ಶರಣೇಗೌಡ ಬಯ್ಯಾಪುರ ಮೇಲ್ಮನೆಗೆ ಹೋಗಲು ಅರ್ಹರಲ್ಲ: ಶಿವನಗೌಡ ನಾಯಕ
Team Udayavani, Dec 4, 2021, 3:42 PM IST
ಗಂಗಾವತಿ:ವಿಧಾನ ಪರಿಷತ್ತು ಬುದ್ಧಿವಂತರು ಮತ್ತು ವಿದ್ವಾಂಸರು ಎಲ್ಲರನ್ನೂ ಜತೆಗೆ ಕರೆದುಕೊಂಡು ಹೋಗುವವರ ಜಾಗವಾಗಿದ್ದು, ರಾಯಚೂರು, ಕೊಪ್ಪಳ ವಿಧಾನ ಪರಿಷತ್ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಶರಣೇಗೌಡ ಬಯ್ಯಾಪುರ ಮೇಲ್ಮನೆಗೆ ಹೋಗಲು ಅನರ್ಹರಾಗಿದ್ದಾರೆ ಎಂದು ಕೆಆರ್ ಡಿಸಿಎಲ್ ಅಧ್ಯಕ್ಷ ಹಾಗೂ ದೇವದುರ್ಗ ಮಾಜಿ ಶಾಸಕ ಶಿವನಗೌಡ ನಾಯಕ್ ಹೇಳಿದರು.
ಅವರು ಗಂಗಾವತಿಯ ಅಮರಜ್ಯೋತಿ ಕಲ್ಯಾಣಮಂಟಪದಲ್ಲಿ ವಿಧಾನಪರಿಷತ್ ಚುನಾವಣೆಯ ಮತಯಾಚನೆ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದರು.
ವಿಶ್ವವೇ ಮೆಚ್ಚುವ ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮಿತ್ ಶಾ ಅವರ ಬಗ್ಗೆ ಅವಾಚ್ಯ ಶಬ್ದಗಳಿಂದ ಮಾತನಾಡಿ ಮನರಂಜನೆ ತೆಗೆದುಕೊಂಡಿದ್ದು ಸರಿಯಲ್ಲ ಎಂದರು.
ರಾಯಚೂರು ಕೊಪ್ಪಳ ಅವಳಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿಯಾಗಬೇಕು. ಗ್ರಾಮ ಪಂಚಾಯಿತಿ ನಗರಸಭೆ ಪುರಸಭೆ ಪಟ್ಟಣ ಪಂಚಾಯಿತಿಗಳು ಹೆಚ್ಚಿನ ಅಭಿವೃದ್ಧಿ ಕಾಣುವಂತಾಗಲು ಸರಕಾರದ ಮಧ್ಯೆ ವಿಧಾನ ಪರಿಷತ್ ಸದಸ್ಯರು ಕೆಲಸ ಮಾಡಬೇಕಾಗಿದೆ. ಆದ್ದರಿಂದ ಬಿಜೆಪಿ ಅಭ್ಯರ್ಥಿ ವಿಶ್ವನಾಥ ಅತ್ಯುತ್ತಮವಾದ ಅಭ್ಯರ್ಥಿಯಾಗಿದ್ದು ಬಿಎಸ್ಸಿ ಪದವಿಧರರಾಗಿದ್ದಾರೆ. ಬಿಜೆಪಿ ಸರ್ಕಾರ ಇರುವುದರಿಂದ ಸ್ಥಳೀಯ ಸಂಸ್ಥೆಗಳಿಗೆ ಹೆಚ್ಚಿನ ಅನುದಾನವನ್ನು ತರಲು ಅನುಕೂಲವಾಗುತ್ತದೆ. ಮುಂಬರುವ ದಿನಗಳಲ್ಲಿ ಪ್ರತಿ ಗ್ರಾಮ ಪಂಚಾಯಿತಿಗೆ ವಿಶೇಷವಾಗಿ ನೂರು ಮನೆಗಳನ್ನು ವಸತಿ ಸಚಿವರಿಂದ ಮಂಜೂರು ಮಾಡಿಸಲಾಗುತ್ತದೆ ಆದ್ದರಿಂದ ಗ್ರಾಮ ಪಂಚಾಯತ್, ನಗರಸಭೆ, ಪುರಸಭೆ ಪಟ್ಟಣ ಪಂಚಾಯತ್ ಸದಸ್ಯರು ತಪ್ಪದೆ ಬಿಜೆಪಿ ಅಭ್ಯರ್ಥಿ ವಿಶ್ವನಾಥ ಬನಹಟ್ಟಿ ಅವರಿಗೆ ಪ್ರಥಮ ಪ್ರಾಶಸ್ತ್ಯದ ಮತವನ್ನು ನೀಡಬೇಕೆಂದು ಮನವಿ ಮಾಡಿದರು.
