ಮಾಸ್ಕ್ ಧರಿಸದಿದ್ದರೆ ದಂಡ, ಜಿಲ್ಲೆಯಾದ್ಯಂತ ಮಾಸ್ಕ್ ಡ್ರೈವ್ : ಉಡುಪಿ ಜಿಲ್ಲಾಧಿಕಾರಿ
Team Udayavani, Nov 29, 2021, 7:39 PM IST
ಉಡುಪಿ : ಜಿಲ್ಲೆಯಲ್ಲಿ ಪ್ರಥಮ ಡೋಸ್ ಕೋವಿಡ್ ಲಸಿಕೆ ನೀಡುವಲ್ಲಿ ಶೇ.93ರಷ್ಟು ಸಾಧನೆ ಮಾಡಿದ್ದು, ಬಾಕಿ ಉಳಿದ ಶೇ.7 ರಷ್ಟು ಜನರಿಗೆ ಲಸಿಕೆ ಪಡೆಯುವಂತೆ ಎಲ್ಲ ಸಮುದಾಯಗಳ ಮುಖಂಡರು ಮತ್ತು ವೈದ್ಯರು ಮನವೊಲಿಸಬೇಕು. ಮಾಸ್ಕ್ ಧರಿಸದವರಿಗೆ ದಂಡ ವಿಧಿಸಲಾಗುತ್ತದೆ ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ತಿಳಿಸಿದರು.
ಜಿಲ್ಲಾಧಿಕಾರಿ ಕಚೇರಿಯ ಕೋರ್ಟ್‌ಹಾಲ್‌ನಲ್ಲಿ ಸೋಮವಾರ ಜಿಲ್ಲೆಯ ವಿವಿಧ ಸಮುದಾಯಗಳ ಮುಖಂಡರು ಮತ್ತು ವೈದ್ಯರೊಂದಿಗೆ ನಡೆಸಿದರು.
ಜಿಲ್ಲೆಗೆ ಹೊರ ಜಿಲ್ಲೆ ಮತ್ತು ರಾಜ್ಯಗಳಿಂದ ಬರುವವರಿಗೆ ಕೂಡಾ ಲಸಿಕೆ ನೀಡಲು ಕ್ರಮ ಕೈಗೊಂಡಿದ್ದೇವೆ. ಕೋವಿಡ್ ಕುರಿತು ಜಾಗೃತಿ ಮೂಡಿಸಲು ಬಸ್ ಸ್ಟಾಂಡ್, ಕಮರ್ಸಿಯಲ್ ಕಾಂಪ್ಲೆಕ್ಸ್‌ಗಳು ಸೇರಿದಂತೆ ಜಿಲ್ಲೆಯಾದ್ಯಂತ ಎಲ್ಲೆಡೆ ಮಾಸ್ಕ್ ಡ್ರೈವ್‌ಮಾಡಲಾಗುವುದು. ಮಾಸ್ಕ್ ಧರಿಸದವರಿಗೆ ದಂಡ ವಿಧಿಸುವ ಕಾರ್ಯ ನಡೆಯಲಿದ್ದು, ಎಲ್ಲ ನಗರ ಸ್ಥಳೀಯ ಸಂಸ್ಥೆಗಳು, ಗ್ರಾ.ಪಂ.ಗಳಲ್ಲಿ ಈ ಕಾರ್ಯ ನಡೆಯಲಿದ್ದು, ಸಾರ್ವಜನಿಕರು ಸಭೆ ಸಮಾರಂಭಗಳಲ್ಲಿ ಸಾಮಾಜಿಕ ಅಂತರ ಪಾಲನೆ ಮಾಡಬೇಕು ಎಂದು ನಿರ್ದೇಶಿಸಿದರು.
