ಘೀಳಿಡಲು ರೆಡಿಯಾದ ಮದಗಜ; 900ಕ್ಕೂ ಹೆಚ್ಚು ಸ್ಕ್ರೀನ್‌ಗಳಲ್ಲಿ ಬಿಡುಗಡೆ

ಹಾಡುಗಳನ್ನು ರಿಲೀಸ್‌ ಮಾಡಿ ಸಿನಿಮಂದಿಯ ಗಮನ ಸೆಳೆಯುವಲ್ಲಿ ಯಶಸ್ವಿಯಾಗಿದೆ.

Team Udayavani, Dec 2, 2021, 12:16 PM IST

ಘೀಳಿಡಲು ರೆಡಿಯಾದ ಮದಗಜ; 900ಕ್ಕೂ ಹೆಚ್ಚು ಸ್ಕ್ರೀನ್‌ಗಳಲ್ಲಿ ಬಿಡುಗಡೆ

ಚಿತ್ರಮಂದಿರಗಳಲ್ಲಿ ಪೂರ್ಣ ಪ್ರಮಾಣದಲ್ಲಿ ಪ್ರೇಕ್ಷಕರ ಪ್ರವೇಶಾತಿಗೆ ಅನುಮತಿ ಸಿಕ್ಕ ನಂತರ ಕನ್ನಡ ಚಿತ್ರರಂಗದಲ್ಲಿ ಬಿಡುಗಡೆಯಾಗುವ ಸಿನಿಮಾಗಳ ಸಂಖ್ಯೆಯೂ ವಾರದಿಂದ ವಾರಕ್ಕೆ ಹೆಚ್ಚಾಗುತ್ತಿದೆ. ಕಳೆದ ಕೆಲ ವಾರಗಳಿಂದ ವಾರಕ್ಕೆ ಕನಿಷ್ಟ ಐದಾರು ಸಿನಿಮಾಗಳು ಬಿಡುಗಡೆಯಾಗುತ್ತಿದ್ದು, ಗಾಂಧಿನಗರದಲ್ಲಿ ಅತಿವೃಷ್ಟಿ ಎನಿಸುವಂತೆ ಸಿನಿಮಾಗಳು ತೆರೆಗೆ ಬರುತ್ತಿದ್ದವು. ಆದರೆ ಈ ವಾರ ಈ “ಸಿನಿಮಾ ಅತಿವೃಷ್ಟಿ’ಗೆ ಕೊಂಚ ವಿರಾಮ ಸಿಕ್ಕಿದಂತಿದೆ.

ಹೌದು, ರೋರಿಂಗ್‌ ಸ್ಟಾರ್‌ ಶ್ರೀಮುರಳಿ ಅಭಿನಯದ “ಮದಗಜ’ ಚಿತ್ರ ಈ ವಾರ ಬಿಡುಗಡೆಯಾಗುತ್ತಿರುವುದರಿಂದ, ಸದ್ಯದ ಮಟ್ಟಿಗೆ “ಮದಗಜ’ನ ಎದುರು ಬೇರೆ ಕಮರ್ಶಿಯಲ್‌ ಸಿನಿಮಾಗಳು ತಮ್ಮ ಬಿಡುಗಡೆ ಘೋಷಿಸಿ ಕೊಂಡಿಲ್ಲ.

ಹೀಗಾಗಿ, ಈ ವಾರವಿಡೀ ಸ್ಯಾಂಡಲ್‌ವುಡ್‌ನ‌ಲ್ಲಿ “ಮದಗಜ’ನ ಘೀಳಿಡುವ ಸೌಂಡ್‌ ಜೋರಾಗಿಯೇ ಇರುವುದರಲ್ಲಿ ಯಾವುದೇ ಅನುಮಾನವಿಲ್ಲ. “ಮದಗಜ’ ಚಿತ್ರದಲ್ಲಿ ಶ್ರೀಮುರಳಿ ಅವರಿಗೆ ಆಶಿಕಾ ರಂಗನಾಥ್‌ ಜೋಡಿಯಾಗಿದ್ದು, ಜಗಪತಿ ಬಾಬು, ರಂಗಾಯಣ ರಘು ಸೇರಿದಂತೆ ಬೃಹತ್‌ ತಾರಾಬಳಗ ಚಿತ್ರದಲ್ಲಿದೆ. “ಉಮಾಪತಿ ಫಿಲಂಸ್‌’ ಬ್ಯಾನರ್‌ನಲ್ಲಿ ಉಮಾಪತಿ ಶ್ರೀನಿವಾಸ ಗೌಡ ನಿರ್ಮಿಸಿರುವ “ಮದಗಜ’ ಚಿತ್ರಕ್ಕೆ ಮಹೇಶ್‌ ಕುಮಾರ್‌ ನಿರ್ದೇಶನವಿದೆ.

