ಬೆಂಗಳೂರು: ಮುನಾವರ್ ಫಾರೂಕಿ ಹಾಸ್ಯ ಕಾರ್ಯಕ್ರಮಕ್ಕೆ ಪೊಲೀಸರ ತಡೆ
ಹಿಂದೂ ಸಂಘಟನೆಗಳ ವ್ಯಾಪಕ ವಿರೋಧ
Team Udayavani, Nov 28, 2021, 4:20 PM IST
ಬೆಂಗಳೂರು : ಇಂದು ಬೆಂಗಳೂರಿನ ಗುಡ್ ಶೆಫರ್ಡ್ ಸಭಾಂಗಣದಲ್ಲಿ ನಡೆಯಬೇಕಿದ್ದ ಹಾಸ್ಯನಟ ಮುನಾವರ್ ಫಾರೂಕಿ ಅವರ ಕಾರ್ಯಕ್ರಮಕ್ಕೆ ಪೊಲೀಸರು ತಡೆ ಹಾಕಿದ್ದಾರೆ. .
ಬೆಂಗಳೂರಿನ ಅಶೋಕ್‌ನಗರದಲ್ಲಿರುವ ಗುಡ್ ಶೆಫರ್ಡ್ ಸಭಾಂಗಣಕ್ಕೆ ಪತ್ರ ಬರೆದಿರುವ ಪೊಲೀಸರು, ಕಾನೂನು ಮತ್ತು ಸುವ್ಯವಸ್ಥೆ ಸಮಸ್ಯೆಗಳಿರುವ ಕಾರಣ ಕಾರ್ಯಕ್ರಮವನ್ನು ರದ್ದುಗೊಳಿಸುವಂತೆ ಸಂಘಟಕರಿಗೆ ಸೂಚಿಸಿದ್ದಾರೆ.
ಬಲಪಂಥೀಯ ಸಂಘಟನೆಗಳ ಬೆದರಿಕೆಗಳ ನಂತರ ಕಳೆದ ತಿಂಗಳು ಮುಂಬೈನಲ್ಲಿ ಇದೇ ರೀತಿಯ ಸ್ಟ್ಯಾಂಡ್-ಅಪ್ ಕಾಮಿಡಿ ಕಾರ್ಯಕ್ರಮವನ್ನು ರದ್ದು ಗೊಳಿಸಲಾಗಿತ್ತು.
ಫಾರುಕಿ ಈ ವರ್ಷದ ಆರಂಭದಲ್ಲಿ ಅವರ ಹಾಸ್ಯ ಕಾರ್ಯಕ್ರಮವೊಂದರಲ್ಲಿ “ಹಿಂದೂ ದೇವರು ಮತ್ತು ದೇವತೆಗಳನ್ನು ಅವಮಾನಿಸಿದ” ಆರೋಪದ ಮೇಲೆ ಜೈಲಿನಲ್ಲಿ ಒಂದು ತಿಂಗಳು ಕಳೆದಿದ್ದರು.
ಮುನಾವರ್ ಫಾರೂಕಿ ವಿವಾದಾತ್ಮಕ ವ್ಯಕ್ತಿಯಾಗಿದ್ದು, ಇತರ ಧರ್ಮಗಳ ದೇವರುಗಳ ಬಗ್ಗೆ ಹೇಳಿಕೆ ನೀಡಿದ್ದಾಗಿ ತಿಳಿದುಬಂದಿದೆ. ಅನೇಕ ರಾಜ್ಯಗಳು ಅವರ ಹಾಸ್ಯ ಕಾರ್ಯಕ್ರಮಗಳನ್ನು ನಿಷೇಧಿಸಿವೆ. ಈತನ ವಿರುದ್ಧ ಮಧ್ಯಪ್ರದೇಶದಲ್ಲಿ ಪ್ರಕರಣ ದಾಖಲಾಗಿದೆ. ಇತರ ರಾಜ್ಯಗಳಲ್ಲಿ ಆತನ ವಿರುದ್ಧ ಇದೇ ರೀತಿಯ ಪ್ರಕರಣಗಳು ದಾಖಲಾಗಿವೆ ಎಂದು ಅಶೋಕ್ ನಗರ ಪೊಲೀಸರು ಸ್ಪಷ್ಟನೆ ನೀಡಿದ್ದಾರೆ.
‘ನಫ್ರತ್ ಜೀತ್ ಹೈ, ಕಲಾವಿದ ಸೋತಿದ್ದಾನೆ.ನಾನು ಮುಗಿಸಿದ್ದೇನೆ! ವಿದಾಯ! ಅನ್ಯಾಯ..’ ಎಂದು ಮುನಾವರ್ ಫಾರೂಕಿ ಟ್ವೀಟ್ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಭದ್ರಾವತಿಯ ರೈಸ್ಮಿಲ್ನಲ್ಲಿ ಬಾಯ್ಲರ್ ಸ್ಫೋಟ: ಕಣ್ಮರೆಯಾಗಿದ್ದ ವ್ಯಕ್ತಿಯ ಶವ ಪತ್ತೆ
Mandya; ಸಕ್ಕರೆ ನಾಡಿನಲ್ಲಿ ಇಂದಿನಿಂದ 87ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನ
Dinesh Gundu Rao; ಬಾಣಂತಿಯರ ಸಾ*ವು ಪ್ರಕರಣ ನ್ಯಾಯಾಂಗ ತನಿಖೆಗೆ
ರಾತ್ರಿಯಿಡೀ ಸಿ.ಟಿ. ರವಿಯನ್ನು ಸುತ್ತಾಡಿಸಿದ ಪೊಲೀಸರು: ಮಧ್ಯರಾತ್ರಿ ರಸ್ತೆಯಲ್ಲೇ ಪ್ರತಿಭಟನೆ
Bhadravathi:ಬಾಯ್ಲರ್ ಸ್ಫೋ*ಟದಿಂದ ರೈಸ್‌ಮಿಲ್ ಕುಸಿತ:7 ಮಂದಿಗೆ ಗಾಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.