![BR-Hills](https://www.udayavani.com/wp-content/uploads/2025/02/BR-Hills-415x249.jpg)
![BR-Hills](https://www.udayavani.com/wp-content/uploads/2025/02/BR-Hills-415x249.jpg)
Team Udayavani, Nov 27, 2021, 12:00 PM IST
ವಾಷಿಂಗ್ಟನ್: ದಕ್ಷಿಣ ಆಫ್ರಿಕಾದ ಅತಿ ಜನನಿಬಿಡ ಪ್ರಾಂತ್ಯವಾದ ಗುಟೆಂಗ್ ನಲ್ಲಿ ಪತ್ತೆಯಾಗಿರುವ ಕೋವಿಡ್ ವೈರಸ್ ನ ಹೊಸ ರೂಪಾಂತರ ತಳಿಗೆ (ಬಿ.1.1.529) ಒಮಿಕ್ರಾನ್ ಎಂದು ವಿಶ್ವಸಂಸ್ಥೆ ಹೆಸರಿಟ್ಟಿದೆ.
ಏನಿದು ಒಮಿಕ್ರಾನ್ ರೂಪಾಂತರಿ?
ದಕ್ಷಿಣ ಆಫ್ರಿಕಾದ ಅತಿ ಜನನಿಬಿಡ ಪ್ರಾಂತ್ಯವಾದ ಗುಟೆಂಗ್ ನಲ್ಲಿ ಈ ವೈರಾಣುವಿರುವ ಹೊಸ ಪ್ರಕರಣಗಳು ಪತ್ತೆಯಾಗಿವೆ. ಅತ್ತ, ಹಾಂಕಾಂಗ್, ಬೋಟ್ಸಾವಾನಾದಲ್ಲಿ ದಾಖಲಾಗಿರುವ ಕೆಲವು ಪ್ರಕರಣಗಳಲ್ಲಿ ಇದೇ ಮಾದರಿಯ ವೈರಾಣು ಪತ್ತೆಯಾಗಿದೆ. ಇದಕ್ಕೆ ಬೋಟ್ಸಾವಾನಾ ರೂಪಾಂತರಿ ಅಥವಾ ಒಮಿಕ್ರಾನ್ ರೂಪಾಂತರಿ ಎಂದು ಹೆಸರಿಡಲಾಗಿದೆ.
ಹೆಚ್ಚು ಶಕ್ತಿಶಾಲಿ
ಸಾಮಾನ್ಯವಾಗಿ ಕೊರೊನಾ ವೈರಾಣುವಿನ ಮೇಲೆ ಪ್ರೊಟೀನ್‌ನಿಂದ ಕೂಡಿದ ಮುಳ್ಳಿನಂಥ ಆಕಾರವಿರುತ್ತದೆ. ಬಿ.1.1.529 ರೂಪಾಂತರಿ ವೈರಾಣುವಿನಲ್ಲಿ ಈ ಪ್ರೋಟೀನ್, ಕನಿಷ್ಟ 30 ಬಾರಿಯಾದರೂ ರೂಪಾಂತರ ಹೊಂದಿದೆದೆ. ಹಾಗಾಗಿ, ಇದು ಈವರೆಗಿನ ಎಲ್ಲಾ ರೂಪಾಂತರಿ ಗಳಿಗಿಂತ ಹೆಚ್ಚು ವೇಗವಾಗಿ, ಹೆಚ್ಚು ಪರಿಣಾಮಕಾರಿಯಾಗಿ ಹರಡ ಬಲ್ಲದು ಎನ್ನಲಾಗಿದೆ. ದಕ್ಷಿಣ ಆಫ್ರಿಕಾದಲ್ಲಿ ಬುಧವಾರ- ಗುರುವಾರಗಳಂದು ದಾಖಲಾಗಿ ರುವ 1,100 ಹೊಸ ಕೊರೊನಾ ಪ್ರಕರಣಗಳಲ್ಲಿ ಶೇ. 90ರಷ್ಟು ಹೊಸ ರೂಪಾಂತರಿ ಪತ್ತೆಯಾಗಿ ರುವುದು ಇದರ ತ್ವರಿತ ಹರಡುವಿಕೆಗೆ ಸಾಕ್ಷಿಯಾಗಿದೆ.
ಸಮಾಧಾನಕರ ಸಂಗತಿ!
