ಶಿಕ್ಷಣ ಸಂಸ್ಥೆಗಳಲ್ಲಿ ರ್‍ಯಾಂಡಮ್‌ ಟೆಸ್ಟ್‌ 

Team Udayavani, Dec 5, 2021, 6:33 AM IST

ಶಿಕ್ಷಣ ಸಂಸ್ಥೆಗಳಲ್ಲಿ ರ್‍ಯಾಂಡಮ್‌ ಟೆಸ್ಟ್‌ 

ಉಡುಪಿ: ಒಮಿಕ್ರಾನ್‌ ಮುನ್ನೆಚ್ಚರಿಕೆ ಕ್ರಮವಾಗಿ ಶಾಲೆ, ಕಾಲೇಜು, ಹಾಸ್ಟೆಲ್‌ಗ‌ಳಲ್ಲಿ ವಿದ್ಯಾರ್ಥಿ ಗಳಿಗೆ, ಶಿಕ್ಷಕರಿಗೆ ಕೊರೊನಾ ರ್‍ಯಾಂಡಮ್‌ ಪರೀಕ್ಷೆ ನಡೆಸಲಿದ್ದೇವೆ ಎಂದು ಜಿಲ್ಲಾಧಿಕಾರಿ ಕೂರ್ಮಾ ರಾವ್‌ ಎಂ. ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಜಿಲ್ಲೆಯಲ್ಲಿ ನಿತ್ಯ 5 ಸಾವಿರ ಜನರಿಗೆ ಕೊರೊನಾ ಪರೀಕ್ಷೆ ನಡೆಸುವ ಗುರಿ ಹೊಂದಿದ್ದೇವೆ. ಪ್ರೌಢ ಶಾಲೆ, ಕಾಲೇಜುಗಳ ವಿದ್ಯಾರ್ಥಿಗಳು -ಬೋಧಕ ಸಿಬಂದಿ, ಹೊಟೇಲ್‌, ರೆಸ್ಟೋರೆಂಟ್‌, ಮಾಲ್‌, ಅಂಗಡಿ ಮುಂಗಟ್ಟುಗಳ ಮಾಲಕರು-ಸಿಬಂದಿ, ಕ್ಯಾಟರಿಂಗ್‌ ಸಿಬಂದಿ, ಮನೆ ಮನೆಗೆ ಆಹಾರ ಪದಾರ್ಥ ವಿತರಿಸುವವರು, ಕಾರ್ಖಾನೆ, ಕಚೇರಿಗಳು, ಪಬ್‌, ಬಾರ್‌, ಸಿನೆಮಾ ಮಂದಿರ, ಮಲ್ಟಿಪ್ಲೆಕ್ಸ್‌ ಗಳ ಸಿಬಂದಿಗೆ ಮುಂದಿನ ಒಂದು ವಾರದಲ್ಲಿ ರ್‍ಯಾಂಡಮ್‌ ಪರೀಕ್ಷೆ ಮಾಡಲಿದ್ದೇವೆ. ಸಾರ್ವಜನಿಕರು ಗುಂಪು ಸೇರಿದಾಗಲೂ ರ್‍ಯಾಂಡಮ್‌ ಪರೀಕ್ಷೆ ನಡೆಸುತ್ತೇವೆ ಎಂದರು.

ಜಿಲ್ಲೆಗೆ ಕಳೆದ ಒಂದು ವಾರದಲ್ಲಿ ಮಹಾರಾಷ್ಟ್ರದಿಂದ ಬಂದ 266 ಮಂದಿಯಲ್ಲಿ 12 ಮಂದಿಗೆ, ಕೇರಳದಿಂದ ಬಂದ 69 ಮಂದಿಯಲ್ಲಿ 9 ಮಂದಿಗೆ ಕೊರೊನಾ ದೃಢಪಟ್ಟಿದೆ. ವಿದೇಶದಿಂದ 91 ಮಂದಿ ಜಿಲ್ಲೆಗೆ ಬಂದಿದ್ದು, ಅವರಲ್ಲಿ ಮೂವರು ಹೈರಿಸ್ಕ್ ದೇಶದಿಂದ ಬಂದವರು. ಎಲ್ಲರ ಪರೀಕ್ಷಾ ವರದಿ ನೆಗೆಟಿವ್‌ ಬಂದಿದೆ. ಆದರೂ ಒಂದು ವಾರ ಹೋಂ ಕ್ವಾರಂಟೈನ್‌ನಲ್ಲಿರಲು ಸೂಚಿಸಿದ್ದು, ಅನಂತರ ಮತ್ತೂಮ್ಮೆ ಪರೀಕ್ಷೆ ಮಾಡಿಸಿಕೊಳ್ಳಲು ನಿರ್ದೇಶಿಸಿದ್ದೇವೆ ಎಂದರು.

