ತ್ರಿಪುರಾ ನಗರ ಪಂಚಾಯತ್ ಚುನಾವಣೆ : ಬಿಜೆಪಿಗೆ ಸಿಹಿ, ಟಿಎಂಸಿಗೆ ಕಹಿ
Team Udayavani, Nov 28, 2021, 2:38 PM IST
ಅಗರ್ತಲಾ: ತ್ರಿಪುರಾದಲ್ಲಿ ಮುನ್ಸಿಪಲ್ ಕಾರ್ಪೊರೇಷನ್, ನಗರ ಪಂಚಾಯತ್ ಚುನಾವಣೆಗಳ ಮತ ಎಣಿಕೆ ನಡೆಯುತ್ತಿದ್ದು, ಬಿಜೆಪಿ ಹೆಚ್ಚಿನ ಸ್ಥಾನಗಳನ್ನು ಗೆಲ್ಲುವ ಮೂಲಕ ತೃಣಮೂಲ ಕಾಂಗ್ರೆಸ್ ಪಕ್ಷಕ್ಕೆ ಶಾಕ್ ನೀಡಿದೆ.
ಅಗರ್ತಲಾ ಮುನ್ಸಿಪಲ್ ಕಾರ್ಪೊರೇಷನ್ ನಲ್ಲಿ ಸ್ಪಷ್ಟ ಬಹುಮತವನ್ನು ಬಿಜೆಪಿ ಪಡೆದಿದೆ. 51 ವಾರ್ಡ್‌ಗಳಲ್ಲಿ 29 ಅನ್ನು ಗೆದ್ದು ಬಹುಮತ ಗಳಿಸಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.
ಕಸದ ಬುಟ್ಟಿ !
ಟಿಎಂಸಿ ಗೆ ತ್ರಿಪುರಾದ ಜನರು ಕಸದ ಬುಟ್ಟಿಯೇ ಸರಿಯಾದ ಸ್ಥಳ ಎಂದು ತೋರಿಸುತ್ತಿದ್ದಾರೆ. ಯಾವುದೇ ತಂತ್ರಗಳು ಅವರಿಗೆ ಫಲ ನೀಡಲಿಲ್ಲ.ಬಿಜೆಪಿ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಶೇ.80ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುವ ಮೂಲಕ ಇತಿಹಾಸ ಸೃಷ್ಟಿಸಲು ಸಜ್ಜಾಗಿದೆ. ಎಲ್ಲಾ ಪುರಸಭೆಗಳನ್ನು ಗೆಲ್ಲಲು ಮುಂದಾಗಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಟ್ವೀಟ್ ಮಾಡಿದ್ದಾರೆ.
People of Tripura are showing the @AITCofficial the rightful place … The Dustbin … None of the tantrums got them any results . @BJP4Tripura set to create history by winning more than 80% seats in urban local bodies . Set to win all municipalities.
— B L Santhosh (@blsanthosh) November 28, 2021
ತ್ರಿಪುರ ರಾಜ್ಯ ಚುನಾವಣಾ ಆಯೋಗದ ಪ್ರಕಾರ ಅಂಬಾಸಾ, ಜಿರಾನಿಯಾ, ತೆಲಿಯಮುರಾ ಮತ್ತು ಸಬ್ರೂಮ್‌ನಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ
ರಾಜ್ಯದ ಹಲವೆಡೆ ಬಿಜೆಪಿ ವಿಜಯೋತ್ಸವ ಆಚರಿಸುತ್ತಿದೆ. ಗೆಲ್ಲೆಲೇಬೇಕು ಎನ್ನುವ ಉತ್ಸಾಹದಲ್ಲಿದ್ದ ಟಿಎಂಸಿಗೆ ಆಘಾತವಾಗಿದೆ.
ಬಿಪ್ಲಬ್ ನಾಯಕತ್ವಕ್ಕೆ ಮನ್ನಣೆ
ಬಿಪ್ಲಬ್ ಕುಮಾರ್ ದೇಬ್ ಪ್ರಸ್ತುತ ತ್ರಿಪುರಾದ ಮುಖ್ಯಮಂತ್ರಿಯಾಗಿದ್ದು, 2018 ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಗೆಲುವಿನತ್ತ ಮುನ್ನಡೆಸಿದ್ದರು ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ ನೇತೃತ್ವದ ಎಡರಂಗ ಸರ್ಕಾರದ 25 ವರ್ಷಗಳ ಆಡಳಿತವನ್ನು ಅಂತ್ಯಗೊಳಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sambhal Violence: ಮೃತರ ಸಂಖ್ಯೆ ನಾಲ್ಕಕ್ಕೆ, ಇಂಟರ್ನೆಟ್ ಸ್ಥಗಿತ, ನಿಷೇಧಾಜ್ಞೆ ಜಾರಿ
Parliament Winter Session: ಇಂದಿನಿಂದ ಸಂಸತ್ ಅಧಿವೇಶನ.. ವಕ್ಫ್ ಸೇರಿ 16 ಮಸೂದೆ ಮಂಡನೆ?
ಗೂಗಲ್ ಮ್ಯಾಪ್ ನಂಬಿ ಸೇತುವೆಯಿಂದ ನದಿಗೆ ಬಿದ್ದ ಕಾರು, ಮದುವೆಗೆ ಹೊರಟಿದ್ದ ಮೂವರು ಮೃತ್ಯು
India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್ ಪೂರೈಕೆ ಶುರು
Maharashtra Election: ಅಘಾಡಿ ಸೋಲಿಗೆ ಉದ್ಧವ್,ಶರದ್ ಕಾರಣ: ಕಾಂಗ್ರೆಸ್
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Drink & Drive Case: ಕುಡಿದು ವಾಹನ ಚಾಲನೆ; ʼಮಂಜುಮ್ಮೆಲ್ ಬಾಯ್ಸ್ʼ ನಟ ಬಂಧನ
Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು
IPL Mega Auction: ಮೊದಲ ದಿನದ ಹರಾಜಿನ ಬಳಿಕ ಆರ್ ಸಿಬಿ ತಂಡ ಹೀಗಿದೆ ನೋಡಿ
Arrested: ಹೊಯ್ಸಳ ಪೊಲೀಸ್ ಮೇಲೆ ಹಲ್ಲೆ; ಬಂಧನ
Sambhal Violence: ಮೃತರ ಸಂಖ್ಯೆ ನಾಲ್ಕಕ್ಕೆ, ಇಂಟರ್ನೆಟ್ ಸ್ಥಗಿತ, ನಿಷೇಧಾಜ್ಞೆ ಜಾರಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.