ಅಲೆಮಾರಿ ಜನಾಂಗಕ್ಕೆ ಸೌಲಭ್ಯ ದೊರೆಯಲಿ
ಅಲೆಮಾರಿ ಜನಾಂಗದ ಆಶ್ರಮ ಶಾಲೆ ಕುಷ್ಟಗಿ ತಾಲೂಕಿನ ತಾವರಗೇರಾ ಪಟ್ಟಣದಲ್ಲಿದೆ.
Team Udayavani, Dec 3, 2021, 5:57 PM IST
ಕೊಪ್ಪಳ: ಶೈಕ್ಷಣಿಕ ಮತ್ತು ಆರ್ಥಿಕವಾಗಿ ಅತ್ಯಂತ ಹಿಂದುಳಿದಿರುವ ಅಲೆಮಾರಿ ಜನಾಂಗಕ್ಕೆ ಸರ್ಕಾರದ ಸೌಲಭ್ಯಗಳು ಸಮರ್ಪಕವಾಗಿ ದೊರೆಯುವಂತಾಗಲು ಕ್ರಮ ಕೈಗೊಳ್ಳಿ ಎಂದು ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸಂಬಂಧಿ ಸಿದ ಅಧಿ ಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದ ಅಲೆಮಾರಿ ಜನಾಂಗದವರ ಸೌಲಭ್ಯ ಹಾಗೂ ಮೀಸಲಾತಿ ಕಲ್ಪಿಸುವ ಕುರಿತು ಜಿಲ್ಲಾಮಟ್ಟದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಸರ್ಕಾರವು ಅಲೆಮಾರಿ, ಅರೆ ಅಲೆಮಾರಿ ಜನಾಂಗ ಶೈಕ್ಷಣಿಕ ಮತ್ತು ಆರ್ಥಿಕವಾಗಿ ಅಭಿವೃದ್ಧಿ ಹೊಂದಲು ಹಲವಾರು ಯೋಜನೆಗಳನ್ನು ರೂಪಿಸಿ, ಜಾರಿಗೊಳಿಸಿದೆ. ಅವುಗಳನ್ನು ಅನುಷ್ಠಾನಗೊಳಿಸಲು ಸಂಬಂಧಪಟ್ಟ ಇಲಾಖೆಗಳು ಶ್ರಮಿಸಬೇಕು. ತಮ್ಮ ಇಲಾಖೆಗಳ ಮೂಲಕ ಸರ್ಕಾರದ ಸೌಲಭ್ಯವನ್ನು ಅಲೆಮಾರಿ ಜನಾಂಗ ಪಡೆಯಲು ಅರ್ಜಿ ನಮೂನೆ, ಅರ್ಜಿ ಸಲ್ಲಿಕೆ, ದಾಖಲೆಗಳ ಸಲ್ಲಿಕೆ ಕುರಿತಂತೆ ಅರಿವು ಮೂಡಿಸಬೇಕು. ಈ ಜನಾಂಗಕ್ಕೆ ಸರ್ಕಾರದ ಸೌಲಭ್ಯ
ಹಾಗೂ ಮೀಸಲಾತಿ ಕಲ್ಪಿಸುವ ಕುರಿತಂತೆ ಹೆಚ್ಚು ಅರಿವು ಮೂಡಿಸಲು ಸಲಹಾ ಸಮಿತಿ ನಿಯಮಾನುಸಾರ ರಚಿಸಬೇಕು. ಸರ್ಕಾರ ಕಲ್ಪಿಸಿರುವ ಸೌಲಭ್ಯ ಪಡೆದುಕೊಳ್ಳಲು ಅಲೆಮಾರಿ ಜನಾಂಗದವರು ಮುಂದಾಗಬೇಕು ಎಂದರು.
ಅಲೆಮಾರಿ ಜನಾಂಗದವರ ಮಕ್ಕಳ ಶೈಕ್ಷಣಿಕ ಅನುಕೂಲಕ್ಕಾಗಿ ಆಶ್ರಮ ಶಾಲೆ ಕೊಪ್ಪಳ ಜಿಲ್ಲೆಯಲ್ಲಿದ್ದು, ಈ ಆಶ್ರಮದ ಮಕ್ಕಳನ್ನು ವಿಶೇಷ ಕಾಳಜಿಯಿಂದ ನೋಡಿಕೊಳ್ಳಬೇಕು. ಮಕ್ಕಳ ಶೈಕ್ಷಣಿಕ ಅಭಿವೃದ್ಧಿಗೆ ಹಾಗೂ ಆಶ್ರಮದ ಅಗತ್ಯ ಮೂಲಕ ಸೌಕರ್ಯ ಒದಗಿಸಲು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಕ್ರಮ ಕೈಗೊಳ್ಳಬೇಕು. ಮಕ್ಕಳ ಬ್ಯಾಂಕ್ ಖಾತೆಗೆ ಪ್ರೋತ್ಸಾಹಧನ ಜಮೆ ಆಗಿದೆಯೇ ಅಥವಾ ಇಲ್ಲ ಎಂಬುವುದನ್ನು ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅ ಧಿಕಾರಿಗಳು ಪರಿಶೀಲಿಸಬೇಕೆಂದು ಸೂಚನೆ ನೀಡಿದರು.
