![BR-Hills](https://www.udayavani.com/wp-content/uploads/2025/02/BR-Hills-415x249.jpg)
![BR-Hills](https://www.udayavani.com/wp-content/uploads/2025/02/BR-Hills-415x249.jpg)
Team Udayavani, Dec 1, 2021, 2:16 PM IST
ಹುಬ್ಬಳ್ಳಿ: ಸಂಶೋಧಕ ಡಾ. ಎಂ.ಎಂ.ಕಲಬುರ್ಗಿಯವರ ಹತ್ಯೆ ಪ್ರಕರಣದ ಮೂವರು ಆರೋಪಿಗಳನ್ನು ಬೈಕ್ ಕಳ್ಳತನ ಆರೋಪದ ವಿಚಾರಣೆಗಾಗಿ ಗ್ರಾಮೀಣ ಠಾಣೆ ಪೊಲೀಸರು ಬುಧವಾರ ಇಲ್ಲಿನ 1ನೇ ಜೆಎಂಎಫ್ ಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದರು.
ಮುಂಬಯಿ ಜೈಲಿನಿಂದ ಬಾಡಿ ವಾರಂಟ್ ಮೇಲೆ ಹುಬ್ಬಳ್ಳಿಗೆ ಕರೆ ತಂದಿದ್ದ ಗ್ರಾಮೀಣ ಠಾಣೆ ಪೊಲೀಸರು, ವಿಚಾರಣೆ ಮುಗಿದ ನಂತರ ಬೈಕ್ ಮಹಜರು ನಡೆಸಲು ಠಾಣೆಗೆ ಕರೆದೊಯ್ದರು.
ಇದನ್ನೂ ಓದಿ:ಕರೆಯದೆ ಇರುವವರ ಮನೆ ಬಾಗಿಲಿಗೆ ಹೋಗಲು ಆಗುತ್ತಾ : ಎಚ್ ಡಿಕೆ
ಕಲಬುರ್ಗಿಯವರ ಹತ್ಯೆ ಪ್ರಕರಣದಲ್ಲಿ ಕಳ್ಳತನ ಮಾಡಿದ್ದ ಬೈಕ್ ಬಳಸಲಾಗಿತ್ತು. ಆ ಬೈಕ್ ಅನ್ನು ಹುಬ್ಬಳ್ಳಿ ತಾಲೂಕಿನ ಮಾವನೂರಲ್ಲಿ ಕಳ್ಳತನ ಮಾಡಲಾಗಿತ್ತು. ಈ ಬೈಕ್ ಕಳ್ಳತನ ಪ್ರಕರಣಕ್ಕೆ ಸಂಬಂಧಪಟ್ಟಂತೆ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ಇದೀಗ ಆರೋಪಿಗಳನ್ನು ನ್ಯಾಯಾಲಯದ ಎದುರು ಹಾಜರು ಪಡಿಸಲಾಯಿತು.
ಮಧ್ಯಾಹ್ನ 3:00 ಗಂಟೆಗೆ ಮತ್ತೆ ನ್ಯಾಯಾಲಯದ ಮುಂದೆ ಹಾಜರಪಡಿಸಿ ನಂತರ ಮುಂಬಯಿಗೆ ಕಳುಹಿಸಿ ಕೊಡಲಾಗುವುದು ಎಂದು ಗ್ರಾಮೀಣ ಠಾಣೆ ಇನ್ಸ್ಪೆಕ್ಟರ್ ರಮೇಶ ಗೋಕಾಕ ತಿಳಿಸಿದ್ದಾರೆ.
Train: ರೈಲು ಢಿಕ್ಕಿ ತಡೆಯಲು ಉಪಕ್ರಮ: ನೈಋತ್ಯ ರೈಲ್ವೇಗೆ ಮೊದಲ ಬಾರಿ “ಕವಚ’
ಮೂವರು ಲೇಖಕಿಯರಿಗೆ ಕವಿಸಂ ಮಾತೃಶ್ರೀ ರತ್ನಮ್ಮ ಹೆಗ್ಗಡೆ ಮಹಿಳಾ ಗ್ರಂಥ ಬಹುಮಾನಕ್ಕೆ ಆಯ್ಕೆ
Dharwad: ಪಂ.ಮನಸೂರ ಸಂಗೀತ ಪಾಠ ಶಾಲೆ ಮತ್ತೆ ಆರಂಭ; ಜಿಲ್ಲಾಧಿಕಾರಿ ದಿವ್ಯ ಪ್ರಭು
Hubli: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89.99 ಲಕ್ಷ ರೂ ಪೊಲೀಸ್ ವಶಕ್ಕೆ
ED summons: ಸಿದ್ದರಾಮಯ್ಯ ಪತ್ನಿ ಪಾರ್ವತಿ, ಬೈರತಿ ಸುರೇಶಗೆ ತಾತ್ಕಾಲಿಕ ರಿಲೀಫ್
You seem to have an Ad Blocker on.
To continue reading, please turn it off or whitelist Udayavani.