ಡೀಸಿ ನೇತೃತದಲ್ಲಿ “ಆಪರೇಷನ್‌ ರಾಜಕಾಲುವೆ”


Team Udayavani, Nov 29, 2021, 2:25 PM IST

ರಾಜಕಾಲುವೆ ಡೀಸಿ

ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ವಾಡಿಕೆಗಿಂತಲೂ ಹೆಚ್ಚು ಮಳೆ ಸುರಿದ ಹಿನ್ನೆಲೆಯಲ್ಲಿ ನೀರು ಸರಾಗವಾಗಿ ಹರಿಯಲು ರಾಜಕಾಲುವೆ ನಿರ್ಮಿಸಲು ಜಿಲ್ಲಾಡಳಿತ ಮುಂದಾಗಿದೆ. ಈಗಾಗಲೇ ಅಕ್ರಮವಾಗಿ ಒತ್ತುವರಿ ಆಗಿರುವ ಕಾಲುವೆಗಳನ್ನು ತೆರವುಗೊಳಿಸುವ ಅಭಿಯಾನವನ್ನೂ ಆರಂಭಿಸಲಾಗಿದೆ.

ಸತತವಾಗಿ ಸುರಿದ ಮಳೆಯಿಂದ ರಾಜಕಾಲುವೆಗಳಲ್ಲಿ ಹರಿಯಬೇಕಿದ್ದ ಮಳೆ ನೀರು, ಅಪಾರ ಪ್ರಮಾ ಣದ ಬೆಳೆ ನಾಶವಾಗಿ, ನಗರದ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ, ನಾಗರಿಕರು ಸಂಕಷ್ಟಕ್ಕೆ ಸಿಲುಕಿದ್ದರು. ಈ ಹಿನ್ನೆಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಾ.ಕೆ. ಸುಧಾಕರ್‌ ಸೂಚನೆ ಮೇರೆಗೆ ಜಿಲ್ಲಾಧಿಕಾರಿ ಆರ್‌. ಲತಾ ಚಿಕ್ಕಬಳ್ಳಾಪುರ ನಗರ, ಜಿಲ್ಲಾದ್ಯಂತ ರಾಜಕಾಲುವೆ ಗುರುತಿಸಿ ಅವುಗಳ ಅಭಿವೃದ್ಧಿಗೆ ಕ್ರಮ ಕೈಗೊಂಡಿದ್ದಾರೆ.

 ಒತ್ತುವರಿ ತೆರವುಗೊಳಿಸಿ: ಚಿಕ್ಕಬಳ್ಳಾಪುರ ನಗರಕ್ಕೆ ಹೊಂದಿಕೊಂಡಿರುವ ಕಂದವಾರ ಕೆರೆಯ ಕೋಡಿ ನೀರು ಸರಾಗವಾಗಿ ಹರಿಯಲು ಮಾರ್ಗ ಇಲ್ಲದೆ, ಸುತ್ತಮುತ್ತಲಿನ ವಸತಿ ಪ್ರದೇಶಗಳಿಗೆ ನುಗ್ಗಿ ಅವಾಂತರ ಸೃಷ್ಟಿಸಿತು.

ಈ ವೇಳೆಯಲ್ಲಿ ಸಂಕಷ್ಟಕ್ಕೆ ಸಿಲುಕಿದ ನಾಗರಿಕರು ಮಳೆ ನೀರು ಸರಾಗವಾಗಿ ಹರಿಯಲು ನಿರ್ಮಿಸಿರುವ ರಾಜಕಾಲುವೆಯನ್ನು ಕೆಲವರು ಅಕ್ರಮ ಒತ್ತುವರಿ ಮಾಡಿಕೊಂಡಿದ್ದಾರೆ ಎಂದು ದೂರಿದ ಹಿನ್ನೆಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಾ.ಕೆ. ಸುಧಾಕರ್‌ ಮಳೆಯಿಂದ ಹಾನಿಯಾದ ಪ್ರದೇಶಗಳಿಗೆ ಕೂಡಲೇ ರಾಜಕಾಲುವೆ ಒತ್ತುವರಿ ತೆರವುಗೊಳಿಸಲು ಸೂಚನೆ ನೀಡಿದರು.

