ಏಡ್ಸ್ ನಿಯಂತ್ರಣಕ್ಕೆ ಸರ್ಕಾರಿ ಯೋಜನೆ ಸಹಕಾರಿ
ಚಿಕಿತ್ಸೆಗಳ ಬಗ್ಗೆ ಸರಿಯಾದ ಅರಿವು, ಮಾಹಿತಿ ಲಭ್ಯವಾಗುತ್ತಿದೆ.
Team Udayavani, Dec 2, 2021, 6:06 PM IST
ವಿಜಯಪುರ: ಜಾಗತಿಕ ಸಮಸ್ಯೆಯಾಗಿ ಕಾಡುತ್ತಿರುವ ಎಚ್‌ಐವಿ ಸೋಂಕು ಹಾಗೂ ಏಡ್ಸ್ ರೋಗ ನಿಯಂತ್ರಣಕ್ಕೆ ಎಲ್ಲರೂ ಶ್ರಮಿಸಬೇಕಿದೆ. ಸರ್ಕಾರ ಈ ಮಾರಕ ರೋಗ ಪ್ರಮಾಣ ಕುಗ್ಗಿಸಲು ರೂಪಿಸಿರುವ ಕಾರ್ಯಕ್ರಮಗಳನ್ನು ಸದ್ಬಳಕೆ ಮಾಡಿಕೊಂಡಲ್ಲಿ ಸೋಂಕು ಹರಡುವಿಕೆ ತಡೆಯಲು ಸಾಧ್ಯ ಎಂದು ಜಿಲ್ಲಾ ಧಿಕಾರಿ ಸುನೀಲಕುಮಾರ ಹೇಳಿದರು.
ಬುಧವಾರ ನಗರದ ಕಂದಗಲ್ ಹನುಮಂತರಾಯ ರಂಗಮಂದಿರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ನಿಯಂತ್ರಣ ಘಟಕ, ಸ್ವಯಂ ಸೇವಾ ಸಂಘ ಸಂಸ್ಥೆಗಳು, ಎನ್‌ಎಸ್‌ಎಸ್ ಘಟಕಗಳು, ರೆಡ್ ರಿಬ್ಬನ್ ಕ್ಲಬ್‌ಗಳ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ವಿಶ್ವ ಏಡ್ಸ್ ದಿನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು, ಸೋಂಕಿನ ಬಗ್ಗೆ ಸರ್ಕಾರ ಕೈಗೊಂಡಿರುವ ವಿವಿಧ ಕಾರ್ಯಕ್ರಮಗಳ ಮೂಲಕ ಇತ್ತೀಚಿಗೆ ಇದರ ಸಂಖ್ಯೆಯಲ್ಲಿ ಬಹಳ ಇಳಿಮುಖ ಕಂಡು ಬರುತ್ತಿದೆ ಎಂದರು.
ಪ್ರಸಕ್ತ ವರ್ಷದಲ್ಲಿ ಅಸಮಾನತೆಗಳನ್ನು ಕೊನೆಗೊಳಿಸಿ, ಏಡ್ಸ್‌ನ್ನು ಕೊನೆಗೊಳಿಸಿ, ಸಾಂಕ್ರಾಮಿಕ ರೋಗಗಳನ್ನು ಕೊನೆಗೊಳಿಸಿ ಎಂಬ ಘೋಷ ವಾಕ್ಯದೊಂದಿಗೆ ಏಡ್ಸ್ ದಿನಾಚರಣೆ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ. ಏಡ್ಸ್ ರೋಗ ನಿಯಂತ್ರಿಸುವಲ್ಲಿ ಸರ್ಕಾರ ರೂಪಿಸಿರುವ ಅನೇಕ ಕಾರ್ಯಕ್ರಮಗಳು ಸಕಾರಾತ್ಮ ಪರಿಣಾಮ ನೀಡುತ್ತಿವೆ. ಇದರ ಬಗೆಗಿನ ಸೂಕ್ತ ಅರಿವು ಹಾಗೂ ಮಾಹಿತಿಯಿಂದಾಗಿ ಸೋಂಕಿನ ಪ್ರಮಾಣದಲ್ಲಿ ಗಣನೀಯ ಇಳಿಮುಖ ಕಂಡು ಬರುತ್ತಿದೆ. ಇದರ ಬಗ್ಗೆ ಜನರಲ್ಲೂ ಸರಿಯಾದ ಅರಿವು ಉಂಟಾಗುತ್ತಿದ್ದು, ಈಚೆಗೆ ಸೋಂಕಿತ ಗರ್ಭಿಣಿಯರಿಂದ ಅವರ ಮಕ್ಕಳಿಗೂ ಹರಡುತ್ತಿಲ್ಲ ಎಂದು ವಿವರಿಸಿದರು.