ಪ್ರಚಾರ ಸಭೆಯಲ್ಲಿ ಉಸ್ತುವಾರಿ ಸಚಿವ ಹಾಲಪ್ಪ ಆಚಾರ್, ಸಂಸದ ಕರಡಿ ಸಂಗಣ್ಣ, ಶಾಸಕರಾದ ಪರಣ್ಣ ಮುನವಳ್ಳಿ, ಬಸವರಾಜ ದಡೇಸುಗೂರು, ಕಾಡಾ ಅಧ್ಯಕ್ಷ ತಿಪ್ಪೇರುದ್ರಸ್ವಾಮಿ, ಬಿಜೆಪಿ ಹಿರಿಯ ಮುಖಂಡರಾದ ಮಾಜಿ ಶಾಸಕ ಜಿ ವೀರಪ್ಪ, ಜಿಲ್ಲಾ ಮಾಜಿ ಅಧ್ಯಕ್ಷ ಸಿಂಗನಾಳ ವಿರೂಪಾಕ್ಷಪ್ಪ, ಎಚ್ ಗಿರೇಗೌಡ, ಚಂದ್ರಶೇಖರ ಹಲಗೇರಿ, ದುರ್ಗಪ್ಪ ಆಗೋಲಿ, ಕಾಶಿನಾಥ ಚಿತ್ರಗಾರ, ಮಳಗಿ ಚನ್ನಪ್ಪ, ಶ್ರೀನಿವಾಸ್ ದೂಳ್ ಚನ್ನವೀರನಗೌಡ ಕೋರಿ ಮಲ್ಲೇಶಪ್ಪ ನಾಯಕ್ ಸೇರಿ ಬಿಜೆಪಿಯ ಅನೇಕ ಮುಖಂಡರಿದ್ದರು.
ಇದೇ ಸಂದರ್ಭದಲ್ಲಿ ಸಾಣಾಪುರ, ಹಾಸಗಲ್, ಹಿಂದಿರುಗಿ ಗ್ರಾಪಂ ಕಾಂಗ್ರೆಸ್ ಬೆಂಬಲಿತ ಸದಸ್ಯರು ಬಿಜೆಪಿ ಪಕ್ಷವನ್ನು ಸೇರಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Protest: ಡಿ.10 ರಂದು ಸುವರ್ಣಸೌಧಕ್ಕೆ 5 ಸಾವಿರ ಟ್ರ್ಯಾಕ್ಟರ್ ಮುತ್ತಿಗೆ; ಕೂಡಲಸಂಗಮ ಶ್ರೀ
Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್
ಕೊಪ್ಪಳ: ಫ್ಲೈಟ್‌ನಲ್ಲಿ ಲಿಂಗದಹಳ್ಳಿ ಸರ್ಕಾರಿ ಶಾಲಾ ಮಕ್ಕಳ ಪ್ರವಾಸ!
Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ
Tawargera: ಚಲಿಸುತ್ತಿದ್ದ ಬಸ್ಸಿಗೆ ಡಿಕ್ಕಿ ಹೊಡೆದು ನಂತರ ಕುರಿಗಳ ಮೇಲೆ ಹರಿದ ಕ್ಯಾಂಟರ್
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Video: ನೋಟಿನ ಮಾಲೆಯಲ್ಲಿ ನೋಟು ಎಗರಿಸಿ ಕಳ್ಳ… ಮದುವೆ ಬಿಟ್ಟು ಕಳ್ಳನ ಹಿಂದೆ ಓಡಿದ ವರ
Sudeep: ʼಮ್ಯಾಕ್ಸ್ʼ ರಿಲೀಸ್ ದಿನ ಫಿಕ್ಸ್: ಕಿಚ್ಚನ ಸಿಟ್ಟಿಗೆ ಎಚ್ಚೆತ್ತ ನಿರ್ಮಾಣ ಸಂಸ್ಥೆ
Bidar: ಭಾರತದಿಂದಲೇ ವಕ್ಫ್ ತೊಲಗಿಸಬೇಕು: ಯತ್ನಾಳ್
Veerendra Heggade: ಡಾ.ಡಿ.ವೀರೇಂದ್ರ ಹೆಗ್ಗಡೆಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ ಪ್ರಶಸ್ತಿ
Sambhal Case Follow Up:ಹೊರಗಿನವರಿಗೆ ಸಂಭಾಲ್ ಪ್ರವೇಶಕ್ಕೆ ನಿರ್ಬಂಧ,ಜಲ್ಲಿ ಮಾರಾಟ ನಿಷೇಧ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.