900ಕ್ಕೂ ಹೆಚ್ಚು ಸ್ಕ್ರೀನ್‌ಗಳಲ್ಲಿ “ಮದಗಜ’ ದರ್ಶನ: ಕಳೆದ ಕೆಲ ದಿನಗಳಿಂದ “ಮದಗಜ’ ಚಿತ್ರದ ಪ್ರಚಾರ ಕಾರ್ಯಗಳನ್ನು ಭರ್ಜರಿಯಾಗಿ ನಡೆಸುತ್ತಿರುವ ಚಿತ್ರತಂಡ, ಈಗಾಗಲೇ ಟ್ರೇಲರ್‌, ಹಾಡುಗಳನ್ನು ರಿಲೀಸ್‌ ಮಾಡಿ ಸಿನಿಮಂದಿಯ ಗಮನ ಸೆಳೆಯುವಲ್ಲಿ ಯಶಸ್ವಿಯಾಗಿದೆ. ಇದೇ ಖುಷಿಯಲ್ಲಿರುವ ಚಿತ್ರತಂಡ, ಈ ವಾರ ಚಿತ್ರವನ್ನು ಸುಮಾರು 900ಕ್ಕೂ ಹೆಚ್ಚು ಸ್ಕ್ರೀನ್‌  ಗಳಲ್ಲಿ “ಮದಗಜ’ನ ಬಿಡುಗಡೆ ಮಾಡಲು ಪ್ಲಾನ್‌ ಹಾಕಿಕೊಂಡಿದೆ.

ಮೊದಲ ವಾರದಲ್ಲಿ “ಮದಗಜ’ ಚಿತ್ರದ ಕನ್ನಡ ವರ್ಶನ್‌ ಕರ್ನಾಟಕ ಮಾತ್ರವಲ್ಲದೆ ಅಕ್ಕಪಕ್ಕದ ರಾಜ್ಯಗಳ ಪ್ರಮುಖ ನಗರಗಳಲ್ಲೂ ಬಿಡುಗಡೆಯಾಗಲಿದೆ. ಅದಾದ ಒಂದು ವಾರದ ಬಳಿಕ ತೆಲುಗು ಮತ್ತು ಇತರೆ ಭಾಷೆಗಳಲ್ಲಿ “ಮದಗಜ’ ಬಿಡುಗಡೆಯಾಗಲಿದ್ದು, ಆನಂತರ ವಿದೇಶಗಳಲ್ಲೂ ಚಿತ್ರದ ಬಿಡುಗಡೆಗೆ ಚಿತ್ರತಂಡ ಯೋಜಿಸಿದೆ. ಈಗಾಗಲೇ “ಮದಗಜ’ ಚಿತ್ರದ ವಿತರಣೆ, ಸ್ಯಾಟಲೈಟ್‌ ಮತ್ತಿತರ ರೈಟ್ಸ್‌ಗಳು ದೊಡ್ಡ ಮಟ್ಟಕೆ ಸೇಲ್‌ ಆಗಿದ್ದು, ಚಿತ್ರದ ಮೇಲೆ ಸಹಜವಾಗಿಯೇ ಗಾಂಧಿನಗರದಲ್ಲಿ ಒಂದಷ್ಟು ನಿರೀಕ್ಷೆ ಗರಿಗೆದರಿದೆ.

ಟಾಪ್ ನ್ಯೂಸ್

4

BBK11: ಮುಖವಾಡ ಬಯಲು ಮಾಡುತ್ತೇವೆ..ಆರಂಭದಲ್ಲೇ ರೊಚ್ಚಿಗೆದ್ದ ವೈಲ್ಡ್‌ ಕಾರ್ಡ್‌ ಸ್ಪರ್ಧಿಗಳು

Bengaluru: ಎಸ್‌ಎಸ್‌ಎಲ್‌ಸಿ ಫೇಲ್‌ ಆಗಿದ್ದಕ್ಕೆ ಭುವನೇಶ್ವರಿ ವಿಗ್ರಹ ವಿರೂಪಗೊಳಿಸಿದ ಯುವಕ

Bengaluru: ಎಸ್‌ಎಸ್‌ಎಲ್‌ಸಿ ಫೇಲ್‌ ಆಗಿದ್ದಕ್ಕೆ ಭುವನೇಶ್ವರಿ ವಿಗ್ರಹ ವಿರೂಪಗೊಳಿಸಿದ ಯುವಕ

Fraud: ಡ್ರಗ್ಸ್ ಕೇಸ್‌ ಹೆಸರಲ್ಲಿ ಟೆಕಿಗೆ ಬೆದರಿಸಿ 40 ಲಕ್ಷ ವಂಚನೆ

Fraud: ಡ್ರಗ್ಸ್ ಕೇಸ್‌ ಹೆಸರಲ್ಲಿ ಟೆಕಿಗೆ ಬೆದರಿಸಿ 40 ಲಕ್ಷ ವಂಚನೆ

Bengaluru Krishi Mela: ಜಿಕೆವಿಕೆ ಕೃಷಿ ಮೇಳಕ್ಕೆ 34.13 ಲಕ್ಷ  ಜನರ ಭೇಟಿ

Bengaluru Krishi Mela: ಜಿಕೆವಿಕೆ ಕೃಷಿ ಮೇಳಕ್ಕೆ 34.13 ಲಕ್ಷ  ಜನರ ಭೇಟಿ

Employaement

Mangaluru: ಕೇರಳ ಏಜೆನ್ಸಿಯಿಂದ ಇಸ್ರೇಲ್‌ನಲ್ಲಿ ಉದ್ಯೋಗದ ಆಮಿಷ

Hy[per–sonic

Army Wepon: ಭಾರತದ ಬತ್ತಳಿಕೆಗೆ ದೇಸಿ ಹೈಪರ್‌ಸಾನಿಕ್‌ ಅಸ್ತ್ರ !

