ವೃದ್ಧರೇ ಅಂತರಾಷ್ಟ್ರೀಯ ಪ್ರಯಾಣ ಮುಂದೂಡಿ : ವಿಶ್ವ ಆರೋಗ್ಯ ಸಂಸ್ಥೆಯಿಂದಲೇ ಎಚ್ಚರಿಕೆ

Team Udayavani, Dec 1, 2021, 10:15 PM IST

ವೃದ್ಧರೇ ಅಂತರಾಷ್ಟ್ರೀಯ ಪ್ರಯಾಣ ಮುಂದೂಡಿ : ವಿಶ್ವ ಆರೋಗ್ಯ ಸಂಸ್ಥೆಯಿಂದಲೇ ಎಚ್ಚರಿಕೆ

ನವದೆಹಲಿ/ವಾಷಿಂಗ್ಟನ್‌:  ಕೊರೊನಾ ರೂಪಾಂತರಿ ಒಮಿಕ್ರಾನ್‌ ಆತಂಕದ ಹಿನ್ನೆಲೆಯಲ್ಲಿ ಲಸಿಕೆ ಪಡೆಯದೇ ಇರುವ, 60 ವರ್ಷ ಮೇಲ್ಪಟ್ಟವರು ಪ್ರಯಾಣ ಮುಂದೂಡಿಕೆ ಮಾಡುವುದು ಒಳಿತು ಎಂದು ವಿಶ್ವ ಆರೋಗ್ಯ ಸಂಸ್ಥೆ(ಡಬ್ಲ್ಯೂಎಚ್‌ಒ) ಸಲಹೆ ನೀಡಿದೆ.

ಅಮೆರಿಕ, ಜಪಾನ್‌ ಮತ್ತು ಸಿಂಗಾಪುರ ದೇಶಗಳು ವಿದೇಶಿ ಪ್ರಯಾಣಿಕರಿಗೆ ಭಾಗಶಃ ಬಾಗಿಲು ಬಂದ್‌ ಮಾಡಿದ್ದು, ಈ ಬಗ್ಗೆ ಡಬ್ಲೂéಎಚ್‌ಒ ಆಕ್ಷೇಪ ವ್ಯಕ್ತಪಡಿಸಿದೆ. ಸಂಪೂರ್ಣ ಪ್ರಯಾಣ ನಿಷೇಧದಿಂದಾಗಿ ಕೊರೊನಾ ಹರಡುವಿಕೆಯನ್ನು ತಡೆಯಲು ಸಾಧ್ಯವಿಲ್ಲ ಎಂದು ಹೇಳಿದೆ. ಲಸಿಕೆ ಪಡೆಯದೇ ಇರುವ, 60 ವರ್ಷ ಮೇಲ್ಪಟ್ಟವರು ಈಗ ಹೈ ರಿಸ್ಕ್ ದೇಶಗಳು ಎಂದು ಗುರುತಿಸಲಾಗಿರುವಲ್ಲಿಗೆ ಹೋಗುವುದು ಬೇಡ ಎಂದು ಅದು ತಿಳಿಸಿದೆ.

ಲಸಿಕೆ ಕಡ್ಡಾಯ ಮಾಡಿ

ಒಮಿಕ್ರಾನ್‌ ಬಗ್ಗೆ ಆತಂಕಗೊಂಡಿರುವ ಐರೋಪ್ಯ ಒಕ್ಕೂಟ ಲಸಿಕೆ ಪಡೆಯುವುದನ್ನು ಕಡ್ಡಾಯಗೊಳಿಸಬೇಕು ಎಂದು ಹೇಳಿದೆ. ವಿಶ್ವ ಆರೋಗ್ಯ ಸಂಸ್ಥೆಯ ಸಲಹೆಯಂತೆ ಈ ವರ್ಷದ ಅಂತ್ಯದ ಒಳಗೆ ಇಡೀ ಜಗತ್ತಿನಲ್ಲಿ ಕಡೇ ಪಕ್ಷ ಶೇ.40ರಷ್ಟು ಮಂದಿಗಾದರೂ ಲಸಿಕೆ ಹಾಕಬೇಕು. ಮುಂದಿನ ವರ್ಷದ ಮಧ್ಯ ಭಾಗದ ಹೊತ್ತಿಗೆ ಶೇ.70 ಗುರಿ ಸಾಧನೆ ಮಾಡಬೇಕು. ಅಲ್ಲದೇ, ಈಗಾಗಲೇ ಶೇ.70ರಷ್ಟು ಮಂದಿಗೆ ಲಸಿಕೆ ಹಾಕಿರುವ ದೇಶಗಳು, ಬಡ ದೇಶಗಳಿಗೆ ಲಸಿಕೆಯನ್ನು ಪೂರೈಕೆ ಮಾಡಬೇಕು ಎಂದು ಸಲಹೆ ನೀಡಿದೆ.

