ಚಿಕ್ಕಮಗಳೂರು: ಒಂದೇ ಶಾಲೆಯ 67 ಮಂದಿಯಲ್ಲಿ ಕೋವಿಡ್ ಸೋಂಕು ದೃಢ; ಶಾಲೆ ಸೀಲ್ ಡೌನ್
Team Udayavani, Dec 5, 2021, 11:03 AM IST
ಚಿಕ್ಕಮಗಳೂರು: ಜಿಲ್ಲೆಯ ನರಸಿಂಹರಾಜಪುರ ತಾಲ್ಲೂಕಿನ ನವೋದಯಾ ವಿದ್ಯಾಲಯದಲ್ಲಿ ಕೋವಿಡ್ ಸ್ಫೋಟಗೊಂಡಿದೆ. ಮೂರು ದಿನದಲ್ಲಿ ವಿದ್ಯಾರ್ಥಿಗಳು, ಶಿಕ್ಷಕರು ಸೇರಿದಂತೆ ಶಾಲೆಯ 67 ಮಂದಿಯಲ್ಲಿ ಕೋವಿಡ್ ಸೋಂಕು ದೃಢವಾಗಿದೆ.
60 ವಿದ್ಯಾರ್ಥಿಗಳು 3 ಶಿಕ್ಷಕರು, 4 ಮಂದಿ ಸಿಬ್ಬಂದಿಯಲ್ಲಿ ಸೋಂಕು ದೃಢಪಟ್ಟಿದೆ.
ಬಾಳೆಹೊನ್ನೂರು ಸಮೀಪದ ಸಿಗೋಡುನಲ್ಲಿರುವ ವಸತಿ ಶಾಲೆಯಲ್ಲಿ ಮೊದಲು ಶಿಕ್ಷಕರಿಗೊಬ್ಬರಿಗೆ ಕೋವಿಡ್ ಕಾಣಿಸಿಕೊಂಡಿತ್ತು. ನಂತರ ಆರೋಗ್ಯ ಇಲಾಖೆಯು 418 ವಿಧ್ಯಾರ್ಥಿಗಳು, ಸಿಬ್ಬಂದಿಗಳ ಸ್ವ್ಯಾಬ್ ಪಡೆದು ತಪಾಸಣೆ ನಡೆಸಿದೆ. ಈ ವೇಳೆ 67 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ.
ಇದನ್ನೂ ಓದಿ:ಭಾರತದ ನಾಲ್ಕನೇ ಒಮಿಕ್ರಾನ್ ಪ್ರಕರಣ ಮಹಾರಾಷ್ಟ್ರದ ಡೊಂಬಿವಿಲಿಯಲ್ಲಿ ಪತ್ತೆ
ಜವಾಹರ್ ನವೋದಯ ವಿದ್ಯಾಲಯವನ್ನು ಜಿಲ್ಲಾಡಳಿತವು ಸೀಲ್ ಡೌನ್ ಮಾಡಿದ್ದು ಮುಂಜಾಗೃತೆ ಕ್ರಮ ಕೈಗೊಂಡಿದೆ.
ಕೋವಿಡ್ ಸೋಂಕು ಪತ್ತೆಯಾದವರಲ್ಲಿ ಯಾವುದೇ ಲಕ್ಷಣಗಳಿಲ್ಲ, ಸ್ವ್ಯಾಬ್ ಟೆಸ್ಟ್ ವೇಳೆ ಸೋಂಕು ದೃಡಪಟ್ಟಿದೆ. ಸೋಂಕಿತರನ್ನು ವಸತಿ ಶಾಲೆಯಲ್ಲಿಯೇ ಕ್ವಾರಂಟೈನ್ ಮಾಡಲಾಗಿದೆ.
ಸ್ಥಳಕ್ಕೆ ಡಿ.ಎಚ್.ಓ, ಡಾ.ಉಮೇಶ್, ಸರ್ವೇಕ್ಷಣಾಧಿಕಾರಿ ಡಾ.ಮಂಜುನಾಥ್, ಆರೋಗ್ಯ ಸಿಬ್ಬಂದಿ ಭೇಟಿ ನೀಡಿದ್ದಾರೆ. ಸ್ಥಳದಲ್ಲಿ ಆರೋಗ್ಯ ಇಲಾಖೆ ಸಿಬ್ಬಂದಿಗಳ ನಿಯೋಜನೆ ಮಾಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.