ಮೂವರಿಗೆ ಕೊರೊನಾ: ಮೂರು ಶಾಲೆಗಳಿಗೆ ರಜೆ
Team Udayavani, Dec 3, 2021, 2:41 PM IST
Representative Image used
ಗುಂಡ್ಲುಪೇಟೆ: ತಾಲೂಕಿನ ಮೂರು ಸರ್ಕಾರಿ ಶಾಲೆಯಲ್ಲಿ ತಲಾ ಒಬ್ಬ ವಿದ್ಯಾರ್ಥಿಗೆ ಕೊರೊನಾ ಪಾಸಿಟಿವ್ ಬಂದಿದ್ದು, ಮೂರು ಶಾಲೆಗಳಿಗೂ 2 ದಿನ ರಜೆ ನೀಡಲಾಗಿದೆ.
ತಾಲೂಕಿನ ಹಕ್ಕಲಪುರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ತೆರಕಣಾಂಬಿ ಮೊರಾರ್ಜಿ ದೇಸಾಯಿ ವಸತಿ ಶಾಲೆ ಹಾಗೂ ಗುಂಡ್ಲುಪೇಟೆ ಪಟ್ಟಣದ ಸರ್ಕಾರಿ ಬಾಲಕಿಯರ ಪ್ರೌಢಶಾಲೆಯ ಓರ್ವ ವಿದ್ಯಾರ್ಥಿಗೆ ಕೊರೊನಾ ಸೋಂಕು ದೃಢಪಟ್ಟಿದೆ.
ಈ ಮೂರು ಸರ್ಕಾರಿ ಶಾಲೆಗಳಿಗೂ ಎರಡು ದಿನಗಳ ಕಾಲ ರಜೆ ಘೋಷಿಸಲಾಗಿದ್ದು, ಶಾಲೆಯ ಎಲ್ಲಾ ಮಕ್ಕಳಿಗೂ ಆರ್‌ಟಿ ಪಿಸಿಆರ್ ಪರೀಕ್ಷೆಯನ್ನು ವೈದ್ಯರು ನಡೆಸಿದ್ದಾರೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ಸಿ.ಶಿವಮೂರ್ತಿ ತಿಳಿಸಿದರು.
ಇದನ್ನೂ ಓದಿ:- ಅಖಾಡದಲ್ಲಿ ಕಾಂಚಣ ಬಲ, ವಾಗ್ಯುದ್ಧ, ಕೆಸರೆರೆಚಾಟ
ಮಕ್ಕಳ ಆರ್‌ಟಿಪಿಸಿಆರ್ ಟೆಸ್ಟ್‌ನ ವರದಿ ಬರುವ ತನಕ ಶಾಲೆ ಬಂದ್ ಮಾಡಲಾಗಿದೆ. ಅಲ್ಲದೆ ಮೂರು ಶಾಲೆಗಳಿಗೂ ಸ್ಯಾನಿಟೈಸ್ ಮಾಡಲಾಗುತ್ತಿದೆ ಎಂದರು. ಕಳೆದ 3 ದಿನಗಳಿಂದ ತಾಲೂಕಿನ ಕೊಡಗಾಪುರ ಶಾಲೆಯ ಇಬ್ಬರು ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ಕಾಣಿಸಿಕೊಂಡ ಹಿನ್ನೆಲೆ ಇತರೆ ಮಕ್ಕಳಿಗೆ ಟೆಸ್ಟ್ ನೆಗಟಿವ್ ಬಂದಿದೆ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Nara Ramamurthy: ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಸಹೋದರ ನಾರಾ ರಾಮಮೂರ್ತಿ ನಾಯ್ಡು ನಿಧನ
Actor Darshan ವಿರುದ್ದ ಸುಪ್ರೀಂನಲ್ಲಿ ಮೇಲ್ಮನವಿ: ಬೆಂಗ್ಳೂರು ಕಮೀಷನರ್
Mangaluru: ನೋಟು ಬ್ಯಾನ್‌ಗೆ 8 ವರ್ಷ: ಹುಂಡಿಗೆ ಹಾಕೋದು ನಿಂತಿಲ್ಲ!
Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ
Maharashtra Election: ಬೂತ್ ಗೆಲ್ಲುವತ್ತ ಗಮನ ಹರಿಸಿ: ಕಾರ್ಯಕರ್ತರಿಗೆ ಮೋದಿ ಕರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.