ಪಾಸಿಟಿವಿಟಿ ದರ:

ಜಿಲ್ಲೆಯಲ್ಲಿ ಸದ್ಯ ಶೇ 0.4ರಷ್ಟು ಪಾಸಿಟಿವಿಟಿ ದರವಿದೆ. ಉಡುಪಿ ತಾಲೂಕಿನಲ್ಲಿ ಶೇ 0.6, ಕುಂದಾಪುರದಲ್ಲಿ ಶೇ 0.4 ಹಾಗೂ ಕಾರ್ಕಳದಲ್ಲಿ ಶೇ 0.1ರಷ್ಟಿದೆ. ಕೊರೊನಾ ಎರಡನೇ ಅಲೆಯ ಸಂದರ್ಭದಲ್ಲಿ ಸೇವೆ ಸಲ್ಲಿಸಿರುವ ಸಮಿತಿಗಳನ್ನು ಪುನಃ ಕ್ರಿಯಾಶೀಲಗೊಳಿಸಲು ಕ್ರಮ ತೆಗೆದುಕೊಂಡಿದ್ದೇವೆ. ಜಿಲ್ಲೆಯಲ್ಲಿನ ಆಕ್ಸಿಜನ್‌ ಸಹಿತ ಹಾಸಿಗೆ ಲಭ್ಯತೆಯ ಮಾಹಿತಿ ಪಡೆಯುತ್ತಿದ್ದೇವೆ. ಕೇಂದ್ರ ಹಾಗೂ ರಾಜ್ಯ ಸರಕಾರದಿಂದ ಬರುವ ಎಲ್ಲ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡಲಿದ್ದೇವೆ ಎಂದರು.

ಕಾರ್ಯಕ್ರಮ ಮುಂದಕ್ಕೆ :

ಶೈಕ್ಷಣಿಕ ಸಂಸ್ಥೆಗಳಲ್ಲಿ ಸಾಂಸ್ಕೃತಿಕ ಚಟುವಟಿಕೆ, ಹಬ್ಬ-ಸಮಾರಂಭಗಳನ್ನು 2022ರ ಜನವರಿಗೆ 15ರವರೆಗೆ ಮುಂದೂಡಲು ಸೂಚನೆ ನೀಡಿದ್ದೇವೆ. ರಾಜಕೀಯ ಸಮಾವೇಶ, ಮದುವೆ ಸಹಿತವಾಗಿ ಎಲ್ಲ ಸಭೆ, ಸಮಾರಂಭ, ಸಮ್ಮೇಳನಗಳಲ್ಲಿ 500 ಜನರಿಗೆ ಮಿತಿ ನೀಡಲಾಗಿದೆ. ಇಲ್ಲಿ ಕೊರೊನಾ ನಿಯಮವನ್ನು ಕಟ್ಟುನಿಟ್ಟಾಗಿ ಜಾರಿಗೆ ತರುವುದು ಕಾರ್ಯಕ್ರಮ ಸಂಘಟಕರು ಅಥವಾ ವ್ಯವಸ್ಥಾಪಕರ ಜವಾಬ್ದಾರಿ. ಈ ಬಗ್ಗೆ ವಿಚಕ್ಷಣದಳದಿಂದ ನಿಗಾ ವಹಿಸಲಾಗುತ್ತದೆ. ಕೊರೊನಾ ಲಸಿಕೆಯ ಎರಡನೇ ಡೋಸ್‌ ಪಡೆದವರಿಗೆ ಮಾತ್ರ ಮಾಲ್‌ ಹಾಗೂ ಚಿತ್ರಮಂದಿರಗಳಿಗೆ ಪ್ರವೇಶ ನೀಡಲಾಗುತ್ತದೆ. ಈ ಬಗ್ಗೆ ಅಲ್ಲಿನ ಸಿಬಂದಿ ಹಾಗೂ ವ್ಯವಸ್ಥಾಪಕರಿಗೆ ಸ್ಪಷ್ಟ ಸೂಚನೆ ನೀಡಲಾಗುತ್ತದೆ ಎಂದು ವಿವರ ನೀಡಿದರು.