ಜನಾಂಗದ ಮುಖಂಡ ಯಂಕಣ್ಣ ಬಂಟಿ ಮಾತನಾಡಿ, ಕನಕಗಿರಿಯಲ್ಲಿ ಅಲೆಮಾರಿ ಜನಾಂಗದವರು ಹೆಚ್ಚಿನ ಸಂಖ್ಯೆಯಲ್ಲಿದ್ದು, ಕನಕಗಿರಿಯಲ್ಲೂ ಅಲೆಮಾರಿ, ಅರೆ ಅಲೆಮಾರಿ ಜನಾಂಗದ ಆಶ್ರಮ ಶಾಲೆ ನಿರ್ಮಿಸಿ ಎಂದು ಮನವಿ ಮಾಡಿದರು.
ಇದಕ್ಕೆ ಸ್ಪಂದಿಸಿದ ಜಲ್ಲಾಧಿಕಾರಿ, ಅಲೆಮಾರಿ ಜನಾಂಗದ ಆಶ್ರಮ ಶಾಲೆ ನಿರ್ಮಾಣಕ್ಕೆ ಅ ಧಿಕಾರಿಗಳು ನಿವೇಶನದ ಲಭ್ಯತೆ ಬಗ್ಗೆ ವರದಿ ಸಲ್ಲಿಸಿಸಬೇಕು. ಈ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವರಿಗೆ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವರ ಗಮನಕ್ಕೆ ತಂದು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದರು.
ಬಿಸಿಎಂ ಜಿಲ್ಲಾ ಅಧಿಕಾರಿ ಜಿ.ಎಂ. ದೊಡ್ಡಮನಿ ಮಾತನಾಡಿ, ಅಲೆಮಾರಿ ಜನಾಂಗದ ಆಶ್ರಮ ಶಾಲೆ ಕುಷ್ಟಗಿ ತಾಲೂಕಿನ ತಾವರಗೇರಾ ಪಟ್ಟಣದಲ್ಲಿದೆ. ಈ ಆಶ್ರಮ ಶಾಲೆಯಲ್ಲಿ 1ರಿಂದ 5ನೇ ತರಗತಿಯ 120 ಮಕ್ಕಳು ವಿದ್ಯಾಭ್ಯಾಸ ಮಾಡುತ್ತಿದ್ದು, 2021-22ನೇ ಸಾಲಿಗಾಗಿ ಕಳೆದ ಸಾಲಿನಲ್ಲಿ ಪ್ರೋತ್ಸಾಹಧನಕ್ಕಾಗಿ ಅರ್ಜಿ ಸಲ್ಲಿಸಿದ ಅಲೆಮಾರಿ ಜನಾಂಗದ ಮೆಟ್ರಿಕ್ ಪೂರ್ವ ವಿದ್ಯಾರ್ಥಿಗಳನ್ನು ಈ ವರ್ಷದ ನವೀಕರಣ ವಿದ್ಯಾರ್ಥಿಗಳೆಂದು ಪರಿಗಣಿಸಿ, ವಿದ್ಯಾರ್ಥಿ ವೇತನ ಮಂಜೂರು ಮಾಡಲಾಗುವುದು.
ಅಲೆಮಾರಿ ಜನಾಂಗದ ನಿವೇಶನ ರಹಿತ ಕುಟುಂಬದವರಿಗೆ ನಿವೇಶನ ಒದಗಿಸಲು ಕೊಪ್ಪಳ ತಾಲೂಕಿನ ಹೊಸೂರು, ಯಲಬುರ್ಗಾ ತಾಲೂಕಿನ ಹುಲೇಗುಡ್ಡ, ಕುಷ್ಟಗಿ ತಾಲೂಕಿನ ಬಚಿನಾಳ ಹಾಗೂ ಗುಡ್ಡದ ಹನುಮಸಾಗರ ಸೇರಿ ಜಿಲ್ಲೆಯ ಮೂರು ತಾಲೂಕುಗಳಲ್ಲಿ ಜಮೀನು ಖರೀದಿಸಿದೆ, ನಿವೇಶನ ಹಂಚಿಕೆ ಮಾಡಬೇಕಿದೆ ಎಂದರು.
ಸಭೆಯಲ್ಲಿ ಜಿಪಂ ಯೋಜನಾಧಿಕಾರಿ ಟಿ. ಕೃಷ್ಣಮೂರ್ತಿ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾಧಿಕಾರಿ ಗಂಗಪ್ಪ, ಶಿವಶಂಕರ ಕರಡಕಲ್, ಬಿಸಿಎಂ ಪತ್ರಾಂಕಿತ ವ್ಯವಸ್ಥಾಪಕ ಬಿ.ವಿ. ಮಠ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Guarantee Scheme: ಸರಕಾರದ ಖಜಾನೆ ತುಂಬಲು ಅನಧಿಕೃತ ಲೇಔಟ್ ಸಕ್ರಮಗೊಳಿಸಲಿ:ಜನಾರ್ದನ ರೆಡ್ಡಿ
ಪ್ರವಾಸಕ್ಕೆ ತೆರಳುತ್ತಿದ್ದ ಶಾಲಾ ವಿದ್ಯಾರ್ಥಿಗಳ ಬಸ್ ಪಲ್ಟಿ,ನಾಲ್ವರು ವಿದ್ಯಾರ್ಥಿಗಳಿಗೆ ಗಾಯ
Kushtagi: ಬಸ್ ಸೇವೆ ಕಲ್ಪಿಸುವಂತೆ ಆಗ್ರಹಿಸಿ ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ
ದೋಟಿಹಾಳ: ಉದ್ಘಾಟನೆ ಕಾಣದೆ ಅಂಗನವಾಡಿ ಕಟ್ಟಡ ಅನಾಥ
By Election: ಕೊಪ್ಪಳ ನಗರಸಭೆ ಉಪಚುನಾವಣೆ… ಕಮಲಕ್ಕೊಂದು ಕೈಗೊಂದು ಗೆಲುವು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.