ಕೋವಿಡ್ ನ ಹೊಸ ರೂಪಾಂತರಿ ತಡೆಗೆ ಜಿಲ್ಲೆಯಲ್ಲಿ ಸಕಲ ಮುಂಜಾಗ್ರತಾ ಕ್ರಮ :ಉಡುಪಿ ಜಿಲ್ಲಾಧಿಕಾರಿ


Team Udayavani, Nov 28, 2021, 6:32 PM IST

ಕೋವಿಡ್ ನ ಹೊಸ ರೂಪಾಂತರಿ ತಡೆಗೆ ಜಿಲ್ಲೆಯಲ್ಲಿ ಸಕಲ ಮುಂಜಾಗ್ರತಾ ಕ್ರಮ : ಜಿಲ್ಲಾಧಿಕಾರಿ

ಉಡುಪಿ : ದಕ್ಷಿಣ ಆಫ್ರಿಕಾ ಸೇರಿದಂತೆ ವಿಶ್ವದ ಕೆಲವು ದೇಶಗಳಲ್ಲಿ ಕೋವಿಡ್ ನ ಹೊಸ ರೂಪಾಂತರಿ ತಳಿ ಒಮಿಕ್ರಾನ್ ಪ್ರಸರಣದ ಆತಂಕ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಿನ ಸಂಖ್ಯೆಯಲ್ಲಿ ವರದಿಯಾಗುತ್ತಿರುವುದರಿಂದ ಸರ್ವೇಕ್ಷಣ ಚಟುವಟಿಕೆಗಳನ್ನು ತೀವ್ರಗೊಳಿಸುವ ನಿಟ್ಟಿನಲ್ಲಿ ದೈನಂದಿನ ಕೋವಿಡ್ ಪರೀಕ್ಷೆಯ ಗುರಿಯನ್ನು ಹಚ್ಚಿಸಿ ಕರ್ನಾಟಕ ಸರ್ಕಾರ ಸುತ್ತೋಲೆಯನ್ನು ಹೊರಡಿಸಿದೆ. ಅದರಂತೆ ಜಿಲ್ಲೆಯಲ್ಲಿ ಕೋವಿಡ್ ನ ಹೊಸ ರೂಪಾಂತರಿ ಪ್ರಸರಣ ತಡೆಗೆ ಅಗತ್ಯ ವಿರುವ ಎಲ್ಲಾ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಉಡುಪಿ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ತಿಳಿಸಿದ್ದಾರೆ.

ಸರ್ಕಾರದ ಹೊಸ ಮಾರ್ಗಸೂಚಿಯಂತೆ ಉಡುಪಿ ಜಿಲ್ಲೆಯಲ್ಲಿ ದೈನಂದಿನ ಕೋವಿಡ್ ಪರೀಕ್ಷೆ ಗುರಿ 3000 ದಿಂದ 4000 ಹೆಚ್ಚಿಸಿ ನಿಗದಿಪಡಿಸಲಾಗಿದೆ. ರೋಗಲಕ್ಷಣ ಹೊಂದಿರುವವರು ili/sari ಪ್ರಕರಣಗಳು, ಸೋಂಕಿತರ ಪ್ರಾಥಮಿಕ ಮತ್ತು ದ್ವಿತೀಯ ಹಂತದ ಸಂಪರ್ಕ ಹೊಂದಿರುವವರು ಮತ್ತು ಹೈ ರಿಸ್ಕ್ ಹೊಂದಿರುವ ಗುಂಪಿನ ವ್ಯಕ್ತಿಗಳಿಗೆ ಕೋವಿಡ್ ಪರೀಕ್ಷೆ ಮಾಡುವ ಪ್ರಕ್ರಿಯೆಯನ್ನು ಮುಂದುವರಿಸುವುದು ಮತ್ತು ಪರೀಕ್ಷಾ ಪ್ರಮಾಣವನ್ನು ಹೆಚ್ಚಿಸಲಾಗುವುದು ಎಂದರು.

