ಎಲ್ಲರಿಗೂ ಪ್ರಥಮ ಚಿಕಿತ್ಸೆ ಮಾಹಿತಿ ಅಗತ್ಯ
ಥಮ ಚಿಕಿತ್ಸೆಯ ಸಂಪೂರ್ಣ ಮಾಹಿತಿ ಪಡೆದಾಗ ಸಂದಿಗ್ಧ ಸ್ಥಿತಿಯಲ್ಲಿ ಜೀವ ಉಳಿಸುವ ಕಾರ್ಯ ಮಾಡಬಹುದು.
Team Udayavani, Nov 30, 2021, 5:30 PM IST
ಬಾಗಲಕೋಟೆ: ಪ್ರಥಮ ಚಿಕಿತ್ಸೆ ಮಾಹಿತಿ ಹೊಂದುವುದು ಪ್ರತಿಯೊಬ್ಬರಿಗೂ ಅವಶ್ಯ. ಇದರಿಂದ ತುರ್ತು ಸಂದರ್ಭದಲ್ಲಿ ತಾವು ಎಚ್ಚರಿಕೆಯಿಂದ ಇರುವುದರೊಂದಿಗೆ ಮತ್ತೂಬ್ಬರನ್ನು ಪ್ರಾಣಾಪಾಯದಿಂದ ರಕ್ಷಿಸಬಹುದು ಎಂದು ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಜಿಲ್ಲಾ ಚೇರಮನ್ ಆನಂದ ಜಿಗಜಿನ್ನಿ ಹೇಳಿದರು.
ಬೀಳಗಿ ತಾಪಂ ಸಭಾಭವನದಲ್ಲಿ ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಹಯೋಗದಲ್ಲಿ ನಡೆದ ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಶತಮಾನೋತ್ಸವದ ನಿಮಿತ್ತ ಆಶಾ ಕಾರ್ಯಕರ್ತರಿಗೆ ಪ್ರಥಮ ಚಿಕಿತ್ಸೆ ತರಬೇತಿ ಹಾಗೂ ಬೇಸಿಕ್ ಲೈಫ್ ಸಪೋರ್ಟ್ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.
ಪ್ರಥಮ ಚಿಕಿತ್ಸೆಯ ಸಂಪೂರ್ಣ ಮಾಹಿತಿ ಪಡೆದಾಗ ಸಂದಿಗ್ಧ ಸ್ಥಿತಿಯಲ್ಲಿ ಜೀವ ಉಳಿಸುವ ಕಾರ್ಯ ಮಾಡಬಹುದು. ಬೀಳಗಿ ತಾಲೂಕಿನಲ್ಲಿ ಇದು ಎರಡನೆಯ ಶಿಬಿರಾಗಿದ್ದು ಇನ್ನು ಹೆಚ್ಚು-ಹೆಚ್ಚು ಕಾರ್ಯಾಗಾರ ಹಮ್ಮಿಕೊಳ್ಳಲಾಗುವುದು ಎಂದರು.
ಮಾನವೀಯತೆ, ಭಾತೃತ್ವ, ಸೇವಾ ಮನೋಭಾವ ಹೊಂದಿದ ಭಾರತೀಯ ರೆಡ್ ಕ್ರಾಸ್ ಸಂಸ್ಥೆಯು ವಿಶ್ವದ 168 ದೇಶಗಳಲ್ಲಿ ಸೇವೆ ಸಲ್ಲಿಸುತ್ತಿದೆ. ಅರೋಗ್ಯ ಸೇವೆಗಳೊಂದಿಗೆ ಪ್ರಕೃತಿ ವಿಕೋಪ, ಸ್ವತ್ಛತೆ, ಅಪೌಷ್ಟಿಕತೆ ಜನಜಾಗೃತಿ ಮೂಡಿಸುವಲ್ಲಿ ಹಾಗೂ ಮತ್ತಿತರ ತುರ್ತು ಸಂದರ್ಭಗಳಲ್ಲಿ ಜನರ ಸೇವೆಗೆ ರೆಡ್ ಕ್ರಾಸ್ ಸ್ವಯಂಸೇವಕರು ಸಿದ್ಧ ಎಂದು ಹೇಳಿದರು.
