ಸರ್ಕಾರದ ವಿರುದ್ದ ವಿದ್ಯಾರ್ಥಿಗಳ ತೀವ್ರ ಆಕ್ರೋಶ


Team Udayavani, Nov 30, 2021, 2:57 PM IST

21protest

ವಿಜಯಪುರ: ವೈದ್ಯಕೀಯ ವಿದ್ಯಾರ್ಥಿಗಳ ಅಂತಿಮ ಪರೀಕ್ಷೆಯ ವಿಷಯದಲ್ಲಿ ಉಂಟಾಗಿರುವ ಸಮಸ್ಯೆಯನ್ನು ಕೂಡಲೇ ಪರಿಹರಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ವೈದ್ಯಕೀಯ ವಿದ್ಯಾರ್ಥಿಗಳು ಎಐಡಿಎಸ್‌ಒ ವಿಜಯಪುರ ಜಿಲ್ಲಾ ಘಟಕದ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದರು.

ಪ್ರತಿಭಟನೆ ನೇತೃತ್ವ ವಹಿಸಿದ್ದ ಸಂಘಟನೆ ಜಿಲ್ಲಾಧ್ಯಕ್ಷೆ ಸುರೇಖಾ ಕಡಮಟ್ಟಿ ಮಾತನಾಡಿ, ರಾಜೀವ್‌ ಗಾಂಧಿ ಯೂನಿವರ್ಸಿಟಿ ಆಫ್‌ ಹೆಲ್ತ್‌ ಸೈನ್ಸಸ್‌ ವೈದ್ಯಕೀಯ ಪರೀಕ್ಷೆಗಳ ಕುರಿತು ಸುತ್ತೋಲೆಯೊಂದನ್ನು ಹೊರಡಿಸಿದೆ. ಆ ಸುತ್ತೋಲೆ ಪ್ರಕಾರ ಎರಡನೇ ವರ್ಷದ ಪರೀಕ್ಷೆಗಳನ್ನು ಜನವರಿ ಮಧ್ಯ ವಾರಕ್ಕೆ ಮತ್ತು ಅಂತಿಮ ವರ್ಷದ ಪರೀಕ್ಷೆಗಳನ್ನು ಫೆಬ್ರವರಿ ಮಧ್ಯ ವಾರಕ್ಕೆ ನಡೆಸಲು ನಿರ್ಧರಿಸಲಾಗಿದೆ. ಈ ದಿಢೀರ್‌ ಬದಲಾವಣೆ ರಾಜ್ಯದ ವೈದ್ಯಕೀಯ ವಿದ್ಯಾರ್ಥಿಗಳು ಮತ್ತು ವೈದ್ಯಕೀಯ ಉಪನ್ಯಾಸಕರನ್ನು ಆತಂಕಕ್ಕೆ ದೂಡಿದೆ ಎಂದರು.

ಅಂತಿಮ ವರ್ಷದ ವೈದ್ಯಕೀಯ ವಿದ್ಯಾರ್ಥಿಗಳಿಗೆ ತರಗತಿ ಆರಂಭವಾಗಿದ್ದು ಮಾರ್ಚ್‌ ತಿಂಗಳಲ್ಲಿ ಜೂನ್‌ ತಿಂಗಳವರೆಗೂ ಆನ್‌ಲೈನ್‌ನಲ್ಲಿಯೆ ತರಗತಿಗಳು ನಡೆದಿವೆ. ಈ ಕಾರಣದಿಂದ ಅಗತ್ಯವಿದ್ದಷ್ಟು ಕ್ಲಿನಿಕಲ್‌ ಪೋಸ್ಟಿಂಗ್‌ ಆಗಿರಲಿಲ್ಲ. ಅಲ್ಲದೆ ಅಂತಿಮ ವರ್ಷದ ವಿದ್ಯಾರ್ಥಿಗಳು ಕೋವಿಡ್‌ ಸಂದರ್ಭದಲ್ಲಿ ಆಗಿನ ಅವಶ್ಯಕತೆಗೆ ಓಗೊಟ್ಟು, ಕೆಲ ತಿಂಗಳ ಕಾಲ ಕೋವಿಡ್‌ ಸೇವೆಯ ಕರ್ತವ್ಯ ನಿರ್ವಹಿಸಿದ್ದರು. ಇದರೊಂದಿಗೆ ಈ ಬ್ಯಾಚ್‌ನ ವಿದ್ಯಾರ್ಥಿಗಳು ಎರಡು ತಿಂಗಳು ಟೆಲಿ ಕಮ್ಯುನಿಕೇಷನ್‌ ಕರ್ತವ್ಯ ನಿರ್ವಹಿಸಿದ್ದಾರೆ. ಈ ಎಲ್ಲ ಕಾರಣಗಳಿಂದ ಶೈಕ್ಷಣಿಕ ವೇಳಾಪಟ್ಟಿ ಕುಸಿದು, ಪರೀಕ್ಷೆ ತಯಾರಿಗೆ ಸಮಯ ಕಡಿಮೆಯಾಗಿದೆ. ಈಗ ಫೆಬ್ರವರಿ ಮಧ್ಯ ವಾರಕ್ಕೆ ಪರೀಕ್ಷೆ ಎನ್ನುವುದು ಮತ್ತಷ್ಟು ದುಗುಡಕ್ಕೆ ಕಾರಣವಾಗಿದೆ ಎಂದು ವಿದ್ಯಾರ್ಥಿಗಳು ದೂರಿದರು.