ಪ್ರೌಢಶಾಲೆಗಳು ಮತ್ತು ಕಾಲೇಜುಗಳ ವಿದ್ಯಾರ್ಥಿಗಳು ಮತ್ತು ಬೋಧಕ ಸಿಬ್ಬಂದಿ. ಹೋಟೆಲ್ ಗಳು ಮತ್ತು ರೆಸ್ಟೋರೆಂಟ್ ಗಳ ಸಿಬ್ಬಂದಿ. ಮಾಲ್ ಗಳಲ್ಲಿರುವ ಅಂಗಡಿ ಮುಂಗಟ್ಟುಗಳ ವರ್ತಕರು. ಕ್ಯಾಟರಿಂಗ್ ಸಿಬ್ಬಂದಿ ಮತ್ತು ಮನೆಮನೆಗಳಿಗೆ ವಿತರಣೆ ಮಾಡುವ ಸಿಬ್ಬಂದಿ. ಕಾರ್ಖಾನೆಗಳ ಸಿಬ್ಬಂದಿ. ಎಲ್ಲಾ ಕಚೇರಿಗಳ ಸಿಬ್ಬಂದಿ. ಪಬ್ ಮತ್ತು ಬಾರ್ ಗಳಲ್ಲಿ ಕೆಲಸ ಮಾಡುವ ಸಿಬ್ಬಂದಿ. ಕೆಲವೊಂದು ಸಂದರ್ಭಗಳಲ್ಲಿ ಸಾರ್ವಜನಿಕರು ಗುಂಪು ಸೇರಿದಾಗ ಪಾಕ್ಷಿಕವಾಗಿ Random ಪರೀಕ್ಷೆ ನಡೆಸಲಾಗುತ್ತದೆ ಎಂದು ಹೇಳಿದರು.

ನಿಗದಿಪಡಿಸಿದ ಗುರಿಯಲ್ಲಿ ಶೇಕಡ 50 ರಷ್ಟು ಜಿಲ್ಲಾ ಕೇಂದ್ರದಲ್ಲಿ ಮತ್ತು ಉಳಿದ 50 ಗ್ರಾಮೀಣ ಪ್ರದೇಶಗಳಲ್ಲಿ ಪರೀಕ್ಷೆ ಮಾಡುವುದು. ಪರೀಕ್ಷೆಯಲ್ಲಿ ಶೇಕಡ 10 ರಷ್ಟು ಮಕ್ಕಳನ್ನು ಪರೀಕ್ಷೆಗೆ ಒಳಪಡಿಸುವುದು. ಐಸಿಎಂಆರ್ ಮಾರ್ಗಸೂಚಿ ಪ್ರಕಾರ ಎಲ್ಲಾ ರೋಗಲಕ್ಷಣ ಸಹಿತ ಪ್ರಕರಣಗಳನ್ನು ಮೊದಲಿಗೆ Rat ಪರೀಕ್ಷೆಗೆ ಒಳಪಡಿಸುವುದು, ಫಲಿತಾಂಶ ನೆಗಟಿವ್ ಬಂದಲ್ಲಿ ಆರ್ಟಿಪಿಸಿಆರ್ ಪರೀಕ್ಷೆ ಮಾಡುವುದು. ರೋಗಲಕ್ಷಣ ಇಲ್ಲದವರಿಗೆ Rat ಪರೀಕ್ಷೆ ಮಾಡಬಾರದು .

ಇದನ್ನೂ ಓದಿ : ಕುಣಿಗಲ್: ಕೋಡಿ ಹಳ್ಳದ ನೀರಿನಲ್ಲಿ ಆಟವಾಡುತ್ತಲೇ ಕೊಚ್ಚಿಹೋದ ನಾಲ್ವರು

ದಕ್ಷಿಣ ಆಫ್ರಿಕಾ, ಬೋಟ್ಸುವಾನ ಮತ್ತು ಹಾಂಕಾಂಗ್ ದೇಶಗಳಲ್ಲಿ ಕೋವಿಡ್ ನ ರೂಪಾಂತರಿ ಪ್ರಭೇದ ಪತ್ತೆಯಾದ ಹಿನ್ನೆಲೆಯಲ್ಲಿ ವಿದೇಶಿ ಪ್ರಯಾಣಿಕರನ್ನು ತಪಾಸಣೆ ಪರೀಕ್ಷೆಗೊಳಪಡಿಸುವ ನಿಟ್ಟಿನಲ್ಲಿ ಕೆಳಕಂಡ ಕ್ರಮಗಳನ್ನು ಕಟ್ಟುನಿಟ್ಟಾಗಿ ಕೈಗೊಳ್ಳುವಂತೆ ಕರ್ನಾಟಕ ಸರ್ಕಾರ ಸುತ್ತೋಲೆ ಹೊರಡಿಸಿದೆ.

