ಶಿರ್ವ: ನಡಿಬೆಟ್ಟು ಸಾಂಪ್ರದಾಯಿಕ ಜೋಡುಕರೆ ಕಂಬಳ ಸಂಪನ್ನ

Team Udayavani, Nov 28, 2021, 6:03 PM IST

21kambala2

ಶಿರ್ವ: ತುಳುನಾಡಿನ ಐತಿಹಾಸಿಕ ಹಿನ್ನೆಲೆಯಿರುವ 26ನೇ ವರ್ಷದ ಶಿರ್ವ ನಡಿಬೆಟ್ಟು ಸೂರ್ಯ - ಚಂದ್ರ ಸಂಪ್ರದಾಯ ಬದ್ಧ ಕಂಬಳವು ರವಿವಾರ ನಡಿಬೆಟ್ಟು ಕಂಬಳ ಗದ್ದೆಯಲ್ಲಿ ನಡೆಯಿತು.

ಎಲ್ಲೂರು ಶ್ರೀ ವಿಶ್ವೇಶ್ವರ ದೇವಸ್ಥಾನದ ಮಾಜಿ ಆಡಳಿತ ಮೊಕ್ತೇಸರ ಎಲ್ಲೂರುಗುತ್ತು ಪ್ರಫುಲ್ಲ ಶೆಟ್ಟಿ ದೀಪ ಬೆಳಗಿಸಿ ಜೋಡುಕರೆಗೆ ಕಾಯಿ ಒಡೆಯುವುದರ ಮೂಲಕ ಕಂಬಳವನ್ನು ಉದ್ಘಾಟಿಸಿದರು.

ಶತಮಾನಗಳಿಂದ ನಡೆದು ಬರುತ್ತಿರುವ ಧಾರ್ಮಿಕ ಹಿನ್ನೆಲೆಯನ್ನು ಹೊಂದಿರುವ ಶಿರ್ವ ನಡಿಬೆಟ್ಟು ಕಂಬಳವು ನಡಿಬೆಟ್ಟು ಚಾವಡಿಯ ದೈವ ಜುಮಾದಿಗೆ ಪೂಜೆ ಪುರಸ್ಕಾರ ನಡೆದ ಬಳಿಕ ಬಂಟ ಕೋಲ ನಡೆದು ಮೆರವಣಿಗೆಯಲ್ಲಿ ಕೊಂಬು, ವಾದ್ಯ ಘೋಷಗಳೊಂದಿಗೆ ಕೋಣಗಳನ್ನು ಗದ್ದೆಗಿಳಿಸಲಾಯಿತು. ಶಿರ್ವದ ದೈವ ದೇವರುಗಳ ಉತ್ಸವಗಳಲ್ಲಿ ಒಂದಕ್ಕೊಂದು ಸಂಬಂಧವಿದ್ದು ಸಂಪ್ರದಾಯ ಬದ್ಧವಾಗಿ ಕಂಬಳ ನಡೆಯುತ್ತದೆ.

ಹಗ್ಗ ಕಿರಿಯ ವಿಭಾಗದಲ್ಲಿ 30 ಜತೆ ಕೋಣಗಳು ಮತ್ತು ಸಬ್‌ಜೂನಿಯರ್‌ ವಿಭಾಗದಲ್ಲಿ 15 ಜತೆ ಒಟ್ಟು 45ಜತೆ ಕೋಣಗಳು ಕಂಬಳದಲ್ಲಿ ಭಾಗವಹಿಸಿದ್ದವು. ಮನೆತನದ ಕೋಣಗಳನ್ನು ಗದ್ದೆಗಿಳಿಸಿ ಓಡಿಸುವುದರೊಂದಿಗೆ ಸಾಂಪ್ರದಾಯಿಕ ಜೋಡುಕರೆ ಕಂಬಳ ಸಂಪನ್ನಗೊಂಡಿತು.