ಜಿಲ್ಲೆಯಲ್ಲಿ ವ್ಯಾಪಕ ಮಳೆಯಾದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಆರ್‌.ಲತಾ ಅವರು ವಿವಿಧ ತಾಲೂಕುಗಳಿಗೆ ಭೇಟಿ ನೀಡಿ ಕೆರೆ ಕೋಡಿ ಹರಿದಿರುವ ಪ್ರದೇಶಗಳಿಗೆ ತೆರಳಿ, ಅಲ್ಲಿ ರೈತರ ಬೆಳೆ ಹಾನಿ, ಕೆರೆ, ರಾಜಕಾಲುವೆಗಳ ಒತ್ತುವರಿಗೆ ಸಂಬಂಧಿಸಿದಂತೆ ಕಂದಾಯ ಇಲಾಖೆ ಅಧಿಕಾರಿಗಳು, ಅಚ್ಚುಕಟ್ಟೆ ಪ್ರದೇಶಗಳ ಜನರು, ರೈತರಿಂದ ಮಾಹಿತಿ ಸಂಗ್ರಹಿಸಿ ಕಠಿಣ ಕ್ರಮ ಜರುಗಿಸಲು ಮುಂದಾಗಿದ್ದಾರೆ.

 ಒತ್ತುವರಿ ತೆರವಿಗೆ ನಿರ್ದಾಕ್ಷಿಣ್ಯ ಕ್ರಮ: ಚಿಕ್ಕಬಳ್ಳಾಪುರ ನಗರಕ್ಕೆ ಹೊಂದಿಕೊಂಡಿರುವ ಕಂದವಾರ ಕೆರೆ, ವಿನಾಯಕ ನಗರದಿಂದ ಅಮಾಣಿ ಗೋಪಾಲಕೃಷ್ಣ ಕೆರೆಗೆ ನೀರು ಹರಿಯುವ ಸಂಪರ್ಕಿತ ರಾಜಕಾಲುವೆಗಳ ಒತ್ತುವರಿ ತೆರವುಗೊಳಿಸುವ ಅಭಿಯಾನವನ್ನು ಜಿಲ್ಲಾಡಳಿತ ಕೈಗೊಂಡಿದೆ. ಈಗಾಗಲೇ ಸ್ವತಃ ಜಿಲ್ಲಾಧಿಕಾರಿ ಆರ್‌.ಲತಾ ಅವರು ತಹಶೀಲ್ದಾರ್‌ ಗಣಪತಿ ಶಾಸ್ತ್ರಿ, ನಗರಸಭೆ ಪೌರಾಯುಕ್ತ ಮಹಾಂತೆಧೀಶ್‌, ಕಂದಾಯ ಅಧಿಕಾರಿಗಳೊಂದಿಗೆ ಸ್ಥಳ ಪರಿಶೀಲನೆ ನಡೆಸಿ ರಾಜಕಾಲುವೆಗಳ ಅಕ್ರಮ ಒತ್ತುವರಿಯನ್ನು ನಿರ್ದಾಕ್ಷಿಣ್ಯವಾಗಿ ತೆರವುಗೊಳಿಸಲು ಕ್ರಮ ಕೈಗೊಂಡಿದ್ದಾರೆ.

ಅದೇ ರೀತಿ ಶಿಡ್ಲಘಟ್ಟ ನಗರಕ್ಕೆ ಹೊಂದಿಕೊಂಡಿರುವ ಅಮಾನಿಕೆರೆಯಲ್ಲಿ ಅಕ್ರಮ ಒತ್ತುವರಿ ಆಗಿದ್ದ ರಾಜಕಾಲುವೆಗಳನ್ನು ತೆರವುಗೊಳಿಸಲು ಕ್ರಮಕೈಗೊಂಡಿ ದ್ದಾರೆ. ಇದರಿಂದ ಗೋಪಾಲಕೃಷ್ಣ ಕೆರೆಯ ನೀರು ಅಮಾನಿಕೆರೆಗೆ ಹರಿಸುವ ಸಾಧ್ಯತೆಗಳು ಹೆಚ್ಚಾಗಿದೆ. ಮಳೆಯಿಂದ ಜನರನ್ನು ರಕ್ಷಿಸುವ ಸಲುವಾಗಿ ಡೀಸಿ ಹಲವು ವರ್ಷಗಳ ಹಿಂದೆ ಅಕ್ರಮ ಒತ್ತುವರಿ ಆಗಿದ್ದ ರಾಜಕಾಲುವೆ ತೆರವುಗೊಳಿಸುತ್ತಿದ್ದಾರೆ. ನಾಗರಿಕರು ಅದನ್ನು ಸಂರಕ್ಷಣೆ ಮಾಡಿಕೊಳ್ಳಬೇಕಾಗಿದೆ.

