ಜಿಲ್ಲೆಯಲ್ಲಿ ಅತಿವೃಷ್ಟಿಗೆ 1,320 ಹೆಕ್ಟೇರ್‌ ಬೆಳೆ ಹಾನಿ

Team Udayavani, Dec 1, 2021, 2:27 PM IST

ಬೆಳೆ ಮಳೆ

ಮೈಸೂರು: ಇತ್ತೀಚೆಗೆ ಸುರಿದ ಹಿಂಗಾರು ಸತತ ಮಳೆಯಿಂದಾಗಿ ಮೈಸೂರು ಜಿಲ್ಲೆಯಲ್ಲಿ 1320 ಹೆಕ್ಟೇರ್‌ನಲ್ಲಿ ಬೆಳೆದಿದ್ದ ಕೃಷಿ, ತೋಟಗಾರಿಕೆ ಫ‌ಸಲು ನಾಶವಾಗಿದೆ. ಕೈಗೆ ಬಂದ ತುತ್ತು ಬಾಯಿಗೆ ಬಂದಿಲ್ಲ ಎಂಬಂತೆ, ವರ್ಷವಿಡೀ ಶ್ರಮಪಟ್ಟು ಜಮೀನಿನಲ್ಲಿ ಬೆಳೆದಿದ್ದ ಬೆಳೆ ಮಳೆಯಿಂದಾಗಿ ನೆಲ ಕಚ್ಚಿದೆ.

ಸತತ ಒಂದು ತಿಂಗಳು ಕಾಲ ನಿರಂತರವಾಗಿ ಸುರಿದ ಭಾರೀ ಮಳೆಯಿಂದಾಗಿ ಮೈಸೂರು ಸೇರಿದಂತೆ ಜಿಲ್ಲೆಯ ವಿವಿಧ ಭಾಗಗಳಲ್ಲಿ ರೈತರು ಬೆಳೆದಿದ್ದ ಬೆಳೆ ಹೊಲದಲ್ಲೇ ಕೊಳೆತು ಹೋಗಿದ್ದು, ರೈತರು ನಷ್ಟ ಅನುಭವಿಸಿದಂತಾಗಿದೆ.

945.7 ಹೆಕ್ಟೇರ್‌ನಲ್ಲಿ ಬೆಳೆ ನಾಶ: ಜಿಲ್ಲೆಯ ಹುಣಸೂರು, ಎಚ್‌.ಡಿ.ಕೋಟೆ, ಕೆ.ಆರ್‌. ನಗರ ಸೇರಿದಂತೆ ವಿವಿಧ ಭಾಗಗಳಲ್ಲಿ ಮಳೆಯಾಶ್ರಿತ ಮತ್ತು ನೀರಾವರಿ ಆಶ್ರಿತ ಕೃಷಿ ಭೂಮಿಯಲ್ಲಿ 1,384 ರೈತರು 945.7 ಹೆಕ್ಟೇರ್‌ ಕೃಷಿ ಭೂಮಿಯಲ್ಲಿ ಬೆಳೆದಿದ್ದ ಹತ್ತಿ, ರಾಗಿ, ಭತ್ತ, ಮೆಕ್ಕೆ ಜೋಳ, ಚಿಯಾ ಸೇರಿದಂತೆ ವಿವಿಧ ಬೆಳೆಗಳು ನಾಶವಾಗಿದ್ದು, ಸುಮಾರು 72.47 ಲಕ್ಷ ರೂ. ಬೆಳೆ ನಷ್ಟವಾಗಿದೆ ಎಂದು ಅಂದಾಜಿಸಲಾಗಿದೆ.

