ಮಂಗಳೂರು : ಮಹಿಳೆಯರ ಜತೆ ವೈದ್ಯಾಧಿಕಾರಿಯ ಅಸಹ್ಯ ವರ್ತನೆ ;ವಿಡಿಯೋ ವೈರಲ್
Team Udayavani, Nov 26, 2021, 12:23 PM IST
ಮಂಗಳೂರು : ವೈದ್ಯಾಧಿಕಾರಿಯಾಗಿದ್ದ ಡಾ. ರತ್ನಾಕರ್ ಅವರು ಮಹಿಳಾ ಸಿಬ್ಬಂದಿಗಳ ಜತೆ ಅನುಚಿತ ವರ್ತನೆ ತೋರಿದ ವಿಡಿಯೋಗಳು ವೈರಲ್ ಆಗುತ್ತಿವೆ.
ಡಾ. ರತ್ನಾಕರ್ ವಿರುದ್ದ ಕೆಲ ತಿಂಗಳ ಹಿಂದೆ ದೂರು ಬಂದಿದ್ದು ಈ ಬಗ್ಗೆ ಆರೋಗ್ಯ ಇಲಾಖೆಯ ಆಂತರಿಕ ಸಮಿತಿ ಹಾಗೂ ಜಿಲ್ಲಾ ಮಟ್ಟದ ದೂರು ಸಮಿತಿಯಿಂದಲೂ ತನಿಖೆ ನಡೆಸಲಾಗಿತ್ತು. ಪ್ರಾಥಮಿಕ ಹಂತದ ತನಿಖೆಯ ವೇಳೆ ತಪ್ಪೆಸಗಿರುವುದು ಸಾಬೀತಾಗಿರುವುದರಿಂದ ಈ ಬಗ್ಗೆ ಸರಕಾರಕ್ಕೆ ವರದಿಯನ್ನು ಸಲ್ಲಿಸಲಾಗಿತ್ತು. ಆ ಪ್ರಕಾರ ಅವರನ್ನು ಕರ್ತವ್ಯದಿಂದ ಅಮಾನತಿನಲ್ಲಿರಸಲು ಆದೇಶವಾಗಿರುತ್ತದೆ ಎಂದು ದಕ್ಷಿಣ ಕನ್ನಡ , ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ.ತಿಳಿಸಿದ್ದಾರೆ.
ಡಾ. ರತ್ನಾಕರ್ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಕಾರ್ಯಕ್ರಮ ಅಧಿಕಾರಿಯಾಗಿದ್ದು ಅವರನ್ನು ಕಳೆದ ನ. 8 ರಿಂದ ಅಮಾನತಿನಲ್ಲಿದ್ದಾರೆ. ಆರೋಗ್ಯ ಇಲಾಖೆಯ ವತಿಯಿಂದ ಇಲಾಖಾ ತನಿಖೆ ನಡೆಯುತ್ತಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.
ಕಚೇರಿಯಲ್ಲೇ ಮಹಿಳಾ ಸಿಬ್ಬಂದಿಗಳೊಂದಿಗೆ ಅಶ್ಲೀಲವಾಗಿ ವರ್ತಿಸಿದ ವಿಡಿಯೋಗಳು ಸಾಮಾಜಿಕ ತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿವೆ.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.