ಜಿಲ್ಲೆಗಳಲ್ಲಿ ಕೋವಿಡ್ ಪ್ರಕರಣ ಹೆಚ್ಚಳ; ಕರ್ನಾಟಕ ಸೇರಿ ಕೆಲವು ರಾಜ್ಯಗಳಿಗೆ ಕೇಂದ್ರ ಪತ್ರ
ಡಿಸೆಂಬರ್ 2ರಂದು 14 ಮಂದಿ ಸಾವನ್ನಪ್ಪಿರುವುದಾಗಿ ರಾಜೇಶ್ ಭೂಷಣ್ ಪತ್ರದಲ್ಲಿ ತಿಳಿಸಿದ್ದಾರೆ.
Team Udayavani, Dec 4, 2021, 4:35 PM IST
ನವದೆಹಲಿ: ಕಳೆದ 14 ದಿನಗಳಿಂದ ವಿವಿಧ ರಾಜ್ಯಗಳ ಜಿಲ್ಲೆಗಳಲ್ಲಿ ಏಕಾಏಕಿ ಕೋವಿಡ್ 19 ಸೋಂಕು ಪ್ರಕರಣ ಹೆಚ್ಚಳವಾಗುತ್ತಿದ್ದು, ಈ ಬಗ್ಗೆ ಎಚ್ಚರ ವಹಿಸಬೇಕು ಎಂದು ಕೇಂದ್ರ ಆರೋಗ್ಯ ಸಚಿವಾಲಯ ಕರ್ನಾಟಕ ಸೇರಿದಂತೆ ಕೆಲವು ರಾಜ್ಯಗಳಿಗೆ ರವಾನಿಸಿರುವ ಪತ್ರದಲ್ಲಿ ತಿಳಿಸಿದೆ.
ಇದನ್ನೂ ಓದಿ:ಭಾರತದ ಬೌಲಿಂಗ್ ದಾಳಿಗೆ ಬೆದರಿದ ಕಿವೀಸ್: ಕೇವಲ 62 ರನ್ ಗೆ ಆಲೌಟ್
ಕೇಂದ್ರದ ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್ ಬರೆದ ಪತ್ರದಲ್ಲಿ, ಕಳೆದ ಒಂದು ತಿಂಗಳಿನಿಂದ ರಾಜ್ಯಗಳ 14 ಜಿಲ್ಲೆಗಳಲ್ಲಿ ಅತೀ ಹೆಚ್ಚು ಪ್ರಕರಣಗಳು ವರದಿಯಾಗುತ್ತಿದೆ. ದೇಶದಲ್ಲಿನ ಕೋವಿಡ್ ಪ್ರಕರಣಗಳಲ್ಲಿ ಈ ಜಿಲ್ಲೆಗಳಿಂದ ಶೇ.55.87ರಷ್ಟು ಪ್ರಕರಣ ಪತ್ತೆಯಾಗುತ್ತಿದೆ ಎಂದು ವಿವರಿಸಿದ್ದಾರೆ.
ಕರ್ನಾಟಕದಲ್ಲಿ ಮೊದಲ ಎರಡು ಒಮಿಕ್ರಾನ್ ಪ್ರಕರಣ ಪತ್ತೆಯಾಗಿರುವುದಾಗಿ ಪತ್ರದಲ್ಲಿ ಉಲ್ಲೇಖಿಸಲಾಗಿದ್ದು, ಅದರಂತೆ ರಾಜ್ಯದಲ್ಲಿನ ಕೋವಿಡ್ ಪ್ರಕರಣಗಳ ಹೆಚ್ಚಳದ ಬಗ್ಗೆಯೂ ಎಚ್ಚರಿಕೆ ನೀಡಿದೆ.
ಬೆಂಗಳೂರು ನಗರದಲ್ಲಿ ಕೋವಿಡ್ ನಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆಯಲ್ಲಿ ಹೆಚ್ಚಳವಾಗಿದೆ. ನವೆಂಬರ್ 25ರಂದು 8ಮಂದಿ ಸಾವನ್ನಪ್ಪಿರುವುದಾಗಿ ವರದಿಯಾಗಿದ್ದು, ಡಿಸೆಂಬರ್ 2ರಂದು 14 ಮಂದಿ ಸಾವನ್ನಪ್ಪಿರುವುದಾಗಿ ರಾಜೇಶ್ ಭೂಷಣ್ ಪತ್ರದಲ್ಲಿ ತಿಳಿಸಿದ್ದಾರೆ.