ಯೂರೋಪ್‌ನಲ್ಲಿ ಮೊದಲೇ ಬಂದಿತ್ತೇ?

ದಕ್ಷಿಣ ಆಫ್ರಿಕಾಗಿಂತಲೂ ಮೊದಲೇ ಯೂರೋಪ್‌ ದೇಶಗಳಲ್ಲಿ ಒಮಿಕ್ರಾನ್‌ ರೂಪಾಂತರಿ ಪತ್ತೆಯಾಗಿತ್ತೇ ಎಂಬ ಅನುಮಾನಗಳು ಈಗ ಸೃಷ್ಟಿಯಾಗಿವೆ. ಇಡೀ ಜಗತ್ತಿಗೆ ಹೊಸ ರೂಪಾಂತರಿ ಬಗ್ಗೆ ದಕ್ಷಿಣ ಆಫ್ರಿಕಾ ಎಚ್ಚರಿಕೆ ನೀಡುವ ಒಂದು ವಾರ ಮುಂಚೆಯೇ ಯೂರೋಪ್‌ನ ದೇಶಗಳಲ್ಲಿ ಇದು ಇತ್ತು ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ : ಅಕ್ರಮ ಕಸಾಯಿಖಾನೆಗಳ ವಿರುದ್ಧ ಕಠಿನ ಕ್ರಮ: ಹೈಕೋರ್ಟ್‌ ತಾಕೀತು

ಕೇಂದ್ರ ವರ್ಸಸ್‌ ಮಹಾರಾಷ್ಟ್ರ

ಒಮಿಕ್ರಾನ್‌ ತಡೆಗಾಗಿ ನಿಯಮ ರೂಪಿಸುವ ವಿಚಾರದಲ್ಲಿ ಕೇಂದ್ರ ಸರ್ಕಾರ ಮತ್ತು ಮಹಾರಾಷ್ಟ್ರ ಸರ್ಕಾರಗಳ ನಡುವೆ ಭಿನ್ನಾಭಿಪ್ರಾಯ ಮೂಡಿದೆ. ಕೇಂದ್ರ ಸರ್ಕಾರ, ತನ್ನ ಮಾರ್ಗಸೂಚಿಯಲ್ಲಿ ವಿದೇಶದಿಂದ ಬಂದಿದ್ದು, ಇಲ್ಲಿನ ಪರೀಕ್ಷೆ ವೇಳೆ ನೆಗೆಟೀವ್‌ ಬಂದಿದ್ದರೂ ಕಡ್ಡಾಯವಾಗಿ 14 ದಿನ ಕ್ವಾರಂಟೈನ್‌ಗೆ ಒಳಗಾಗಬೇಕು ಎಂದಿದೆ. ಆದರೆ, ಮಹಾ ಸರ್ಕಾರ ನೆಗಟೀವ್‌ ಬಂದವರು ಕೇವಲ 7 ದಿನ ಕ್ವಾರಂಟೈನ್‌ನಲ್ಲಿ ಇದ್ದರೆ ಸಾಕು ಎಂದು ಹೇಳಿದೆ. ಈ ಸಂಬಂಧ ಆರೋಗ್ಯ ಕಾರ್ಯದರ್ಶಿ ಅಜಯ್‌ ಭೂಷಣ್‌ ಮಹಾ ಸರ್ಕಾರಕ್ಕೆ ಪತ್ರ ಬರೆದು, ಕೇಂದ್ರದ ಮಾರ್ಗಸೂಚಿ ಪಾಲನೆ ಮಾಡುವಂತೆ ಹೇಳಿದ್ದಾರೆ.

ಒಮಿಕ್ರಾನ್‌ ವಿರುದ್ಧ ಕೊವ್ಯಾಕ್ಸಿನ್‌ ಪ್ರಬಲ?

ಒಮಿಕ್ರಾನ್‌ ವಿರುದ್ಧ ಹೋರಾಟ ನಡೆಸುವಲ್ಲಿ ದೇಶೀಯವಾಗಿ ತಯಾರಿಸಲಾಗಿರುವ ಕೊವ್ಯಾಕ್ಸಿನ್‌ ಶಕ್ತಿಶಾಲಿಯಾಗಿದೆ ಎಂದು ಐಸಿಎಂಆರ್‌ನ ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ. ಕೊವ್ಯಾಕ್ಸಿನ್‌ ವಿರಾಯಿನ್‌ ಲಸಿಕೆಯಾಗಿರುವುದರಿಂದ ಹೊಸ ರೂಪಾಂತರಿ ವಿರುದ್ಧ ಪ್ರಬಲವಾಗಿ ಕೆಲಸ ಮಾಡಬಹುದು. ಆದರೆ, ಉಳಿದ ಲಸಿಕೆಗಳು ಎಂಆರ್‌ಎನ್‌ಎ ವೇದಿಕೆಯಲ್ಲಿ ಸೃಷ್ಟಿಸಿದ್ದು, ಹೀಗಾಗಿ ಕೆಲಸ ಮಾಡದೇ ಇರಬಹುದು ಎಂದು ಅವರು ಹೇಳಿದ್ದಾರೆ.