“ಚಿಕ್ಕಬಳ್ಳಾಪುರ ನಗರಕ್ಕೆ ಹೊಂದಿಕೊಂಡಿರುವ ಕಂದವಾರ ಕೆರೆಯಿಂದ ಅಮಾನಿಗೋಪಾಲಕೃಷ್ಣ ಕೆರೆಗೆ ನೀರು ಹರಿಯುವ ರಾಜಕಾಲುವೆಯನ್ನು ಒತ್ತುವರಿ ಆಗಿರುವ ಕಡೆ ತೆರವುಗೊಳಿಸುವ ಕಾರ್ಯ ಮಾಡಲಾಗಿದೆ. ಮುಂದೆ ಅಭಿವೃದ್ಧಿಪಡಿಸಲು, ರಸ್ತೆ, ಅಗತ್ಯ ಇರುವ ಕಡೆ ಬಾಕ್ಸ್‌ ಮಾದರಿಯಲ್ಲಿ ಅಭಿವೃದ್ಧಿಪಡಿಸುವ ಸಂಬಂಧ ಯೋಜನಾ ವರದಿ(ಡಿಪಿಆರ್‌) ತಯಾರಿಸಿ ಸರ್ಕಾರಕ್ಕೆ ಸಲ್ಲಿಸಲಾಗುವುದು.” – ಆರ್‌.ಲತಾ, ಜಿಲ್ಲಾಧಿಕಾರಿ, ಚಿಕ್ಕಬಳ್ಳಾಪುರ ಜಿಲ್ಲೆ.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Govt Schools: ಈ ಬಾರಿಯೂ ಬೇಸಗೆಯಲ್ಲಿ ಮಕ್ಕಳಿಗೆ ಭರಪೂರ ಬಿಸಿಯೂಟ

Govt Schools: ಈ ಬಾರಿಯೂ ಬೇಸಗೆಯಲ್ಲಿ ಮಕ್ಕಳಿಗೆ ಭರಪೂರ ಬಿಸಿಯೂಟ

MLA Pradeep Eshwar : ಎತ್ತಿನಹೊಳೆ ಕಾಮಗಾರಿಗೆ 500 ಕೋಟಿ ನೀಡಿ; ಪ್ರದೀಪ್‌

MLA Pradeep Eshwar : ಎತ್ತಿನಹೊಳೆ ಕಾಮಗಾರಿಗೆ 500 ಕೋಟಿ ನೀಡಿ; ಪ್ರದೀಪ್‌

chintamai-Murder

Chintamani: ಹಿಂಬಾಲಿಸಿ ಬಂದು ವ್ಯಕ್ತಿಯೊಬ್ಬರ ಹ*ತ್ಯೆಗೈದ ದುಷ್ಕರ್ಮಿಗಳು! 

10-gudibanda

Gudibanda: ವಿವಿಧ ಪ್ರಕರಣಗಳ ಕಳ್ಳನ ಬಂಧನ, 152 ಗ್ರಾಂ ಬಂಗಾರ ವಶ

Sudhakar–sandeep-Reddy

BJP Rift: ಸಂಸದ ಕೆ.ಸುಧಾಕರ್‌ ಚಿಕ್ಕಬಳ್ಳಾಪುರ ಜಿಲ್ಲೆಗೆ ಶಾಪ: ಸಂದೀಪ ರೆಡ್ಡಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.