ಸಂವಿಧಾನ ದುರ್ಬಳಕೆ ತಡೆಯಿರಿ: ಡಾ| ದೊಡ್ಮನಿ
Team Udayavani, Nov 27, 2021, 12:39 PM IST
ಜೇವರ್ಗಿ: ಬಹುಭಾಷಾ, ಬಹು ಧರ್ಮ, ಬಹು ಸಂಸ್ಕೃತಿಯುಳ್ಳ ಭಾರತದಲ್ಲಿ ರಕ್ತರಹಿತ ಕ್ರಾಂತಿ ತರುವ ಮಹೋನ್ನತ ಆದರ್ಶ ಹೊಂದಿದ ಶ್ರೇಷ್ಠ ಸಂವಿಧಾನದ ದುರ್ಬಳಕೆ ತಡೆದರೇ, ನಾವೆಲ್ಲ ಬಾಬಾ ಸಾಹೇಬ್ ಅಂಬೇಡ್ಕರ್‌ಗೆ ನಿಜವಾದ ಗೌರವ ಸಲ್ಲಿಸಿದಂತೆ ಎಂದು ಉಪನ್ಯಾಸಕ ಡಾ| ಅಶೋಕ ದೊಡ್ಮನಿ ಹೇಳಿದರು.
ಪಟ್ಟಣದ ಡಾ| ಬಿ.ಆರ್. ಅಂಬೇಡ್ಕರ್ ಪುತ್ಥಳಿ ಆವರಣದಲ್ಲಿ ಹಮ್ಮಿಕೊಂಡಿದ್ದ ಸಂವಿಧಾನ ಸಮರ್ಪಣಾ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಬಾಬಾ ಸಾಹೇಬ್ ಅಂಬೇಡ್ಕರ್ ದೇಶದ ಅಭಿವೃದ್ಧಿಗೆ ಹಾಗೂ ಇಲ್ಲಿನ ಜನರ ಬದುಕು ಚೆನ್ನಾಗಿರಲೆಂದು ಭಾರತದ ಸಂವಿಧಾನ ರಚಿಸಿದ್ದಾರೆ ಎಂದರು.
ಸಂವಿಧಾನವನ್ನು 26ನೇ ಜನವರಿ 1950ರಂದು ಭಾರತ ಒಪ್ಪಿಕೊಂಡಿತು. ಸರ್ವರಿಗೂ ಸಮಬಾಳು, ಸರ್ವರಿಗೂ ಸಮಪಾಲು ಸಿಗಬೇಕೆಂದು ಅಂಬೇಡ್ಕರ್ ಉತ್ತಮ ಸಂವಿಧಾನ ರಚಿಸಿದ್ದಾರೆ. ಅಲ್ಲದೇ ದೇಶದ ಸಾಮಾಜಿಕ, ಆರ್ಥಿಕ, ಬಡತನ, ಅನಕ್ಷರತೆ, ಮೂಢನಂಬಿಕೆಗಳನ್ನು ಸರಿಪಡಿಸಲು ಅನೇಕ ಹೋರಾಟ ನಡೆಸಿದ್ದರು ಎಂದು ಹೇಳಿದರು.
ದಲಿತ ಮುಖಂಡರಾದ ಭೀಮರಾಯ ನಗನೂರ, ಮಲ್ಲಣ್ಣ ಕೊಡಚಿ, ಪುಂಡಲೀಕ್ ಗಾಯಕ್ವಾಡ್, ಪ್ರಭಾಕರ ಸಾಗರ, ಬಸಣ್ಣ ಸರಕಾರ, ಸಿದ್ರಾಮ ಕಟ್ಟಿ, ಶ್ರೀಮಂತ ಧನಕರ್, ರವಿ ಕುಳಗೇರಿ, ಶ್ರೀಹರಿ ಕರಕಿಹಳ್ಳಿ, ದೇವಿಂದ್ರ ವರ್ಮಾ, ಶಿವಶರಣ ಮಾರಡಗಿ, ಬಾಗಣ್ಣ ಸಿದ್ನಾಳ, ಸಿದ್ಧು ಜನಿವಾರ, ಪಿರಪ್ಪ ರೆವನೂರ, ವಿಶ್ವರಾಧ್ಯ ಮಾಯೆ, ಮಹೇಶ ಕೊಕೀಲೆ, ಶರಣಪ್ಪ ಲಖಣಾಪುರ, ಸಂಗು ಹರನೂರ, ಮಿಲಿಂದ ಸಾಗರ, ಪ್ರಸನ್‌ಕುಮಾರ ಸಿಂಗೆ, ವಿಶಾಲ ಕುಲಾಲಿ, ಮೌನೇಶ ಹಂಗರಗಿ, ವಿಶ್ವ ಆಲೂರ ಮತ್ತಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi;ಅಂಗನವಾಡಿ ಸಹಾಯಕಿ ಹುದ್ದೆಗೂ ಲಂಚ: ಇಬ್ಬರು ಲೋಕಾ ಬಲೆಗೆ
Kalaburagi: ಭೀಮಾ ನದಿಗೆ ಬಿದ್ದ ಕಬ್ಬಿನ ಲಾರಿ: ಲಾರಿ ಚಾಲಕ ನಾಪತ್ತೆ
ಗುತ್ತಿಗೆದಾರ ಆತ್ಮಹತ್ಯೆ ಪ್ರಕರಣ: ಖರ್ಗೆ ಹೆಸರು ಅನಗತ್ಯವಾಗಿ ತರಲಾಗಿದೆ; ಚೆನ್ನಾರೆಡ್ಡಿ
Afzalpur: ಹುಂಡಿ ನೋಟಿನಲ್ಲಿ “ನಮ್ಮ ಅತ್ತೆ ಬೇಗ ಸಾಯಬೇಕು’ ಬರಹ ಪತ್ತೆ!
MLA Basavaraj Mattimud: ನನ್ನ ಹತ್ಯೆಗೆ ಸೊಲ್ಲಾಪುರದ ರೌಡಿಗಳಿಗೆ ಸುಪಾರಿ: ಶಾಸಕ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.