ಗ್ರಾಪಂಗಳಿಗೆ ಚುನಾವಣೆ ಘೋಷಣೆ
Team Udayavani, Dec 3, 2021, 1:16 PM IST
ದೇವನಹಳ್ಳಿ: ರಾಜ್ಯ ಚುನಾವಣಾ ಆಯೋಗವು ಜೂನ್ ಮಾಹೆಯಿಂದ 2022ರ ಮಾರ್ಚ್ ಮಾಹೆಯವರೆಗೆ ಅವಧಿ ಮುಕ್ತಾಯವಾಗಲಿರುವ ಗ್ರಾಪಂಗಳಿಗೆ ಸಾರ್ವತ್ರಿಕ ಚುನಾವಣೆ ಹಾಗೂ ಗ್ರಾಪಂಗಳಲ್ಲಿ ವಿವಿಧ ಕಾರಣಗಳಿಂದ ಖಾಲಿ ಇರುವ/ ತೆರವಾಗಿರುವ ಸ್ಥಾನಗಳಿಗೆ ಉಪ ಚುನಾವಣೆಯನ್ನು ನಡೆಸಲು ವೇಳಾಪಟ್ಟಿಯನ್ನು ಘೋಷಿಸಿದೆ ಎಂದು ಬೆಂ. ಗ್ರಾಮಾಂತರ ಜಿಲ್ಲಾಧಿಕಾರಿ ಹಾಗೂ ಚುನಾವಣಾಧಿಕಾರಿ ಕೆ.ಶ್ರೀನಿವಾಸ್ ತಿಳಿಸಿದರು.
ತಾಲೂಕಿನ ಬೀರಸಂದ್ರ ಗ್ರಾಮದ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಅವಧಿ ಮುಕ್ತಾಯವಾಗುವ ಗ್ರಾಪಂಗಳಾದ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲೂಕಿನ ಅರಳುಮಲ್ಲಿಗೆ ಗ್ರಾಪಂನ 18 ಸದಸ್ಯ ಸ್ಥಾನಗಳು, ದರ್ಗಾಜೋಗಿಹಳ್ಳಿಯ ಗ್ರಾಪಂನ 24 ಸದಸ್ಯ ಸ್ಥಾನಗಳು ಹಾಗೂ ದೇವನಹಳ್ಳಿ ತಾಲೂಕಿನ ಚನ್ನರಾಯಪಟ್ಟಣ ಗ್ರಾಪಂನ 15 ಸದಸ್ಯ ಸ್ಥಾನಗಳು, ನಲ್ಲೂರು ಗ್ರಾಪಂನ 15 ಸದಸ್ಯ ಸ್ಥಾನಗಳಿಗೆ ಸಾರ್ವತ್ರಿಕ ಚುನಾವಣೆ ನಡೆಯಲಿದೆ ಎಂದು ಹೇಳಿದರು.
ಇದನ್ನೂ ಓದಿ;-ಜೋಯಿಡಾ: ಮಳೆಯಿಂದಾಗಿ ಅಪಾರ ಭತ್ತದ ಬೆಳೆ ಹಾನಿ
ಸಾರ್ವತ್ರಿಕ ಚುನಾವಣೆಯಲ್ಲಿ ಸದಸ್ಯರು ಆಯ್ಕೆಯಾಗದ (ನ್ಯಾಯಾಲಯ ಪ್ರಕರಣ,ಇತರೆ ಕಾರಣಗಳಿಗಾಗಿ) ಪೂರ್ಣ ಗ್ರಾಪಂ ಆದ ನೆಲಮಂಗಲ ತಾಲೂಕಿನ ತ್ಯಾಮಗೊಂಡ್ಲು ಗ್ರಾಪಂನ 21 ಸದಸ್ಯ ಸ್ಥಾನಗಳು ಹಾಗೂ 2021ನೇ ಸಾಲಿನಲ್ಲಿ ವಿವಿಧ ಕಾರಣಗಳಿಂದ ತೆರವಾಗಿರುವ ದೊಡ್ಡಬಳ್ಳಾಪುರ ತಾಲೂಕಿನ 15-ತಿಪ್ಪೂರು ಗ್ರಾಪಂ, ಹೊಸಕೋಟೆ ತಾಲೂಕಿನ 14-ಕುಂಬಳಹಳ್ಳಿ, 21-ದೇವನಗುಂದಿ ಹಾಗೂ 26-ಮುತ್ಸಂದ್ರ ಗ್ರಾಪಂಗಳ ತಲಾ 1 ಸದಸ್ಯ ಸ್ಥಾನಕ್ಕೆ ಉಪ ಚುನಾವಣೆ ನಡೆಯಲಿದೆ ಎಂದು ಮಾಹಿತಿ ನೀಡಿದರು.
