ಒಮಿಕ್ರಾನ್ ಆತಂಕ: ಭಾರತದಲ್ಲಿ 6,990 ಕೋವಿಡ್ ಪ್ರಕರಣ ಪತ್ತೆ, 3.4 ಕೋಟಿ ಮಂದಿ ಚೇತರಿಕೆ
ಭಾರತದ ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 1,00,543ಕ್ಕೆ ಇಳಿಕೆ
Team Udayavani, Nov 30, 2021, 10:31 AM IST
ನವದೆಹಲಿ: ಕೋವಿಡ್ ನ ಹೊಸ ರೂಪಾಂತರಿ ಒಮಿಕ್ರಾನ್ ಜಗತ್ತಿನ 13 ದೇಶಗಳಲ್ಲಿ ಪತ್ತೆಯಾಗಿದ್ದು, ಏತನ್ಮಧ್ಯೆ ಕಳೆದ 24 ಗಂಟೆಗಳಲ್ಲಿ ಭಾರತದಲ್ಲಿ ಕೋವಿಡ್ ಸೋಂಕು ಪ್ರಕರಣ ಭಾರೀ ಇಳಿಕೆಯಾಗಿದೆ. ಇದು ಕಳೆದ 551 ದಿನಗಳ ಕನಿಷ್ಠ ಸಂಖ್ಯೆಯಾಗಿದೆ ಎಂದು ಅಂಕಿಅಂಶ ತಿಳಿಸಿದೆ.
ಇದನ್ನೂ ಓದಿ:ಓಮಿಕ್ರಾನ್ ಸೋಂಕಿನ ಕುರಿತು ಆತಂಕ ಬೇಡ: ಸಚಿವ ಡಾ.ಕೆ.ಸುಧಾಕರ್
ಕೇಂದ್ರ ಆರೋಗ್ಯ ಸಚಿವಾಲಯ ಮಂಗಳವಾರ (ನವೆಂಬರ್ 30) ಬಿಡುಗಡೆ ಮಾಡಿರುವ ಅಂಕಿಅಂಶಗಳ ಪ್ರಕಾರ, ದೇಶದಲ್ಲಿ 24 ಗಂಟೆಗಳಲ್ಲಿ 6,990 ಕೋವಿಡ್ ಸೋಂಕು ಪ್ರಕರಣಗಳು ಪತ್ತೆಯಾಗಿದೆ.
ಭಾರತದ ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 1,00,543ಕ್ಕೆ ಇಳಿಕೆಯಾಗಿದ್ದು, ಇದು 546 ದಿನಗಳ ಅತೀ ಕಡಿಮೆ ಪ್ರಮಾಣದ ಸಂಖ್ಯೆಯಾಗಿದೆ ಎಂದು ಅಂಕಿಅಂಶ ವಿವರಿಸಿದೆ. ಸತತ 53 ದಿನಗಳಿಂದ ದೇಶದಲ್ಲಿ 20,000ಕ್ಕಿಂತ ಕಡಿಮೆ ಪ್ರಮಾಣದಲ್ಲಿ ಕೋವಿಡ್ ಪ್ರಕರಣ ವರದಿಯಾಗುತ್ತಿದೆ.
ದೇಶದಲ್ಲಿ 24ಗಂಟೆಯಲ್ಲಿ ಕೋವಿಡ್ ಸೋಂಕಿನಿಂದ 190 ಮಂದಿ ಸಾವನ್ನಪ್ಪಿದ್ದು, 10,116 ಮಂದಿ ಕೋವಿಡ್ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ. ಭಾರತದಲ್ಲಿ ಈವರೆಗೆ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 4.68 ಲಕ್ಷಕ್ಕೆ ಏರಿಕೆಯಾಗಿದ್ದು, ಒಟ್ಟು 3.4 ಕೋಟಿ ಮಂದಿ ಕೋವಿಡ್ ನಿಂದ ಚೇತರಿಸಿಕೊಂಡಿದ್ದಾರೆ.
ದಕ್ಷಿಣ ಆಫ್ರಿಕಾದಲ್ಲಿ ಪತ್ತೆಯಾಗಿರುವ ಕೋವಿಡ್ ನ ರೂಪಾಂತರಿ ತಳಿ ಒಮಿಕ್ರಾನ್ ವೈರಸ್ ಕ್ಷಿಪ್ರವಾಗಿ ಹರಡಬಲ್ಲದಾಗಿದ್ದು, ಈ ಬಗ್ಗೆ ಮುಂಜಾಗ್ರತಾ ಕ್ರಮಗಳನ್ನು ವಹಿಸಬೇಕೆಂದು ವಿಶ್ವಸಂಸ್ಥೆ ಸೋಮವಾರ ಎಚ್ಚರಿಕೆ ನೀಡಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Ranking: ಐಸಿಸಿ ನೂತನ ರ್‍ಯಾಂಕಿಂಗ್ ಪ್ರಕಟ: ಶಾಹೀನ್ ಅಫ್ರಿದಿ ಮತ್ತೆ ನಂ.1
Kalidas Samman: ವರ್ಣಚಿತ್ರಕಾರ ರಘುಪತಿ ಭಟ್ ಅವರಿಗೆ ರಾಷ್ಟ್ರೀಯ ಕಾಳಿದಾಸ್ ಪ್ರಶಸ್ತಿ
Hockey: ವನಿತಾ ಏಷ್ಯಾ ಚಾಂಪಿಯನ್ಸ್ ಹಾಕಿ… ಇಂದು ಭಾರತಕ್ಕೆ ಥಾಯ್ಲೆಂಡ್ ಎದುರಾಳಿ
Chikkamagaluru: ಮದುವೆ ಹಾಲ್ ನಲ್ಲೇ ವಧುವಿನ ಚಿನ್ನ ಎಗರಿಸಿದ ಖದೀಮರು…
T20: ತಿಲಕ್ ವರ್ಮ ಸ್ಫೋಟಕ ಶತಕ… ಭಾರತ ಆರು ವಿಕೆಟಿಗೆ 219
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.