ದಕ್ಷಿಣ ಆಫ್ರಿಕಾ, ಬೋಟ್ಸುವಾನ ಮತ್ತು ಹಾಂಕಾಂಗ್ ನಿಂದ ಬರುವ ಪ್ರಯಾಣಿಕರಿಗೆ ಕಡ್ಡಾಯವಾಗಿ RTPCR ಪರೀಕ್ಷೆ ಮಾಡಬೇಕು ಮತ್ತು ನೆಗೆಟಿವ್ ವರದಿ ಬಂದ ನಂತರವೇ ವಿಮಾನ ನಿಲ್ದಾಣದಿಂದ ನಿರ್ಗಮಿಸಲು ಅನುಮತಿಸಬೇಕು. ಈ ಮೂರು ದೇಶಗಳಿಂದ ಕಳೆದ 15 ದಿನಗಳಿಂದ ಈಚೆಗೆ ಬಂದಿರುವ ಪ್ರಯಾಣಿಕರನ್ನು ಪತ್ತೆ ಹಚ್ಚಿ RTPCR ಪರೀಕ್ಷೆಗೆ ಒಳಪಡಿಸಬೇಕು. ಪ್ರಯಾಣಿಕರು ಕೋವಿಡ್ ಸೋಂಕಿತ ಆಗಿದ್ದಲ್ಲಿ ಅವರನ್ನು 10 ದಿನಗಳ ಕಾಲ ಕಡ್ಡಾಯ ಸಾಂಸ್ಥಿಕ ಪ್ರತ್ಯೇಕತೆಗೆ ಒಳಪಡಿಸಬೇಕು.ಪಾಸಿಟಿವ್ ಬಂದಿರುವ ಪರೀಕ್ಷಾ ಮಾದರಿಗಳನ್ನು ಕಡ್ಡಾಯವಾಗಿ ತಕ್ಷಣ ಜಿನೋಮಿಕ್ ಸಿಕ್ವೆನ್ಸಿಂಗ್ ಪರೀಕ್ಷೆಗೆ ಒಳಪಡಿಸಬೇಕು. ವಿದೇಶದಿಂದ ಬರುವ ಎಲ್ಲಾ ಪ್ರಯಾಣಿಕರು ಪರೀಕ್ಷೆಗೆ ಒಳಪಡಬೇಕು.

ಜಿಲ್ಲೆಯಲ್ಲಿ ಈ ಮೇಲ್ಕಂಡ ಎಲ್ಲಾ ಮುನ್ನೆಚ್ಚರಿಕಾ ಕ್ರಮಗಳನ್ನು ಪ್ರಥಮ ಆದ್ಯತೆ ಎಂದು ಪರಿಗಣಿಸಿ , ಆರೋಗ್ಯ ಇಲಾಖೆ ಮತ್ತು ಇತರ ಪ್ರಮುಖ ಇಲಾಖೆಗಳ ಸಹಕಾರ ಮತ್ತು ಸಮನ್ವಯದೊಂದಿಗೆ ಹಾಗೂ ಜಿಲ್ಲಾಡಳಿತದ ಸೂಕ್ತ ಮಾರ್ಗದರ್ಶನ ಮತ್ತು ನಿಗಾವಣೆಯಲ್ಲಿ ಕಟ್ಟುನಿಟ್ಟಾಗಿ ಜಾರಿಗೊಳಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ತಿಳಿಸಿದ್ದಾರೆ.