ವೈದ್ಯಕೀಯ ವಿದ್ಯಾರ್ಥಿ ಪುರುಷೋತ್ತಮ ದೇಶಪಾಂಡೆ, ತೌಖೀರ್‌ ಮಾತನಾಡಿ, ಎರಡನೇ ವರ್ಷದ ವಿದ್ಯಾರ್ಥಿಗಳಿಗೆ 18 ತಿಂಗಳ ವೇಳಾಪಟ್ಟಿಯಿಂದ ಕೇವಲ 10 ತಿಂಗಳ ವೇಳಾಪಟ್ಟಿಗೆ ಹೊಂದಾಣಿಕೆ ಆಗುವುದೇ ದೊಡ್ಡ ಸಾಹಸವಾಗಿದೆ. ಶೈಕ್ಷಣಿಕ ವರ್ಷ ಆರಂಭವಾದ 3 ತಿಂಗಳು ಆನ್‌ ಲೈನ್‌ ಮೂಲಕ ತರಗತಿಗಳು ನಡೆದಿವೆ. ಆದ ಕಾರಣ, ಈ ವಿದ್ಯಾರ್ಥಿಗಳಿಗೆ ಮೂಲ ವಿಷಯಗಳ ಬಗ್ಗೆ ಸಮರ್ಪಕ ಅಡಿಪಾಯ ದೊರಕಲು ಸಾಧ್ಯವಾಗಿಲ್ಲ ಎಂದು ಸಮಸ್ಯೆ ನಿವೇದಿಸಿದರು.

ಅಂತಿಮ ಪರೀಕ್ಷೆಯನ್ನು ಜನವರಿ ಮಧ್ಯ ವಾರಕ್ಕೆ ಮಾಡಲು ತೀರ್ಮಾನಿಸಲಾಗಿದೆ. ಆದರೆ ಎಷ್ಟೋ ಕಾಲೇಜುಗಳು ನವೆಂಬರ್‌ ಕಳೆಯುತ್ತಿದ್ದರೂ ಇನ್ನೂ ಎರಡನೇ ಆಂತರಿಕ ಪರೀಕ್ಷೆ ಮಾಡಲು ಸಾಧ್ಯವಾಗಿಲ್ಲ. ಈಗ ಎರಡನೆಯದು ಮುಗಿಸಿ, ಮೂರನೆಯದನ್ನು ಮಾಡಿ, ಜನವರಿ ಒಳಗೆ ಅಂತಿಮ ಪರೀಕ್ಷೆ ಎಂದರೆ ವಿದ್ಯಾರ್ಥಿಗಳು ಮಾನಸಿಕವಾಗಿ ಕುಗ್ಗಿ ಹೋಗುತ್ತಾರೆ ಎಂದು ಸಮಸ್ಯೆಯನ್ನು ವಿವರಿಸಿದರು. ಎಐಡಿಎಸ್‌ಒ ಜಿಲ್ಲಾ ಕಾರ್ಯದರ್ಶಿ ಕಾವೇರಿ ರಜಪೂತ ಸೇರಿದಂತೆ ಇತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