ಶಿರ್ವ: ನಡಿಬೆಟ್ಟು ಸಾಂಪ್ರದಾಯಿಕ ಜೋಡುಕರೆ ಕಂಬಳ ಸಂಪನ್ನ

ಕಾರ್ಯಕ್ರಮದಲ್ಲಿ ಶಿರ್ವ ಗ್ರಾ.ಪಂ. ಅಧ್ಯಕ್ಷ ಕೆ.ಆರ್‌. ಪಾಟ್ಕರ್‌, ಶಿರ್ವ ಆರೋಗ್ಯ ಮಾತಾ ದೇವಾಲಯದ ಪ್ರಧಾನ ಧರ್ಮಗುರು ರೆ|ಫಾ| ಡೆನ್ನಿಸ್‌ ಡೇಸಾ,ಸಹಾಯಕ ಧರ್ಮಗುರು ಫಾ| ರೋಲ್ವಿನ್‌ ಅರಾನ್ಹಾ, ಅಟ್ಟಿಂಜ ಶಂಭು ಶೆಟ್ಟಿ, ಮನೋಜ್‌ ಹೆಗ್ಡೆ,ಸೊರ್ಕಳ ಸಚ್ಚಿದಾನಂದ ಹೆಗ್ಡೆ, ಎಸ್‌.ಕೆ.ಸಾಲ್ಯಾನ್‌, ಸೂಡ ಪ್ರಶಾಂತ್‌ ಕುಮಾರ್‌ ಶೆಟ್ಟಿ, ಕೋಡು ಸದಾನಂದ ಶೆಟ್ಟಿ, ಸುಂದರ ಶೆಟ್ಟಿ,ಶೇಕರ ಶೆಟ್ಟಿ,ಕಾನಬೆಟ್ಟು ಬಡ್ಡು ಪೂಜಾರಿ,ಗ್ರಾ.ಪಂ. ಸದಸ್ಯ ಪ್ರವೀಣ್‌ ಸಾಲಿಯಾನ್‌, ರಾಜೇಶ್‌ ನಾಯ್ಕ,ಸುರೇಂದ್ರ ಪೂಜಾರಿ ಕೊಪ್ಪಲ, ವೀರೇಂದ್ರ ಪೂಜಾರಿ, ಹಿರಿಯರಾದ ಶಿರ್ವ ನಡಿಬೆಟ್ಟು ದಾಮೋದರ ಚೌಟ, ರತ್ನವರ್ಮ ಹೆಗ್ಡೆ, ಕಿಶೋರ್‌ಚಂದ್ರ ಹೆಗ್ಡೆ, ರಘುರಾಮ ನಾಯ್ಕ,ಚಂದ್ರಶೇಖರ ಹೆಗ್ಡೆ, ಕಂಬಳ ವ್ಯವಸ್ಥಾಪಕ ಶಶಿಧರ ಹೆಗ್ಡೆ ಮೊದಲಾದವರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Lokasabha