ಜಿ.ಪಂ. ಸಿಇಒ ಡಾ| ನವೀನ್‌ ಭಟ್‌, ಎಸ್‌ಪಿ ವಿಷ್ಣುವರ್ಧನ್‌, ಎಡಿಸಿ ಬಾಲಕೃಷ್ಣಪ್ಪ ಪತ್ರಿಕಾಗೋಷ್ಠಿ ಯಲ್ಲಿದ್ದರು.

ಟಾಪ್ ನ್ಯೂಸ್

MUDA Case: ಸಿಬಿಐ ತನಿಖೆ ಕೋರಿದ್ದ ಅರ್ಜಿ ವಿಚಾರಣೆ ನ.26ಕ್ಕೆ ಮುಂದೂಡಿದ ಹೈಕೋರ್ಟ್

MUDA Case: ಸಿಬಿಐ ತನಿಖೆ ಕೋರಿದ್ದ ಅರ್ಜಿ ವಿಚಾರಣೆ ನ.26ಕ್ಕೆ ಮುಂದೂಡಿದ ಹೈಕೋರ್ಟ್

Belagavi: ತಹಶೀಲ್ದಾರ್ ಕೊಠಡಿಯಲ್ಲೇ ಸಿಬ್ಬಂದಿ ನೇಣಿಗೆ ಶರಣು, ಸ್ಥಳದಲ್ಲಿ ಡೆತ್ ನೋಟ್ ಪತ್ತೆ

Belagavi: ತಹಶೀಲ್ದಾರ್ ಕೊಠಡಿಯಲ್ಲೇ ಸಿಬ್ಬಂದಿ ನೇಣಿಗೆ ಶರಣು, ಸ್ಥಳದಲ್ಲಿ ಡೆತ್ ನೋಟ್ ಪತ್ತೆ

MUDA Case: ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ ಸಿದ್ದರಾಮಯ್ಯ

MUDA Case: ಲೋಕಾಯುಕ್ತ ನೋಟಿಸ್ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ

Canada: ಹಿಂದೂ ದೇಗುಲದ ಮೇಲೆ ದಾಳಿ-ಖಲಿಸ್ತಾನಿಗಳ ವಿರುದ್ಧ ಸಾವಿರಾರು ಭಾರತೀಯರ  ಪ್ರತಿಭಟನೆ

Canada: ಹಿಂದೂ ದೇಗುಲದ ಮೇಲೆ ದಾಳಿ-ಖಲಿಸ್ತಾನಿಗಳ ವಿರುದ್ಧ ಸಾವಿರಾರು ಭಾರತೀಯರ ಪ್ರತಿಭಟನೆ

Uppunda: ಈ ಬಾರಿ ಕೋಟೇಶ್ವರಕ್ಕಿಂತ ಮೊದಲು ಉಪ್ಪುಂದ ರಥೋತ್ಸವ

Uppunda: ಈ ಬಾರಿ ಕೋಟೇಶ್ವರಕ್ಕಿಂತ ಮೊದಲು ಉಪ್ಪುಂದ ರಥೋತ್ಸವ

01236

Bantwal: ತುಂಬೆ ಶ್ರೀ‌ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಕನ್ನ; ಲಕ್ಷಾಂತರ ಮೌಲ್ಯದ ನಗನಗದು ಲೂಟಿ

SALMAN-KHAN

Threat: ತಪ್ಪಾಯಿತೆಂದು ಕ್ಷಮೆ ಕೇಳಿ ಇಲ್ಲ 5ಕೋಟಿ ನೀಡಿ.. ಸಲ್ಮಾನ್ ಖಾನ್ ಗೆ ಮತ್ತೆ ಬೆದರಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Online Fraud: ಸುರಕ್ಷೆಗೆ ಹೀಗೆ ಮಾಡಿ: ಸದಾ ಜಾಗರೂಕರಾಗಿರಿ

