ಅಧಿಕಾರಶಾಹಿಯಿಂದ ವ್ಯಕ್ತಿ ಸ್ವಾತಂತ್ರ್ಯ ನಾಶ
Team Udayavani, Nov 27, 2021, 2:45 PM IST
ಶಿವಮೊಗ್ಗ: ಇಂದು ಭೂತಕಾಲದ ಅಲಿಖೀತ ಸಂವಿಧಾನ ಮತ್ತು ವರ್ತಮಾನದ ಸಂವಿಧಾನದ ಆಶಯಗಳ ನಡುವೆ ಸಂಘರ್ಷ ನಡೆಯುತ್ತಿದೆ. ಅಧಿಕಾರಶಾಹಿಯ ಹಿಡಿತದಲ್ಲಿ ವ್ಯಕ್ತಿ ಸ್ವಾತಂತ್ರ್ಯ ಕಳೆದುಕೊಳ್ಳುತ್ತಿರುವ ಸಮಕಾಲೀನ ಸಂದರ್ಭದಲ್ಲಿ ದಲಿತರು, ಬುಡಕಟ್ಟು ಜನಾಂಗಗಳು, ಅಲೆಮಾರಿಗಳು, ಹಿಂದುಳಿದ ವರ್ಗಗಳು ಮತ್ತು ಅಲ್ಪಸಂಖ್ಯಾತರು ತಬ್ಬಲಿತನ ಅನುಭವಿಸುತ್ತಿದ್ದಾರೆ ಎಂದು ರಾಜ್ಯ ಸಂಪನ್ಮೂಲ ಕೇಂದ್ರದ ಮಾಜಿ ನಿರ್ದೇಶಕ ಡಾ| ಎಸ್. ತುಕಾರಾಮ್ ಕಳವಳ ವ್ಯಕ್ತಪಡಿಸಿದರು.
ಕುವೆಂಪು ವಿಶ್ವವಿದ್ಯಾಲಯದ ಡಾ| ಬಿ. ಆರ್. ಅಂಬೇಡ್ಕರ್ ಅಧ್ಯಯನ ಕೇಂದ್ರದ ವತಿಯಿಂದ ಪ್ರೊ| ಎಸ್. ಪಿ. ಹಿರೇಮಠ್ ಸಭಾಂಗಣದಲ್ಲಿ ಶುಕ್ರವಾರ ಆಯೋಜಿಸಲಾಗಿದ್ದ ಸಂವಿಧಾನ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಅಸಹಾಯಕರಿಗೆ ನೆರವು ನೀಡುವುದು, ಬಹು ಸಂಸ್ಕೃತಿಯನ್ನು ಉಳಿಸುವುದು, ಸಮಾನತೆಯನ್ನು ಕಾಯ್ದುಕೊಳ್ಳುವುದು ಮತ್ತು ಸಮಾಜದ ಕಟ್ಟಕಡೆಯ ವ್ಯಕ್ತಿಯನ್ನು ಗೌರವಿಸುವುದು ಸಂವಿಧಾನದ ಆಶಯ. ಆದರೆ ಅಭಿಪ್ರಾಯವನ್ನು ವ್ಯಕ್ತಪಡಿಸಲು ಕೂಡ ಹಿಂಜರಿಯುವ ತುರ್ತು ಪರಿಸ್ಥಿತಿ ದೇಶದಲ್ಲಿ ನಿರ್ಮಾಣವಾಗಿದೆ. ಒಟ್ಟಾರೆ ಪ್ರತ್ಯೇಕತೆಯ ವಾತಾವರಣ ಮನೆ ಮಾಡುತ್ತಿದ್ದು, ಸಾಮಾಜಿಕ ಅಂತರ್ ಸಂಬಂಧಗಳೇ ಬಿಕ್ಕಟ್ಟಿನಲ್ಲಿವೆ ಎಂದು ವಿಷಾದಿಸಿದರು.
