ಹುಮನಾಬಾದ: ಭ್ರಷ್ಟಾಚಾರ ತಡೆಗಟ್ಟುವಂತೆ ವಕೀಲರ ಪ್ರತಿಭಟನೆ; ಆಕ್ರೋಶ


Team Udayavani, Nov 29, 2021, 3:32 PM IST

15protest

ಹುಮನಾಬಾದ: ಉಪನೋಂದಣಿ ಇಲಾಖೆಯಲ್ಲಿ ಭ್ರಷ್ಟಾಚಾರ ತಾಂಡವಾಡುತ್ತಿದೆ. ಭ್ರಷ್ಟಾಚಾರದಲ್ಲಿ ತೊಡಗಿದ ಸಿಬ್ಬಂದಿಗಳನ್ನು ಕೂಡಲೇ ಅಮಾನತುಗೊಳಿಸಬೇಕು ಎಂದು ಒತ್ತಾಯಿಸಿ ತಾಲೂಕು ವಕೀಲರ ಸಂಘದಿಂದ ಸೋಮವಾರ ಪ್ರತಿಭಟನೆ ನಡೆಯಿತು.

ಪಟ್ಟಣದ ನ್ಯಾಯಾಲಯ ಆವರಣದಿಂದ ತಹಶೀಲ್ದಾರ್ ಕಚೇರಿವರೆಗೆ ಬೈಕ್ ರಾಲಿ ನಡೆಸಿದ ವಕೀಲರು, ತಹಶೀಲ್ದಾರ್ ಕಚೇರಿ ಎದುರಿಗೆ ಪ್ರತಿಭಟನೆ ನಡೆಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ವಕೀಲರು, ಸ್ಥಳೀಯ ಉಪ ನೋಂದಣೆ  ಇಲಾಖೆಯಲ್ಲಿ ಎಸ್.ಡಿ.ಎ ಮಹಮದ್ ಜಹೋರ್ ಅಹ್ಮದ್ ಭ್ರಷ್ಟಾಚಾರದಲ್ಲಿ ಮುಳುಗಿದ್ದಾರೆ. ಪ್ರತಿಯೊಂದಕ್ಕೂ ಹಣ ಬೇಡಿಕೆ ಇಡುತ್ತಿದ್ದಾರೆ. ಸರ್ಕಾರಕ್ಕೆ ಸೇರಬೇಕಾದ ತೆರಿಗೆ ಹಣ ಅವರು ಸ್ವಂತಕ್ಕೆ ಮಾಡಿಕೊಳ್ಳುತ್ತಿದ್ದಾರೆ.  ಉಪ ನೋಂದಣೆ ಇಲಾಖೆಗೆ ವಕೀಲರು ಬರದಂತೆ ತಾಕಿತ್ತು ಮಾಡುತ್ತಿದ್ದು, ಯಾವ ನಿಯಮಗಳ ಅಡಿಯಲ್ಲಿ ಸಾರ್ವಜನಿಕ ಕಚೇರಿಗೆ ಬರಬಾರದು ಎಂದು ಹೇಳುತ್ತಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಮದುವೆ ನೋಂದಣಿಗೂ ಲಂಚ ಕೇಳುತ್ತಿದ್ದಾರೆ. ದಿನಕ್ಕೆ ಸರಾಸರಿ ಎರಡು ಲಕ್ಷ ಹಣ ಲಂಚಪಡೆದು ಸಂಜೆಗೆ ಪರಸ್ಪರ ಹಂಚಿಕೊಳ್ಳುತ್ತಾರೆ ಎಂದು ವಕೀಲರು ಗಂಭೀರವಾಗಿ ಆರೋಪಿಸಿದರು. ಕೂಡಲೇ ಭ್ರಷ್ಟ ಸಿಬ್ಬಂದಿಗಳನ್ನು  ಅಮಾನತು ಮಾಡಬೇಕು ಎಂದು ಒತ್ತಾಯಿಸಿದ ಅವರು, ಮುಂದಿನ 8 ದಿನಗಳಲ್ಲಿ ಕಾನೂನು ಕ್ರಮ ತೆಗೆದುಕೊಳ್ಳದಿದ್ದರೆ ಮತ್ತೆ ಹೋರಾಟ ಅನಿವಾರ್ಯ ಎಂದು ಎಚ್ಚರಿಸಿದರು.

