ಪರಿಷತ್ ಚುನಾವಣೆ:”ಮತ ಬೇಟೆ’ ಆರಂಭಿಸಿದ ದಳಪತಿಗಳು
Team Udayavani, Dec 3, 2021, 6:10 AM IST
ಬೆಂಗಳೂರು: ಬೆಂಗಳೂರು: ವಿಧಾನಪರಿಷತ್ ಚುನಾವಣೆಗೆ ರಾಜಕೀಯ ಪಕ್ಷಗಳ “ಮತ ಬೇಟೆ’ ಚುರಕು ಪಡೆದುಕೊಂಡಿದ್ದು, ಅದರಂತೆ, ದಳಪತಿಗಳು ಜೆಡಿಎಸ್ ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರ ಕಣಕ್ಕೆ ಧುಮುಕಿದ್ದಾರೆ.
ದೆಹಲಿಯಿಂದ ಬಂದ ಮಾಜಿ ಪ್ರಧಾನಿ ದೇವೇಗೌಡರು ಗುರುವಾರ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟದಲ್ಲಿ ಪ್ರಚಾರಕ್ಕೆ ಚಾಲನೆ ನೀಡಿ, ಪಕ್ಷದ ಅಭ್ಯರ್ಥಿ ಗೆಲ್ಲಿಸಿಕೊಂಡು ಬರಬೇಕು ಎಂದು ಹೇಳಿದರು.
ನಾಳೆ ತುಮಕೂರಿನಲ್ಲಿ ಅದೇ ರೀತಿ ನಂತರ ಡಿ.5 ರಂದು ಮಂಡ್ಯದಲ್ಲಿ ಪ್ರಚಾರ ನಡೆಸಲಿರುವ ದೇವೇಗೌಡರು ಬಳಿಕ ಹಾಸನ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ ಡಾ. ಸೂರಜ್ ರೇವಣ್ಣ ಪರ ಪ್ರಚಾರ ನಡೆಸಲಿದ್ದಾರೆ.
ಇದೇ ವೇಳೆ ಕಳೆದ ಎರಡು-ಮೂರು ದಿನಗಳಿಂದ ಬಿಡದಿಯ ತೋಟದ ಮನೆಯಲ್ಲಿ ಬೀಡು ಬಿಟ್ಟಿರುವ ಎಚ್.ಡಿ. ಕುಮಾರಸ್ವಾಮಿ ಬೆಂಗಳೂರು ಗ್ರಾಮಾಂತರ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಶಾಸಕರು, ಮುಖಂಡರು ಹಾಗೂ ಕಾರ್ಯಕರ್ತರೊಂದಿಗೆ ಸರಣಿ ಚರ್ಚೆಗಳನ್ನು ನಡೆಸಿದ್ದಾರೆ. ಒಂದೆರಡು ದಿನಗಳ ಬಳಿಕ ಕುಮಾರಸ್ವಾಮಿಯವರೂ ಸಹ ಪೂರ್ಣ ಪ್ರಮಾಣದಲ್ಲಿ ಪ್ರಚಾರದಲ್ಲಿ ತೊಡಗಿಸಿಕೊಳ್ಳಲಿದ್ದಾರೆ ಎಂದು ಹೇಳಲಾಗಿದೆ.
ಇದನ್ನೂ ಓದಿ:ಒಮಿಕ್ರಾನ್ ; ಆರೂ ಮಂದಿಯ ಮೇಲೆ ನಿಗಾ ಇಟ್ಟಿದ್ದೇವೆ: ಸಚಿವ ಡಾ.ಸುಧಾಕರ್
ದೇವೇಗೌಡರು ಹಾಸನ ಮತ್ತು ಮಂಡ್ಯ ಕ್ಷೇತ್ರಕ್ಕೆ ಹೆಚ್ಚಿನ ಗಮನ ಕೊಟ್ಟರೆ, ಕುಮಾರಸ್ವಾಮಿಯವರು ಬೆಂಗಳೂರು ಗ್ರಾಮಾಂತರ, ಕೋಲಾರ, ಮೈಸೂರು ಮತ್ತು ತುಮಕೂರು ಕ್ಷೇತ್ರಗಳಲ್ಲಿ ಹೆಚ್ಚಾಗಿ ಸಂಚರಿಸಲಿದ್ದಾರೆ ಎಂದು ಹೇಳಲಾಗಿದೆ. ಈಗಾಗಲೇ ಜೆಡಿಎಸ್ ಅಭ್ಯರ್ಥಿಗಳು ಕಣದಲ್ಲಿರುವ 6 ಕ್ಷೇತ್ರಗಳಲ್ಲಿ ಸ್ಥಳೀಯ ಶಾಸಕರು ಮತ್ತು ಮುಖಂಡರು ಪಂಚಾಯಿತಿ ಮತ್ತು ನಗರ ಸ್ಥಳೀಯ ಸಂಸ್ಥೆಗಳ ಚುನಾಯಿತ ಸದಸ್ಯರೊಂದಿಗೆ ಸಭೆಗಳನ್ನು ನಡೆಸಿದ್ದಾರೆ.
“ಬಿಜೆಪಿಗೆ ಬೆಂಬಲ ನೀಡುವ ಬಗ್ಗೆ ಇನ್ನರಡು ದಿನಗಳಲ್ಲಿ ಅಂತಿಮ ತೀರ್ಮಾನ ಆಗಲಿದೆ. ಪಕ್ಷ ಸ್ಪರ್ಧಿಸಿರುವ ಎಲ್ಲಾ ಕ್ಷೇತ್ರಗಳಲ್ಲಿ ದೇವೇಗೌಡ, ಕುಮಾರಸ್ವಾಮಿಯವರು ಪ್ರಚಾರ ನಡೆಸಲಿದ್ದಾರೆ. ಜೆಡಿಎಸ್ ಅಭ್ಯರ್ಥಿಗಳು ಸ್ಪರ್ಧಿಸಿರುವ ಎಲ್ಲಾ 6 ಕ್ಷೇತ್ರಗಳಲ್ಲೂ ಪಕ್ಷ ಗೆಲ್ಲಲಿದೆ.’
– ಟಿ.ಎ. ಶರವಣ, ಜೆಡಿಎಸ್ ಮಾಜಿ ವಿಧಾನಪರಿಷತ್ ಸದಸ್ಯ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yadgir: ಅಪ್ರಾಪ್ತೆ ಮೇಲೆ ಅತ್ಯಾಚಾರ… ಪ್ರಕರಣ ದಾಖಲು
ಬೈಲಹೊಂಗಲ: ಜ್ಞಾನೇಶ್ವರ ಮುನಿ ಮಹಾರಾಜರು ಸಮಾಧಿ ಮರಣ
Online Discussion: ಶಿಕ್ಷಣ ಮಂತ್ರಿಗೆ ಕನ್ನಡ ಬರಲ್ಲ ಎಂದ ವಿದ್ಯಾರ್ಥಿ, ಮಧು ಬಂಗಾರಪ್ಪ ಗರಂ
ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ
ರಾಜ್ಯದ ರೈತರಿಗೆ ಕೇಂದ್ರ ಸರ್ಕಾರದಿಂದ ಭಾರಿ ಅನ್ಯಾಯವಾಗಿದೆ: ದಿನೇಶ್ ಗುಂಡೂರಾವ್
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.