ಚುನಾವಣಾ ವೇಳಾಪಟ್ಟಿಯಂತೆ ಡಿ. 13ರಂದು ಬೆಂ. ಗ್ರಾಮಾಂತರ ಜಿಲ್ಲಾಧಿಕಾರಿಗಳು ಚುನಾವಣಾ ಅಧಿಸೂಚನೆಯನ್ನು ಹೊರಡಿಸಲಿದ್ದಾರೆ. ಡಿ. 17ರಂದು ನಾಮಪತ್ರಗಳನ್ನು ಸಲ್ಲಿಸಲು ಕೊನೆಯ ದಿನವಾಗಿರುತ್ತದೆ. ಡಿ. 18ರಂದು ನಾಮಪತ್ರಗಳನ್ನು ಪರಿಶೀಲಿಸಲಾಗುವುದು. ಡಿ. 20ರಂದು ಉಮೇದುವಾರಿಕೆಗಳನ್ನು ಹಿಂತೆಗೆದುಕೊಳ್ಳಲು ಕೊನೆಯ ದಿನವಾಗಿದೆ.
ಡಿ. 27ರಂದು ಮತದಾನ ಅವಶ್ಯವಿದ್ದರೆ ಬೆಳಗ್ಗೆ 7:00 ಗಂಟೆಯಿಂದ ಸಂಜೆ 5:00 ಗಂಟೆಯವರೆಗೆ ಮತದಾನ ನಡೆಯಲಿದೆ. ಡಿ. 29ರಂದು ಮರು ಮತದಾನ ಅವಶ್ಯವಿದ್ದರೆ, ಬೆಳಗ್ಗೆ 7:00 ಗಂಟೆಯಿಂದ ಸಂಜೆ 5:00 ಗಂಟೆಯವರೆಗೆ ಮರುಮತದಾನ ನಡೆಯಲಿದೆ. ಡಿ. 30ರ ದಂದು ತಾಲೂಕು ಕೇಂದ್ರಗಳಲ್ಲಿ ಬೆಳಗ್ಗೆ 8:00 ಗಂಟೆಯಿಂದ ಮತಗಳ ಏಣಿಕೆ ಕಾರ್ಯ ನಡೆಯಲಿದ್ದು, ಡಿ. 30ರಂದು ನೀತಿ ಸಂಹಿತೆ ಮುಕ್ತಾಯವಾಗಲಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thirthahalli: ತುಂಗಾ ಕಮಾನು ಸೇತುವೆ ಕೆಳಗೆ ಅಸ್ತಿ ಪಂಜರ ಪತ್ತೆ
RBI ಗವರ್ನರ್ ಶಕ್ತಿಕಾಂತ್ ದಾಸ್ ಚೆನ್ನೈ ಆಸ್ಪತ್ರೆಗೆ ದಾಖಲು; ಶೀಘ್ರವೇ ಡಿಸ್ ಚಾರ್ಜ್
Mundargi: ಲಾರಿ ಹರಿದು 12 ಕುರಿಗಳು ಸಾವು; 30 ಕುರಿಗಳು ಗಂಭೀರ ಗಾಯ
Belthangady: ಈ ಪುಟ್ಟ ಪೋರನಿಗಿದೆ 300 ವಿದೇಶಿ ಹಣ್ಣಿನ ಗಿಡ ಪರಿಚಯ!
Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.