ಜಿಲ್ಲೆಯ ವೈದ್ಯರು ತಮ್ಮಲ್ಲಿಗೆ ಬರುವ ರೋಗಿಗಳು ಕೋವಿಡ್ ಲಸಿಕೆ ಪಡೆದಿರುವ ಬಗ್ಗೆ ಪರಿಶೀಲಿಸಬೇಕು. ಲಸಿಕೆ ಪಡೆಯದಿದ್ದಲ್ಲಿ ಅವರಿಗೆ ಲಸಿಕೆಯ ಪ್ರಯೋಜನ ಕುರಿತು ಮನವರಿಕೆ ಮಾಡಿಕೊಡಬೇಕು. ರೋಗಿಗಳಿಗೆ ನೀಡುವ ಸಲಹಾ ಚೀಟಿಯಲ್ಲಿ ಲಸಿಕೆ ಪಡೆಯುವ ಕುರಿತಂತೆ ಹಾಗೂ ರೋಗ ಲಕ್ಷಣಗಳಿದ್ದಲ್ಲಿ ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳುವಂತೆ ಸಲಹೆ ಬರೆದು ಕೊಡಬೇಕು. ಜಿಲ್ಲೆಯಾದ್ಯಂತ ಲಸಿಕೆ ಅಭಿಯಾನದಡಿ ಆಶಾ ಕಾರ್ಯಕರ್ತೆಯರು ಮತದಾರರ ಪಟ್ಟಿಯೊಂದಿಗೆ ಮನೆ ಮನೆಗೆ ತೆರಳಿ ಲಸಿಕೆ ನೀಡುತ್ತಿದ್ದಾರೆ. ಜಿಲ್ಲೆಯ ಗ್ರಾ.ಪಂ.ಗಳು ಗ್ರಾಮೀಣ ಕಾರ್ಯಪಡೆ, ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ವಾರ್ಡ್ ಮಟ್ಟದಲ್ಲಿ ಕಾರ್ಯಪಡೆ ಸಮಿತಿ ಸಭೆ ಸೇರಿ, ಲಸಿಕೆ ಪಡೆಯದೇ ಇರುವವರ ಮಾಹಿತಿ ಪಡೆದು, ಅವರಿಗೆ ತಿಳಿ ಹೇಳಬೇಕು. ಯಾವುದಾದರೂ ಇತರೆ ಕಾಯಿಲೆಗಳು ಹೊಂದಿದ್ದಲ್ಲಿ ವೈದ್ಯರ ಸಲಹೆ ಪಡೆದು ಲಸಿಕೆ ತೆಗೆದುಕೊಳ್ಳುವಂತೆ ತಿಳಿಸಬೇಕು ಎಂದರು.
ಇದನ್ನೂ ಓದಿ : 5,516 ಕೋಟಿ ರೂಪಾಯಿ ಮೌಲ್ಯದ ಡ್ರಗ್ಸ್ ವಶಪಡಿಸಿಕೊಂಡ ಐಸಿಜಿ!
ಅಪರ ಜಿಲ್ಲಾಧಿಕಾರಿ ಬಾಲಕೃಷ್ಣಪ್ಪ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ಪ್ರತಿಭಾ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ|ನಾಗಭೂಷಣ ಉಡುಪ, ಪೌರಾಯುಕ್ತ ಉದಯ ಶೆಟ್ಟಿ, ವಿವಿಧ ಸಮುದಾಯಗಳ ಮುಖಂಡರು, ಐಎಂಎ ಮತ್ತು ಆಯುಷ್ ವೈದ್ಯರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Kaup ಪುರಸಭೆ: ರಸ್ತೆ ಬದಿಯಲ್ಲಿ ಖಾಲಿ ಬಿಯರ್ ಬಾಟಲಿ ಸದ್ದು
JPC on Adani issue;ನಿಯಮ 267 ಅಡಿಯಲ್ಲಿ ಪ್ರಸ್ತಾಪಿಸಲು ಅವಕಾಶ ನೀಡದ್ದಕ್ಕೆ ಖರ್ಗೆ ಆಕ್ರೋಶ
IPL Auction: ಅಗ್ಗಕ್ಕೆ ಸೇಲಾದ ಪಾಂಡೆ, ಜ್ಯಾಕ್ಸ್ ಗೆ ಬಂಪರ್, ಬೆಂಗಳೂರಿಗೆ ಬಂದ ಡೇವಿಡ್
Mysuru; ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ: ಪ್ರಸ್ತಾವನೆ ಸಲ್ಲಿಸುವಂತೆ ಸಿದ್ದರಾಮಯ್ಯ ಸೂಚನೆ
Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.