ಮುಕ್ತ-ನ್ಯಾಯಸಮ್ಮತ ಚುನಾವಣೆಗೆ ಕ್ರಮ ವಹಿಸಿ

ಚುನಾವಣೆಯಲ್ಲಿ ಪ್ರಾಶಸ್ತ್ಯ ಮತಗಳಿರುವುದರಿಂದ ಮತ ಎಣಿಕೆ ವಿಭಿನ್ನವಾಗಿರುತ್ತದೆ.

Team Udayavani, Nov 27, 2021, 6:21 PM IST

ಮುಕ್ತ-ನ್ಯಾಯಸಮ್ಮತ ಚುನಾವಣೆಗೆ ಕ್ರಮ ವಹಿಸಿ

ಬೆಳಗಾವಿ: ವಿಧಾನ ಪರಿಷತ್‌ ಚುನಾವಣೆಯ ಮತದಾನ ಹಾಗೂ ಮತ ಎಣಿಕೆ ಸಂದರ್ಭದಲ್ಲಿ ಯಾವುದೇ ರೀತಿಯ ಲೋಪದೋಷಗಳು ಉಂಟಾಗದಂತೆ ಅಧಿಕಾರಿಗಳು ಎಚ್ಚರಿಕೆ ವಹಿಸಬೇಕು ಎಂದು ಬೆಳಗಾವಿ ಜಿಲ್ಲೆಯ ವಿಧಾನ ಪರಿಷತ್‌ ಚುನಾವಣಾ ವೀಕ್ಷಕರಾದ ಹಿರಿಯ ಐ.ಎ.ಎಸ್‌. ಅಧಿಕಾರಿ ಏಕರೂಪ್‌ ಕೌರ್‌ ಸೂಚನೆ ನೀಡಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ವಿಧಾನ ಪರಿಷತ್‌ ಚುನಾವಣೆಗೆ ಸಂಬಂಧಿಸಿದ ನೋಡಲ್‌ ಅಧಿಕಾರಿಗಳ ಸಭೆ ನಡೆಸಿದ ಅವರು, ಚುನಾವಣಾ ಆಯೋಗದ ಮಾರ್ಗಸೂಚಿಯನ್ನು ಕಟ್ಟುನಿಟ್ಟಾಗಿ ಪಾಲಿಸುವ ಮೂಲಕ ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆ ನಡೆಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದರು. ಪರಿಷತ್‌ ಚುನಾವಣೆಯಲ್ಲಿ ಪ್ರಾಶಸ್ತ್ಯ ಮತಗಳಿರುವುದರಿಂದ ಮತ ಎಣಿಕೆ ವಿಭಿನ್ನವಾಗಿರುತ್ತದೆ. ಆದ್ದರಿಂದ ಮತ ಎಣಿಕೆಗೆ
ಅನುಭವಿ ಅಧಿಕಾರಿಗಳನ್ನು ನಿಯೋಜಿಸಬೇಕು.

ಚುನಾವಣಾ ಕಾರ್ಯಕ್ಕೆ ನಿಯೋಜಿತ ಎಲ್ಲ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಸೂಕ್ತ ತರಬೇತಿ ನೀಡಬೇಕು ಎಂದು ಅವರು ಹೇಳಿದರು. ಚುನಾವಣಾ ಸಿದ್ಧತೆಗಳ ಕುರಿತು ಮಾಹಿತಿ ನೀಡಿದ ಜಿಲ್ಲಾಧಿಕಾರಿ ಆರ್‌.ವೆಂಕಟೇಶಕುಮಾರ್‌, ಜಿಲ್ಲೆಯಲ್ಲಿ ಒಟ್ಟಾರೆ 511 ಮತಗಟ್ಟೆಗಳನ್ನು ಸ್ಥಾಪಿಸಲಾಗುತ್ತಿದ್ದು, ಮಾರ್ಗಸೂಚಿ ಪ್ರಕಾರ ಎಲ್ಲ ಸೌಕರ್ಯಗಳನ್ನು ಒದಗಿಸಲು ಕ್ರಮ ಕೈಗೊಳ್ಳಲಾಗಿದೆ. ಚುನಾವಣಾ ಕಾರ್ಯಕ್ಕೆ ನಿಯೋಜಿತ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ವಿವಿಧ ಹಂತಗಳಲ್ಲಿ ತರಬೇತಿ ನೀಡಲಾಗುತ್ತಿದೆ ಎಂದು ಹೇಳಿದರು.

