ಐವರು ಬಾಂಗ್ಲಾ ಪ್ರಜೆಗಳ ಬಂಧನ..!
Team Udayavani, Nov 27, 2021, 11:16 AM IST
ಬೆಂಗಳೂರು: ಬೆಂಗಳೂರಿನಲ್ಲಿ ಬಾಂಗ್ಲದೇಶದ ಅಕ್ರಮ ವಲಸಿಗರ ಮೇಲೆ ನಿಗಾವಹಿಸಿರುವ ಕೇಂದ್ರ ಅಪರಾಧ ವಿಭಾಗ(ಸಿಸಿಬಿ) ಪೊಲೀಸರು ಶುಕ್ರವಾರ ಇಬ್ಬರು ಮಹಿಳೆ ಯರು ಸೇರಿ ಐವರು ಬಾಂಗ್ಲಾ ಪ್ರಜೆಗಳನ್ನು ಬಂಧಿಸಿದ್ದಾರೆ. ಮೂವರು ಪುರುಷರು ಹಾಗೂ ಇಬ್ಬರು ಮಹಿಳೆಯರನ್ನು ಬಂಧಿಸಲಾಗಿದೆ. ಅವರೊಂದಿಗೆ ಇಬ್ಬರು ಮಕ್ಕಳನ್ನು ವಶಕ್ಕೆ ಪಡೆಯಲಾಗಿದೆ.
ಇತ್ತೀಚೆಗೆ ಮಹಾರಾಷ್ಟ್ರದ ಥಾಣೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 9 ಮಂದಿ ಬ್ಲಾಂಗಾ ಪ್ರಜೆಗಳನ್ನು ಬಂಧಿಸಲಾಗಿತ್ತು. ಅವರ ಮಾಹಿತಿ ಮೇರೆಗೆ ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ ಐವರನ್ನು ಬಂಧಿಸಲಾಗಿದೆ ಎಂದು ಸಿಸಿಬಿ ಮೂಲಗಳು ತಿಳಿಸಿವೆ. ಆರೋಪಿಗಳು ರೈಲು ಮೂಲಕ ಗುರುವಾರವಷ್ಟೇ ನಗರಕ್ಕೆ ಬಂದಿದ್ದು, ಕಾಡುಗೋಡಿಯಲ್ಲಿ ಕಾರ್ಮಿಕರ ಶೆಡ್ ವೊಂದರಲ್ಲಿ ನೆಲೆಸಿದ್ದರು.
ಈ ಬಗ್ಗೆ ಮಾಹಿತಿ ಸಂಗ್ರಹಿಸಿದ ಸಿಸಿಬಿ ಪೊಲೀಸರು, ಸ್ಥಳೀಯ ಪೊಲೀಸರೊಂದಿಗೆ ಕಾರ್ಯಾಚರಣೆ ನಡೆಸಿ ಐವರನ್ನು ವಶಕ್ಕೆ ಪಡೆದಿದ್ದಾರೆ. ವಿಚಾರಣೆ ವೇಳೆ ಆರೋಪಿಗಳು ಪಾಸ್‌ಪೋರ್ಟ್, ವೀಸಾ ಇಲ್ಲದೇ ಅನಧಿಕೃತವಾಗಿ ಭಾರತ ಪ್ರವೇಶಿಸಿ ಬಳಿಕ ನಗರದಲ್ಲಿ ಅಕ್ರಮವಾಗಿ ನೆಲೆಸಿದ್ದರು.
ಇದನ್ನೂ ಓದಿ;- ಕಾನ್ಪುರ ಟೆಸ್ಟ್: ಸಾಹಾ ಬದಲು ವಿಕೆಟ್ ಕೀಪಿಂಗ್ ಗೆ ಆಗಮಿಸಿದ ಕೆ.ಎಸ್.ಭರತ್!
