ಕೆರೆ ಅಭಿವೃದ್ಧಿಗೆ ಒಂದಾದ ಅಧಿಕಾರಿಗಳು
Team Udayavani, Nov 29, 2021, 12:35 PM IST
ಆನೇಕಲ್: ಪಟ್ಟಣಕ್ಕೆ ಸಮೀಪದ ದೊಡ್ಡಕೆರೆಯಲ್ಲಿ ಅಭಿವೃದ್ಧಿಗೆ ಸಾಕಷ್ಟು ಜನರ ಮನವಿ ಬಂದ ಹಿನ್ನೆಲೆ ಕೆರೆಯನ್ನು ಅಭಿವೃದ್ಧಿ ಮಾಡಲು ತಾಲೂಕಿನ ಎಲ್ಲಾ ಅಧಿಕಾರಿಗಳು ಒಗ್ಗೂಡಿ ಮುಂದಾಗಿದ್ದಾರೆ ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜೆ. ಮಂಜುನಾಥ್ ಹೇಳಿದರು. ಆನೇಕಲ್ಲಿನ ದೊಡ್ಡಕೆರೆ ರಾಜಕಾಲುವೆ ತೆರವು ಕಾರ್ಯಾಚರಣೆ ಹಿನ್ನೆಲೆಯಲ್ಲಿ ಭೇಟಿ ನೀಡಿ ಮಾತನಾಡಿದರು.
ಆನೇಕಲ್ ಪಟ್ಟಣಕ್ಕೆ ನೀರುಣಿಸುತ್ತಿದ್ದ ಅತೀ ದೊಡ್ಡಕೆರೆ ಯಾಗಿರುವ ದೊಡ್ಡಕೆರೆ ನಿರಂತರವಾಗಿ ಮಳೆಯಾಗುತ್ತಿದ್ದರೂ ಸಹ ಕೆರೆಗೆ ನೀರು ಬಂದಿರಲಿಲ್ಲ, ಇದಕ್ಕೆ ಪ್ರಮುಖ ಕಾರಣ ಸುತ್ತಮುತ್ತಲಿನ ರಾಜಕಾಲುವೆಗಳು ಮುಚ್ಚಿಹೋಗಿದ್ದು ಕೆಲವು ಕಡೆ ಒತ್ತುವರಿ ಕೂಡ ಆಗಿದೆ ಎನ್ನುವ ಮಾಹಿತಿ ಹಿನ್ನೆಲೆಯಲ್ಲಿ ಕೆರೆಯ ಸುತ್ತಮುತ್ತ ನಾಲ್ಕು ಕಡೆ ನೀರು ಹರಿದುಬರುವ ರಾಜಕಾಲುವೆ ಒತ್ತುವರಿಯನ್ನು ತೆರವು ಮಾಡುವ ಕುರಿತು ಆನೇಕಲ್ ತಹಶೀಲ್ದಾರ್ ಹಾಗೂ ಸಣ್ಣ ನೀರಾವರಿ ಇಲಾಖೆ ಮತ್ತು ಆನೇಕಲ್ ತಾಲೂಕಿನ ರಾಜಕಾಲುವೆ ಹಾಗೂ ಕೆರೆಗಳ ಬಗ್ಗೆ ಕಾಳಜಿವಹಿಸಿ ಕಳೆದ ಎರಡು ವರ್ಷದಿಂದ ನಿರಂತರವಾಗಿ ಕೆಲಸ ಮಾಡುತ್ತಿರುವ ಮಾಜಿ ಯೋಧ ಕ್ಯಾಪ್ಟನ್ ಸಂತೋಷ್ ಕುಮಾರ್ ಅವರು ಕಾಳಜಿವಹಿಸಿ ಕೆರೆಯನ್ನು ಅಭಿವೃದ್ಧಿಪಡಿಸಬೇಕು ಎಂದು ಮುಂದೆ ನಿಂತಿದ್ದು ಅವರಿಗೆ ಸ್ಥಳೀಯ ಜನಪ್ರತಿನಿಧಿಗಳು ಸಹಕಾರ ನೀಡಲು ಮುಂದಾಗಿರುವುದು ಶ್ಲಾಘನೀಯ ಎಂದರು.
ಮಾಜಿ ಯೋಧ ಕ್ಯಾಪ್ಟನ್ ಸಂತೋಷ್ ಕುಮಾರ್ ಮಾತನಾಡಿ, ಆನೇಕಲ್ ತಾಲೂಕಿನ ಸಾಕಷ್ಟು ಕೆರೆಗಳ ಬಗ್ಗೆ ಅಧ್ಯಯನ ಮಾಡಲಾಗಿದೆ ಅದೇ ರೀತಿಯ ದೊಡ್ಡಕೆರೆ ಪುರಾತನ ಕೆರೆಯಾಗಿದ್ದು ಈ ಕೆರೆಯ ಬಗ್ಗೆಯೂ ಸಾಕಷ್ಟು ಮಾಹಿತಿಯನ್ನು ಕಲೆ ಹಾಕಲಾಗಿತ್ತು.
