ದನಗಳ್ಳರನ್ನು ಹಿಡಿಯಲು ಹೋದವರ ಮೇಲೆ ವಾಹನ ಚಲಾಯಿಸಿ ಹಲ್ಲೆ: ಇಬ್ಬರಿಗೆ ಗಂಭೀರ ಗಾಯ
Team Udayavani, Nov 30, 2021, 4:57 PM IST
ಶಿವಮೊಗ್ಗ: ತೀರ್ಥಹಳ್ಳಿ ತಾಲೂಕಿನ ಮೇಳಿಗೆಯಿಂದ ಅಕ್ರಮವಾಗಿ ದನಗಳನ್ನು ಸಾಗಣೆ ಮಾಡುತ್ತಿರುವ ದನಗಳ್ಳರನ್ನು ತಡೆಯಲು ಯತ್ನಿಸಿದ ಇಬ್ಬರು ಯುವಕರ ಮೇಲೆ ಪಿಕ್ ಅಪ್ ವ್ಯಾನ್ ಹತ್ತಿಸಿದ ಪರಿಣಾಮ ಯುವಕರು ಗಂಭೀರ ಗಾಯಗೊಂಡು ಮಣಿಪಾಲ ಆಸ್ಪತ್ರೆಗೆ ದಾಖಲಾದ ಘಟನೆ ಮಂಗಳವಾರ ನಡೆದಿದೆ.
ಮೇಳಿಗೆಯಿಂದ ಫಾಲೋ ಮಾಡಿದ ಯುವಕರ ಮೇಲೆ ಬೆಜ್ಜವಳ್ಳಿಯಲ್ಲಿ ಪಿಕ್ ಅಪ್ ವಾಹನ ಹತ್ತಿಸಲಾಗಿದೆ. ಕುಡುಮಲ್ಲಿಗೆ ರೈಸ್ ಮಿಲ್ ಬಳಿಯೂ ಕೆಲವರ ಮೇಲೆ ಹತ್ತಿಸಿದ ಘಟನೆಯೂ ನಡೆದಿದೆ.
ಸಹೋದರರಾದ ಕಿರಣ್ (23), ಚರಣ್ (24) ಗಂಭೀರ ಗಾಯಗೊಂಡಿದ್ದು ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇವರು ತಾಲೂಕಿನ ಕಿತ್ತನಗದ್ದೆ ಮಂಜುನಾಥ್ ಅವರ ಪುತ್ರರು.ಘಟನೆ ನಡೆದ ಬಳಿಕ ಆಸ್ಪತ್ರೆಯ ಮುಂದೆ ನೂರಾರು ಜನ ಸೇರಿದ್ದು ಆತಂಕದ ವಾತಾವರಣ ನಿರ್ಮಾಣವಾಗಿದೆ.
ಇದನ್ನೂ ಓದಿ:ಡಿಕೆಶಿ, ಸಿದ್ಧರಾಮಯ್ಯನವರು ಭಂಡಾಸುರ- ಮಂಡಾಸುರರು: ಶ್ರೀರಾಮುಲು
ಅಕ್ರಮ ಗೋ ಸಾಗಣೆ ವಿರುದ್ಧ ಕ್ರಮ ತೆಗೆದುಕೊಳ್ಳಲಾಗುವುದು.ಇಬ್ಬರು ಯುವಕರ ಚಿಕಿತ್ಸೆಗೆ ಮಣಿಪಾಲದಲ್ಲಿ ವ್ಯವಸ್ಥೆ ಮಾಡಲಾಗಿದೆ. ಆರೋಪಿಗಳ ಮೇಲೆ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.