ಎನ್‌ಇಪಿ: ಶಿಕ್ಷಣ ಸುಧಾರಣೆಗೆ ಮಹತ್ವ
Team Udayavani, Dec 1, 2021, 12:00 PM IST
ಬೆಂಗಳೂರು: ರಾಷ್ಟ್ರೀಯ ಶಿಕ್ಷಣ ನೀತಿಯು ಶಾಲಾ ಶಿಕ್ಷಣ, ಉನ್ನತ ಶಿಕ್ಷಣದ ಪಠ್ಯಕ್ರಮ ಮತ್ತು ಶಿಕ್ಷಣ ಸಂಸ್ಥೆಗಳ ನಿರ್ವಹಣೆ ಮತ್ತು ಸುಧಾರಣೆಗಳಿಗೆ ಮಹತ್ವ ನೀಡಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಹೇಳಿದರು.
ಎಜುಕೇಷನ್ ಪ್ರೊಮೋಷನ್ ಸೊಸೈಟಿ ಆಫ್ ಇಂಡಿಯಾ (ಇಪಿಎಸ್‌ಐ), ಕುಪೇಕಾ ಮತ್ತು ಕಾಮೆಡ್-ಕೆ ಸಂಘಟನೆಗಳ ಸಹಯೋಗದಲ್ಲಿ ಮಂಗಳವಾರ ಏರ್ಪಡಿಸಿದ್ದ “ಎನ್‌ಇಪಿ ಜಾರಿ: ಶಿಕ್ಷಣ ಸಂಸ್ಥೆಗಳಿಗಿರುವ ಅವಕಾಶಗಳು ಮತ್ತು ಸವಾಲುಗಳು’ ಎಂಬ ಕಾರ್ಯಕ್ರಮದಲ್ಲಿ ಮಾತನಾಡಿದರು.
ಮಾದರಿ ಕಾಲೇಜು ಸ್ಥಾಪನೆ: ಎನ್‌ಇಪಿ ಜಾರಿಗೊಳಿಸಲು ರಾಜ್ಯ ಸರ್ಕಾರವು ಅಗತ್ಯ ಕ್ರಮಗಳನ್ನು ಕೈಗೊಂಡಿದ್ದು, ಶಾಲಾ ಶಿಕ್ಷಣ, ಉನ್ನತ ಶಿಕ್ಷಣದ ಸುಧಾರಣೆಗೆ ಗಮನ ಹರಿಸಿದೆ. ಇದಕ್ಕೆ ತಕ್ಕಂತೆ ರಾಜ್ಯದಲ್ಲಿ ಬಹುಶಿಸ್ತೀಯ ವಿಧಾನಗಳ ಮೂಲಕ ಮಾದರಿ ಕಾಲೇಜು ಗಳನ್ನು ಸ್ಥಾಪಿಸುವ ಪ್ರಕ್ರಿಯೆ ಈಗಾಗಲೇ ಪ್ರಗತಿಯಲ್ಲಿದೆ ಎಂದು ತಿಳಿಸಿದರು.
ಉನ್ನತ ಶಿಕ್ಷಣ ವ್ಯವಸ್ಥೆಯು ಆಧುನೀಕರಣ: ಶಿಕ್ಷಣ ನೀತಿಯು ಭಾರತ ಕೇಂದ್ರಿತವಾಗಿದ್ದು, ಶಿಕ್ಷಣ ಕ್ರಮದಲ್ಲಿ ಸಂಶೋಧನೆ ಮತ್ತು ನಾವೀನ್ಯತೆಗಳಿಗೆ ಒತ್ತು ಕೊಡುವ ಮೂಲಕ ವಿದ್ಯಾರ್ಥಿಗಳ ಪರಿಪೂರ್ಣ ಬೆಳವಣಿಗೆ ಯನ್ನು ಗುರಿಯಾಗಿ ಹೊಂದಿದೆ. ಮಂದಿನ 10 ವರ್ಷಗಳಲ್ಲಿ ಇಡೀ ಉನ್ನತ ಶಿಕ್ಷಣ ವ್ಯವಸ್ಥೆಯು ಆಧುನೀಕರಣ ಗೊಳ್ಳಲಿದ್ದು, ವಿದ್ಯಾರ್ಥಿಕೇಂದ್ರಿತವಾಗಲಿದೆ ಎಂದರು.
