ಶುಕ್ರವಾರದ ರಾಶಿ ಫಲ : ಇಲ್ಲಿದೆ ನೋಡಿ ನಿಮ್ಮ ಗ್ರಹಬಲ
Team Udayavani, Nov 26, 2021, 7:48 AM IST
ಮೇಷ: ವಾಕ್ ಚತುರತೆಯಿಂದ ಕೂಡಿದ ಕಾರ್ಯವೈಖರಿ. ಸರಕಾರೀ ವ್ಯವಹಾರಗಳಲ್ಲಿ ಪ್ರಗತಿ. ಸ್ವಸಾಮರ್ಥ್ಯದಿಂದ ಪರಿಶ್ರಮದಿಂದ ಕೂಡಿದ ಅಧಿಕ ಧನಾರ್ಜನೆ. ಎಲ್ಲಾ ಜನರಿಂದಲೂ ಗೌರವ ಆದರ ಮನ್ನಣೆ ದೊರಕುವ ದಿನ.
ವೃಷಭ: ಸಂಪೂರ್ಣ ದೇವತಾನುಗ್ರಹದಿಂದ ಕೂಡಿದ ದಿನ. ಧಾರ್ಮಿಕ ಕಾರ್ಯಗಳ ನೇತೃತ್ವ. ದೂರದ ವ್ಯವಹಾರಗಳಲ್ಲಿ ಅನಿರೀಕ್ಷಿತ ಅಭಿವೃದ್ಧಿ. ಆಸ್ತಿ ವಿಚಾರಗಳಲ್ಲಿ ಉತ್ತಮ ಬೆಳವಣಿಗೆ. ಗೃಹದಲ್ಲಿ ಸಂತಸದ ವಾತಾವರಣ.
ಮಿಥುನ: ಹೆಚ್ಚಿದ ದೇಹಾಯಾಸ ಪರಿಶ್ರಮದಿಂದ ಕೂಡಿದ ಕಾರ್ಯವೈಖರಿ. ಅನ್ಯರಿಗೆ ಸಹಾಯ ಮಾಡಲು ಹೋಗಿ ತೊಂದರೆಗೊಳಗಾಗದಿರಿ. ಧಾರ್ಮಿಕ ಕಾರ್ಯಗಳಿಗೆ ಧನವ್ಯಯ. ಹಣಕಾಸಿನ ವಿಚಾರಗಳಲ್ಲಿ ಸಾಹಸ ಪ್ರವೃತ್ತಿ ಸಲ್ಲದು.
ಕರ್ಕ: ಆರ್ಥಿಕ ವಿಚಾರದಲ್ಲಿ ಅಧಿಕ ಗಮನಹರಿಸುವಿಕೆ. ಸಾಹಸ ಪ್ರವೃತ್ತಿಯ ಕಾರ್ಯ. ಹೆಚ್ಚಿದ ಜನಸಂಪರ್ಕ. ಉದ್ಯೋಗ ವ್ಯವಹಾರಗಳಲ್ಲಿ ವಾಕ್ಚತುರತೆಯ ನಡೆ. ಆಸ್ತಿ ವಿಚಾರಗಳಲ್ಲಿ ಗೊಂದಲ. ಅವಿವಾಹಿತರಿಗೆ ವಿವಾಹ ಯೋಗ.
ಸಿಂಹ: ಅಧ್ಯಯನದಲ್ಲಿ ಆಸಕ್ತಿ. ಅನ್ಯರಲ್ಲಿ ಅವಲಂಬಿತರಾಗದೇ ಗಾಂಭೀರ್ಯದಿಂದ ಕೂಡಿದ ವ್ಯವಹಾರದಿಂದ ಯಶಸ್ಸು. ಆರೋಗ್ಯದಲ್ಲಿ ಸುಧಾರಣೆ. ಹಣಕಾಸಿನ ವಿಚಾರದಲ್ಲಿ ಅಜಾಗ್ರತೆಯಿಂದ ನಷ್ಟ ಸಂಭವ. ಹಿರಿಯರಿಂದ ಸಂತೋಷ.
ಕನ್ಯಾ: ದೈಹಿಕ ಮಾನಸಿಕ ಸಂತುಷ್ಟತೆ. ವಿದ್ಯಾರ್ಥಿಗಳಿಗೆ ಅನುಕೂಲಕರ ಅಭಿವೃದ್ಧಿದಾಯಕ ದಿನ. ಗೌರವ ಆದರಗಳು ಲಭಿಸುವ ಅವಕಾಶ. ಉದ್ಯೋಗ ವ್ಯವಹಾರಗಳಲ್ಲಿ ಜವಾಬ್ದಾರಿಯುತ ನಡೆಯಿಂದ ಕೀರ್ತಿ, ತೃಪ್ತಿ.
ತುಲಾ: ಎಲ್ಲಾ ಕೆಲಸ ಕಾರ್ಯಗಳಲ್ಲಿ ಲಾಭ. ಪಾಂಡಿತ್ಯ ಸುಖಾದಿಗಳು ವೃದ್ಧಿ. ಸ್ತ್ರೀ ಪುರುಷರಿಗೆ ಪರಸ್ಪರರ ಸಹಕಾರ. ಉತ್ತಮ ಧನ ಸಂಚಯನ. ಆಸ್ತಿ ವಿಚಾರ ಗಳಲ್ಲಿ ಎಚ್ಚರಿಕೆ ಅಗತ್ಯ. ಗೃಹದಲ್ಲಿ ಚರ್ಚೆಗೆ ಅವಕಾಶ ನೀಡದಿರಿ.
