ಕುಟುಂಬಗಳ ನಡುವೆ ಮಾರಾಮಾರಿ
Team Udayavani, Nov 28, 2021, 1:13 PM IST
ದೇವನಹಳ್ಳಿ: ಜಮೀನಿಗೆ ಸಂಬಂಧಿಸಿದಂತೆ ಎರಡು ಕುಟುಂಬಸ್ಥರ ನಡುವೆ ನಡೆದಿರುವ ಗಲಾಟೆಯಲ್ಲಿ ಇಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ ಬೈಚಾಪುರ ಗ್ರಾಮದಲ್ಲಿ ನಡೆದಿದ್ದು, ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ತಾಲೂಕಿನ ಅಣ್ಣೇಶ್ವರ ಗ್ರಾಪಂ ವ್ಯಾಪ್ತಿಯ ಬೈಚಾಪುರ ಗ್ರಾಮದ ಸ.ನಂ.17ರಲ್ಲಿ 3 ಎಕರೆ 34 ಗುಂಟೆ ಪೈಕಿ 1 ಎಕರೆ 15 ಗುಂಟೆ ವಿಸ್ತಿ ರ್ಣದ ಜಮೀನು ನಮ್ಮ ತಾಯಿ ಲಕ್ಷ್ಮಮ್ಮ ಎಂಬುವವರ ಹೆಸ ರಿನಲ್ಲಿ ಖಾತೆಯಾಗಿದ್ದು, ಈ ಜಮೀನಿನಲ್ಲಿ ಜೋಳದ ಬೆಳೆ ಬೆಳೆದಿ ದ್ದೇವೆ. ಇತ್ತೀಚಿಗೆ ಬಿದ್ದ ಅಕಾಲಿಕ ಮಳೆಯಿಂದಾಗಿ ಬೆಳೆ ಹಾಳಾ ಗಿದ್ದು, ದನಕರುಗಳಿಗೆ ಕಟಾವು ಮಾಡಿಕೊಂಡು ಹೋಗುವಂತೆ ರೈತರಿಗೆ ಉಚಿತವಾಗಿ ಕೊಟ್ಟಿದ್ದೇವೆ. ದನಕರುಗಳಿಗೆ ಜೋಳ ಕಟಾವು ಮಾಡುವಾಗ ಮುನಿಕೃಷ್ಣಪ್ಪ ಹಾಗೂ ಅವರ ಸಹಚರರು ಏಕಾಏಕಿ ದೊಣ್ಣೆಗಳು ಹಿಡಿದು ಕಟಾವು ಮಾಡುತ್ತಿದ್ದವರನ್ನು ಅವಾಚ್ಯಶಬ್ದಗಳಿಂದ ನಿಂದಿಸಿ, ಹಲ್ಲೆ ಮಾಡಲು ಮುಂದಾಗಿದ್ದರು. ಅವರನ್ನು ತಡೆಯಲು ಹೋದಾಗ ನಮ್ಮ ಕುಟುಂಬದವರ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಶಶಿಧರ್ ಎಂಬುವವರು ಪೊಲೀಸರಿಗೆ ದೂರು ನೀಡಿದ್ದಾರೆ.
ಇದೇ ಗ್ರಾಮದ ಮತ್ತೂಂದು ಗುಂಪಿನ ಬಿ.ಎಂ.ಮುನಿಕೃಷ್ಣಪ್ಪ ಎಂಬುವವರು, ಬೈಚಾಪುರ ಗ್ರಾಮದ ಸ.ನಂ.17ರಲ್ಲಿ 4 ಎಕರೆ ಪೈಕಿ 0.39 ಗುಂಟೆ ಜಮೀನು ನಮಗೆ ದಾಖಲಾತಿಯಾಗಿದ್ದು, ಈ ವಿಚಾ ರವಾಗಿ ಗಲಾಟೆಯಾಗಿದೆ. ನಾನು ಮನೆಗೆ ಹೋಗುವಾಗ ದಾರಿಗೆ ಕಲ್ಲುಹಾಕಿ ಅಡ್ಡಗಟ್ಟಿ ನನ್ನ ಹಾಗೂ ನಮ್ಮ ಕುಟುಂಬದವರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ಕೊಲೆ ಬೆದರಿಕೆ ಹಾಕಿದ್ದಾರೆ. ನಮ್ಮ ಜಮೀನಿನಲ್ಲಿ ಜೋಳದ ಕಡ್ಡಿಗಳು ಕಟಾವು ಮಾಡಲಿಕ್ಕೆ ಸುಮಾರು 200ಕ್ಕೂ ಹೆಚ್ಚು ಮಂದಿಯನ್ನು ಕರೆಯಿಸಿ, ದೌರ್ಜನ್ಯ ಮಾಡಿಸಿ, ನನ್ನ ಮೇಲೆ ಹಲ್ಲೆ ಮಾಡಿಸಿದ್ದಾರೆ ಎಂದು ದೂರು ನೀಡಿದ್ದಾರೆ. ಗಲಾಟೆಯಲ್ಲಿ ಮುನಿಕೃಷ್ಣಪ್ಪ ಮತ್ತು ಶಶಿಧರ್ ಎಂಬುವವರು ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nelamangala: ಸಾಕು ನಾಯಿ ಸತ್ತಿದ್ದಕ್ಕೆ ಮಾಲಕ ಆತ್ಮಹ*ತ್ಯೆ
Doddaballapur: ಹೊಲದಲ್ಲಿ ಹೂ ಬಿಡಿಸುತ್ತಿದ್ದ ಮಹಿಳೆಗೆ ಕಾರು ಡಿಕ್ಕಿ: ಸಾವು
Road Mishap: ಬೈಕ್ ವ್ಹೀಲಿಂಗ್ ಮಾಡುವಾಗ ಕ್ಯಾಂಟರ್‌ಗೆ ಡಿಕ್ಕಿ; ಇಬ್ಬರು ಸಾವು
Tragic: ಮದುವೆ ಹರಕೆ ಹೊತ್ತು ಘಾಟಿ ದೇಗುಲಕ್ಕೆ ಬಂದಿದ್ದ ಯುವತಿ ಸಾವು
Ayodhya ರಾಮನ ದರ್ಶನ ಪಡೆದಿದ್ದ “ಬಸಪ್ಪ” ಈಗ ಶಬರಿಮಲೆಗೆ ಪ್ರಯಾಣ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫಲಿಸದೆ ವ್ಯಕ್ತಿ ಸಾವು
Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು
Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ
Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್ ಪಟೇಲ್
Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.