375 ಹೆಕ್ಟೇರ್‌ ತೋಟಗಾರಿಕೆ ಬೆಳೆ ನಾಶ: ಸತತ ಒಂದು ತಿಂಗಳು ಬಿಟ್ಟು ಬಿಡದೆ ಸುರಿದ ಮಳೆಯಿಂದಾಗಿ ಜಿಲ್ಲೆಯ ನಂಜನಗೂಡು, ಮೈಸೂರು ತಾಲೂಕು, ಪಿರಿಯಾಪಟ್ಟಣ ಸೇರಿದಂತೆ ಎಲ್ಲಾ ತಾಲೂಕುಗಳಲ್ಲಿ 375 ಹೆಕ್ಟೇರ್‌ ತೋಟಗಾರಿಕೆ ಬೆಳೆ ನೆಲ ಕಚ್ಚಿದೆ. ಸರಿಸುಮಾರು 67 ಲಕ್ಷ ರೂ. ಮೌಲ್ಯದ ತರಕಾರಿ ಬೆಳೆ, ಬಾಳೆ, ಶುಂಠಿ ಕೊಳೆತು ಹೋಗಿದ್ದು, ಉತ್ತಮ ಫ‌ಸಲು ನಿರೀಕ್ಷೆಯಲ್ಲಿದ್ದ ರೈತರು ಕಂಗಾಲಾಗುವಂತಾಗಿದೆ.

ಅವೈಜ್ಞಾನಿಕ ಬೆಳೆ ಪರಿಹಾರ: ಕೃಷಿ ಭೂಮಿಯಲ್ಲಿ ಲಕ್ಷಾಂತರ ರೂ. ಮೌಲ್ಯದ ಫ‌ಸಲು ಕಳೆದುಕೊಂಡ ರೈತನಿಗೆ ವೈಜ್ಞಾನಿಕವಾಗಿ ಬೆಳೆ ಪರಿಹಾರ ನೀಡದ ಕೃಷಿ ಇಲಾಖೆ ಪ್ರತಿ ಹೆಕ್ಟೇರ್‌ಗೆ ಕೇವಲ 6,800 ರೂ. ಮತ್ತು 13,500 ರೂ. ನಂತೆ ಪರಿಹಾರ ವಿತರಿಸುತ್ತಿರುವುದು ಬಕಾಸುರನ ಹೊಟ್ಟೆಗೆ ಅರೆಕಾಸಿನ ಮಜ್ಜಿಗೆಯಂತೆ ಎಂಬ ಗಾದೆ ಮಾತಿನಂತಾಗಿದೆ. ಜೊತೆಗೆ ತೋಟಗಾರಿಕೆ ಬೆಳೆಯಲ್ಲಿ ನಷ್ಟ ಅನುಭವಿಸಿದ ರೈತರಿಗೆ ಪ್ರತಿ ಹೆಕ್ಟೇರ್‌ಗೆ 18 ಸಾವಿರ ರೂ. ನೀಡುತ್ತಿರುವುದು ಯಾವುದೇ ಉಪಯೋಗಕ್ಕೆ ಬಾರದಂತಾಗಿದೆ ಎಂಬುದು ರೈತರ ಅಳಲಾಗಿದೆ.

ಇಕ್ಕಟ್ಟಿನ ಸ್ಥಿತಿಯಲ್ಲಿ ರೈತ: ಜಿಲ್ಲೆಯಲ್ಲಿ ಈಗಾಗಲೇ ಎಲ್ಲಾ ಕಡೆ ಭತ್ತ, ರಾಗಿ ಕಟಾವಿಗೆ ಬಂದಿದೆ. ಆದರೆ ಕಳೆದೊಂದು ವಾರದಿಂದ ಮೋಡ ಕವಿದ ವಾತಾವರಣ ನಿರ್ಮಾಣವಾಗಿದೆ. ಮಳೆ ಬೀಳುವ ಆತಂಕದಲ್ಲಿರುವ ರೈತರು ಕೈಗೆ ಬಂದಿರುವ ಬೆಳೆಯನ್ನು ಮನೆಗೆ ಕೊಂಡೊಯ್ಯಲು ಸಾಧ್ಯವಾಗದ ಪರಿಸ್ಥಿತಿ ಎದುರಾಗಿದೆ. ಪರಿಣಾಮ ಶೇ.90 ರಷ್ಟು ರೈತರ ಭತ್ತ ಮತ್ತು ರಾಗಿ ಗದ್ದೆ-ಹೊಲದಲ್ಲೇ ಮೊಳಕೆಯೊಡೆಯುತ್ತಿದ್ದು, ಇದರಿಂದ ಅನ್ನದಾತ ಕಂಗಾಲಾಗಿ¨ªಾನೆ. ಈಗಾಗಲೇ ರೈತರು ಉಳುಮೆ, ನಾಟಿ, ರಸಗೊಬ್ಬರ, ಕ್ರಿಮಿನಾಶಕ, ಕೂಲಿಯಾಳಿಗೆ ಮಾಡಿದ್ದ ಖರ್ಚು ಸಿಗದಂತಹ ಪರಿಸ್ಥಿತಿ ನಿರ್ಮಾಣವಾಗಿದೆ.