ಇದನ್ನೂ ಓದಿ:ಲೋಕಸಭೆ ಬಳಿಕ ರಾಜ್ಯಸಭೆಯಲ್ಲೂ ಕೃಷಿ ಕಾಯ್ದೆ ರದ್ದು ಮಸೂದೆ ಪಾಸ್; ಹೋರಾಟ ಮುಂದುವರಿಕೆ

ವಕೀಲ ಸಂಘದ ಅಧ್ಯಕ್ಷರಾದ ಉದಯಕುಮಾರ ಶಿಲವಂತ, ಉಪಾಧ್ಯಕ್ಷೆ ಪುಷ್ಪಾ ಚಾಂಗಲೇರಿ, ಕಾರ್ಯದರ್ಶಿ ಹರೀಶ ಅಗಡಿ, ಮಂಜುನಾಥ ರೆಡ್ಡಿ, ಎ.ಜಿ ಭಾಲ್ಕಿಕರ್, ವಿ.ಕೆ ಪಾಟೀಲ, ಸತೀಶ್ ರಾಂಪೂರೆ, ಡಿ.ಮಹಾದೇವಪ್ಪ, ಕೆ.ವೀರಶೆಟ್ಟಿ, ಪ್ರಭಾಕರ ನಾಗರಾಳೆ, ಅಶೋಕ ವರ್ಮಾ, ಭೀಮರಾವ, ದಯಾನಂದ ಪಾರಶೆಟ್ಟಿ, ವಿಜಯಕುಮಾರ ಜೊತಗೊಂಡ, ಎಂಡಿ ಇಸ್ಮಾಯಿಲ್, ಕರಬಸಪ್ಪಾ, ರವಿಕಾಂತ ಹೂಗಾರ, ಶಂಭೂಲಿಂಗ ನಂದಗಾಂವ, ಸಂದೀಪ ಜಾಜಿ ಸೇರಿದಂತೆ ಅನೇಕ ವಕೀಲರು ಇದ್ದರು.

ಟಾಪ್ ನ್ಯೂಸ್

1-qrrewr

Folk singer; ಪದ್ಮಭೂಷಣ ಪುರಸ್ಕೃತೆ ಶಾರದಾ ಸಿನ್ಹಾ ವಿಧಿವಶ

Maha-Election

Assembly Election: ಮಹಾರಾಷ್ಟ್ರ ಗೆಲ್ಲಲು 10 ಗ್ಯಾರಂಟಿಗಳ ಕೊಟ್ಟ ʼಮಹಾಯುತಿʼ!