1-deee

Udupi; ಪೊಲೀಸ್‌ ಇಲಾಖೆ ವಿರುದ್ಧ ಹಿಂದೂ ಸಂಘಟನೆಗಳ ಪ್ರತಿಭಟನೆ

Shiralakoppa: ಹೋರಿ ತಿವಿದು ಬೈಕ್‌ ಸವಾರ ಸಾವು

Shiralakoppa: ಹೋರಿ ತಿವಿದು ಬೈಕ್‌ ಸವಾರ ಸಾವು

Kamsale-kumaraswami

Mysuru: ‘ಕೋಲು ಮಂಡೆ ಜಂಗಮ’ ಹಾಡು ನೃತ್ಯ ಸಂಯೋಜಕ ಕಂಸಾಳೆ ಕಲಾವಿದ ಕುಮಾರಸ್ವಾಮಿ ನಿಧನ

Khadri–cm

Gift: ಶಿಗ್ಗಾವಿಯಲ್ಲಿ ನಾಮಪತ್ರ ವಾಪಸ್‌ ಪಡೆದ ಖಾದ್ರಿಗೆ ಹೆಸ್ಕಾಂ ಅಧ್ಯಕ್ಷಗಿರಿ ಹುದ್ದೆ!

DVG-Tagaru

Davanagere: ʼಸೋಲಿಲ್ಲದ ಸರದಾರʼ ಎನಿಸಿದ್ದ ʼಬೆಳ್ಳೂಡಿ ಕಾಳಿʼ ಟಗರು ಅನಾರೋಗ್ಯದಿಂದ ನಿಧನ

1-IFFI

IFFI 2024; ಫಿಲ್ಮ್ ಬಜಾರ್: ಮತ್ತೊಂದು ಯಶಸ್ವಿ ಮುನ್ನುಡಿಯೊಂದಿಗೆ ಉತ್ಸವ ಸಮಾಪನ

1-ree

IPL Mega Auction:1.1 ಕೋಟಿ ರೂ.ಗೆ ಹರಾಜಾದ 13ರ ಬಾಲಕ !!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಶಾಸಕರ ನಿವಾಸಕ್ಕೆ ಮುತ್ತಿಗೆ ಹಾಕಲು ಸಿದ್ಧತೆ.. ದಲಿತ ಮುಖಂಡರನ್ನು ವಶಕ್ಕೆ ಪಡೆದ ಪೊಲೀಸರು

ಶಾಸಕರ ನಿವಾಸಕ್ಕೆ ಮುತ್ತಿಗೆ ಹಾಕಲು ಸಿದ್ಧತೆ.. ದಲಿತ ಮುಖಂಡರನ್ನು ವಶಕ್ಕೆ ಪಡೆದ ಪೊಲೀಸರು

Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್‌ ಸುಖಾಂತ್ಯ

Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್‌ ಸುಖಾಂತ್ಯ

Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ

Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ

Vijayapura: One-year-old child kidnapped from district hospital: Crime detected on CCTV

Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ

kolahara-TV

By Election: ಮೂರು ಕ್ಷೇತ್ರದಲ್ಲೂ ಬಿಜೆಪಿ ಸೋತಿದ್ದಕ್ಕೆ ಟಿವಿಯನ್ನೇ ಒಡೆದು ಹಾಕಿದ ಮುಖಂಡ!

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

1-deee

Udupi; ಪೊಲೀಸ್‌ ಇಲಾಖೆ ವಿರುದ್ಧ ಹಿಂದೂ ಸಂಘಟನೆಗಳ ಪ್ರತಿಭಟನೆ

Shikaripur: ಊಟ ಮಾಡುತ್ತಿದ್ದ ತಂದೆಯ ಕೊಂದ ಮಗ

Shikaripur: ಊಟ ಮಾಡುತ್ತಿದ್ದ ತಂದೆಯ ಕೊಂದ ಮಗ

Mandya: ಕದ್ದ ಚಿನ್ನ ಮನೆ ಮುಂದೆ ಇಟ್ಟು ಹೋದ ಕಳ್ಳರು!

Mandya: ಕದ್ದ ಚಿನ್ನ ಮನೆ ಮುಂದೆ ಇಟ್ಟು ಹೋದ ಕಳ್ಳರು!

Shiralakoppa: ಹೋರಿ ತಿವಿದು ಬೈಕ್‌ ಸವಾರ ಸಾವು

Shiralakoppa: ಹೋರಿ ತಿವಿದು ಬೈಕ್‌ ಸವಾರ ಸಾವು

Kamsale-kumaraswami

Mysuru: ‘ಕೋಲು ಮಂಡೆ ಜಂಗಮ’ ಹಾಡು ನೃತ್ಯ ಸಂಯೋಜಕ ಕಂಸಾಳೆ ಕಲಾವಿದ ಕುಮಾರಸ್ವಾಮಿ ನಿಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.