ಹೊಕ್ಕಾಡಿಗೋಳಿ ವೀರ-ವಿಕ್ರಮ ಜೋಡುಕರೆ ಬಯಲು ಕಂಬಳಕ್ಕೆ ಚಾಲನೆ, ಕಂಬಳ ಸೀಸನ್ ನ ಪ್ರಥಮ ಕಂಬಳ

Team Udayavani, Dec 5, 2021, 1:40 PM IST

ಹೊಕ್ಕಾಡಿಗೋಳಿ ವೀರ-ವಿಕ್ರಮ ಜೋಡುಕರೆ ಬಯಲು ಕಂಬಳಕ್ಕೆ ಚಾಲನೆ, ಕಂಬಳ ಸೀಸನ್ ನ ಪ್ರಥಮ ಕಂಬಳ

ಪುಂಜಾಲಕಟ್ಟೆ: ಬಂಟ್ವಾಳ ತಾಲೂಕಿನ ಎಲಿಯನಡುಗೋಡು ಮತ್ತು ಬೆಳ್ತಂಗಡಿ ತಾಲೂಕಿನ ಆರಂಬೋಡಿ ಗ್ರಾಮದ ಗಡಿ ಭಾಗದಲ್ಲಿ ಮಹಿಷಮರ್ಧಿನಿ ಕಂಬಳ ಸಮಿತಿ ವತಿಯಿಂದ ನಡೆಯುವ ಇತಿಹಾಸ ಪ್ರಸಿದ್ಧ ಹೊಕ್ಕಾಡಿಗೋಳಿ ವೀರ-ವಿಕ್ರಮ  ಜೋಡುಕರೆ ಬಯಲು ಕಂಬಳ ಮತ್ತು ಈ ವರ್ಷದ ಪ್ರಥಮ ಕಂಬಳಕ್ಕೆ ಭಾನುವಾರ ಬೆಳಿಗ್ಗೆ ಅದ್ದೂರಿ ಚಾಲನೆ ನೀಡಲಾಯಿತು.

ಪೂಂಜ ಕ್ಷೇತ್ರದ ಆಸ್ರಣ್ಣ ಕೃಷ್ಣ ಪ್ರಸಾದ್ ಆಚಾರ್ಯ ಅವರು ಕಂಬಳ ಉದ್ಘಾಟಿಸಿದರು. ಪೂಂಜ ಶ್ರೀ ಪಂಚದುರ್ಗಾ ಪರಮೇಶ್ವರಿ ದೇವಸ್ಥಾನ ಮತ್ತು ಇಲ್ಲಿನ ಮುಜಿಲ್ನಾಯಿ ದೈವಸ್ಥಾನ ಜೊತೆಗೆ ವಿಶೇಷ ಧಾರ್ಮಿಕ ನಂಟು ಹೊಂದಿರುವ ಈ ಕಂಬಳಕ್ಕೆ ಧಾರ್ಮಿಕ ಮತ್ತು ವೈಜ್ಞಾನಿಕ ಸಂಬಂಧವೂ ಇದೆ ಎಂದು ಅವರು ಶುಭ ಹಾರೈಸಿದರು.

ಕಂಬಳ ಸಮಿತಿ ಅಧ್ಯಕ್ಷ ನೋಣಾಲ್‌ಗುತ್ತು ರಶ್ಮಿತ್ ಶೆಟ್ಟಿ ಕೈತ್ರೋಡಿ  ಅಧ್ಯಕ್ಷತೆ ವಹಿಸಿದ್ದರು.  ಕರಾವಳಿ ರೈತರ ಜಾನಪದ ಕ್ರೀಡೆ ಕಂಬಳವು ತುಳುನಾಡಿನ ಸಂಸ್ಕೃತಿಯ ಪ್ರತೀಕವಾಗಿದೆ ಎಂದರು.

ಪೂಂಜ ಕ್ಷೇತ್ರದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ರತ್ನಕುಮಾರ್ ಚೌಟ, ಆರಂಬೋಡಿ ಗ್ರಾ.ಪಂ.ನಿಕಟಪೂರ್ವ ಅಧ್ಯಕ್ಷ ಪ್ರಭಾಕರ ಹುಲಿಮೇರು, ಕುಕ್ಕಿಪಾಡಿ ಗ್ರಾ. ಪಂ.ಉಪಾಧ್ಯಕ್ಷ ಯೋಗೀಶ್ ಆಚಾರ್ಯ ಎಲ್ಪೇಲು, ಸಿದ್ಧಕಟ್ಟೆ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಪ್ರಭಾಕರ ಪ್ರಭು, ಜಿಲ್ಲಾ ಕಂಬಳ ಸಮಿತಿ ಅಧ್ಯಕ್ಷ ಎರ್ಮಾಳ್ ರೋಹಿತ್ ಹೆಗ್ಡೆ, ಪ್ರಧಾನ ಕಾರ್ಯದರ್ಶಿ ರಕ್ಷಿತ್ ಜೈನ್ ನಾರಾವಿ , ಮಾಜಿ ಕಾರ್ಯದರ್ಶಿ ಎಡ್ತೂರು ರಾಜೀವ ಶೆಟ್ಟಿ ಶುಭ ಹಾರೈಸಿದರು.

