2023ಕ್ಕೆ ಜೆಡಿಎಸ್‌ಗೆ ಅಧಿಕಾರ ಖಚಿತ: ಎಚ್ಡಿಕೆ
Team Udayavani, Nov 30, 2021, 2:59 PM IST
ವಿಜಯಪುರ: 2023ರ ಚುನಾವಣೆಯಲ್ಲಿ ಸಂಪೂ ರ್ಣ ವಾಗಿ ಬಹುಮತದಿಂದ ಜೆಡಿಎಸ್ ಗೆದ್ದು ಆಡಳಿತಕ್ಕೆ ಬರುವುದು ಖಚಿತವಾಗಿದ್ದು ನಾಡಿನ 6.5 ಕೋಟಿ ಕುಟುಂಬಗಳು ನೆಮ್ಮದಿಯಿಂದ ಬದುಕು ವಂತೆ ಮಾಡು ವುದು ನನ್ನ ಮೂಲ ಉದ್ದೇಶ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ, ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದರು.
ವಿಜಯಪುರ ಸಮೀಪದ ಬೂದಿಗೆರೆ ಗ್ರಾಮದ ದೇಶನಾರಾಯಣಸ್ವಾಮಿ ದೇವಾಲಯದ ಆವರಣ ದಲ್ಲಿ ನಡೆದ ಜೆಡಿಎಸ್ ಮುಖಂಡರ ಸಭೆಯಲ್ಲಿ ಮಾತನಾಡಿದರು.
ಬೆಳೆ ನಾಶ: ಜನರನ್ನು ತಪ್ಪುದಾರಿಗೆ ಎಳೆಯಲಿಕ್ಕೆ ಹೋಗುವುದಿಲ್ಲ. ನಮಗೆ ಜನರ ಆಶೀರ್ವಾದ ಬೇಕಾ ಗಿದೆ. ರೈತರ ದೀನ ದಲಿತರ ಸಂಕಷ್ಟವನ್ನು ಬಗೆಹರಿ ಸುವ ಪಕ್ಷವನ್ನು ಜನ ಆಯ್ಕೆ ಮಾಡಬೇಕು. ಶಾಸಕ ನಿಸರ್ಗ ನಾರಾಯಸ್ವಾಮಿ, ಈ ಕ್ಷೇತ್ರದ ಮಗನಾಗಿ ಎಲ್ಲರ ವಿಶ್ವಾಸಗಳಿಸಿ ಕೆಲಸ ಮಾಡುತ್ತಿದ್ದಾರೆ.
ಮಳೆ ಯಿಂದಾಗಿ ಲಕ್ಷಾಂತರ ಎಕರೆಯಲ್ಲಿ ಬೆಳೆ ನಾಶವಾಗಿದೆ. ಸರ್ಕಾರ, ರೈತರ ಬದುಕನ್ನು ಕಟ್ಟಿಕೊಡಬೇಕಾಗಿದೆ. ನಮ್ಮ ನಿರೀಕ್ಷೆ ತಲುಪಲಿಕ್ಕೆ ಸರ್ಕಾರದಿಂದ ಸಾಧ್ಯವಾ ಗಿಲ್ಲ ಎಂದರು.
ದ್ರೋಹ ಬಗೆಯಲ್ಲ: ಮುಖಂಡರು ಪಕ್ಷದ ಸಂಘಟನೆಗಾಗಿ ಪ್ರಾಮಾಣಿಕವಾಗಿ ಕೆಲಸ ಮಾಡುತ್ತಿದ್ದಾರೆ. ದೇವ ನಹಳ್ಳಿ ಜೆಡಿಎಸ್ ಭದ್ರಕೋಟೆಯಾಗಿರುವುದು ಲಕ್ಷಾಂತರ ಕಾರ್ಯಕರ್ತರ ಶ್ರಮ. ಕಾರ್ಯಕರ್ತರ ಶ್ರಮಕ್ಕೆ ಎಂದಿಗೂ ದೊ›àಹ ಬಗೆಯುವುದಿಲ್ಲ ಎಂದರು.
ಜೆಡಿಎಸ್‌ಗೆ ಅಧಿಕಾರ: ಶಾಸಕ ನಿಸರ್ಗ ನಾರಾಯಣ ಸ್ವಾಮಿ ಮಾತನಾಡಿ, ರಾಜ್ಯದಲ್ಲಿ ಆಡಳಿತ ನಡೆಸುತ್ತಿ ರುವ ಬಿಜೆಪಿ ಸರ್ಕಾರದಿಂದ ಈ ರಾಜ್ಯದ ಜನತೆಗೆ ಯಾವುದೇ ಉಪಯೋಗವಿಲ್ಲ. ಬಡವರು, ದೀನದಲಿತರು, ಅಲ್ಪಸಂಖ್ಯಾತರು, ಸೇರಿದಂತೆ ಎಲ್ಲಾ ಜಾತಿ ವರ್ಗದ ಜನರ ಏಳಿಗೆಗಾಗಿ ರಾಜ್ಯದಲ್ಲಿ ಜೆಡಿಎಸ್ ಅಧಿಕಾರಕ್ಕೆ ಬರಬೇಕಾಗಿದೆ.
