ಅಬಕಾರಿ ದಾಳಿ: 1 ಲಕ್ಷ ಮೌಲ್ಯದ ಮದ್ಯ ಜಪ್ತಿ
Team Udayavani, Nov 30, 2021, 12:16 PM IST
ಕಲಬುರಗಿ: ವಿಧಾನ ಪರಿಷತ್ ಚುನಾವಣೆಯ ನೀತಿ ಸಂಹಿತೆ ಹಿನ್ನೆಲೆಯಲ್ಲಿ ಜಿಲ್ಲೆಯ ವಿವಿಧ ಕಡೆ ಅಬಕಾರಿ ಇಲಾಖೆಯ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ಸುಮಾರು ಒಂದು ಲಕ್ಷ ರೂ. ಮೌಲ್ಯದ ಸ್ವದೇಶಿ ಮದ್ಯ ಹಾಗೂ ಎರಡು ಬೈಕ್‌ಗಳನ್ನು ಜಪ್ತಿ ಮಾಡಲಾಗಿದೆ.
ತಾಲೂಕಿನ ಹಡಗಲಿ ಕಡೆಗೆ ಹೋಗುವ ಮುಖ್ಯ ರಸ್ತೆಯಲ್ಲಿ ಅಧಿಕಾರಿಗಳು ದಾಳಿ ಮಾಡಿ 10,440 ಲೀಟರ್ ಸ್ವದೇಶಿ ಮದ್ಯ ವಶಕ್ಕೆ ಪಡೆಯಲಾಗಿದೆ. ಸಾಗಾಟ ಮಾಡುತ್ತಿದ್ದ ಬೈಕ್ ಸಮೇತ ಆರೋಪಿ ಅನಿಲ ಎಂಬಾತನನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ.
ಆಳಂದ ತಾಲೂಕಿನ ಕೋತನಹಿಪ್ಪರಗಾ ಗ್ರಾಮದ ಕಿರಣಾ ಅಂಗಡಿಯ ಮೇಲೆ ದಾಳಿ ನಡೆಸಿ ಅಕ್ರಮವಾಗಿ ಮಹಾರಾಷ್ಟ್ರದ 2.700 ಲೀಟರ್ ಮದ್ಯ ಮತ್ತು 8.640 ಲೀಟರ ಮದ್ಯವನ್ನು ಜಪ್ತಿ ಪಡಿಸಿಕೊಳ್ಳಲಾಗಿದೆ. ಅಕ್ರಮವಾಗಿ ಮಾರಾಟ ಮಾಡಲು ಅಂಗಡಿಯಲ್ಲಿ ಸಂಗ್ರಹಿಸಲಾಗಿತ್ತು. ಈ ಸಂಬಂಧ ಆರೋಪಿ ಬಾಲಾಜಿ ಪೂಜಾರಿ ಎಂಬಾತನನ್ನು ಬಂಧಿಸಲಾಗಿದೆ. ‘
ಚಿಂಚೋಳಿ ತಾಲೂಕಿನಲ್ಲಿ ಪ್ರತ್ಯೇಕವಾಗಿ ಎರಡು ಕಡೆ ದಾಳಿ ಮಾಡಿ ಬೈಕ್‌ನಲ್ಲಿ ಅಕ್ರಮವಾಗಿ 17.280 ಲೀಟರ್ ಮದ್ಯ ಮತ್ತು 7.800 ಲೀಟರ್ ಬಿಯರ್‌ನ್ನು ವಶಕ್ಕೆ ಪಡೆಯಲಾಗಿದೆ. ಈ ಮದ್ಯ ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಂಡು ಅಧಿಕಾರಿಗಳು ತನಿಖೆ ಕೈಗೊಂಡಿದ್ದಾರೆ. ಅಬಕಾರಿ ಜಂಟಿ ಆಯುಕ್ತರಾದ ಶಶಿಕಲಾ ಒಡೆಯರ್ ಮಾಗದರ್ಶನದಲ್ಲಿ ಈ ಕಾರ್ಯಾಚರಣೆ ನಡೆಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಗುರುತು ಸಿಗದ ಹಾಗೆ ಪತ್ನಿಯ ಹತ್ಯೆಗೈದ ಪತಿ ಸೇರಿ ಮೂವರ ಬಂಧನ
Wadi: ನಿರ್ಜನ ಪ್ರದೇಶದಲ್ಲಿ ಎಸೆದ ನವಜಾತ ಶಿಶುವನ್ನು ಬದುಕಿಸಲು ಪೊಲೀಸರ ಪರದಾಟ
Waqf issue: ರೈತರ ಜಮೀನು ಪಡೆಯಲು ಬಿಡುವುದಿಲ್ಲ: ಬಿಜೆಪಿ ಗುಡುಗು
Kalaburagi: ಪುನರ್ ವಿಂಗಡನೆ ಮೂಲಕ ರಾಜ್ಯಕ್ಕೆ ಅನ್ಯಾಯ ಮಾಡುವ ಸಂಚು: ಪ್ರಿಯಾಂಕ್ ಖರ್ಗೆ
Waqf Notice Issue: ಬಿಜೆಪಿ- ಕಾಂಗ್ರೆಸ್ ನಾಯಕರಿಂದ ರಾಜಕೀಯ ವಾಕ್ಸಮರ
MUST WATCH
ಹೊಸ ಸೇರ್ಪಡೆ
Waqf Notice: ನೋಟಿಸ್ ಕಣ್ತಪ್ಪಿನ ಕಾರ್ಯವಲ್ಲ, ಸರಕಾರದ ವ್ಯವಸ್ಥಿತ ಷಡ್ಯಂತ್ರ: ವಿ.ಸುನೀಲ್
ODI Rankings: ಮತ್ತೆ ಅಗ್ರ ಹತ್ತರೊಳಗೆ ಬಂದ ಹರ್ಮನ್‌ಪ್ರೀತ್ ಕೌರ್
Kasaragod: ಸಿಡಿಲು ಬಡಿದು ಹಾನಿ; 25 ಲಕ್ಷ ರೂ. ನಷ್ಟ
Davanagere: ದೇವಸ್ಥಾನಗಳ ಆಸ್ತಿಗಳ ರಕ್ಷಣೆಗೆ ರಾಜ್ಯ ಸರ್ಕಾರ ಮುಂದಾಗಬೇಕು: ಪೇಜಾವರ ಶ್ರೀ
Shimoga; ವಿದ್ಯುತ್ ಬೇಲಿ ಸ್ಪರ್ಶಿಸಿ ಕಾಡಾನೆ ಸಾವು; ಜಮೀನು ಮಾಲೀಕನ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.