ಕಂಬಳ ಸಮಿತಿ ಗೌರವಾಧ್ಯಕ್ಷ ಸಂಜೀವ ಶೆಟ್ಟಿ ಗುಂಡ್ಯಾರು, ಪದಾಧಿಕಾರಿಗಳಾದ  ಬಾಬು ರಾಜೇಂದ್ರ ಶೆಟ್ಟಿ ಅಜ್ಜಾಡಿ, ಕಿರಣ್ ಕುಮಾರ್ ಮಂಜಿಲ, ಸಂದೇಶ ಶೆಟ್ಟಿ ಪೊಡುಂಬ, ಪುಷ್ಪರಾಜ ಜೈನ್, ಎಚ್.ಹರೀಶ ಹಿಂಗಾಣಿ, ಹರಿಪ್ರಸಾದ್ ಶೆಟ್ಟಿ ಕುರುಡಾಡಿ, ರಾಜೇಶ ಶೆಟ್ಟಿ ಕೊನೆರೊಟ್ಟು, ರಾಘವೇಂದ್ರ ಭಟ್ ಹೊಕ್ಕಾಡಿಗೋಳಿ, ಜನಾರ್ದನ ಬಂಗೇರ ತಿಮರಡ್ಕ, ನಿತ್ಯಾನಂದ ಪೂಜಾರಿ ಕೆಂತಲೆ, ಪ್ರಣೀತ್ ಹಿಂಗಾಣಿ, ಕೃಷ್ಣ ಶೆಟ್ಟಿ ಉಮನೊಟ್ಟು, ರಾಜೇಶ್ ಜಿ. ಶೆಟ್ಟಿ, ಪ್ರಮುಖರಾದ ಮಹಾಬಲ ಪೂಜಾರಿ ಕುಂಜಾಡಿ, ಸ್ಥಳದಾನಿಗಳಾದ ಸುಧೀರ್ ಶೆಟ್ಟಿ , ಸುಧಾಕರ ಚೌಟ ಬಾವ, ರಾಜು ಗುಮ್ಮಣ್ಣ ಶೆಟ್ಟಿ, ಪ್ರವೀಣ ಕುಲಾಲ್, ಹರೀಶ ಶೆಟ್ಟಿ, ಸುಂದರ ಪೂಜಾರಿ, ತೀರ್ಪುಗಾರರಾದ  ವಿಜಯ ಕುಮಾರ್ ಕಂಗಿನಮನೆ, ಸುಧಾಕರ ಶೆಟ್ಟಿ, ವಿದ್ಯಾಧರ ಜೈನ್, ರವೀಂದ್ರ ಕುಮಾರ್, ಕೋಣಗಳನ್ನು ಬಿಡಿಸುವ ವಲೇರಿಯನ್ ಡೇಸಾ, ಸುದೇಶ್ ಕುಮಾರ್,ಜನಾರ್ದನ ನಾಯ್ಕ್, ಅಜಿತ್ ಕುಮಾರ್, ಸುರೇಶ್ ಶೆಟ್ಟಿ, ಮಹಾವೀರ ಜೈನ್, ಸತೀಶ್ ಕುಮಾರ್, ಪ್ರಕಾಶ ಕಜೆಕಾರ್, ಸುದೀಪ್, ಯಶವಂತ, ಸಂಕಪ್ಪ ಶೆಟ್ಟಿ, ಶ್ರೀಧರ ಆಚಾರ್ಯ ಮತ್ತಿತರಿದ್ದರು.

ಕಂಬಳ ಸಮಿತಿ ಗೌರವ ಸಲಹೆಗಾರ ಸುರೇಶ ಶೆಟ್ಟಿ ಸಿದ್ದಕಟ್ಟೆ ಸ್ವಾಗತಿಸಿ, ವಂದಿಸಿದರು. ಪ್ರಚಾರ ಸಮಿತಿ ಸಂಚಾಲಕ ಮೋಹನ್ ಕೆ.ಶ್ರೀಯಾನ್ ಕಾರ್ಯಕ್ರಮ ನಿರೂಪಿಸಿದರು.