ನನ್ನನ್ನು ಈ ಕ್ಷೇತ್ರದ ಶಾಸಕ ನಾಗಿ ಆಯ್ಕೆ ಮಾಡಿದ ದಿನದಿಂದಲೂ ಜಾತಿ, ಮತ, ಪಕ್ಷಬೇಧ ಮರೆತು, ಎಲ್ಲಾ ಹಳ್ಳಿಗಳ ಅಭಿವೃದ್ಧಿಗಾಗಿ ಕೆಲಸ ಮಾಡುತ್ತಿದ್ದೇನೆ. ಅನ್ಯಪಕ್ಷ ತೊರೆದು ಜೆಡಿಎಸ್ ಸೇರ್ಪಡೆಯಾಗುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದೆ. ಪಕ್ಷದ ಬೇರು ಗಟ್ಟಿಯಾಗಿದೆ. ಕಾರ್ಯಕರ್ತರು ಪಕ್ಷ ಸಂಘಟನೆಯಲ್ಲಿ ಉತ್ತಮವಾಗಿ ಕೆಲಸ ಮಾಡುತ್ತಿದ್ದಾರೆ. ಆದ್ದರಿಂದ ಮುಂದಿನ ವಿಧಾನಸಭಾ ಚುನಾವಣೆ ಯಲ್ಲಿ ರಾಜ್ಯದಲ್ಲಿ 123 ಕ್ಕೂ ಅಧಿಕ ಸ್ಥಾನ ಗೆಲ್ಲುವ ಮೂಲಕ ಎಚ್.ಡಿ.ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗುವುದು ಖಚಿತ ಎಂದರು.
ಹಲವರು ಜೆಡಿಎಸ್‌ಗೆ:ಬಿಜೆಪಿಯಿಂದ ಬಿ.ಸಿ.ರವೀಂದ್ರ , ಕಾಂಗ್ರೆಸ್ ಕೆಪಿಸಿಸಿ ಕಾರ್ಯದರ್ಶಿಯಾಗಿದ್ದ ಶ್ರೀನಾಥ್‌ಗೌಡ, ಹನುಮಂತಪ್ಪ, ನಾರಾಯಣಸ್ವಾಮಿ, ತಿಪ್ಪಣ್ಣ , ಇಲಿ ಯಾಜ್ ಪಾಷಾ, ಫಯಾಜ್, ಲೋಕೇಶ್, ಎಜಾಜ್ ಸೇರಿದಂತೆ ಹಲವಾರು ಮಂದಿ ಜೆಡಿಎಸ್‌ಗೆ ಸೇರ್ಪಡೆಯಾದರು.
ವಿಧಾನಪರಿಷತ್ ಅಭ್ಯರ್ಥಿ ರಮೇಶ್‌ಗೌಡ , ಜೆಡಿಎಸ್ ತಾಲೂಕು ಅಧ್ಯಕ್ಷ ಆರ್.ಮುನೇಗೌಡ , ಪ್ರಧಾನ ಕಾರ್ಯದರ್ಶಿಗಳಾದ ಜಿ.ಎ.ರವೀಂದ್ರ, ಕಲ್ಯಾಣ್ ಕುಮಾರ್ ಬಾಬು , ಪಿಕಾರ್ಡ್ ಬ್ಯಾಂಕ್ ಅಧ್ಯಕ್ಷ ಮುನಿರಾಜು, ಚನ್ನರಾಯಪಟ್ಟಣ ಹೋಬಳಿ ಜೆಡಿಎಸ್ ಅಧ್ಯಕ್ಷ ಮುನಿರಾಜು, ರಾಮಾಂಜನೇಯ ದಾಸ್, ರಮೇಶ್, ಆನಂದ್ ಕುಮಾರ್, ಮುನಿರಾಜು, ಮಹೇಂದ್ರ, ಬಾಬು, ಶಂಕರ್, ಮುರಳಿ, ಶ್ರೀಧರ್, ದಿನ್ನೂರು ಕೇಶವ ಯಲಿಯೂರು ಚಿಕ್ಕಣ್ಣ ಗ್ರಾಪಂ ಜೆಡಿಎಸ್ ಸದಸ್ಯರು, ಮುಖಂಡರು ಇದ್ದರು.