ಬಂಧಿತ ಪುರುಷ ಆರೋಪಿಗಳು ಬಾಂಗ್ಲಾದೇಶದಲ್ಲಿ ಆಟೋ ಚಾಲಕರಾಗಿ ಕೆಲಸ ಮಾಡುತ್ತಿದ್ದರು ಎಂಬುದು ಪ್ರಾಥಮಿಕ ವಿಚಾರಣೆ ವೇಳೆ ಬೆಳಕಿಗೆ ಬಂದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಆರೋಪಿಗಳು ಬೆಂಗಳೂರಿಗೆ ಹೇಗೆ ಬಂದರು, ಯಾರ ಸಹಾಯ ಪಡೆದುಕೊಂಡಿದ್ದಾರೆ ಎಂಬುದರ ಬಗ್ಗೆ ತನಿಖೆ ನಡೆಯಬೇಕಿದೆ ಎಂದು ಸಿಸಿಬಿ ಪೊಲೀಸರು ಹೇಳಿದರು. ಕಾಡುಗೋಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಅಕ್ರಮ ವಲಸಿಗರ ಬಗ್ಗೆ ಎಚ್ಚರಿಕೆ: ಜ್ಞಾನೇಂದ್ರ
ಬೆಂಗಳೂರು: ರಾಜ್ಯದಲ್ಲಿ ಅಕ್ರಮ ವಲಸಿಗರ ಬಗ್ಗೆ ಸರ್ಕಾರ ಎಚ್ಚರಿಕೆ ವಹಿಸಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ. ಸುದ್ದಿಗಾರರ ಜತೆ ಮಾತನಾಡಿದ ಅವರು, ಅಕ್ರಮ ವಲಸಿಗರ ಪಟ್ಟಿ ಮಾಡಲು ಪೊಲೀಸ್ ಠಾಣೆಗಳಿಗೆ ನಿರ್ದೇಶನ ನೀಡಲಾಗಿದೆ ಎಂದು ಹೇಳಿದ್ದಾರೆ.
ಸಿಸಿಬಿ ಪೊಲೀಸರು ಐದು ಜನ ಬಾಂಗ್ಲಾ ಅಕ್ರಮ ವಲಸಿಗರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ರಾಜ್ಯದಲ್ಲಿ ಇರುವ ಅಕ್ರಮ ವಲಸಿಗರ ಪಟ್ಟಿ ಮಾಡಿ ಅವರನ್ನು ಡಿಟೆಂಷನ್ ಸೆಂಟರ್ ತಂದು ಹಾಕಲು ಸೂಚನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ. ಅಕ್ರಮ ವಲಸಿಗರು ದೇಶದ ಭದ್ರತೆಗೆ ಅಪಾಯಕಾರಿ. ಅವರು ಹೇಗೆ ಬಂದಿದ್ದಾರೆ, ಯಾರು ಕಳೆದುಕೊಂಡು ಬಂದಿದ್ದಾರೆ ಎಂಬ ಬಗ್ಗೆ ತನಿಖೆ ನಡೆಸಲಾಗುವುದು.
ಕೆಲವೆಡೆ ಅಕ್ರಮ ವಲಸಿಗರು ಬಿಲ್ಡಿಂಗ್ ಕೆಲಸ ,ಕಾಫಿ ಎಸ್ಟೇಟ್ ಕೆಲಸಕ್ಕೆ ಬಂದಿದ್ದಾರೆ ಎಂಬ ಬಗ್ಗೆ ತನಿಖೆ ನಡೆಸಿ ಮೂಲ ಹುಡಕಲಾಗುವುದು ಎಂದು ಹೇಳಿದರು.ಅಕ್ರಮ ವಲಸಿಗರಿಗೆ ದಾಖಲೆ ಕೊಡಿಸುವ ಜಾಲವೇ ಇದೆ.ಕರ್ನಾಟಕದಲ್ಲಷ್ಟೇ ಅಲ್ಲ, ಅಸ್ಸಾಂ ಭಾಗದಲ್ಲಿ ಇದೆ. ಕೇಂದ್ರಕ್ಕೆ ಹಾಗೂ ಆಯಾ ರಾಜ್ಯಕ್ಕೆ ಈ ಬಗ್ಗೆ ತಿಳಿಸಿದ್ದೇವೆ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Dharmasthala: ಇಂದಿನಿಂದ ಲಕ್ಷದೀಪೋತ್ಸವ… ರಾಜ್ಯಮಟ್ಟದ ವಸ್ತು ಪ್ರದರ್ಶನಕ್ಕೆ ಚಾಲನೆ
Maharashtra: ಮುಖ್ಯಮಂತ್ರಿ ಸ್ಥಾನಕ್ಕೆ ಏಕನಾಥ್ ಶಿಂದೆ ರಾಜೀನಾಮೆ… ಮುಂದಿನ ಸಿಎಂ ಯಾರು?
Mohini Dey: ಎಆರ್ ರೆಹಮಾನ್ ಜತೆ ಸಂಬಂಧ.. ಅವರು ನನಗೆ ತಂದೆ ಸಮಾನ ಎಂದ ಮೋಹಿನಿ
Tiger: ಬೆಂಗಳೂರಿನಿಂದ ತಿರುಪತಿ ಮೃಗಾಲಯಕ್ಕೆ ತಂದಿದ್ದ ರಾಯಲ್ ಬೆಂಗಾಲ್ ಟೈಗರ್ ‘ಮಧು’ ಸಾ*ವು
Mohammed Siraj: ಬಿಟೌನ್‌ನ ಈ ಹಾಟ್ ಬೆಡಗಿ ಜತೆ ಕ್ರಿಕೆಟಿಗ ಸಿರಾಜ್ ಡೇಟಿಂಗ್?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.