ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪೆಟ್ರೋಲ್ ಬೆಲೆ 8 ರೂ. ಇಳಿಕೆ
Team Udayavani, Dec 1, 2021, 9:15 PM IST
ನವದೆಹಲಿ: ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಪೆಟ್ರೋಲ್ ಮೇಲಿನ ವ್ಯಾಟ್ ಶೇ. 30ರಿಂದ ಶೇ. 19.40ಗೆ ಇಳಿಸುವುದಾಗಿ ರಾಜ್ಯ ಸರ್ಕಾರ ಬುಧವಾರ ಘೋಷಿಸಿದೆ.
ಆ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಪೆಟ್ರೋಲ್ ಬೆಲೆಯಲ್ಲಿ ಲೀಟರ್‌ಗೆ 8 ರೂಪಾಯಿ ಇಳಿಕೆಯಾಗಲಿದೆ.
ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ.
103.97 ರೂಪಾಯಿಯಿದ್ದ ಲೀಟರ್ ಪೆಟ್ರೋಲ್ ಬೆಲೆಯಲ್ಲಿ ಬುಧವಾರ ಮಧ್ಯ ರಾತ್ರಿಯಿಂದಲೇ 8 ರೂ. ಇಳಿಕೆಯಾಗಲಿದೆ ಎಂದು ತಿಳಿಸಲಾಗಿದೆ.
ಇದನ್ನೂ ಓದಿ:ಜಾನುವಾರುಗಳಿಗೆ ಕಾಡಿಸುತ್ತಿರುವ ಕಾಲುಬಾಯಿ ರೋಗ; ಲಸಿಕೆ 2 ತಿಂಗಳು ವಿಳಂಬ
ನ. 4ರಂದು ಕೇಂದ್ರ ಸರ್ಕಾರವು ಪೆಟ್ರೋಲ್ ಬೆಲೆಯಲ್ಲಿ 5 ರೂಪಾಯಿ ಮತ್ತು ಡೀಸೆಲ್ ಬೆಲೆಯಲ್ಲಿ 10 ರೂಪಾಯಿ ಇಳಿಕೆ ಮಾಡಿತ್ತು. ಅದಾದ ನಂತರ ಹಲವು ರಾಜ್ಯಗಳು ವ್ಯಾಟ್ ಇಳಿಕೆ ಮಾಡಿ ಆದೇಶ ಹೊರಡಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ
ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
Naxal ಎನ್‌ಕೌಂಟರ್ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.