 ರೈತರ ಖಾತೆಗೆ ಶೀಘ್ರ ಬೆಳೆ ಪರಿಹಾರ ಹಣ ಜಮೆ

ಜಿಲ್ಲೆಯಾದ್ಯಂತ ಭಾರೀ ಮಳೆಯಿಂದಾಗಿ ಬೆಳೆ ಹಾನಿಯಾಗಿರುವ ಬಗ್ಗೆ ಜಂಟಿ ಸಮೀಕ್ಷೆ ನಡೆಸಿ ಜಿಲ್ಲಾಧಿಕಾರಿ ಮೂಲಕ ಸರ್ಕಾರಕ್ಕೆ ವರದಿ ಸಲ್ಲಿಸಲಾಗಿದೆ. ಶೀಘ್ರವೇ ರೈತರ ಖಾತೆಗೆ ಬೆಳೆ ಪರಿಹಾರ ಹಣವನ್ನು ಸರ್ಕಾರ ಬಿಡುಗಡೆ ಮಾಡಲಿದೆ.

ಜಿಲ್ಲೆಯಲ್ಲಿ 945.7 ಹೆಕ್ಟೇರ್‌ ಮಳೆಯಾಶ್ರಿತ ಮತ್ತು ನಿರಾವರಿ ಭೂಮಿಯಲ್ಲಿ ಬೆಳೆದಿದ್ದ ಫ‌ಸಲು ನಾಶವಾಗಿದ್ದು, ಮಳೆಯಾಶ್ರಿತ ಪ್ರತಿ ಹೆಕ್ಟೇರ್‌ ಗೆ 6800 ರೂ., ನೀರಾವರಿಯಾಶ್ರಿತ ಪ್ರತಿ ಹೆಕ್ಟೇರ್‌ಗೆ 13,500 ರೂ. ಪರಿಹಾರ ನೀಡಲಾಗುವುದು ಎಂದು ಕೃಷಿ ಇಲಾಖೆ ಉಪನಿರ್ದೇಶಕ ಮಹಂತೇಶಪ್ಪ ತಿಳಿಸಿದರು.

 ಅಕ್ಟೋಬರ್‌-ನವೆಂಬರ್‌ನಲ್ಲಿ ಸುರಿದ ಭಾರಿ ಮಳೆಯಿಂದ ಜಿಲ್ಲೆಯಲ್ಲಿ 375 ಹೆಕ್ಟೇರ್‌ನಲ್ಲಿ ತೋಟಗಾರಿಕೆ ಬೆಳೆ ನಾಶವಾಗಿರುವುದನ್ನು ಸರ್ವೆ ಮಾಡಲಾಗಿದೆ. ಸರ್ಕಾರದ ಆದೇಶದಂತೆ ಪ್ರತಿ ಹೆಕ್ಟೇರ್‌ಗೆ 18 ಸಾವಿರ ರೂ. ಬೆಳೆ ಪರಿಹಾರ ವಿತರಿಸಲಾಗುವುದು. ರುದ್ರೇಶ್‌, ಉಪನಿರ್ದೇಶಕ ತೋಟಗಾರಿಕೆ ಇಲಾಖೆ, ಮೈಸೂರು.

 – ಸತೀಶ್‌ ದೇಪುರ

ಟಾಪ್ ನ್ಯೂಸ್

BBK11: ಚೈತ್ರಾ ಅವರೇ ನನ್ನ ಬಾಸ್.. ಅವರ ಹೆಜ್ಜೆ ಫಾಲೋ ಮಾಡ್ತೇನೆ ಎಂದ ರಜತ್

BBK11: ಚೈತ್ರಾ ಅವರೇ ನನ್ನ ಬಾಸ್.. ಅವರ ಹೆಜ್ಜೆ ಫಾಲೋ ಮಾಡ್ತೇನೆ ಎಂದ ರಜತ್

Uttar Pradesh ಈಗ ರಾಜಕಾರಣಿಗಳಿಂದ “ಬಿಳಿಟವಲ್‌’ ರಾಜಕೀಯ!