ತರಬೇತಿ ನೋಡಲ್‌ ಅಧಿಕಾರಿಯಾಗಿರುವ ಪ್ರೀತಂ ನಸಲಾಪುರೆ ಅವರು ಇದುವರೆಗಿನ ಸಿದ್ಧತೆಗಳ ಬಗ್ಗೆ ಸಭೆಯಲ್ಲಿ ಮಾಹಿತಿ ನೀಡಿದರು. ಬೆಳಗಾವಿ ನಗರ ಪೊಲೀಸ್‌ ಆಯುಕ್ತ ಡಾ.ಕೆ. ತ್ಯಾಗರಾಜನ್‌, ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ದರ್ಶನ್‌ ಎಚ್‌.ವಿ., ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ, ಅಪರ ಜಿಲ್ಲಾಧಿಕಾರಿ ಡಾ.ಶಂಕರಪ್ಪ ವಣಕ್ಯಾಳ, ಮಹಾನಗರ ಪಾಲಿಕೆ ಆಯುಕ್ತ ಡಾ.ರುದ್ರೇಶ್‌ ಘಾಳಿ, ಬೆಳಗಾವಿ ಉಪ ವಿಭಾಗಾಧಿಕಾರಿ ರವೀಂದ್ರ ಕರಲಿಂಗಣ್ಣವರ, ಕೃಷಿ ಇಲಾಖೆ ಜಂಟಿ ನಿರ್ದೇಶಕ ಶಿವನಗೌಡ ಪಾಟೀಲ, ವಾರ್ತಾ ಇಲಾಖೆಯ ಉಪ ನಿರ್ದೇಶಕ ಗುರುನಾಥ ಕಡಬೂರ ಉಪಸ್ಥಿತರಿದ್ದರು.

ನಂತರ ಚುನಾವಣಾ ವೀಕ್ಷಕರಾದ ಏಕರೂಪ್‌ ಕೌರ್‌ ಅವರು ಬೆಳಗಾವಿ ತಾಲೂಕಿನ ಕಾಕತಿ ಹಾಗೂ ಕಡೋಲಿ ಗ್ರಾಮಗಳಿಗೆ ಭೇಟಿ ನೀಡಿ ಮತಗಟ್ಟೆಗಳನ್ನು ಪರಿಶೀಲಿಸಿ ಮಾರ್ಗಸೂಚಿಯ ಪ್ರಕಾರ ಮತಗಟ್ಟೆಗಳಲ್ಲಿ ಮೂಲಸೌಕರ್ಯವನ್ನು ಒದಗಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು. ಈ ಸಂದರ್ಭದಲ್ಲಿ ಉಪ ವಿಭಾಗಾಧಿಕಾರಿ ರವೀಂದ್ರ ಕರಲಿಂಗಣ್ಣವರ, ತರಬೇತಿ ನೋಡಲ್‌ ಅಧಿಕಾರಿ ಪ್ರೀತಂ ನಸಲಾಪುರೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಗೌರಿಶಂಕರ, ತಹಶೀಲ್ದಾರ ಕುಲಕರ್ಣಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

DVG-Tagaru

Davanagere: ʼಸೋಲಿಲ್ಲದ ಸರದಾರʼ ಎನಿಸಿದ್ದ ʼಬೆಳ್ಳೂಡಿ ಕಾಳಿʼ ಟಗರು ಅನಾರೋಗ್ಯದಿಂದ ನಿಧನ

1-IFFI

IFFI 2024; ಫಿಲ್ಮ್ ಬಜಾರ್: ಮತ್ತೊಂದು ಯಶಸ್ವಿ ಮುನ್ನುಡಿಯೊಂದಿಗೆ ಉತ್ಸವ ಸಮಾಪನ

1-ree

IPL Mega Auction:1.1 ಕೋಟಿ ರೂ.ಗೆ ಹರಾಜಾದ 13ರ ಬಾಲಕ !!

