ಕಸಾಪ ಚಟುವಟಿಕೆ ವಿಸ್ತರಿಸುವ ಗುರಿ
Team Udayavani, Nov 28, 2021, 12:04 PM IST
ಇಳಕಲ್ಲ: ಎಲ್ಲರ ಸಲಹೆ, ಸಹಕಾರ ಪಡೆದುಕೊಂಡು ಜನಸಾಮಾನ್ಯದವರೆಗೆ ಕಸಾಪ ಚಟುವಟಿಕೆಗಳನ್ನು ವಿಸ್ತರಿಸುವ ಗುರಿ ಹೊಂದಿದ್ದೇನೆ ಎಂದು ಕನ್ನಡ ಸಾಹಿತ್ಯ ಪರಿಷತ್‌ನ ಜಿಲ್ಲಾ ಘಟಕದ ನೂತನ ಅಧ್ಯಕ್ಷ ಶಿವಾನಂದ ಶೆಲ್ಲಿಕೇರಿ ಹೇಳಿದರು.
ನಗರದ ದೇವಾಂಗ ಸಂಘದ ಆರ್. ವೀರಮಣಿ ಸಾಂಸ್ಕೃತಿಕ ಭವನದಲ್ಲಿ ನಗರದ ವಿವಿಧ ಸಂಘಟನೆಗಳ ಹಾಗೂ ಸಾಹಿತ್ಯಾಸಕ್ತರಿಂದ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, ಜಿಲ್ಲೆಯ ಕನ್ನಡ ಸಾಹಿತ್ಯ ಪರಿಷತ್‌ನ ಸದಸ್ಯರು ಕನ್ನಡದ ಸೇವೆ ಮಾಡುವ ಜವಾಬ್ದಾರಿ ವಹಿಸಿಕೊಟ್ಟಿದ್ದಾರೆ. ನಿರೀಕ್ಷೆ ಮೀರಿ ಬೆಂಬಲ ನೀಡಿದ್ದಾರೆ. ಅವರ ವಿಶ್ವಾಸಕ್ಕೆ ಚ್ಯುತಿ ಬರದಂತೆ ಕೆಲಸ ಮಾಡುತ್ತೇನೆ. ಕನ್ನಡ ಭವನ ಇಲ್ಲದ 6 ತಾಲೂಕುಗಳಲ್ಲಿ ಕನ್ನಡ ಭವನ ನಿರ್ಮಾಣ, ಉದಯೋನ್ಮುಖ ಲೇಖಕರ ಪುಸ್ತಕಗಳ ಪ್ರಕಟಣೆ, ಯುವ ಸಾಹಿತಿಗಳಿಗಾಗಿ ಕಥೆ ಹಾಗೂ ಕಾವ್ಯ ಕಮ್ಮಟ, ಕಾರ್ಯಾಗಾರ, ವಿಚಾರ ಸಂಕಿರಣ ಆಯೋಜಿಸಲಾಗುವುದು. ಬಾಗಲಕೋಟೆಯಲ್ಲಿ ಅಖೀಲ ಭಾರತ ಸಾಹಿತ್ಯ ಸಮ್ಮೇಳನ ಆಯೋಜನೆ, ದತ್ತಿನಿಧಿ ಕಾರ್ಯಕ್ರಮ ಆಯೋಜಿಸಲಾಗುವುದು. ವಿದ್ಯಾರ್ಥಿಗಳು, ಜನಸಾಮಾನ್ಯರ ಪಾಲ್ಗೊಳ್ಳುವಿಕೆ ಹೆಚ್ಚಿಸುವ ಕಾರ್ಯಕ್ರಮ ಸಂಘಟಿಸುವುದಾಗಿ ಕಸಾಪ ಜಿಲ್ಲಾಧ್ಯಕ್ಷ ಶೆಲ್ಲಿಕೇರಿ ಹೇಳಿದರು.
ಅಧ್ಯಕ್ಷತೆ ವಹಿಸಿದ್ದ ವಿಶ್ವನಾಥ ವಂಶಾಕೃತಮಠ, ಸ್ನೇಹರಂಗದ ಅಧ್ಯಕ್ಷ ಬಸವರಾಜ ಮಠದ, ನೌಕರರ ಸಂಘದ ತಾಲೂಕು ಅಧ್ಯಕ್ಷ ಪರಶುರಾಮ ಪಮ್ಮಾರ, ರಾಮನಗೌಡ ಸಂದಿಮನಿ, ಮಲ್ಲಿಕಾರ್ಜುನ ಅಂಗಡಿ, ಮಂಜುನಾಥ ಬೆಳವಣಿಕಿ ಮಾತನಾಡಿದರು. ಮಹಾದೇವ ಕಂಬಾಗಿ, ಸಿ.ಎಸ್. ಶಾಸ್ತ್ರಿ, ಜಾಕೀರಹುಸೇನ ಗಡೇದ, ಶಿವಾನಂದ ಕೊರಿ, ಮುತ್ತು ಬೀಳಗಿ, ಸಿದ್ದರಾಮ ಶಿರೋಳ, ಹೂಲಿ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Puttur: ಮಾದಕ ಪದಾರ್ಥ ಸಹಿತ ಆರೋಪಿ ಸೆರೆ
Udupi; ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಾಗಿ ರಮೇಶ್ ಕಾಂಚನ್ ಆಯ್ಕೆ
Road Mishap: ಬೀದರ್ ನಲ್ಲಿ ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಮೃತ್ಯು, ಮಹಿಳೆ ಗಂಭೀರ
Belgavi;ಸುವರ್ಣ ವಿಧಾನ ಸೌಧದ ಸುತ್ತ ನಿಷೇಧಾಜ್ಞೆ
Maharashtra ಮತದಾನ ಮುಗಿದ ನಂತರ 7% ಹೆಚ್ಚಳ : ECI ಸ್ಪಷ್ಟಪಡಿಸಬೇಕು ಎಂದ ಕಾಂಗ್ರೆಸ್
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Puttur: ಮಾದಕ ಪದಾರ್ಥ ಸಹಿತ ಆರೋಪಿ ಸೆರೆ
Udupi; ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಾಗಿ ರಮೇಶ್ ಕಾಂಚನ್ ಆಯ್ಕೆ
Road Mishap: ಬೀದರ್ ನಲ್ಲಿ ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಮೃತ್ಯು, ಮಹಿಳೆ ಗಂಭೀರ
Belgavi;ಸುವರ್ಣ ವಿಧಾನ ಸೌಧದ ಸುತ್ತ ನಿಷೇಧಾಜ್ಞೆ
Maharashtra ಮತದಾನ ಮುಗಿದ ನಂತರ 7% ಹೆಚ್ಚಳ : ECI ಸ್ಪಷ್ಟಪಡಿಸಬೇಕು ಎಂದ ಕಾಂಗ್ರೆಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.