Online Fraud: ಸುರಕ್ಷೆಗೆ ಹೀಗೆ ಮಾಡಿ: ಸದಾ ಜಾಗರೂಕರಾಗಿರಿ

Ajekar: ಬಾಲಕೃಷ್ಣ ಪೂಜಾರಿ ಪ್ರಕರಣ: ಮರಣೋತ್ತರ ಪರೀಕ್ಷೆಯಲ್ಲಿ ಉಸಿರುಗಟ್ಟಿ ಸಾವು ಉಲ್ಲೇಖ

Ajekar: ಬಾಲಕೃಷ್ಣ ಪೂಜಾರಿ ಪ್ರಕರಣ: ಮರಣೋತ್ತರ ಪರೀಕ್ಷೆಯಲ್ಲಿ ಉಸಿರುಗಟ್ಟಿ ಸಾವು ಉಲ್ಲೇಖ

Udupi-Dakshina Kannada: ಕರ್ನಾಟಕ ಜಾನಪದ ಪ್ರಶಸ್ತಿ ಪ್ರಕಟ

Udupi-Dakshina Kannada: ಕರ್ನಾಟಕ ಜಾನಪದ ಪ್ರಶಸ್ತಿ ಪ್ರಕಟ

ಮೀನುಗಾರಿಕೆ ಬಂದರುಗಳ ಕಾಮಗಾರಿ ಶೀಘ್ರ ಆರಂಭಿಸಿ: ಅಧಿಕಾರಿಗಳ ಸಭೆಯಲ್ಲಿ ಕೋಟ ಸೂಚನೆ

ಮೀನುಗಾರಿಕೆ ಬಂದರುಗಳ ಕಾಮಗಾರಿ ಶೀಘ್ರ ಆರಂಭಿಸಿ: ಅಧಿಕಾರಿಗಳ ಸಭೆಯಲ್ಲಿ ಕೋಟ ಸೂಚನೆ

Udupi: ಗೀತಾರ್ಥ ಚಿಂತನೆ-84: ಮಧುವಾದದ್ದನ್ನು ನಾಶಪಡಿಸುವವ ಮಧುಸೂದನ

Udupi: ಗೀತಾರ್ಥ ಚಿಂತನೆ-84: ಮಧುವಾದದ್ದನ್ನು ನಾಶಪಡಿಸುವವ ಮಧುಸೂದನ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

MUDA Case: ಸಿಬಿಐ ತನಿಖೆ ಕೋರಿದ್ದ ಅರ್ಜಿ ವಿಚಾರಣೆ ನ.26ಕ್ಕೆ ಮುಂದೂಡಿದ ಹೈಕೋರ್ಟ್

MUDA Case: ಸಿಬಿಐ ತನಿಖೆ ಕೋರಿದ್ದ ಅರ್ಜಿ ವಿಚಾರಣೆ ನ.26ಕ್ಕೆ ಮುಂದೂಡಿದ ಹೈಕೋರ್ಟ್

Belagavi: ತಹಶೀಲ್ದಾರ್ ಕೊಠಡಿಯಲ್ಲೇ ಸಿಬ್ಬಂದಿ ನೇಣಿಗೆ ಶರಣು, ಸ್ಥಳದಲ್ಲಿ ಡೆತ್ ನೋಟ್ ಪತ್ತೆ

Belagavi: ತಹಶೀಲ್ದಾರ್ ಕೊಠಡಿಯಲ್ಲೇ ಸಿಬ್ಬಂದಿ ನೇಣಿಗೆ ಶರಣು, ಸ್ಥಳದಲ್ಲಿ ಡೆತ್ ನೋಟ್ ಪತ್ತೆ

MUDA Case: ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ ಸಿದ್ದರಾಮಯ್ಯ

MUDA Case: ಲೋಕಾಯುಕ್ತ ನೋಟಿಸ್ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ

1

Mangaluru: ಪರಿಶಿಷ್ಟ ಜಾತಿ ಪಟ್ಟಿಗೆ ಮರುಸೇರ್ಪಡೆ ಆಗ್ರಹಿಸಿ ಕುಡುಬಿ ಸಮಾಜದವರಿಂದ ಜಾಥಾ

Canada: ಹಿಂದೂ ದೇಗುಲದ ಮೇಲೆ ದಾಳಿ-ಖಲಿಸ್ತಾನಿಗಳ ವಿರುದ್ಧ ಸಾವಿರಾರು ಭಾರತೀಯರ  ಪ್ರತಿಭಟನೆ

Canada: ಹಿಂದೂ ದೇಗುಲದ ಮೇಲೆ ದಾಳಿ-ಖಲಿಸ್ತಾನಿಗಳ ವಿರುದ್ಧ ಸಾವಿರಾರು ಭಾರತೀಯರ ಪ್ರತಿಭಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.