ಬಿಜೆಪಿ ಜತೆ ಜೆಡಿಎಸ್ ವಿಲೀನ ಆಗಲಿದೆ: ಲಕ್ಷ್ಮಣ್
Team Udayavani, Dec 5, 2021, 3:41 PM IST
ಮೈಸೂರು: ತಮಗೆ ಬಂದಿರುವ ಮಾಹಿತಿ ಪ್ರಕಾರ ಜೆಡಿಎಸ್ ಪಕ್ಷವು ಬಿಜೆಪಿ ಜೊತೆ ವಿಲೀನವಾಗಲಿದೆ. ಈ ಕುರಿತು ಪ್ರಧಾನಿ ನರೇಂದ್ರ ಮೋದಿ ಹಾಗೂ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಮಧ್ಯೆ ಮಾತುಕತೆ ನಡೆದಿದೆ ಎಂದು ಕಾಂಗ್ರೆಸ್ ಸಮಿತಿ ವಕ್ತಾರ ಎಂ. ಲಕ್ಷ್ಮಣ್ ತಿಳಿಸಿದರು.
ರಾಜ್ಯದ ಜಾತ್ಯತೀತ ಜನತಾದಳ ಪಕ್ಷವು ತನ್ನ ನೀತಿ, ನಿಲುವು, ತತ್ವ , ಸಿದ್ದಾಂತಗಳು ಏನೆಂಬುದನ್ನು ಸ್ಪಷ್ಟಪಡಿಸಬೇಕು. ಜೆಡಿಎಸ್ ಪಕ್ಷವು ಜಾತ್ಯತೀತವಾದಿಗಳೇ? ಕೋಮುವಾದಿಗಳೇ? ಇದನ್ನು ಅವರೇ ತಿಳಿಸಬೇಕು. ಜೆಡಿಎಸ್ ಪಕ್ಷವು ಫ್ಯಾಮಿಲಿ ಟ್ರಸ್ಟ್ ಪಕ್ಷವಾಗಿದೆ. ಬಿಜೆಪಿಯ ಬಿ ಟೀಂ ಜೆಡಿಎಸ್ ಆಗಿದೆ ಎಂದು ಪತ್ರಿಕಾಗೋಷ್ಠಿಯಲ್ಲಿ ಟೀಕಿಸಿದರು.
ಇದನ್ನೂ ಓದಿ:- ಜಗತ್ತಿನ ಎಲ್ಲ ಭಾಷೆಗಳಿಗೆ ಕನ್ನಡವೇ ತಾಯಿ: ಶೆಟ್ಟಿ
ಸಿಂದಗಿ, ಹಾನಗಲ್ ಉಪ ಚುನಾವಣೆ ವೇಳೆ ಆರ್‌ಎಸ್‌ಎಸ್ ಅನ್ನು ಕಟುವಾಗಿ ಟೀಕಿಸುತ್ತಿದ್ದ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರು ಈಗೇಕೆ ಆರ್‌ಎಸ್‌ಎಸ್ ಬಗ್ಗೆ ಮೌನವಾಗಿದ್ದಾರೆ ಎಂದು ಪ್ರಶ್ನಿಸಿದರು. ಮೈಸೂರು-ಚಾಮರಾಜನಗರ ಜಿಲ್ಲೆಗಳ ಸ್ಥಳೀಯ ಸಂಸ್ಥೆಗಳಿಂದ ವಿಧಾನಪರಿಷತ್ತಿಗೆ ನಡೆಯುತ್ತಿರುವ ಚುನಾವಣೆಯಲ್ಲಿ ಮತದಾರರಿಗೆ ಬೆಳ್ಳಿ ನಾಣ್ಯದ ಆಮಿಷ ಒಡ್ಡಲಾಗುತ್ತಿದೆ ಎಂದು ಲಕ್ಷ್ಮಣ್ ಆರೋಪಿಸಿದರು.
ಈ ಬೆಳ್ಳಿ ನಾಣ್ಯದಲ್ಲಿ ಮಂಜುನಾಥ ಸ್ವಾಮಿ ದೇವರ ಚಿತ್ರವಿದೆ. ಬಿಜೆಪಿ ಅಥವಾ ಜೆಡಿಎಸ್ ಯಾವ ಪಕ್ಷದವರು ಹೀಗೆ ಬೆಳ್ಳಿ ನಾಣ್ಯದ ಆಮಿಷವೊಡ್ಡುತ್ತಿದ್ದಾರೆ ಎಂಬುದು ಗೊತ್ತಾಗಿಲ್ಲ. ಈ ಕುರಿತು ಚುನಾವಣಾಧಿಕಾರಿಗಳಿಗೆ ದೂರು ನೀಡುವುದಾಗಿ ಅವರು ತಿಳಿಸಿದರು. ಪೊಲೀಸರು ಎಂಜಲು ಕಾಸು ತಿಂದು ಬದುಕುತ್ತಿದ್ದಾರೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ಹೇಳಿಕೆಗೆ ಲಕ್ಷ್ಮಣ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hunsur: ಬೈಕ್‌ನಿಂದ ಬಿದ್ದು ಹಿಂಬದಿ ಸವಾರ ಸಾವು
Actor Health: ಸ್ವಲ್ಪ ಜರುಗಿದ ದರ್ಶನ್ ಬೆನ್ನುಮೂಳೆ; ತುರ್ತಾಗಿ ಆಪರೇಷನ್ ಇಲ್ಲ: ವೈದ್ಯರು
Name Road: ರಸ್ತೆಗೆ ಸಿದ್ದರಾಮಯ್ಯ ಹೆಸರಿಟ್ಟರೇ ತಪ್ಪೇನು?: ಪ್ರತಾಪ್ ಸಿಂಹ
Hunsur: ಕೆಲ ಗ್ರಾಮಗಳಲ್ಲಿ ಒಂಟಿ ಸಲಗದ ಉಪಟಳ; ಬೆಳೆ ನಾಶ, ರೈತರು ಕಂಗಾಲು
Congress Government: ಸಿದ್ದರಾಮಯ್ಯ ಅವಧಿಯಲ್ಲೇ ದ್ವೇಷದ ರಾಜಕಾರಣ ಬೇಸರ ತಂದಿದೆ: ಸೋಮಣ್ಣ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mangaluru: ನಗರದಲ್ಲಿ ತೆರೆದುಕೊಂಡ ಗ್ರಾಮೀಣ ಬದುಕು
Belagavi; ಅಗಲಿದ ಮನಮೋಹನ್ ಸಿಂಗ್ ಅವರಿಗೆ ಕಾಂಗ್ರೆಸ್ ಭಾವಪೂರ್ಣ ಶ್ರದ್ಧಾಂಜಲಿ
Kulur: ಗೈಲ್ ಪೈಪ್‌ಲೈನ್ ಕಾಮಗಾರಿ; ಹೆದ್ದಾರಿ ಕುಸಿತ
Surathkal: ಬೇಕು ವ್ಯವಸ್ಥಿತ ಒಳಚರಂಡಿ; ಸೋರುತ್ತಿರುವ ವೆಟ್‌ವೆಲ್‌ಗಳಿಂದ ಮಾಲಿನ್ಯ
Sandalwood Rewind 2024; ಹಳಬರಿಗೆ ಜೈಕಾರ ಹೊಸಬರಿಗೆ ಉರಿ ಖಾರ; ಚಂದನವನದ ಚೆಂದದ ಲೆಕ್ಕ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.