ನವೆಂಬರ್ 25ರಿಂದ ಡಿಸೆಂಬರ್ 2ರ ನಡುವೆ ಕರ್ನಾಟಕದ ತುಮಕೂರು ಜಿಲ್ಲೆಯಲ್ಲಿ ಶೇ.152ರಷ್ಟು ಕೋವಿಡ್ ಪ್ರಕರಣಗಳ ಸಂಖ್ಯೆಯಲ್ಲಿ ಹೆಚ್ಚಳವಾಗಿದೆ. ಕರ್ನಾಟಕ ಸೇರಿದಂತೆ ಒಡಿಶಾ, ಜಮ್ಮು-ಕಾಶ್ಮೀರ, ಮಿಜೋರಾಂ, ಕೇರಳ ಮತ್ತು ತಮಿಳುನಾಡಿಗೂ ಆರೋಗ್ಯ ಸಚಿವಾಲಯ ಪತ್ರವನ್ನು ಕಳುಹಿಸಿದೆ.
ಮಿಜೋರಾಂನ ಕೆಲವು ಜಿಲ್ಲೆಗಳಲ್ಲಿ ಶೇ.17ರಷ್ಟು ಪಾಸಿಟಿವಿಟಿ ದರ ಇದೆ. ಮಾರ್ಗಸೂಚಿಯಂತೆ ಸೋಂಕು ತಡೆಗಟ್ಟಲು ಮತ್ತು ಸಾವಿನ ಪ್ರಮಾಣ ಇಳಿಕೆ ಮಾಡಲು ಅಗತ್ಯವಿರುವ ಎಲ್ಲಾ ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಳ್ಳಬೇಕಾದ ಅಗತ್ಯವಿದೆ ಎಂದು ಪತ್ರದಲ್ಲಿ ತಿಳಿಸಿರುವುದಾಗಿ ವರದಿ ಹೇಳಿದೆ.
ಜಮ್ಮು-ಕಾಶ್ಮೀರದ ಕಥುವಾದಲ್ಲಿ ಶೇ.736ರಷ್ಟು ಕೋವಿಡ್ 19 ಪ್ರಕರಣಗಳ ಸಂಖ್ಯೆ ಹೆಚ್ಚಳವಾಗಿದೆ. ಕೇರಳದಲ್ಲಿ ಒಟ್ಟು 1,71,521 ಕೋವಿಡ್ ಪ್ರಕರಣಳಿವೆ. ದೇಶದಲ್ಲಿನ ಕೋವಿಡ್ ಪ್ರಕರಣಗಳಲ್ಲಿ ಕೇರಳ ರಾಜ್ಯದಿಂದ ಶೇ.55ರಷ್ಟು ಪ್ರಕರಣಗಳು ಸೇರ್ಪಡೆಯಾಗುತ್ತಿದೆ.
ಏತನ್ಮಧ್ಯೆ ಭಾರತದಲ್ಲಿ ಒಮಿಕ್ರಾನ್ ನ ಮೂರು ಪ್ರಕರಣಗಳು ಪತ್ತೆಯಾದ ನಂತರ ಹೆಚ್ಚು ಎಚ್ಚರವಹಿಸಲು ಸೂಚನೆ ನೀಡಿದೆ. ಅಲ್ಲದೇ ಕೋವಿಡ್ 19 ಸೋಂಕು ಪ್ರಕರಣಗಳಲ್ಲಿ ಹೆಚ್ಚಳವಾಗದಂತೆ ತಡೆಯಲು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುವಂತೆ ಕೇಂದ್ರ ಸರ್ಕಾರ ಪತ್ರದಲ್ಲಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Army Wepon: ಭಾರತದ ಬತ್ತಳಿಕೆಗೆ ದೇಸಿ ಹೈಪರ್ಸಾನಿಕ್ ಅಸ್ತ್ರ !
Mobs Storm: ಮಣಿಪುರದಲ್ಲಿ ಭುಗಿಲೆದ್ದ ಹಿಂಸಾಚಾರ!, ಮೈತೇಯಿ ಸಮುದಾಯದಿಂದ ಭಾರೀ ಪ್ರತಿಭಟನೆ
Maharashtra: ಮತಗಟ್ಟೆ ಬಳಿ ಚಪ್ಪಲಿ ನಿಷೇಧಿಸಿ ಎಂದು ಮಹಾಪಕ್ಷೇತರ ಅಭ್ಯರ್ಥಿ ಮನವಿ!
ಮನುಷ್ಯ ನೀನು ದಂಡ, ಸತ್ತು ಹೋಗು!: ಎಐ ಚಾಟ್ಬಾಟ್ ಹೇಳಿಕೆ
Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.