ಸರ್ಕಾರ ಹಾಗೂ ಆರೋಗ್ಯ ಇಲಾಖೆಯ ಪ್ರಾಮಾಣಿಕ ಪ್ರಯತ್ನದಿಂದಾಗಿ ಜನರಿಗೆ ಇದರ ಬಗ್ಗೆ ಬಹಳ ಜಾಗೃತಿ ಉಂಟಾಗಿದೆ. ಜನರಿಗೆ ಈ ರೋಗದ ಕಾರಣ ಹಾಗೂ ಚಿಕಿತ್ಸೆಗಳ ಬಗ್ಗೆ ಸರಿಯಾದ ಅರಿವು, ಮಾಹಿತಿ ಲಭ್ಯವಾಗುತ್ತಿದೆ. ಸೋಂಕಿತರು ಇದರ ಬಗ್ಗೆ ಈ ಹಿಂದೆ ಸಮಾಜದಲ್ಲಿದ್ದ ಸಂಕೋಚ ಪರಿಸ್ಥಿತಿ ಈಗಿಲ್ಲ. ಧೈರ್ಯದಿಂದ ಮುಂದೆ ಬಂದು ಚಿಕಿತ್ಸೆ ಪಡೆದು, ಆರೋಗ್ಯಯುತ ಜೀವನ ಶೈಲಿಯಿಂದ ತಮ್ಮ ಜೀವನಮಟ್ಟ ಸುಧಾರಿಸಿಕೊಳ್ಳುತ್ತಿದ್ದಾರೆ ಎಂದು ಅವರು ತಿಳಿಸಿದರು.
ಅದರಂತೆ ಆರೋಗ್ಯ ಇಲಾಖೆ ಹಾಗೂ ಸಂಬಂಧಪಟ್ಟ ಸಂಘ, ಸಂಸ್ಥೆಗಳು, ವಾಹನಗಳ ಚಾಲಕರು ಸೇರಿದಂತೆ ಪತ್ತೆಯಿಂದ ಹೊರಗುಳಿದಿರುವ ಸೋಂಕಿತರನ್ನು ಗುರುತಿಸಿ, ಅವರಿಗೆ ಸೂಕ್ತ ಅರಿವು ಹಾಗೂ ಚಿಕಿತ್ಸೆ ನೀಡುವ ಕೆಲಸ ಮಾಡಬೇಕು. ಇದರಿಂದ ಸೋಂಕು ಅವರ ಕುಟುಂಬದವರಿಗೆ ಹರಡದಂತೆ ನೋಡಿಕೊಳ್ಳಬಹುದು. ಸೋಂಕಿತರಿಗೆ ಸರ್ಕಾರದಿಂದ ಸಿಗುವ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡುವ ಕೆಲಸವೂ ಆಗಬೇಕು ಎಂದರು.