Manipur

Mobs Storm: ಮಣಿಪುರದಲ್ಲಿ ಭುಗಿಲೆದ್ದ ಹಿಂಸಾಚಾರ!, ಮೈತೇಯಿ ಸಮುದಾಯದಿಂದ ಭಾರೀ ಪ್ರತಿಭಟನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

rai

BBK11: ಇಷ್ಟು ಬೇಗ ಬರುತ್ತೇನೆ ಅನ್ಕೊಂಡಿರಲಿಲ್ಲ- ಬಿಗ್ ಬಾಸ್ ಜರ್ನಿ ಮುಗಿಸಿದ ಅನುಷಾ

Kantara Chapter 1: ರಿಷಬ್‌ ಶೆಟ್ಟಿ ʼಕಾಂತಾರ ಚಾಪ್ಟರ್‌ -1ʼ ರಿಲೀಸ್ ಗೆ ಡೇಟ್‌ ಪಿಕ್ಸ್

Kantara Chapter 1: ರಿಷಬ್‌ ಶೆಟ್ಟಿ ʼಕಾಂತಾರ ಚಾಪ್ಟರ್‌ -1ʼ ರಿಲೀಸ್ ಗೆ ಡೇಟ್‌ ಫಿಕ್ಸ್

Kinnal raj; ʼಸಿಂಹರೂಪಿಣಿʼಗೆ 25ರ ಸಂಭ್ರಮ

Kinnal raj; ʼಸಿಂಹರೂಪಿಣಿʼಗೆ 25ರ ಸಂಭ್ರಮ

101

Daali Dhananjay: ಸರಳವಾಗಿ ನೆರವೇರಿತು ಡಾಲಿ – ಧನ್ಯತಾ ನಿಶ್ಚಿತಾರ್ಥ

ರಿಲೀಸ್‌ ಅಖಾಡಕ್ಕೆ ಚಿಕ್ಕಣ್ಣನ ʼಫಾರೆಸ್ಟ್ʼ

Forest: ರಿಲೀಸ್‌ ಅಖಾಡಕ್ಕೆ ಚಿಕ್ಕಣ್ಣನ ʼಫಾರೆಸ್ಟ್ʼ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

4

BBK11: ಮುಖವಾಡ ಬಯಲು ಮಾಡುತ್ತೇವೆ..ಆರಂಭದಲ್ಲೇ ರೊಚ್ಚಿಗೆದ್ದ ವೈಲ್ಡ್‌ ಕಾರ್ಡ್‌ ಸ್ಪರ್ಧಿಗಳು

Bengaluru: ಎಸ್‌ಎಸ್‌ಎಲ್‌ಸಿ ಫೇಲ್‌ ಆಗಿದ್ದಕ್ಕೆ ಭುವನೇಶ್ವರಿ ವಿಗ್ರಹ ವಿರೂಪಗೊಳಿಸಿದ ಯುವಕ

Bengaluru: ಎಸ್‌ಎಸ್‌ಎಲ್‌ಸಿ ಫೇಲ್‌ ಆಗಿದ್ದಕ್ಕೆ ಭುವನೇಶ್ವರಿ ವಿಗ್ರಹ ವಿರೂಪಗೊಳಿಸಿದ ಯುವಕ

Fraud: ಡ್ರಗ್ಸ್ ಕೇಸ್‌ ಹೆಸರಲ್ಲಿ ಟೆಕಿಗೆ ಬೆದರಿಸಿ 40 ಲಕ್ಷ ವಂಚನೆ

Fraud: ಡ್ರಗ್ಸ್ ಕೇಸ್‌ ಹೆಸರಲ್ಲಿ ಟೆಕಿಗೆ ಬೆದರಿಸಿ 40 ಲಕ್ಷ ವಂಚನೆ

Bengaluru Krishi Mela: ಜಿಕೆವಿಕೆ ಕೃಷಿ ಮೇಳಕ್ಕೆ 34.13 ಲಕ್ಷ  ಜನರ ಭೇಟಿ

Bengaluru Krishi Mela: ಜಿಕೆವಿಕೆ ಕೃಷಿ ಮೇಳಕ್ಕೆ 34.13 ಲಕ್ಷ  ಜನರ ಭೇಟಿ

Employaement

Mangaluru: ಕೇರಳ ಏಜೆನ್ಸಿಯಿಂದ ಇಸ್ರೇಲ್‌ನಲ್ಲಿ ಉದ್ಯೋಗದ ಆಮಿಷ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.