ಡಾ| ಎಂ.ಎನ್. ರಾಜೇಂದ್ರ ಕುಮಾರ್‌ಗೆ “ಮಾಧ್ಯಮ ಕನ್ನಡ ರಾಜ್ಯೋತ್ಸವ ಪ್ರಶಸ್ತಿ’
Team Udayavani, Nov 27, 2021, 5:26 AM IST
ಮಂಗಳೂರು: ಕರ್ನಾಟಕ ಮಾಧ್ಯಮ ಸಹಕಾರ ಹಾಗೂ ನ್ಯೂಸ್ ಪೇಪರ್ಸ್ ಅಸೋಸಿಯೇಶನ್ ಆಫ್ ಕರ್ನಾಟಕ ಬೆಂಗಳೂರು ಇದರ ವತಿಯಿಂದ ನೀಡಲಾಗುವ ಮಾಧ್ಯಮ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಸಹಕಾರ ರತ್ನ ಡಾ| ಎಂ. ಎನ್. ರಾಜೇಂದ್ರ ಕುಮಾರ್ ಆಯ್ಕೆ ಗೊಂಡಿದ್ದಾರೆ.
ಪ್ರಶಸ್ತಿ ಪ್ರದಾನ ಸಮಾರಂಭವು ಡಿ. 26ರಂದು ಬೆಂಗಳೂರು ನಗರ ಕೆ. ಆರ್. ರಸ್ತೆ ಕೋಟೆಯಲ್ಲಿರುವ ಬೆಂಗಳೂರು ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನ ಸಂಸ್ಥೆಯ ಆವರಣದ ಬಿ.ಎಂ.ಸಿ. ಸಭಾಂಗಣದಲ್ಲಿ ನಡೆಯಲಿದೆ. ನ್ಯೂಸ್ ಪೇಪರ್ಸ್ ಅಸೋಸಿಯೇಶನ್ ಆಫ್‌ಕರ್ನಾಟಕ ಸಂಸ್ಥೆ ದಶಮಾನೋತ್ಸವ ಆಚರಿಸುತ್ತಿರುವ ಸಂದರ್ಭ ವಿವಿಧ ಕ್ಷೇತ್ರಗಳ ಗಣ್ಯರಿಗೆ ಮಾಧ್ಯಮ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ನೀಡುತ್ತಿದ್ದು ಸಹಕಾರ ಕ್ಷೇತ್ರದಲ್ಲಿ ಅದ್ವಿತೀಯ ಸಾಧನೆಗೈದಿರುವ ಡಾ| ಎಂ.ಎನ್. ರಾಜೇಂದ್ರ ಕುಮಾರ್ ಅವರನ್ನು ಆಯ್ಕೆ ಮಾಡಿರುವ ಬಗ್ಗೆ ಅಭಿನಂದನಾ ಪತ್ರವನ್ನು ಶುಕ್ರವಾರ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಶ್ರಾವಣ ಲಕ್ಷ್ಮಣ್ ಹಸ್ತಾಂತರಿಸಿದರು.
ಗ್ರಾಮೀಣ ಪ್ರದೇಶಗಳಲ್ಲಿ ಬ್ಯಾಂಕಿಂಗ್ ಸೇವೆಯ ಪರಿಕಲ್ಪನೆಯನ್ನು ಅನುಷ್ಠಾನಗೊಳಿಸಿ ಸಹಕಾರಿ ರಂಗಕ್ಕೆ ಹೊಸ ಆಯಾಮವನ್ನು ತಂದುಕೊಟ್ಟ ಇವರು ಕೋರ್‌ಬ್ಯಾಂಕಿಂಗ್ ನಂತಹ ಉತ್ಕೃಷ್ಟ ತಂತ್ರಜ್ಞಾನವನ್ನು ಎಸ್‌ಸಿಡಿಸಿಸಿ ಬ್ಯಾಂಕ್ ನಲ್ಲಿ ಅಳವಡಿಸಿ ಗ್ರಾಹಕರಿಗೆ ಉತ್ತಮ ಸೇವೆಯನ್ನು ನೀಡುವಲ್ಲಿ ಪ್ರಾಮಾಣಿಕವಾಗಿ ಶ್ರಮಿಸಿದ್ದಾರೆ. ಮೊಬೈಲ್ ಬ್ಯಾಂಕ್ ನ್ನು ರಾಜ್ಯದ ಸಹಕಾರಿ ರಂಗದಲ್ಲಿ ಮೊದಲ ಬಾರಿಗೆ ಪರಿಚಯಿಸಿದ ಹೆಗ್ಗಳಿಕೆ ಕೂಡ ಇವರದ್ದಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಜೀವನ ಶೈಲಿ ಸಂಬಂಧಿ ಕಾಯಿಲೆಗೆ ಪರಿಹಾರ ಅಗತ್ಯ
Someshwara ದೇಗುಲ: ಶಿವಪಂಚಾಕ್ಷರಿ ಕೋಟಿ ನಾಮಜಪ ಯಜ್ಞ ಸಂಪನ್ನ
Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ
Dinesh Gundu Rao: ಅನರ್ಹರ ಕಾರ್ಡ್ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ
MUST WATCH
ಹೊಸ ಸೇರ್ಪಡೆ
Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ
ಶ್ರೀಮಂತ ಟೊಕಿಯೊ ಈ ದುಸ್ಥಿತಿಗೆ ತಲುಪಿದ್ಯಾಕೆ…ಈ ದೇಶವೀಗ ಸೆ*ಕ್ಸ್ ಟೂರಿಸಂ ಹಬ್ಬ!
BJP Protest: ʼ1,500 ವರ್ಷದ ಹಿಂದೆ ಅಲ್ಲಾನು ಇರಲಿಲ್ಲ ಮುಲ್ಲಾನೂ ಇರಲಿಲ್ಲʼ: ಸಿ.ಟಿ.ರವಿ
Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ
Road Mishap: ಬೈಕ್ ಗೆ ಕಾರು ಡಿಕ್ಕಿ: ಓರ್ವ ಸಾವು, ಇಬ್ಬರಿಗೆ ಗಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.