ಶೈಕ್ಷಣಿಕ ಪ್ರಗತಿಗೆ ಸೂಕ್ತ ವಾತಾವರಣ ನಿರ್ಮಾಣ: ಪದವಿ ಮಟ್ಟದಲ್ಲಿ ವಿದ್ಯಾರ್ಥಿಗಳು ತಮ್ಮ ಆಸಕ್ತಿಯ ಯಾವುದೇ ವಿಷಯಗಳನ್ನು ಐಚ್ಛಿಕವಾಗಿ ಓದುವ ಮಾದರಿ ಅಳವಡಿಸಿಕೊಳ್ಳಲಾಗುತ್ತಿದೆ. ಇದರಿಂದ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಸೂಕ್ತ ವಾತಾವರಣ ನಿರ್ಮಾಣವಾಗಲಿದೆ ಎಂದು ಪ್ರತಿಪಾದಿಸಿದರು.
ಶಿಕ್ಷಣ ಸಂಸ್ಥೆಗಳಿಗೆ ಸ್ವಾಯತ್ತತೆ ನೀಡಲಿದೆ: ನೂತನ ಶಿಕ್ಷಣ ನೀತಿಯಲ್ಲಿ ಹೇಳಿರುವಂತೆ ರಾಷ್ಟ್ರೀಯ ಸಂಶೋಧನಾ ಪ್ರತಿಷ್ಠಾನವು ಅಸ್ತಿತ್ವಕ್ಕೆ ಬರಲಿದೆ. ಮೂರು ದಶಕಗಳ ನಂತರ ರೂಪಿಸಿರುವ ಈ ನೀತಿಯು ಲಭ್ಯತೆ, ಸಮಾ ನತೆ, ಗುಣಮಟ್ಟ ಮತ್ತು ಉತ್ತರದಾಯಿತ್ವಗಳನ್ನು ಪ್ರತಿಪಾದಿಸುತ್ತಿದ್ದು, ಶಿಕ್ಷಣ ಸಂಸ್ಥೆಗಳಿಗೆ ಸ್ವಾಯತ್ತತೆ ನೀಡಲಿದೆ ಎಂದು ಹೇಳಿದರು.
ಇದನ್ನೂ ಓದಿ:- ಶಾಸಕ ವಿಶ್ವನಾಥ್ ಹತ್ಯೆ ಸಂಚಿನ ಬಗ್ಗೆ ಮಾಹಿತಿಯಿಲ್ಲ: ಸಿಎಂ ಬೊಮ್ಮಾಯಿ
ಎಐಸಿಟಿಇ ಅಧ್ಯಕ್ಷ ಡಾ. ಅನಿಲ್ ದತ್ತಾತ್ರೇಯ ಸಹಸ್ರಬುದ್ಧೆ ಮಾತನಾಡಿ, ದೇಶದಲ್ಲಿ ಸಾಮಾನ್ಯ ಮತ್ತು ಕೌಶಲ್ಯ ಎಂಬ ಎರಡು ರೀತಿಯ ಶಿಕ್ಷಣವಿದ್ದು, ಸಾಮಾನ್ಯ ಶಿಕ್ಷಣದಲ್ಲಿ ಕೌಶಲ್ಯವಿರುವುದಿಲ್ಲ. ಆದ್ದರಿಂದ ಕೌಶಲ್ಯ ಆಧಾರಿತ ಶಿಕ್ಷಣ ಮುಖ್ಯವಾಗಿದೆ. ದೇಶದ ಪ್ರತಿ ಹಳ್ಳಿಗಳಿಗೆ ವಿದ್ಯುತ್ ಸಂಚರಿಸಿದಂತೆ ಅಂತರ್ಜಾಲದ ಸೇವೆ ಕೂಡ ನೀಡಬೇಕಿದೆ ಎಂದು ಹೇಳಿದರು. ವೆಲ್ಲೂರು ತಾಂತ್ರಿಕ ಶಿಕ್ಷಣ ಸಂಸ್ಥೆಯ ಸಂಸ್ಥಾಪಕ ಡಾ. ಜಿ.ವಿಶ್ವನಾಥ, ಎಂ.ಎಸ್. ರಾಮಯ್ಯ ಅನ್ವಯಿಕ ವಿಜ್ಞಾನಗಳ ವಿವಿ ಕುಲಾಧಿಪತಿ ಎಂ.ಆರ್. ಜಯರಾಂ, ಇಪಿಎಸ್‌ಐ ನಿರ್ದೇಶಕ ಡಾ. ಎಚ್. ಚತುರ್ವೇದಿ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ
Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ
Katpadi: ಹೆದ್ದಾರಿ ಅಂಚಿನಲ್ಲಿ ಅಪಾಯ!; ರಸ್ತೆ ಬದಿಯಲ್ಲಿ ಉದ್ದಕ್ಕೂ ಹೊಂಡಗುಂಡಿ
ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು
Gurupura: ನಾಡಕಚೇರಿ ಕಟ್ಟಡ ಉದ್ಘಾಟನೆಗೆ ಸಿದ್ಧ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.