ಟಾಪ್ ನ್ಯೂಸ್

Congress: ದ.ಕ ಗ್ರಾಮ ಪಂಚಾಯತ್‌; 24ರಲ್ಲಿ 19 ಸ್ಥಾನ ಕಾಂಗ್ರೆಸ್‌ ಬೆಂಬಲಿತರಿಗೆ ಗೆಲುವು

16-moodbidri

Moodabidri: ನಿವೃತ್ತ ದೈಹಿಕ ಶಿಕ್ಷಣ ನಿರ್ದೇಶಕ ಪಿ.ನೇಮಿರಾಜ ಹೆಗ್ಡೆ ನಿಧನ

Pakistan: 6 security personnel hit, shoot-at-sight order

Pakistan: 6 ಮಂದಿ ಭದ್ರತಾ ಸಿಬ್ಬಂದಿ ಸಾವು, ಕಂಡಲ್ಲಿ ಗುಂಡು ಆದೇಶ

Yadagiri: ವಕ್ಫ್ ಹೋರಾಟ ರೈತರ ಪರವಾಗಿದೆ: ಶಾಸಕ ಯತ್ನಾಳ

Yadagiri: ವಕ್ಫ್ ಹೋರಾಟ ರೈತರ ಪರವಾಗಿದೆ: ಶಾಸಕ ಯತ್ನಾಳ

ಅಡಿಕೆ ಬೆಳೆಗಾರರ ಜೀವನಕ್ಕೆ ಆಘಾತವಿಕ್ಕಿದ ಡಬ್ಲ್ಯೂಎಚ್‌ಒ ವಿರುದ್ಧ ಕ್ರಮಕ್ಕೆ ಒತ್ತಾಯ  

ಅಡಿಕೆ ಬೆಳೆಗಾರರ ಜೀವನಕ್ಕೆ ಆಘಾತವಿಕ್ಕಿದ ಡಬ್ಲ್ಯೂಎಚ್‌ಒ ವಿರುದ್ಧ ಕ್ರಮಕ್ಕೆ ಒತ್ತಾಯ  

Sagara-Minister-Dinesh

KFD Vaccine: ಮುಂಬರುವ ನವೆಂಬರ್‌ನಲ್ಲಿ ಮಂಗನ ಕಾಯಿಲೆಗೆ ಲಸಿಕೆ ಸಿದ್ಧ: ದಿನೇಶ್ ಗುಂಡೂರಾವ್

Gold price drops again: Rs 77240 per 10 grams!

Gold Rate: ಚಿನ್ನದ ಬೆಲೆ ಮತ್ತೆ ಇಳಿಕೆ: 10 ಗ್ರಾಂಗೆ 77240 ರೂ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

KAUP: ಸಂವಿಧಾನ ಉಳಿಸಿ ಬೃಹತ್‌ ಜಾಥಾ ಮತ್ತು ಸಾರ್ವಜನಿಕ ಸಭೆ

KAUP: ಧರ್ಮಗ್ರಂಥಗಳಷ್ಟೇ ಸಂವಿಧಾನವೂ ಪವಿತ್ರ: ನಿಕೇತ್‌ ರಾಜ್‌ ಮೌರ್ಯ

man-a

Udupi: ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

10

Udupi: ಭಿಕ್ಷಾಟನೆ, ಅಪೌಷ್ಟಿಕತೆ ವಿರುದ್ಧ ಯುವಕನ ಬರಿಗಾಲ ಜಾಗೃತಿ

9

Udupi: ಬಿಎಸ್ಸೆನ್ನೆಲ್‌ ಟವರ್‌ ನಿರ್ವಹಣೆ ಹೊಣೆ ಪಂಚಾಯತ್‌ ಹೆಗಲಿಗೆ

courts-s

Udupi: ವಿಮಾನಯಾನ ವಿಳಂಬದ ವಿರುದ್ಧ ನ್ಯಾಯಾಲಯದಲ್ಲಿ ಜಯ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Congress: ದ.ಕ ಗ್ರಾಮ ಪಂಚಾಯತ್‌; 24ರಲ್ಲಿ 19 ಸ್ಥಾನ ಕಾಂಗ್ರೆಸ್‌ ಬೆಂಬಲಿತರಿಗೆ ಗೆಲುವು

Siddapura: ಬುಲೆಟ್‌ ಬೈಕಿಗೆ ಜೆಸಿಬಿ ಡಿಕ್ಕಿ; ಸವಾರರಿಗೆ ಗಾಯ

Siddapura: ಬುಲೆಟ್‌ ಬೈಕಿಗೆ ಜೆಸಿಬಿ ಡಿಕ್ಕಿ; ಸವಾರರಿಗೆ ಗಾಯ

16-moodbidri

Moodabidri: ನಿವೃತ್ತ ದೈಹಿಕ ಶಿಕ್ಷಣ ನಿರ್ದೇಶಕ ಪಿ.ನೇಮಿರಾಜ ಹೆಗ್ಡೆ ನಿಧನ

Amparu: ಬೈಕ್‌ ಸ್ಕಿಡ್‌; ಸವಾರ ಚಿಕಿತ್ಸೆಗೆ ಸ್ಪಂದಿಸದೆ ಸಾವು

Amparu: ಬೈಕ್‌ ಸ್ಕಿಡ್‌; ಸವಾರ ಚಿಕಿತ್ಸೆಗೆ ಸ್ಪಂದಿಸದೆ ಸಾವು

KAUP: ಸಂವಿಧಾನ ಉಳಿಸಿ ಬೃಹತ್‌ ಜಾಥಾ ಮತ್ತು ಸಾರ್ವಜನಿಕ ಸಭೆ

KAUP: ಧರ್ಮಗ್ರಂಥಗಳಷ್ಟೇ ಸಂವಿಧಾನವೂ ಪವಿತ್ರ: ನಿಕೇತ್‌ ರಾಜ್‌ ಮೌರ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.