ವೃಶ್ಚಿಕ: ಆರೋಗ್ಯ ವೃದ್ಧಿ. ಅನಿರೀಕ್ಷಿತ ಸ್ಥಾನ ಸುಖಾದಿ ಪ್ರಾಪ್ತಿ. ಹಿರಿಯ ಅಧಿಕಾರಿಗಳ ಸಹಕಾರ ಪ್ರೋತ್ಸಾಹಾದಿ ಲಾಭ. ಮಾನಸಿಕ ತೃಪ್ತಿ. ನೂತನ ಮಿತ್ರರ ಸಮಾಗಮ. ವಿದ್ಯಾರ್ಥಿಗಳಿಗೆ ಅನುಕೂಲಕರ ಪರಿಸ್ಥಿತಿ ನಿರ್ಮಾಣ.
ಧನು: ಉತ್ತಮ ದೈಹಿಕ ಮಾನಸಿಕ ಆರೋಗ್ಯ. ಧನಾರ್ಜನೆಗೆ ಕೊರತೆ ಕಾಣದು. ಪಾಲುದಾರರಲ್ಲಿ ಸಾಮರಸ್ಯಕ್ಕೆ ಆದ್ಯತೆ ನೀಡಿ. ವಿದ್ಯಾರ್ಥಿಗಳಿಗೆ ಸಣ್ಣ ಪ್ರಯಾಣ ಸಂಭವ. ಗುರುಹಿರಿಯರ ಆರೋಗ್ಯ ಬಗ್ಗೆ ಗಮನಿಸಿ.
ಮಕರ: ಬಂಧುಮಿತ್ರರ ಸಹಕಾರ. ಹಣಕಾಸಿನ ವಿಚಾರ ದಲ್ಲಿ ಏರಿಳಿತವಾದರೂ ಲಾಭಾಂಶ ವೃದ್ಧಿ. ಪರಊರ ಸಹೋದ್ಯೋಗಿಗಳಿಂದ ಸಹಕಾರ ವೃದ್ಧಿ. ಗೃಹೋಪಕರಣ ವಸ್ತು ಸಂಗ್ರಹ. ಮಕ್ಕಳಿಂದಲೂ ದಾಂಪತ್ಯದಲ್ಲೂ ಸಂತೋಷ.
ಕುಂಭ: ನೂತನ ಮಿತ್ರರ ಸಮಾಗಮ. ಉದ್ಯೋಗ ವ್ಯವಹಾರಗಳಲ್ಲಿ ನಿರೀಕ್ಷಿತ ಸ್ಥಾನ ಗೌರವಾದಿ ಸುಖ. ಅಧಿಕ ಧನಲಾಭ. ಸಾಂಸಾರಿಕ ಸುಖ ತೃಪ್ತಿದಾಯಕ. ಧಾರ್ಮಿಕ ಸ್ಥಳಗಳ ಸಂದರ್ಶನ. ವಿದ್ಯಾರ್ಥಿಗಳಿಗೆ ಸಕಲ ಸೌಕರ್ಯಗಳ ಲಾಭ.
ಮೀನ: ಆರೋಗ್ಯ ವೃದ್ಧಿ. ದೈನಂದಿನ ಉದ್ಯೋಗ ವ್ಯವಹಾರಗಳಲ್ಲಿ ಸುದೃಢತೆ. ಸ್ಥಾನಮಾನ ಗೌರವ ವೃದ್ಧಿ. ಪಾಲುದಾರಿಕಾ ವ್ಯವಹಾರಗಳಲ್ಲಿ ತಾಳ್ಮೆ ಸಹನೆ ಅಗತ್ಯ. ದೀರ್ಘ ಪ್ರಯಾಣ ಸಂಭವ. ಉತ್ತಮ ಧನಾರ್ಜನೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Horoscope: ಈ ರಾಶಿಯವರು ಜಾಗರೂಕತೆಯಿಂದ ಹೆಜ್ಜೆಯಿಡಿರಿ
Daily Horoscope: ಸಹಾಯ ಯಾಚಿಸಿದವರಿಗೆ ನೆರವಾಗುವ ಅವಕಾಶ, ಕೆಲಸದ ಒತ್ತಡ ಆರಂಭ
Daily Horoscope: ಅವಿವಾಹಿತರಿಗೆ ಸಂಬಂಧ ಕೂಡಿಬರುವ ಸೂಚನೆ, ಆರೋಗ್ಯದ ಕಡೆಗೆ ಗಮನ ಇರಲಿ
Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ
Daily Horoscope; ದುಷ್ಟರೊಂದಿಗೆ ವಾಗ್ವಾದ ಬೇಡ, ಆರೋಗ್ಯದ ಬಗ್ಗೆ ಎಚ್ಚರಿಕೆ ಇರಲಿ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Kaup ಪುರಸಭೆ: ರಸ್ತೆ ಬದಿಯಲ್ಲಿ ಖಾಲಿ ಬಿಯರ್ ಬಾಟಲಿ ಸದ್ದು
JPC on Adani issue;ನಿಯಮ 267 ಅಡಿಯಲ್ಲಿ ಪ್ರಸ್ತಾಪಿಸಲು ಅವಕಾಶ ನೀಡದ್ದಕ್ಕೆ ಖರ್ಗೆ ಆಕ್ರೋಶ
IPL Auction: ಅಗ್ಗಕ್ಕೆ ಸೇಲಾದ ಪಾಂಡೆ, ಜ್ಯಾಕ್ಸ್ ಗೆ ಬಂಪರ್, ಬೆಂಗಳೂರಿಗೆ ಬಂದ ಡೇವಿಡ್
Mysuru; ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ: ಪ್ರಸ್ತಾವನೆ ಸಲ್ಲಿಸುವಂತೆ ಸಿದ್ದರಾಮಯ್ಯ ಸೂಚನೆ
Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.