ಇದೇ ಸಂದರ್ಭದಲ್ಲಿ ಮಾಧ್ಯಮಗಳೂ ಆನೇಕಲ್ ದೊಡ್ಡಕೆರೆಗೆ ಮಳೆಯಾಗುತ್ತಿದ್ದರೂ ನೀರು ಹರಿದು ಬರುತ್ತಿಲ್ಲ ಎನ್ನುವ ಬಗ್ಗೆ ವರದಿಯನ್ನು ಮಾಡಿದ್ದರು ವರದಿ ಬಂದ ಬಳಿಕ ಮತ್ತೆ ತಾಲೂಕು ಕಚೇರಿಯ ಅಧಿಕಾರಿಗಳು ಹಾಗೂ ಸಣ್ಣ ನೀರಾವರಿ ಇಲಾಖೆ ಅಧಿಕಾರಿಗಳನ್ನು ಭೇಟಿ ನೀಡಿ ಚರ್ಚಿಸಿದಾಗ ಕೆರೆಗೆ ನೀರು ಹರಿದು ಬರಲು ರಾಜಕಾಲುವೆ ಒತ್ತುವರಿ ಆಗಿರುವುದೇ ಕಾರಣ ಎಂದು ತಿಳಿದು, ಎಲ್ಲ ಅಧಿಕಾರಿಗಳು ದೊಡ್ಡಕೆರೆ ಹಾಗೂ ಸುತ್ತಮುತ್ತಲಿನ ರಾಜಕಾಲುವೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದಾಗ ರಾಜಕಾಲುವೆ ಒತ್ತುವರಿ ಯಾಗಿರುವುದು ತಿಳಿದುಬಂದು ಒಂದೇ ದಿನದಲ್ಲಿ ಕೆರೆ ಸುತ್ತಮುತ್ತಲಿನ ರಾಜಕಾಲುವೆ ಒತ್ತುವರಿ ತೆರಗೆ ಮುಂದಾಗಿದ್ದೇವೆ ಎಂದರು.
ಇದನ್ನೂ ಓದಿ;- ಭೀಮಣ್ಣ ನಾಯ್ಕ ಕೇವಲ ರಾಜಕೀಯ ವ್ಯಕ್ತಿ ಅಲ್ಲ: ದೀಪಕ್ ದೊಡ್ಡೂರು
ಸಣ್ಣ ನೀರಾವರಿ ಇಲಾಖೆ, ಆನೇಕಲ್ ತಹಶೀಲ್ದಾರ್ ದಿನೇಶ್ ಹಾಗೂ ಆನೇಕಲ್ ಪುರಸಭೆ ಅಧ್ಯಕ್ಷ ಪದ್ಮನಾಭ ಸೇರಿದಂತೆ ಹಲವಾರು ಜನ ಜನಪ್ರತಿನಿಧಿಗಳು ಸಹಕಾರ ನೀಡಲು ಮುಂದಾಗಿದ್ದಾರೆ ಎಂದು ತಿಳಿಸಿದರು. ಆನೇಕಲ್ ಪುರಸಭಾ ಅಧ್ಯಕ್ಷ ಎನ್.ಎಸ್ ಪದ್ಮನಾಭ ಮಾತನಾಡಿ, ಆನೇಕಲ್ ಪಟ್ಟಣಕ್ಕೆ ಒಂದು ಕಾಲದಲ್ಲಿ ನೀರುಣಿಸುತ್ತಿದ್ದದ್ದು ದೊಡ್ಡಕೆರೆ ಎನ್ನುವುದು ಇತಿಹಾಸ, ಆದರೆ ಸಾಕಷ್ಟು ಕಡೆ ರಾಜಕಾಲುವೆಗಳನ್ನು ಹಾಗೂ ಸಣ್ಣ ಡ್ಯಾಂಗಳನ್ನು ನಿರ್ಮಾಣ ಮಾಡಿಕೊಂಡಿದ್ದು ಇದರಿಂದಾಗಿ ನೀರು ರಾಜಕಾಲುವೆಗಳಲ್ಲಿ ಹರಿದು ಬರುತ್ತಿಲ್ಲ, ಜಿಲ್ಲಾಧಿಕಾರಿಗಳ ಕಾಳಜಿ ಹಾಗೂ ಮಾಜಿ ಯೋಧ ಕ್ಯಾಪ್ಟನ್ ಸಂತೋಷ್ ಕುಮಾರ್ ಸೇರಿದಂತೆ ಆನೇಕಲ್ ತಹಶೀಲ್ದಾರ್ ದಿನೇಶ್ ಅವರು ಕೆರೆ ಅಭಿವೃದ್ಧಿಗೆ ಸಂಪೂರ್ಣ ಸಹಕಾರವನ್ನು ನೀಡಲು ಮುಂದೆ ಬಂದಿದ್ದಾರೆ.
