಸಿದರು. ಕೆಲವೆಡೆ ಶಾಲಾ ಕಟ್ಟಡಗಳು ಬೀಳುವ ಸ್ಥಿತಿಯಲ್ಲಿರುವುದನ್ನು ಕಂಡು ತರಗತಿ ನಡೆಸದಂತೆ ಸಲಹೆ ನೀಡಿದರು.

ಬಿಸಿಯೂಟ ಸವಿದ ಸಿಇಓ

ಗಾವಡಗೆರೆಯ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಮದ್ಯಾಹ್ನ ಮಕ್ಕಳೊಂದಿಗೆ ಬಿಸಿಯೂಟ ಮಾಡಿದ ಸಿಇಓ ಯೋಗಿಶ್‌ರವರು ಇಲ್ಲಿನ ಶಾಲಾ ಆವರಣ ವಿಸ್ತಾರವಾಗಿದ್ದು, ನರಗಾ ಯೋಜನೆಯಡಿ ಕಿಚನ್ ಗಾರ್ಡನ್ ಮಾಡುವ ಮೂಲಕ ತರಕಾರಿ ಬೆಳೆಯಲು ಸೂಚಿಸಿದರು.

ಟಾಪ್ ನ್ಯೂಸ್

Cardamom: ಜಾಗತಿಕ ಉತ್ಪಾದನೆ ಕುಸಿತ : ಏಲಕ್ಕಿಗೂ ಶುಕ್ರದೆಸೆ: ಕೆ.ಜಿ.ಗೆ 3,000 ರೂ.!

Cardamom: ಜಾಗತಿಕ ಉತ್ಪಾದನೆ ಕುಸಿತ : ಏಲಕ್ಕಿಗೂ ಶುಕ್ರದೆಸೆ: ಕೆ.ಜಿ.ಗೆ 3,000 ರೂ.!

Adani

Adani Group: ಸಾಲ ಅಗತ್ಯವಿಲ್ಲ: ಅದಾನಿ “ಆರ್ಥಿಕ ಶಕ್ತಿ’ ಪ್ರದರ್ಶನ

CM DCM

Siddaramaiah ಸಂಪುಟ ಸೇರಲು ಭರ್ಜರಿ ಲಾಬಿ: ಆಕಾಂಕ್ಷಿಗಳು ಯಾರು? ಕೆಲವರಿಗೆ ಕೊಕ್‌?

1-bbbbb

Karnataka BJP; ಬಣ ಸಂಘರ್ಷ ತೀವ್ರ…;ಶಿಸ್ತುಕ್ರಮಕ್ಕೆ ವಿಜಯೇಂದ್ರ ಪಟ್ಟು?

DCM-Fadnavis

Assembly Election: ಮಹಾರಾಷ್ಟ್ರಕ್ಕೆ ಫ‌ಡ್ನವೀಸ್‌ ಸಿಎಂ?: 2-3 ದಿನಗಳಲ್ಲೇ ಪ್ರಮಾಣವಚನ

ಇಂದು ಅಶೋಕ್‌ ನೇತೃತ್ವದ ಸಭೆ; ಡಿ. 7ಕ್ಕೆ ಬಿಜೆಪಿ ಕೋರ್‌ ಕಮಿಟಿ ಸಭೆ

BJP: ಇಂದು ಅಶೋಕ್‌ ನೇತೃತ್ವದ ಸಭೆ; ಡಿ. 7ಕ್ಕೆ ಬಿಜೆಪಿ ಕೋರ್‌ ಕಮಿಟಿ ಸಭೆ

Supriya-Sule

Maha Election: ಡಿಕೆಶಿ ಸೇರಿ ಕಾಂಗ್ರೆಸ್‌ ಜತೆ ಇವಿಎಂ ಬಗ್ಗೆ ಚರ್ಚೆ: ಸಂಸದೆ ಸುಪ್ರಿಯಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

MUDA CASE: ತನಿಖೆಗೂ ಮುನ್ನವೇ ದಾಖಲೆ ನಾಪತ್ತೆ?

MUDA CASE: ತನಿಖೆಗೂ ಮುನ್ನವೇ ದಾಖಲೆ ನಾಪತ್ತೆ?

Kamsale-kumaraswami

Mysuru: ‘ಕೋಲು ಮಂಡೆ ಜಂಗಮ’ ಹಾಡು ನೃತ್ಯ ಸಂಯೋಜಕ ಕಂಸಾಳೆ ಕಲಾವಿದ ಕುಮಾರಸ್ವಾಮಿ ನಿಧನ

GTD

JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ

GTD

Mysuru: ಜೆಡಿಎಸ್‌ ವರಿಷ್ಠರಿಗೆ ನಾನು ಬೇಡ, ನನ್ನ ಮಗ ಬೇಕಾಗಿದ್ದಾನೆ: ಜಿ.ಟಿ.ದೇವೇಗೌಡ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Cardamom: ಜಾಗತಿಕ ಉತ್ಪಾದನೆ ಕುಸಿತ : ಏಲಕ್ಕಿಗೂ ಶುಕ್ರದೆಸೆ: ಕೆ.ಜಿ.ಗೆ 3,000 ರೂ.!

Cardamom: ಜಾಗತಿಕ ಉತ್ಪಾದನೆ ಕುಸಿತ : ಏಲಕ್ಕಿಗೂ ಶುಕ್ರದೆಸೆ: ಕೆ.ಜಿ.ಗೆ 3,000 ರೂ.!

Adani

Adani Group: ಸಾಲ ಅಗತ್ಯವಿಲ್ಲ: ಅದಾನಿ “ಆರ್ಥಿಕ ಶಕ್ತಿ’ ಪ್ರದರ್ಶನ

courts-s

Udupi: ವಿಮಾನಯಾನ ವಿಳಂಬದ ವಿರುದ್ಧ ನ್ಯಾಯಾಲಯದಲ್ಲಿ ಜಯ

CM DCM

Siddaramaiah ಸಂಪುಟ ಸೇರಲು ಭರ್ಜರಿ ಲಾಬಿ: ಆಕಾಂಕ್ಷಿಗಳು ಯಾರು? ಕೆಲವರಿಗೆ ಕೊಕ್‌?

1-bbbbb

Karnataka BJP; ಬಣ ಸಂಘರ್ಷ ತೀವ್ರ…;ಶಿಸ್ತುಕ್ರಮಕ್ಕೆ ವಿಜಯೇಂದ್ರ ಪಟ್ಟು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.