ರೈತರ ಭಿನ್ನಾಭಿಪ್ರಾಯ ಪರಿಹಾರ
Team Udayavani, Dec 5, 2021, 6:50 AM IST
ಹೊಸದಿಲ್ಲಿ: ರಾಷ್ಟ್ರ ರಾಜಧಾನಿ ಬಳಿಯ ಸಿಂಘು ಗಡಿಯಲ್ಲಿ ಕಳೆದ ಒಂದೂವರೆ ವರ್ಷದಿಂದ ಪ್ರತಿಭಟನೆ ನಡೆಸುತ್ತಿದ್ದ ರೈತರಲ್ಲಿ ಭಿನ್ನಾಭಿಪ್ರಾಯಗಳು ಕಾಣಿಸಿಕೊಂಡಿದ್ದು, ಅನಂತರ ನಡೆದ ಮಾತುಕತೆಯಲ್ಲಿ ಅದು ಬಗೆಹರಿದಿದೆ ಎಂದು ಮೂಲಗಳು ತಿಳಿಸಿವೆ.
ವಿವಾದಿತ ಕೃಷಿ ಕಾಯ್ದೆಗಳನ್ನು ಕೇಂದ್ರ ಸರಕಾರ ಹಿಂಪಡೆದಿದೆ. ಜತೆಗೆ ಸಂಧಾನಕ್ಕಾಗಿ ರೈತರನ್ನು ಕೇಂದ್ರ ಆಹ್ವಾನಿಸಿದೆ. ಹಾಗಾಗಿ ಪ್ರತಿಭಟನೆಯನ್ನು ಅಂತ್ಯಗೊಳಿಸಿ ಮನೆಗಳಿಗೆ ತೆರಳಲು ಹರಿಯಾಣ ಭಾಗದ ರೈತರು ನಿರ್ಧರಿಸಿದ್ದಾರೆ. ಆದರೆ ಇದನ್ನು ಒಪ್ಪದ ಸಂಯುಕ್ತ ಕಿಸಾನ್ ಮೋರ್ಚಾ (ಎಸ್ಕೆಎಂ), ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ ಸಿಗುವವರೆಗೂ ಪ್ರತಿಭಟನೆ ಕೈಬಿಡುವುದು ಬೇಡ ಎಂದು ಆಗ್ರಹಿಸಿದೆ. ಆದರೆ ಇದಕ್ಕೆ ಹರಿಯಾಣದ ಭಾಗದ ರೈತರು ಒಪ್ಪುತ್ತಿಲ್ಲ ಎಂದು ಮೂಲಗಳು ತಿಳಿಸಿವೆ. ಆದರೆ ಅನಂತರದ ಚರ್ಚೆಗಳಲ್ಲಿ ರೈತರು ಪ್ರತಿಭಟನೆ ಮುಂದುವರಿಸಲು ಒಪ್ಪಿದ್ದಾರೆ ಎನ್ನಲಾಗಿದೆ.
ಕೇಸ್ಗಳು ಹಿಂಪಡೆಯವರೆಗೂ ಪ್ರತಿಭಟನೆ: ಇದೀಗ ತಮ್ಮ ನಿರ್ಧಾರ ಬದಲಿಸಿರುವ ಹರಿಯಾಣ ರೈತರು, ಕೃಷಿ ಕಾಯ್ದೆ ಗಳನ್ನು ವಿರೋಧಿಸಿ ದೇಶಾದ್ಯಂತ ನಡೆಸಲಾಗಿದ್ದ ಪ್ರತಿಭಟನೆಗಳ ಸಂದರ್ಭಗಳಲ್ಲಿ ನಾನಾ ರಾಜ್ಯಗಳಲ್ಲಿ ರೈತರ ವಿರುದ್ಧ ದಾಖಲಾಗಿರುವ ಪ್ರಕರಣಗಳನ್ನು ಕೈಬಿಡುವವರೆಗೂ ಪ್ರತಿಭಟನೆ ಮುಂದುವರಿಸಲು ನಿರ್ಧರಿಸಿದ್ದಾರೆ. ಪ್ರತಿಭಟನೆ ಗಳ ವೇಳೆ, ನಾನಾ ರಾಜ್ಯಗಳಲ್ಲಿ ಆಯಾ ರಾಜ್ಯಗಳ ಪೊಲೀಸರು ಹಾಗೂ ರೈಲ್ವೇ ಪೊಲೀಸರಿಂದ ಸುಮಾರು 5,000 ಪ್ರಕರಣಗಳು ದಾಖಲಾಗಿದ್ದು, ಅವೆಲ್ಲವನ್ನೂ ಕೈಬಿಡ ಬೇಕು. ಜತೆಗೆ ಪ್ರತಿಭಟನೆಗಳಲ್ಲಿ ಮೃತರಾದ ರೈತರ ಹತ್ತಿರದ ಸಂಬಂಧಿಕರಿಗೆ ಸೂಕ್ತ ಆರ್ಥಿಕ ಪರಿಹಾರ ಘೋಷಿಸಬೇಕು ಎಂದು ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Anmol Buffalo:1500 ಕೆಜಿ ತೂಗುವ ಈ ಕೋಣದ ಬೆಲೆ ಬರೋಬ್ಬರಿ 23 ಕೋಟಿ ರೂ!
Digital Arrest ಹೆಸರಿನಲ್ಲಿ ನಿವೃತ್ತ ಇಂಜಿನಿಯರ್ ಗೆ 10 ಕೋಟಿ ರೂಪಾಯಿ ಪಂಗನಾಮ!
Mumbai: ಲಾರೆನ್ಸ್ ಬಿಷ್ಣೋಯ್ ಹಿಟ್ ಲಿಸ್ಟ್ನಲ್ಲಿ ಶ್ರದ್ಧಾ ವಾಕರ್ ಹತ್ಯೆ ಆರೋಪಿ: ವರದಿ
Pollution: ದಿಲ್ಲಿಯಲ್ಲಿ ಈಗ ನಿರ್ಮಾಣಕ್ಕೆ ಬ್ರೇಕ್, ಬಸ್ಗಳಿಗೆ ನಿರ್ಬಂಧ
Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು
MUST WATCH
ಹೊಸ ಸೇರ್ಪಡೆ
Bengaluru: ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯ ಜೀವ ಉಳಿಸಿದ ಸಂಚಾರ ಪೊಲೀಸರು
Anmol Buffalo:1500 ಕೆಜಿ ತೂಗುವ ಈ ಕೋಣದ ಬೆಲೆ ಬರೋಬ್ಬರಿ 23 ಕೋಟಿ ರೂ!
BBK11: ಅಸಲಿ ಆಟ ಶುರು ಮಾಡಿದ ಧನರಾಜ್: ಮೋಕ್ಷಿತಾಳಿಗೆ ಅಹಂಕಾರ ಇದೆ ಎಂದ ಸೈಲೆಂಟ್ ಕಿಲಾಡಿ
Digital Arrest ಹೆಸರಿನಲ್ಲಿ ನಿವೃತ್ತ ಇಂಜಿನಿಯರ್ ಗೆ 10 ಕೋಟಿ ರೂಪಾಯಿ ಪಂಗನಾಮ!
Zebra: ಡಾಲಿ ಜೀಬ್ರಾಗೆ ಮೆಗಾಸ್ಟಾರ್ ಸಾಥ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.