isrel netanyahu

Israel; ಹೆಜ್ಬುಲ್ಲಾ ಜತೆ ‘ತಾತ್ವಿಕವಾಗಿ’ ಕದನ ವಿರಾಮ ಒಪ್ಪಂದ :ವರದಿ

Madikeri-1

Madikeri: ರೈಲ್ವೆ ಕಂಬಿಯ ಬೇಲಿಗೆ ಸಿಲುಕಿದ ಕಾಡಾನೆಯ ರಕ್ಷಣೆ

Kharge

JPC on Adani issue;ನಿಯಮ 267 ಅಡಿಯಲ್ಲಿ ಪ್ರಸ್ತಾಪಿಸಲು ಅವಕಾಶ ನೀಡದ್ದಕ್ಕೆ ಖರ್ಗೆ ಆಕ್ರೋಶ

ಅಗ್ಗಕ್ಕೆ ಸೇಲಾದ ಪಾಂಡೆ, ಬೆಂಗಳೂರಿಗೆ ಬಂದ ಆಸೀಸ್‌ ಆಟಗಾರ

IPL Auction: ಅಗ್ಗಕ್ಕೆ ಸೇಲಾದ ಪಾಂಡೆ, ಜ್ಯಾಕ್ಸ್‌ ಗೆ ಬಂಪರ್‌, ಬೆಂಗಳೂರಿಗೆ ಬಂದ ಡೇವಿಡ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-huliraya

Belagavi; ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿದ್ದ ಹುಲಿ ಶೌರ್ಯ ಇನ್ನಿಲ್ಲ

2–Chennamman-Kittur

Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ

yathnal

Setback BJP: ಜನರಿಂದ ವಿಜಯೇಂದ್ರ ನಾಯಕತ್ವ ತಿರಸ್ಕಾರ, ರಾಜೀನಾಮೆ ನೀಡಲಿ: ಶಾಸಕ ಯತ್ನಾಳ್‌

satish

ಮಹಾರಾಷ್ಟ್ರ ಸೋಲಿನ ಬೆನ್ನಲ್ಲೇ ಇವಿಎಂ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಸತೀಶ್‌ ಜಾರಕಿಹೊಳಿ

ಬೆಳಗಾವಿ:ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡಿದ ಹುಡುಗ..ಜಿಲ್ಲಾ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ

ಬೆಳಗಾವಿ:ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡಿದ ಹುಡುಗ..ಜಿಲ್ಲಾ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

DVG-Tagaru

Davanagere: ʼಸೋಲಿಲ್ಲದ ಸರದಾರʼ ಎನಿಸಿದ್ದ ʼಬೆಳ್ಳೂಡಿ ಕಾಳಿʼ ಟಗರು ಅನಾರೋಗ್ಯದಿಂದ ನಿಧನ

1-IFFI

IFFI 2024; ಫಿಲ್ಮ್ ಬಜಾರ್: ಮತ್ತೊಂದು ಯಶಸ್ವಿ ಮುನ್ನುಡಿಯೊಂದಿಗೆ ಉತ್ಸವ ಸಮಾಪನ

1-ree

IPL Mega Auction:1.1 ಕೋಟಿ ರೂ.ಗೆ ಹರಾಜಾದ 13ರ ಬಾಲಕ !!

Udupi: ಶ್ರೀ ಕೃಷ್ಣಮಠ; 18 ದಿನಗಳ ಭಗವದ್ಗೀತಾ ಹರಿಕಥಾ ಸರಣಿ ಕಾರ್ಯಕ್ರಮಕ್ಕೆ ಚಾಲನೆ

Udupi: ಶ್ರೀ ಕೃಷ್ಣಮಠ; 18 ದಿನಗಳ ಭಗವದ್ಗೀತಾ ಹರಿಕಥಾ ಸರಣಿ ಕಾರ್ಯಕ್ರಮಕ್ಕೆ ಚಾಲನೆ

isrel netanyahu

Israel; ಹೆಜ್ಬುಲ್ಲಾ ಜತೆ ‘ತಾತ್ವಿಕವಾಗಿ’ ಕದನ ವಿರಾಮ ಒಪ್ಪಂದ :ವರದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.