ಕೊರೊನಾಕ್ಕೆ ಈವರೆಗೆ ಅಭಿವೃದ್ಧಿಪಡಿಸಲಾಗಿರುವ ಎಲ್ಲಾ ಲಸಿಕೆಗಳು ಈ ಹೊಸ ರೂಪಾಂತರಿ ವೈರಾಣುವನ್ನು ಹತ್ತಿಕ್ಕುವಲ್ಲಿ ಶಕ್ತವಾಗಿವೆ ಎಂದು ವಿಜ್ಞಾನಿಗಳು ತಿಳಿಸಿದ್ದಾರೆ. ಇನ್ನು, ಈ ವೈರಾಣುವಿನಿಂದ ಈವರೆಗೆ ಕಂಡಿರದ ಅತಿ ಭೀಕರ ಕೊರೊನಾ ರೋಗ ಉಂಟಾಗುತ್ತದೆ ಎಂಬುದಂತೂ ಸುಳ್ಳು ಎಂದೂ ವಿಜ್ಞಾನಿಗಳು ತಿಳಿಸಿದ್ದಾರೆ. ಇವೆರಡೂ ವಿಚಾರಗಳು, ಹೊಸ ರೂಪಾಂತರಿಯ ಭೀತಿಯ ನಡುವೆಯೂ ಈ ವಿಚಾರ ಸಮಾಧಾನ ಹಾಗೂ ಆತ್ಮವಿಶ್ವಾಸ ತರುವಂಥದ್ದಾಗಿವೆ.
ಕಟ್ಟೆಚ್ಚರ ವಹಿಸಿ: ಕೇಂದ್ರದ ಸೂಚನೆ
ಕೊರೊನಾ ಹೊಸ ರೂಪಾಂತರಿ ಪತ್ತೆಯಾಗಿರುವ ಹಿನ್ನೆಲೆಯಲ್ಲಿ, ಎಲ್ಲಾ ರಾಜ್ಯಗಳಿಗೆ ಕೇಂದ್ರ ಸರ್ಕಾರ ಕಟ್ಟೆಚ್ಚರದ ಸೂಚನೆ ರವಾನಿಸಿದೆ. “ವಿದೇಶಗಳಿಂದ, ಅದರಲ್ಲೂ ವಿಶೇಷವಾಗಿ ದಕ್ಷಿಣ ಆಫ್ರಿಕಾದಿಂದ ಬರುವ ಪ್ರಯಾಣಿಕರಿಗೆ ಕಡ್ಡಾಯ ಕೊರೊನಾ ಪರೀಕ್ಷೆ ನಡೆಸಬೇಕು. ಜೊತೆಗೆ, ಸಾರ್ವಜನಿಕರಿಗೆ ನಡೆಸಲಾಗುತ್ತಿರುವ ಪರೀಕ್ಷೆಗಳನ್ನು ಇನ್ನೂ ಹೆಚ್ಚಿ ಮಟ್ಟದಲ್ಲಿ ನಡೆಸಬೇಕು’ ಎಂದು ಕೇಂದ್ರ ಆರೋಗ್ಯ ಇಲಾಖೆ ಸೂಚಿಸಿದೆ. ಜೊತೆಗೆ, ಯಾವ ದೇಶಗಳ ಪ್ರಜೆಗಳಿಗೆ ಕೊರೊನಾ ಪರೀಕ್ಷೆಗಳನ್ನು ಕಡ್ಡಾಯಗೊಳಿಸಬೇಕೆಂದು ಸೂಚಿಸುವ ಪಟ್ಟಿಯನ್ನು ಕೇಂದ್ರ ಸರ್ಕಾರ ಪರಿಷ್ಕರಿಸಿದೆ. ಯು.ಕೆ. ಸೇರಿದಂತೆ ಎಲ್ಲಾ ಐರೋಪ್ಯ ರಾಷ್ಟ್ರಗಳು, ದಕ್ಷಿಣ ಆಫ್ರಿಕಾ, ಬ್ರೆಜಿಲ್, ಬಾಂಗ್ಲಾದೇಶ, ಬೋಟ್ಸಾವಾನಾ, ಚೀನಾ, ಮಾರಿಷಸ್, ನ್ಯೂಜಿಲೆಂಡ್, ಜಿಂಬಾಬ್ವೆ, ಸಿಂಗಾಪುರ ದೇಶಗಳ ಜೊತೆಗೆ ಈಗ ಹೊಸದಾಗಿ ಹಾಂಕಾಂಗ್, ಇಸ್ರೇಲ್ ರಾಷ್ಟ್ರಗಳನ್ನು ಸೇರಿಸಲಾಗಿದೆ.
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Obama Is Queer: ಮಾಜಿ ಅಧ್ಯಕ್ಷ ಒಬಾಮಾ ಪತ್ನಿ ಮಿಚೆಲ್ ಗಂಡಸು: ಮಸ್ಕ್ ತಂದೆ
Cut Down: ವೆಚ್ಚ ಕಡಿತ: ಅಮೆರಿಕ ಸರಕಾರಿ ಉದ್ಯೋಗಿಗಳೇ ವಜಾ!
Mexico:ಯುರೋಪ್ ನ Most ವಾಂಟೆಡ್ ಕ್ರಿ*ಮಿನಲ್, ಡ್ರ*ಗ್ ಕಿಂಗ್ ಪಿನ್ ಮಾರ್ಕೋ ಹ*ತ್ಯೆ
Bourbon Whiskey: ಅಮೆರಿಕದ ಬೌರ್ಬನ್ ವಿಸ್ಕಿ ಆಮದು ಸುಂಕ ಕಡಿತ ಮಾಡಿದ ಭಾರತ
You seem to have an Ad Blocker on.
To continue reading, please turn it off or whitelist Udayavani.