ಕುಲಪತಿ ಪ್ರೊ| ಬಿ. ಪಿ. ವೀರಭದ್ರಪ್ಪ ಮಾತನಾಡಿ, ಸಂವಿಧಾನ ರಚನೆಯ ಹಿಂದೆ ಡಾ| ಬಿ. ಆರ್. ಅಂಬೇಡ್ಕರ್ ಅವರ ಕೊಡುಗೆಯ ಜೊತೆಗೆ ಗಾಂಧೀಜಿ, ಠಾಗೋರ್, ನೆಹರು, ಸರ್ದಾರ್ ವಲ್ಲಭಬಾಯಿ ಪಟೇಲ್‌ರಂತಹ ನಾಯಕರ ಆಲೋಚನೆಗಳು ಮತ್ತು ಒಟ್ಟಾರೆ ಬಹುಸಂಸ್ಕೃತಿಯಿಂದ ಭಾರತೀಯರ ಸಮಗ್ರ ಆಶಯ ಕೆಲಸ ಮಾಡಿದೆ. ಆದ್ದರಿಂದ ಸಮಾನತೆ, ಭ್ರಾತೃತ್ವ, ಧರ್ಮನಿರಪೇಕ್ಷತೆ ಮತ್ತು ಬಹುಸಂಸ್ಕೃತಿಗಳೆಡೆಗೆ ಸಹಿಷ್ಣುತೆಯನ್ನು ಇನ್ನಾದರೂ ಅಳವಡಿಸಿಕೊಳ್ಳಬೇಕಾದ ಅನಿವಾರ್ಯತೆ ನಮ್ಮ ಮುಂದಿದೆ ಎಂದರು. ಕುಲಸಚಿವೆ ಜಿ. ಅನುರಾಧಾ ಮಾತನಾಡಿ, ಸಂವಿಧಾನ ಸರ್ವರಿಗೂ ಸಮಾನ ಅವಕಾಶ ಒದಗಿಸಿದೆ. ಶಿಕ್ಷಣ, ಉದ್ಯೋಗ, ಉದ್ಯಮ ಹೀಗೆ ಓರ್ವ ಭಾರತೀಯ ತನ್ನಿಚ್ಛೆಯ ಕ್ಷೇತ್ರದಲ್ಲಿ ನಿರ್ಭಿಡೆಯಿಂದ ಭಾಗವಹಿಸಲು ಮುಕ್ತ ಅವಕಾಶ ಕಲ್ಪಿಸಿದೆ. ಈ ಹಿನ್ನೆಲೆಯಲ್ಲಿ ಸಾಮಾಜಿಕ ಮತ್ತು ಆರ್ಥಿಕ ಸಮಾನತೆ ಸಾಧಿಸಲು ಶಿಕ್ಷಣ ಅತ್ಯಂತ ಪ್ರಮುಖವಾದುದು ಎಂಬ ಅಂಶವನ್ನು ವಿದ್ಯಾರ್ಥಿಗಳು ಸದಾ ನೆನಪಿನಲ್ಲಿಡಬೇಕು ಎಂದು ಸಲಹೆ ನೀಡಿದರು.
ಪರೀಕ್ಷಾಂಗ ಕುಲಸಚಿವ ಪ್ರೊ| ಸಿ. ಎಂ. ತ್ಯಾಗರಾಜ್, ಡಾ| ಬಿ. ಆರ್. ಅಂಬೇಡ್ಕರ್ ಅಧ್ಯಯನ ಕೇಂದ್ರದ ನಿರ್ದೇಶಕ ಪ್ರೊ| ಬಿ. ಎಚ್. ಆಂಜನಪ್ಪ, ವಿವಿಧ ವಿಭಾಗಗಳ ಪ್ರಾಧ್ಯಾಪಕರು, ಬೋಧಕೇತರ ಸಿಬ್ಬಂದಿ, ವಿವಿ ವಿದ್ಯಾರ್ಥಿಗಳ ಜೊತೆಗೆ ಶ್ರೀಮದ್ ರಂಭಾಪುರಿ ಮತ್ತು ಎನ್‌ಇಎಸ್ ಕಾಲೇಜಿನ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CT Ravi Arrest; ಧೂರ್ತ ಸರ್ಕಾರ ನೀಚತನದ ಕೆಲಸ ಮಾಡಿದೆ: ಆರಗ ಜ್ಞಾನೇಂದ್ರ
Shimoga; ಇದು ಸಿ.ಟಿ.ರವಿ ಅವರನ್ನು ಸದೆಬಡಿಯುವ ಪ್ರಯತ್ನ;ಶಾಸಕ ಚನ್ನಬಸಪ್ಪ
Sakrebailu: ತಾಂತ್ರಿಕ ದೋಷದಿಂದ ಸುಟ್ಟು ಕರಕಲಾದ ಬಸ್
ಭದ್ರಾವತಿಯ ರೈಸ್ಮಿಲ್ನಲ್ಲಿ ಬಾಯ್ಲರ್ ಸ್ಫೋಟ: ಕಣ್ಮರೆಯಾಗಿದ್ದ ವ್ಯಕ್ತಿಯ ಶವ ಪತ್ತೆ
Bhadravathi:ಬಾಯ್ಲರ್ ಸ್ಫೋ*ಟದಿಂದ ರೈಸ್‌ಮಿಲ್ ಕುಸಿತ:7 ಮಂದಿಗೆ ಗಾಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Harapanahalli: ಪ್ರತಿಷ್ಠೆಯ ಕಣವಾದ ಬಿ90 ಸೊಸೈಟಿ ಚುನಾವಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.