ಸಂಯುಕ್ತ ಹೋರಾಟ ವೇದಿಕೆಯಿಂದ ರಸ್ತೆ ತಡೆ
Team Udayavani, Nov 27, 2021, 1:28 PM IST
ರಾಯಚೂರು: ಮೂರು ಕೃಷಿ ತಿದ್ದುಪಡಿಸಿ ಕಾಯ್ದೆಗಳನ್ನು ಸಂಸತ್ತಿನಲ್ಲ ಅಂಗೀಕರಿಸಿ ರದ್ದುಪಡಿಸಬೇಕು ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಶುಕ್ರವಾರ ಸಂಯುಕ್ತ ಹೋರಾಟ ವೇದಿಕೆ ಹಾಗೂ ಸಂಯುಕ್ತ ಕಿಸಾನ್ ಮೋರ್ಚಾದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಸಾತ್ ಮೈಲ್ ಕ್ರಾಸ್‌ನ ಸಮೀಪದ ತುಂಗಭದ್ರಾ ಎಡದಂಡೆ ಕಾಲುವೆಯ ಸೇತುವೆ ಮೇಲೆ ರಸ್ತೆ ಸಂಚಾರ ತಡೆದು ಪ್ರತಿಭಟಿಸಿದರು.
ನಂತರ ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ತಹಶೀಲ್ದಾರ್ ಡಾ| ಹಂಪಣ್ಣ ಸಜ್ಜನ್ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಲಾಯಿತು. ದೇಶಕ್ಕೆ ಮರಣ ಶಾಸನವಾಗಲಿರುವ ಮೂರು ಕೃಷಿ ತಿದ್ದುಪಡಿ ಕಾಯ್ದೆಗಳನ್ನು ಹಿಂಪಡೆಯಲು ಸರ್ಕಾರ ಘೋಷಣೆ ಮಾಡಿದೆ. ಈ ನಿರ್ಧಾರವನ್ನು ಸ್ವಾಗತಿಸುತ್ತೇವೆ. ಆದರೆ, ಪ್ರಧಾನಮಂತ್ರಿಗಳು ಕಳೆದ ವರ್ಷವೇ ಈ ನಿರ್ಧಾರ ತೆಗೆದುಕೊಂಡಿದ್ದರೆ, 700 ಜನ ರೈತರ ಪ್ರಾಣ ಕಳೆದುಕೊಳ್ಳುತ್ತಿರಲಿಲ್ಲ. ಈಗಾಗಲೇ ಸರ್ಕಾರ ಘೋಷಿಸಿದಂತೆ ಮೂರು ಕೃಷಿ ಕಾಯ್ದೆಗಳನ್ನು ಸಂಸತ್ತಿನಲ್ಲಿ ಅಂಗೀಕರಿಸಿ ಹಾಗೂ ಬೆಂಬಲ ಬೆಲೆ ಖಾತರಿ ಕಾಯ್ದೆ ರೂಪಿಸಲು ಆಗ್ರಹಿಸಿ ದೆಹಲಿಯಲ್ಲಿ ರೈತರ ಹೋರಾಟ ಮುಂದುವರೆದಿದೆ.
ರಾಜ್ಯ ಸರ್ಕಾರ ಎಪಿಎಂಸಿ ತಿದ್ದುಪಡಿ ಕಾಯ್ದೆಯನ್ನು ಜಾರಿಗೊಳಿಸಿದ ಹಿನ್ನೆಲೆಯಲ್ಲಿ ರಾಜ್ಯದ ಸುಮಾರು 80 ಎಪಿಎಂಸಿಗಳ ತೀವ್ರ ಸಂಕಷ್ಟಕ್ಕೀಡಾಗಿವೆ. ಸಮಗ್ರ ಉತ್ಪಾನದ ವೆಚ್ಚದ (ಸ್ವಾಮಿನಾಥನ ವರದಿ ಪ್ರಕಾರ 50ರಷ್ಟು ಸೇರಿಸಿ) ಆಧಾರದ ಮೇಲೆ ಬೆಲೆ ನಿಗದಿ ಪಡಿಸಬೇಕು ಹಾಗೂ ಕನಿಷ್ಟ ಬೆಂಬಲ ಬೆಲೆ ಖಾತರಿ ಕಾಯ್ದೆ ರೂಪಿಸಬೇಕು ಹಾಗೂ ಎಲ್ಲ ಕೃಷಿ ಉತ್ಪನ್ನಗಳನ್ನು ಬೆಂಬಲ ಬೆಲೆಯಲ್ಲಿಯೇ ಖರೀದಿಸುವ ತೀರ್ಮಾನ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದರು.
ಚಾಮರಸ ಮಾಲಿಪಾಟೀಲ್, ಕೆ.ಜಿ. ವೀರೇಶ, ಮಾರೆಪ್ಪ ಹರವಿ, ಜಿ.ಅಮರೇಶ, ವರಲಕ್ಷ್ಮೀ, ಡಿ.ಎಚ್ ಶರಣಬಸವ, ಕರಿಯಪ್ಪ ಅಚ್ಚೊಳ್ಳಿ, ಬಿ.ಬಸನಲಿಂಗಪ್ಪ, ವೀರೇಶ ಎನ್. ಎಸ್, ಆಂಜನೇಯ ಕುರುಬದೊಡ್ಡಿ, ಸಯ್ಯದ್ ಅನ್ವರ ಹುಸೇನ್, ರಮೇಶ ವೀರಾಪುರ, ಈ ರಂಗನಾಥ ಪ್ರತಿಭಟನೆಯಲ್ಲಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar: ಬಿಜೆಪಿಯವರು ಅಧಿಕಾರಕ್ಕಾಗಿ ಏನು ಮಾಡಲೂ ಹೇಸದವರು: ಈಶ್ವರ್ ಖಂಡ್ರೆ
Bidar: ದೇಶದ ಆರ್ಥಿಕತೆಗೆ ‘ಸಹಕಾರʼದ ಕೊಡುಗೆ ಶ್ರೇಷ್ಠ: ಸಚಿವ ಈಶ್ವರ ಖಂಡ್ರೆ
Bidar: ವಾಂತಿ-ಭೇದಿ… ವಸತಿ ಶಾಲೆಯ 50ಕ್ಕೂ ಹೆಚ್ಚು ಮಕ್ಕಳು ಆಸ್ಪತ್ರೆಗೆ ದಾಖಲು
Lokayukta Raid: ಜಿಲ್ಲಾ ತರಬೇತಿ ಕೇಂದ್ರದ ಅಧಿಕಾರಿ ನಿವಾಸದಲ್ಲಿ ದಾಖಲೆಗಳ ಪರಿಶೀಲನೆ
Waqf Issue: ಬೀದರ್ ರೈತ ಸಂಘ, ಬಿಜೆಪಿಯಿಂದ ಬೃಹತ್ ಪ್ರತಿಭಟನೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.