ತಾಲೂಕ ಆರೋಗ್ಯಾ ಧಿಕಾರಿ ಡಾ| ದಯಾನಂದ ಕರಿಯಣ್ಣವರ ಅಧ್ಯಕ್ಷತೆ ವಹಿಸಿ ಮಾತನಾಡಿ, ಮೂಲ ಹಂತದಲ್ಲಿ ಕಾರ್ಯ ಮಾಡುವ ಆಶಾ ಕಾರ್ಯಕರ್ತೆಯರು ತರಬೇತಿ ಪಡೆದು ಸಾರ್ವಜನಿಕರಿಗೆ ಆಪತ್ತು ಕಾಲದಲ್ಲಿ ಮನುಷ್ಯನ ಜೀವ ಉಳಿಸುವ, ತಿಳಿಸುವ ಕಾರ್ಯವಾಗಬೇಕು ಎಂದರು. ರಾಜ್ಯಮಟ್ಟದ ಪ್ರಥಮ ಚಿಕಿತ್ಸೆ ತರಬೇತುದಾರ ಸಚೇತ ಸುವರ್ಣ ಪ್ರಥಮ ಚಿಕಿತ್ಸೆ ಎಲ್ಲ ವಿಧಾನ ಮನಮುಟ್ಟುವಂತೆ ಪ್ರಾತ್ಯಕ್ಷಿಕೆಯ ಮೂಲಕ ತಿಳಿಸಿದರು.
ತಾಲೂಕು ಆಸ್ಪತ್ರೆ ಮುಖ್ಯ ವೈದ್ಯಾಧಿ ಕಾರಿ ಡಾ| ಸಂಜಯ ಎಡಹಳ್ಳಿ, ಪಪಂ ಮಾಜಿ ಅಧ್ಯಕ್ಷ ಸಿದ್ದಲಿಂಗೇಶ ನಾಗರಾಳ, ಸಿದ್ದು ಬಾಗಶೆಟ್ಟಿ, ವೀರಣ್ಣ ಅಥಣಿ, ಪ್ರವೀಣ ಹಿರೇಕುಂಬಿ, ಡಾ| ಅಶ್ವಿನಿ ಪಾದರಾ, ಶ್ರೀನಿವಾಸ ಪೂಜಾರಿ ಮತ್ತಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ
Politicss; 1008 ಸಾಧುಸಂತರ ಪಾದಪೂಜೆ ಮೂಲಕ ಕ್ರಾಂತಿವೀರ ಬ್ರಿಗೇಡ್ ಗೆ ಚಾಲನೆ: ಈಶ್ವರಪ್ಪ
India: ಒಂದು ದೇಶ ಒಂದು ಚುನಾವಣೆ ಜಾರಿ ಆಗಲಿ: ಪೇಜಾವರ ಸ್ವಾಮೀಜಿ
Rabkavi Banahatti: ಲೋಕ ಅದಾಲತ್ ನಲ್ಲಿ ಒಂದಾದ ದಂಪತಿಗಳು
ವಿಳಾಸ ಕೇಳುವ ನೆಪದಲ್ಲಿ ವ್ಯಕ್ತಿಯ ಕೊರಳಲ್ಲಿದ್ದ ಚಿನ್ನದ ಚೈನ್ ಕದ್ದ ಅಪರಿಚಿತ ವ್ಯಕ್ತಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
laws: ಕಠಿಣ ಕಾಯ್ದೆ ಇರುವುದು ಸ್ತ್ರೀ ರಕ್ಷಣೆಗೆ, ದುರ್ಬಳಕೆ ಸಲ್ಲ: ಸುಪ್ರೀಂ ಕೋರ್ಟ್
Daily Horoscope: ಈ ರಾಶಿಯವರಿಗಿಂದು ಅನಿರೀಕ್ಷಿತ ಮೂಲದಿಂದ ಧನಪ್ರಾಪ್ತಿ
Mangaluru: ಬಾಲಕಿ, ಮಹಿಳೆಯ ವೀಡಿಯೋ ಚಿತ್ರೀಕರಣ: ಆರೋಪಿಗೆ 5 ವರ್ಷಗಳ ಜೈಲು ಶಿಕ್ಷೆ
World Meditation Day; ಶರೀರಕ್ಕೆ ಊಟ, ಆತ್ಮಕ್ಕೆ ಧ್ಯಾನ
AICC ಅಧಿವೇಶನ: ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿಂದು ಮಹತ್ವದ ಸಭೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.