Parliment Session: ಅದಾನಿ ಲಂಚ ಆರೋಪ ಗದ್ದಲ: ಕಲಾಪ ಮುಂದಕ್ಕೆ

Sim-Card

Cyber Crime: ಸೈಬರ್‌ ವಂಚನೆ ತಡೆಗೆ ಕೇಂದ್ರದಿಂದ 6.69 ಲಕ್ಷ ಸಿಮ್‌ಗಳಿಗೆ ನಿರ್ಬಂಧ

Rahul

Adani issue: ಕೇಂದ್ರ ಸರಕಾರ ಅದಾನಿಯನ್ನು ರಕ್ಷಿಸುತ್ತಿದೆ, ಕೂಡಲೇ ಬಂಧಿಸಿ: ರಾಹುಲ್‌ ಗಾಂಧಿ

Rain-TN

Cyclone Fengal: ಭಾರೀ ಮಳೆಗೆ ಮುಳುಗಿದ ತಮಿಳುನಾಡು

Nishkath-Dube

Parliment: ವಕ್ಫ್ ಜೆಪಿಸಿ ಕಾಲಾವಧಿ ಹೆಚ್ಚಳಕ್ಕೆ ಬಿಜೆಪಿ ಸಂಸದ ನಿಶಿಕಾಂತ್‌ ದುಬೆ ಬೆಂಬಲ

Priyanka-VA

Parliment: ವಯನಾಡ್‌ ಲೋಕಸಭಾ ಸದಸ್ಯೆಯಾಗಿ ಇಂದು ಪ್ರಿಯಾಂಕಾ ಶಪಥ ಸಾಧ್ಯತೆ

JAYA-Bhattacharya

Appoint: ಲಾಕ್‌ಡೌನ್‌ ಟೀಕಿಸಿದ್ದ ಜಯ ಭಟ್ಟಾಚಾರ್ಯ ಅಮೆರಿಕ ಆರೋಗ್ಯ ಸಂಸ್ಥೆ ಮುಖ್ಯಸ್ಥ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಗೀತಾರ್ಥ ಚಿಂತನೆ-107: ಮರಣವೂ- ನಾಟಕದ ಅಲಂಕಾರವೂ…

Udupi: ಗೀತಾರ್ಥ ಚಿಂತನೆ-107: ಮರಣವೂ- ನಾಟಕದ ಅಲಂಕಾರವೂ…

Hebri: ಕಬ್ಬಿನಾಲೆ: ಮರದಿಂದ ಬಿದ್ದು ಕೃಷಿಕ ಸಾವು

Hebri: ಕಬ್ಬಿನಾಲೆ: ಮರದಿಂದ ಬಿದ್ದು ಕೃಷಿಕ ಸಾವು

13

Malpe: ಯುವಕ ನಾಪತ್ತೆ; ದೂರು ದಾಖಲು

Manipal: ಮಾಹೆ; ಸಿಜಿಎಂಪಿ ಕೇಂದ್ರಕ್ಕೆ ಭಾರತ ಫಾರ್ಮಾ ಪ್ರಶಸ್ತಿ

Manipal: ಮಾಹೆ; ಸಿಜಿಎಂಪಿ ಕೇಂದ್ರಕ್ಕೆ ಭಾರತ ಫಾರ್ಮಾ ಪ್ರಶಸ್ತಿ

Fraud Case: ಫಾರ್ಚುನ್‌ ಗ್ರೂಪ್‌ ಹೊಟೇಲ್‌ಗೆ ವಂಚನೆ: ಜಾಮೀನು

Fraud Case: ಫಾರ್ಚುನ್‌ ಗ್ರೂಪ್‌ ಹೊಟೇಲ್‌ಗೆ ವಂಚನೆ: ಜಾಮೀನು

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Lokasabha

Parliment Session: ಅದಾನಿ ಲಂಚ ಆರೋಪ ಗದ್ದಲ: ಕಲಾಪ ಮುಂದಕ್ಕೆ

Sim-Card

Cyber Crime: ಸೈಬರ್‌ ವಂಚನೆ ತಡೆಗೆ ಕೇಂದ್ರದಿಂದ 6.69 ಲಕ್ಷ ಸಿಮ್‌ಗಳಿಗೆ ನಿರ್ಬಂಧ

Rahul

Adani issue: ಕೇಂದ್ರ ಸರಕಾರ ಅದಾನಿಯನ್ನು ರಕ್ಷಿಸುತ್ತಿದೆ, ಕೂಡಲೇ ಬಂಧಿಸಿ: ರಾಹುಲ್‌ ಗಾಂಧಿ

Rain-TN

Cyclone Fengal: ಭಾರೀ ಮಳೆಗೆ ಮುಳುಗಿದ ತಮಿಳುನಾಡು

Nishkath-Dube

Parliment: ವಕ್ಫ್ ಜೆಪಿಸಿ ಕಾಲಾವಧಿ ಹೆಚ್ಚಳಕ್ಕೆ ಬಿಜೆಪಿ ಸಂಸದ ನಿಶಿಕಾಂತ್‌ ದುಬೆ ಬೆಂಬಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.