ಆನೇಕಲ್ ಪುರಸಭೆ ಕೂಡ ಕೆರೆಯ ಅಭಿವೃದ್ಧಿಗೆ ನೀಡಲು ಸಿದ್ಧ ಎಂದರು. ಸಣ್ಣ ನೀರಾವರಿ ಇಲಾಖೆಯ ಅಭಿಯಂತರ ಡಾ.ಜೆ.ರಾಜಣ್ಣ ಮಾತನಾಡಿ, ಆನೇಕಲ್ ತಾಲೂಕಿನ ಬಹುತೇಕ ಕೆರೆಗಳಲ್ಲಿ ಈಗಾಗಲೇ ನೀರು ತುಂಬಿದೆ ಆದರೆ ದೊಡ್ಡಕೆರೆಗೆ ನೀರು ಬಂದಿಲ್ಲ ಇದಕ್ಕೆ ಪ್ರಮುಖ ಕಾರಣ ಕೆಲವು ಕಡೆ ರಾಜಕಾಲುವೆಗಳು ಒತ್ತುವರಿಯಾಗಿರುವುದು ಎನ್ನುವ ಮಾಹಿತಿಯನ್ನು ಪಡೆದ ಬಳಿಕ ಎರಡೇ ದಿನದಲ್ಲಿ ಕಾಮಗಾರಿಯನ್ನು ಕೈಗೆತ್ತಿಕೊಂಡಿದ್ದೇವೆ ಎಂದು ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಆನೇಕಲ್ ಪುರಸಭೆ ಮುಖ್ಯಾಧಿಕಾರಿಗಳು, ಕಂದಾಯ ಇಲಾಖೆ ಅಧಿಕಾರಿಗಳು, ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಅಧಿಕಾರಿವರ್ಗದವರು ಹಾಜರಿದ್ದರು.
ಒಗ್ಗಟ್ಟಿನಿಂದ ಕೆರೆ ಒತ್ತುವರಿ ತೆರವು ತಹಶೀಲ್ದಾರ್ ದಿನೇಶ್ ಮಾತನಾಡಿ, ಆನೇಕಲ್ ದೊಡ್ಡಕೆರೆ ನೀರಿಲ್ಲದೆ ಬರಿದಾಗಿದ್ದು ಮಳೆಯಾಗುತ್ತಿದ್ದರೂ ಕೂಡ ನೀರು ಬರುತ್ತಿಲ್ಲ ಎನ್ನುವ ಬಗ್ಗೆ ಸಾಕಷ್ಟು ಮಾಧ್ಯಮಗಳು ಗಮನ ಸೆಳೆದಿತ್ತು, ಸ್ಥಳೀಯರಿಂದಲೂ ಕೂಡ ಕೆರೆ ಸುತ್ತಮುತ್ತ ರಾಜಕಾಲುವೆ ಒತ್ತುವರಿಯಾಗಿರುವ ಬಗ್ಗೆ ಮಾಹಿತಿ ಬಂದಿದ್ದು, ಎಲ್ಲರೂ ಒಗ್ಗಟ್ಟಿನಿಂದ ಕೆರೆ ಸುತ್ತಮುತ್ತಲಿನ ರಾಜಕಾಲುವೆ ಒತ್ತುವರಿ ತೆರವಿಗೆ ಮುಂದಾಗಿದ್ದೇವೆ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nelamangala: ಸಾಕು ನಾಯಿ ಸತ್ತಿದ್ದಕ್ಕೆ ಮಾಲಕ ಆತ್ಮಹ*ತ್ಯೆ
Doddaballapur: ಹೊಲದಲ್ಲಿ ಹೂ ಬಿಡಿಸುತ್ತಿದ್ದ ಮಹಿಳೆಗೆ ಕಾರು ಡಿಕ್ಕಿ: ಸಾವು
Road Mishap: ಬೈಕ್ ವ್ಹೀಲಿಂಗ್ ಮಾಡುವಾಗ ಕ್ಯಾಂಟರ್‌ಗೆ ಡಿಕ್ಕಿ; ಇಬ್ಬರು ಸಾವು
Tragic: ಮದುವೆ ಹರಕೆ ಹೊತ್ತು ಘಾಟಿ ದೇಗುಲಕ್ಕೆ ಬಂದಿದ್ದ ಯುವತಿ ಸಾವು
Ayodhya ರಾಮನ ದರ್ಶನ ಪಡೆದಿದ್ದ “ಬಸಪ್ಪ” ಈಗ ಶಬರಿಮಲೆಗೆ ಪ್ರಯಾಣ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Venur; ಚಿರತೆ ಓಡಾಟ; ಸಾರ್ವಜನಿಕರಲ್ಲಿ ಆತಂಕ; ಅರಣ್ಯಾಧಿಕಾರಿ- ಸಾರ್ವಜನಿಕರ ಸಭೆ
Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ
Governor: ಮಣಿಪುರದ 19 ನೇ ರಾಜ್ಯಪಾಲರಾಗಿ ಅಜಯ್ ಭಲ್ಲಾ ಪ್ರಮಾಣ ವಚನ ಸ್ವೀಕಾರ
Bidar; ಗುತ್ತಿಗೆದಾರ ಸಚಿನ್ ಕೇಸ್; ತನಿಖೆ ಆರಂಭಿಸಿದ ಸಿಐಡಿ ತಂಡ
Prajwal Devaraj; ಶಿವರಾತ್ರಿಗೆ ʼರಾಕ್ಷಸʼ ಅಬ್ಬರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.