HDD–By-election

By Election: ಮುಖ್ಯಮಂತ್ರಿ ಗರ್ವದ ಸೊಕ್ಕು ಮುರಿಯಬೇಕು: ಎಚ್‌.ಡಿ.ದೇವೇಗೌಡ ಗುಡುಗು

ರೈಲು ಬುಕಿಂಗ್‌, ಟ್ರ್ಯಾಕ್‌ಗೆ ‘’ಸೂಪರ್‌ಆ್ಯಪ್‌’: ಮುಂದಿನ ತಿಂಗಳು ಬಿಡುಗಡೆ

Super App: ರೈಲು ಬುಕಿಂಗ್‌, ಟ್ರ್ಯಾಕ್‌ಗೆ ‘’ಸೂಪರ್‌ಆ್ಯಪ್‌’: ಮುಂದಿನ ತಿಂಗಳು ಬಿಡುಗಡೆ

High-Court

Kambala: ಪೆಟಾ ಪಿಐಎಲ್‌; ವಿಚಾರಣೆ ನ.12ಕ್ಕೆ ಮುಂದೂಡಿದ ಹೈಕೋರ್ಟ್‌

CM-Shiigavi-2

MUDA Case: ಕೇವಲ 14 ಸೈಟ್‌ಗಾಗಿ ನಾನು ರಾಜಕಾರಣ ಮಾಡಬೇಕಾ?: ಸಿಎಂ ಸಿದ್ದರಾಮಯ್ಯ

vidan-soudha-kannada

Golden Jubilee: ಕನ್ನಡವೇ ಅಧಿಕಾರಿಗಳ‌ ಹೃದಯದ ಭಾಷೆ ಆಗಲಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar-Solha-kamb

Waqf Property: ಬೀದರ್‌ನ ಬಹುಮನಿ ಕೋಟೆಗೂ ವಕ್ಫ್ ಮೊಹರು!

Khandre

Bidar;ವಿಮಾನಯಾನ ಪುನರಾರಂಭಕ್ಕೆ ಸಂಪುಟದ ಸಮ್ಮತಿ: ಸಚಿವ ಖಂಡ್ರೆ

Bidar; ಪಟ್ಟಭದ್ರ ಹಿತಾಸಕ್ತಿಗಳಿಂದ ವಚನ ಸಾಹಿತ್ಯದ ಸಂರಕ್ಷಣೆಯಾಗಬೇಕು: ಡಾ.ಜೆ.ಎಸ್.ಪಾಟೀಲ

Bidar; ಪಟ್ಟಭದ್ರ ಹಿತಾಸಕ್ತಿಗಳಿಂದ ವಚನ ಸಾಹಿತ್ಯದ ಸಂರಕ್ಷಣೆಯಾಗಬೇಕು: ಡಾ.ಜೆ.ಎಸ್.ಪಾಟೀಲ

Bidar: ಅ.28ರಂದು 5 ನೇ ವಚನ ಸಾಹಿತ್ಯ ಸಮ್ಮೇಳನ

Bidar: ಅ.28ರಂದು 5ನೇ ವಚನ ಸಾಹಿತ್ಯ ಸಮ್ಮೇಳನ

1-wewqewqe

Bidar; ಸಾಲ ಬಾಧೆಯಿಂದ ಇಬ್ಬರು ರೈತರು ಆತ್ಮಹ*ತ್ಯೆ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

1-qrrewr

Folk singer; ಪದ್ಮಭೂಷಣ ಪುರಸ್ಕೃತೆ ಶಾರದಾ ಸಿನ್ಹಾ ವಿಧಿವಶ

Maha-Election

Assembly Election: ಮಹಾರಾಷ್ಟ್ರ ಗೆಲ್ಲಲು 10 ಗ್ಯಾರಂಟಿಗಳ ಕೊಟ್ಟ ʼಮಹಾಯುತಿʼ!

HDD–By-election

By Election: ಮುಖ್ಯಮಂತ್ರಿ ಗರ್ವದ ಸೊಕ್ಕು ಮುರಿಯಬೇಕು: ಎಚ್‌.ಡಿ.ದೇವೇಗೌಡ ಗುಡುಗು

ರೈಲು ಬುಕಿಂಗ್‌, ಟ್ರ್ಯಾಕ್‌ಗೆ ‘’ಸೂಪರ್‌ಆ್ಯಪ್‌’: ಮುಂದಿನ ತಿಂಗಳು ಬಿಡುಗಡೆ

Super App: ರೈಲು ಬುಕಿಂಗ್‌, ಟ್ರ್ಯಾಕ್‌ಗೆ ‘’ಸೂಪರ್‌ಆ್ಯಪ್‌’: ಮುಂದಿನ ತಿಂಗಳು ಬಿಡುಗಡೆ

High-Court

Kambala: ಪೆಟಾ ಪಿಐಎಲ್‌; ವಿಚಾರಣೆ ನ.12ಕ್ಕೆ ಮುಂದೂಡಿದ ಹೈಕೋರ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.