ಇದೇ ಸಂದರ್ಭದಲ್ಲಿ ಜಿಲ್ಲೆಯಲ್ಲಿ ಏಡ್ಸ್ ರೋಗವನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಉತ್ತಮ ಕಾರ್ಯ ಮಾಡಿದ ಆರೋಗ್ಯ ಇಲಾಖೆ ಅಧಿಕಾರಿಗಳು, ಸಿಬ್ಬಂದಿಗಳು ಹಾಗೂ ಸಂಘ, ಸಂಸ್ಥೆಗಳ ಪದಾ ಧಿಕಾರಿಗಳನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಜಿಪಂ ಸಿಇಒ ಗೋವಿಂದರೆಡ್ಡಿ, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಖ್ಯಾತ ಜಾನಪದ ಕಲಾವಿದ ಸಿದ್ದಪ್ಪ ಬಿದರಿ, ಮಹಾನಗರ ಪಾಲಿಕೆ ಆಯುಕ್ತ ವಿಜಯಕುಮಾರ ಮೆಕ್ಕಳಕಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಕೆ.ಕೆ ಚವ್ಹಾಣ, ಜಿಲ್ಲಾ ಆಸ್ಪತ್ರೆ ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ| ಎಸ್.ಎಲ್. ಲಕ್ಕಣ್ಣವರ, ಡಾ| ರಾಜೇಶ ಹೊನ್ನುಟಗಿ, ಪೀಟರ್ ಅಲೆಕ್ಸಾಂಡರ್,ಗಂಗಯ್ಯ ಹಿರೇಮಠ, ಜಿಲ್ಲಾ ಏಡ್ಸ್ ಮತ್ತು ಕ್ಷಯರೋಗ ನಿಯಂತ್ರಣ ಘಟಕದ ಜಿಲ್ಲಾ ಕಾರ್ಯಕ್ರಮ ಅಧಿಕಾರಿ ಡಾ| ಈರಣ್ಣ ಧಾರವಾಡಕರ ಸೇರಿದಂತೆ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nalatawad: ವಿದ್ಯುತ್ ಶಾಕ್ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ
Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ
By Election: ಮೂರು ಕ್ಷೇತ್ರದಲ್ಲೂ ಬಿಜೆಪಿ ಸೋತಿದ್ದಕ್ಕೆ ಟಿವಿಯನ್ನೇ ಒಡೆದು ಹಾಕಿದ ಮುಖಂಡ!
Vijayapura: 22 ಲಕ್ಷ ರೂ.ಮೌಲ್ಯದ ಗಾಂಜಾ ಜಪ್ತಿ, 2 ಕಾರು ವಶಕ್ಕೆ ಪಡೆದ ಪೊಲೀಸರು
Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Dr.Veerendra Heggade: ಡಾ.ಡಿ.ವೀರೇಂದ್ರ ಹಗ್ಗಡೆಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ ಪ್ರಶಸ್ತಿ
Sambhal Case Follow Up:ಹೊರಗಿನವರಿಗೆ ಸಂಭಾಲ್ ಪ್ರವೇಶಕ್ಕೆ ನಿರ್ಬಂಧ,ಜಲ್ಲಿ ಮಾರಾಟ ನಿಷೇಧ
Kannappa Movie: ವಿಷ್ಣು ಮಂಚು ʼಕಣ್ಣಪ್ಪʼ ರಿಲೀಸ್ಗೆ ಡೇಟ್ ಫಿಕ್ಸ್
BGT 2024: ಪರ್ತ್ ನಲ್ಲಿ ಪಲ್ಟಿ ಹೊಡೆದ ಆಸೀಸ್: ಬುಮ್ರಾ ಪಡೆಗೆ ಮೊದಲ ಪಂದ್ಯದಲ್ಲಿ ಜಯ
IFFI 2024: ಅಜ್ಜನ ಸಿನಿಮಾಗಳು ಡಿಸೆಂಬರ್ ನಲ್ಲಿ ಚಿತ್ರಮಂದಿರದಲ್ಲಿ ಬಿಡುಗಡೆ: ರಣಬೀರ್ ಕಪೂರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.