ಪಂಚರತ್ನ ಕಾರ್ಯಕ್ರಮ ಜಾರಿಗೆ ತರುವೆವು…
ದ್ರಾಕ್ಷಿ ಬೆಳೆಗಾರರು, ರಾಗಿ ಬೆಳೆಗಾರರು ಸೇರಿದಂತೆ ಹಲವಾರು ರೈತರು ರಾಜ್ಯದಲ್ಲಿ ಇತ್ತೀಚೆಗೆ ಬಿದ್ದ ಮಳೆಯಿಂದ ಬೆಳೆಗಳು ಹಾಳಾಗಿ ಸಂಕಷ್ಟಕ್ಕೆ ಸಿಲುಕಿದ್ದಾರೆ. ವ್ಯಾಪಾರಿಗಳಿಗೂ ತೊಂದರೆಯಾಗಿದೆ. ಬೀದಿಬದಿ ವ್ಯಾಪಾರಿಗಳು ಕಷ್ಟಕ್ಕೆ ಒಳಗಾಗಿದ್ದು ಇವರೆಲ್ಲರ ನೆರವಿಗೆ ಬರಬೇಕಾಗಿರುವುದು ಸರ್ಕಾರದ ಜವಾಬ್ದಾರಿ. ರಾಜ್ಯದಲ್ಲಿ ಹೃದಯ ವೈಶಾಲ್ಯತೆಯಿಂದ ಕೆಲಸ ಮಾಡುವವರಿಲ್ಲ. ನಮ್ಮ ಪಕ್ಷದಿಂದ ಪಂಚರತ್ನ ಕಾರ್ಯಕ್ರಮಗಳನ್ನು ಜಾರಿಗೆ ತರುತ್ತೇವೆ. ಪ್ರತಿ ಕುಟುಂಬಕ್ಕೆ ಉಚಿತ ಶಿಕ್ಷಣ, ಆರೋಗ್ಯ, ಉದ್ಯೋಗ ಕಲ್ಪಿಸುವ ಕಾರ್ಯಕ್ರಮಗಳನ್ನು ಮಾಡಲಿದ್ದೇವೆಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Doddaballapura: ಘಾಟಿ ಕ್ಷೇತ್ರದಲ್ಲಿ ಶ್ರೀ ಸುಬ್ರಹ್ಮಣ್ಯಸ್ವಾಮಿ ಬ್ರಹ್ಮ ರಥೋತ್ಸವ
Nelamangala: ಸಾಕು ನಾಯಿ ಸತ್ತಿದ್ದಕ್ಕೆ ಮಾಲಕ ಆತ್ಮಹ*ತ್ಯೆ
Doddaballapur: ಹೊಲದಲ್ಲಿ ಹೂ ಬಿಡಿಸುತ್ತಿದ್ದ ಮಹಿಳೆಗೆ ಕಾರು ಡಿಕ್ಕಿ: ಸಾವು
Road Mishap: ಬೈಕ್ ವ್ಹೀಲಿಂಗ್ ಮಾಡುವಾಗ ಕ್ಯಾಂಟರ್‌ಗೆ ಡಿಕ್ಕಿ; ಇಬ್ಬರು ಸಾವು
Tragic: ಮದುವೆ ಹರಕೆ ಹೊತ್ತು ಘಾಟಿ ದೇಗುಲಕ್ಕೆ ಬಂದಿದ್ದ ಯುವತಿ ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Sandalwood: ಶ್ರೀರಾಘವೇಂದ್ರ ಚಿತ್ರವಾಣಿ ಪ್ರಶಸ್ತಿ ಪ್ರಕಟ
Gadag: ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದ ದುರ್ಘಟನೆಗೆ ಒಂದು ವರ್ಷ…
Bird Flu: ಹಕ್ಕಿ ಜ್ವರಕ್ಕೆ 3 ಹುಲಿ, 1 ಚಿರತೆ ಸಾ*ವು… ಪ್ರಾಣಿಗಳಿಗೆ ಕ್ವಾರಂಟೈನ್
540 ಅಡಿ ಆಳದ ಬೋರ್ವೆಲ್ಗೆ ಬಿದ್ದ ಯುವತಿ: ಯುವಕನ ಜತೆ ಮನಸ್ತಾಪದಿಂದ ಆತ್ಮಹತ್ಯೆಗೆ ಯತ್ನ?
Delhi Assembly Election: ದೆಹಲಿ ವಿಧಾನಸಭೆ ಚುನಾವಣೆಗೆ ಇಂದು ದಿನಾಂಕ ನಿಗದಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.