Uttar Pradesh ಈಗ ರಾಜಕಾರಣಿಗಳಿಂದ “ಬಿಳಿಟವಲ್‌’ ರಾಜಕೀಯ!

Andhra Pradesh: ಲಡ್ಡು ಪ್ರಸಾದ ವಿವಾದ: ತಿರುಪತಿಗೆ ಎಸ್‌ಐಟಿ ಭೇಟಿ

Andhra Pradesh: ಲಡ್ಡು ಪ್ರಸಾದ ವಿವಾದ: ತಿರುಪತಿಗೆ ಎಸ್‌ಐಟಿ ಭೇಟಿ

Belgavi-Roberry

Belagavi: ದೂರು ಕೊಟ್ಟವರ ಮೊದಲು ಬಂಧಿಸಿ ಬಳಿಕ ನೈಜ ದರೋಡೆಕೋರರ ಸೆರೆ ಹಿಡಿದ ಪೊಲೀಸರು!

k

Udupi: ಆರೆಸ್ಸೆಸ್‌ ಹಿರಿಯ ಪ್ರಚಾರಕ್‌ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ

Bagalakote-Dryer

Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!  

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

6-hunsur

Hunsur: ರಾಜ್ಯದ ವಿವಿಧೆಡೆ ಕಳ್ಳತನ ಮಾಡಿದ್ದ ಆರೋಪಿ ಬಂಧನ

Lokayukta police: ಮುಡಾ ಮಾಜಿ ಆಯುಕ್ತ ನಟೇಶ್‌ ವಿಚಾರಣೆ

Lokayukta police: ಮುಡಾ ಮಾಜಿ ಆಯುಕ್ತ ನಟೇಶ್‌ ವಿಚಾರಣೆ

Yathindra Siddaramaiah: ಹಿಂದೂ ರಾಷ್ಟ್ರ ಮಾಡಲು ಬಿಡಬಾರದು

Yathindra Siddaramaiah: ಹಿಂದೂ ರಾಷ್ಟ್ರ ಮಾಡಲು ಬಿಡಬಾರದು

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

BBK11: ಚೈತ್ರಾ ಅವರೇ ನನ್ನ ಬಾಸ್.. ಅವರ ಹೆಜ್ಜೆ ಫಾಲೋ ಮಾಡ್ತೇನೆ ಎಂದ ರಜತ್

BBK11: ಚೈತ್ರಾ ಅವರೇ ನನ್ನ ಬಾಸ್.. ಅವರ ಹೆಜ್ಜೆ ಫಾಲೋ ಮಾಡ್ತೇನೆ ಎಂದ ರಜತ್

Uttar Pradesh ಈಗ ರಾಜಕಾರಣಿಗಳಿಂದ “ಬಿಳಿಟವಲ್‌’ ರಾಜಕೀಯ!

Uttar Pradesh ಈಗ ರಾಜಕಾರಣಿಗಳಿಂದ “ಬಿಳಿಟವಲ್‌’ ರಾಜಕೀಯ!

Andhra Pradesh: ಲಡ್ಡು ಪ್ರಸಾದ ವಿವಾದ: ತಿರುಪತಿಗೆ ಎಸ್‌ಐಟಿ ಭೇಟಿ

Andhra Pradesh: ಲಡ್ಡು ಪ್ರಸಾದ ವಿವಾದ: ತಿರುಪತಿಗೆ ಎಸ್‌ಐಟಿ ಭೇಟಿ

Belgavi-Roberry

Belagavi: ದೂರು ಕೊಟ್ಟವರ ಮೊದಲು ಬಂಧಿಸಿ ಬಳಿಕ ನೈಜ ದರೋಡೆಕೋರರ ಸೆರೆ ಹಿಡಿದ ಪೊಲೀಸರು!

k

Udupi: ಆರೆಸ್ಸೆಸ್‌ ಹಿರಿಯ ಪ್ರಚಾರಕ್‌ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.