ಇದೇ ವೇಳೆ ಓಟದ ಕೋಣಗಳನ್ನು ಕೊಂಬು, ಬ್ಯಾಂಡ್, ವಾದ್ಯಗಳ ಘೋಷದೊಂದಿಗೆ ಸಾಂಪ್ರದಾಯಕವಾಗಿ ಕಂಬಳ ಕರೆಗೆ ಇಳಿಸಲಾಯಿತು. ಓಟದ ಕೋಣಗಳ ಹಣೆಗೆ ಕುಂಕುಮ ಹಚ್ಚಿ , ಕೋಣಗಳ ಯಜಮಾನರಿಗೆ. ಅಡಿಕೆ ಸಹಿತ ವೀಳ್ಯೆದೆಲೆ ನೀಡಿಕಂಬಳ ಪದಾಧಿಕಾರಿಗಳು ಸ್ವಾಗತಿಸಿದರು. ವಾಮದಪದವು ಸಮುದಾಯ ಆರೋಗ್ಯ ಕೇಂದ್ರ ವತಿಯಿಂದ ಸ್ಥಳದಲ್ಲೇ ಕೋವಿಡ್ ತಪಾಸಣೆ ಮತ್ತು ಲಸಿಕೆ ವಿತರಣೆ ನಡೆಯಿತು.

ಟಾಪ್ ನ್ಯೂಸ್

Shimoga; Deport Zameer Ahmed: ​​MLA Channabasappa

Shimoga; ಜಮೀರ್‌ ಅವರನ್ನು ಗಡಿಪಾರು ಮಾಡಿ: ಶಾಸಕ ಚನ್ನಬಸಪ್ಪ

Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು

Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು

Bhairathi Ranagal: ಭೈರತಿ ಪಾತ್ರಕ್ಕೊಂದು ಸದುದ್ದೇಶವಿದೆ..: ಶಿವರಾಜ್‌ ಕುಮಾರ್‌

Bhairathi Ranagal: ಭೈರತಿ ಪಾತ್ರಕ್ಕೊಂದು ಸದುದ್ದೇಶವಿದೆ..: ಶಿವರಾಜ್‌ ಕುಮಾರ್‌

Notice: ಸಂಗೀತ ಕಾರ್ಯಕ್ರಮಕ್ಕೂ ಮೊದಲು ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Leopard: ಮನೆಯ ತಾರಸಿ ಮೇಲೆ ಚಿರತೆ ಓಡಾಟ… ಆತಂಕದಲ್ಲಿ ಗ್ರಾಮಸ್ಥರು

Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು

ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್‌ ರಾಷ್ಟ್ರ?

Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್‌ ರಾಷ್ಟ್ರ?

India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ

India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

POLICE-5

Kinnigoli: ಪಕ್ಷಿಕೆರೆ; ಕೊಲೆ ಪ್ರಕರಣ ಮತ್ತಷ್ಟು ಸಂಗತಿಗಳು ಬೆಳಕಿಗೆ?

K L RAhul

K.L. Rahul; ಕುಡ್ಲದ ಜನರ ಬೆಂಬಲವೇ ಸಾಧನೆಗೆ ಕಾರಣ

Mangaluru: ಸಮಾಜದ ಕರುಳು ಹಿಂಡುವ “ಆತ್ಮಹ*ತ್ಯೆ’  

Mangaluru: ಸಮಾಜದ ಕರುಳು ಹಿಂಡುವ “ಆತ್ಮಹ*ತ್ಯೆ’  

Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ

Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ

1-nirmala

Dharmasthala; ಗ್ರಾಮಾಭಿವೃದ್ಧಿ ಯೋಜನೆ ಜನರ ನಾಡಿಮಿಡಿತ: ನಿರ್ಮಲಾ ಸೀತಾರಾಮನ್‌

MUST WATCH

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

ಹೊಸ ಸೇರ್ಪಡೆ

4-editorial

Editorial: ಪಾಕ್‌ ಪ್ರೇರಿತ ಉಗ್ರರ ತಂತ್ರಕ್ಕೆ ಸೂಕ್ತ ಪ್ರತಿತಂತ್ರ ಈಗಿನ ತುರ್ತು

3-kananda-1

Kannada: ಕನ್ನಡನಾಡಲ್ಲಿ ಕನ್ನಡ ಕಲಿಕೆಯ ಹಾಡು-ಪಾಡು

Shimoga; Deport Zameer Ahmed: ​​MLA Channabasappa

Shimoga; ಜಮೀರ್‌ ಅವರನ್ನು ಗಡಿಪಾರು ಮಾಡಿ: ಶಾಸಕ ಚನ್ನಬಸಪ್ಪ

Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು

Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು

Bhairathi Ranagal: ಭೈರತಿ ಪಾತ್ರಕ್ಕೊಂದು ಸದುದ್ದೇಶವಿದೆ..: ಶಿವರಾಜ್‌ ಕುಮಾರ್‌

Bhairathi Ranagal: ಭೈರತಿ ಪಾತ್ರಕ್ಕೊಂದು ಸದುದ್ದೇಶವಿದೆ..: ಶಿವರಾಜ್‌ ಕುಮಾರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.