ಟಾಪ್ ನ್ಯೂಸ್

1veer

IFFI 2024;ರಾಜಕೀಯ ಕಾರಣಗಳಿಂದಲೇ ಸಾವರ್ಕರ್‌ಗೆ ಸಿಗಬೇಕಾದ ಮನ್ನಣೆ ಸಿಕ್ಕಿಲ್ಲ:ರಣದೀಪ್‌ ಹೂಡಾ

1-ree

Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ

1-parm

Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ

ಶ್ರೀಮಂತ ಟೊಕಿಯೊ ಈ ದುಸ್ಥಿತಿಗೆ ತಲುಪಿದ್ಯಾಕೆ…ಈ ದೇಶವೀಗ ಸೆ*ಕ್ಸ್‌ ಟೂರಿಸಂ ಹಬ್ಬ!

ಶ್ರೀಮಂತ ಟೊಕಿಯೊ ಈ ದುಸ್ಥಿತಿಗೆ ತಲುಪಿದ್ಯಾಕೆ…ಈ ದೇಶವೀಗ ಸೆ*ಕ್ಸ್‌ ಟೂರಿಸಂ ಹಬ್ಬ!

BJP-waqf-Protest

BJP Protest: ʼ1,500 ವರ್ಷದ ಹಿಂದೆ ಅಲ್ಲಾನು ಇರಲಿಲ್ಲ ಮುಲ್ಲಾನೂ ಇರಲಿಲ್ಲʼ: ಸಿ.ಟಿ.ರವಿ

1-remo

Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ

ಇದು ಕನ್ನಡದಲ್ಲೇ ಸಿನಿಮಾಗಳನ್ನು ಮಾಡುವ ಕಾಲ: ಚಿದಾನಂದ ಎಸ್. ನಾಯಕ್

IFFI 2024: ಇದು ಕನ್ನಡದಲ್ಲೇ ಸಿನಿಮಾಗಳನ್ನು ಮಾಡುವ ಕಾಲ: ಚಿದಾನಂದ ಎಸ್. ನಾಯಕ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-remo

Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ

1-a-raga-pg

Parliament; ಪ್ರಿಯಾಂಕಾ ಗಾಂಧಿ- ರಾಹುಲ್ ಜತೆ ಸೇರಿ ಬಿಜೆಪಿ ನಿದ್ದೆಗೆಡಿಸುತ್ತಾರೆ :ಪೈಲಟ್

Goa ಕರಾವಳಿಯಲ್ಲಿ ನೌಕಾಪಡೆಯ ಸಬ್‌ ಮರೈನ್‌ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!

Goa ಕರಾವಳಿಯಲ್ಲಿ ನೌಕಾಪಡೆಯ ಸಬ್‌ ಮರೈನ್‌ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Amazon Employee: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು

Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

1veer

IFFI 2024;ರಾಜಕೀಯ ಕಾರಣಗಳಿಂದಲೇ ಸಾವರ್ಕರ್‌ಗೆ ಸಿಗಬೇಕಾದ ಮನ್ನಣೆ ಸಿಕ್ಕಿಲ್ಲ:ರಣದೀಪ್‌ ಹೂಡಾ

1-ree

Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ

1-parm

Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ

ಶ್ರೀಮಂತ ಟೊಕಿಯೊ ಈ ದುಸ್ಥಿತಿಗೆ ತಲುಪಿದ್ಯಾಕೆ…ಈ ದೇಶವೀಗ ಸೆ*ಕ್ಸ್‌ ಟೂರಿಸಂ ಹಬ್ಬ!

ಶ್ರೀಮಂತ ಟೊಕಿಯೊ ಈ ದುಸ್ಥಿತಿಗೆ ತಲುಪಿದ್ಯಾಕೆ…ಈ ದೇಶವೀಗ ಸೆ*ಕ್ಸ್‌ ಟೂರಿಸಂ ಹಬ್ಬ!

BJP-waqf-Protest

BJP Protest: ʼ1,500 ವರ್ಷದ ಹಿಂದೆ ಅಲ್ಲಾನು ಇರಲಿಲ್ಲ ಮುಲ್ಲಾನೂ ಇರಲಿಲ್ಲʼ: ಸಿ.ಟಿ.ರವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.