ಸೇನೆಯಿಂದ ನಿವೃತ್ತಿ ಹೊಂದಿ ಹುಟ್ಟೂರಿಗೆ ಆಗಮಿಸಿದ ಭಾಸ್ಕರ ಕಾರಿಂಜರಿಗೆ ಸನ್ಮಾನ
Team Udayavani, Dec 5, 2021, 5:13 PM IST
ಅರಂತೋಡು: ಕನಕಮಜಲು ಗ್ರಾಮದ ಭಾಸ್ಕರ ಕಾರಿಂಜರವರು ಅರೆಸೇನಾ ಪಡೆಯ ಸೆಂಟ್ರಲ್ ರಿಸರ್ವ್‌ಡ್ ಪೋಲಿಸ್ ಫೋರ್ಸ್‌ನಲ್ಲಿ ಸೇವೆ ಸಲ್ಲಿಸಿ ಡಿ. 1 ರಂದು ನಿವೃತ್ತರಾಗಿದ್ದು, ಡಿ. 5 ರಂದು ತನ್ನ ಹುಟ್ಟೂರು ಕನಕಮಜಲಿನ ಕಾರಿಂಜಕ್ಕೆ ಆಗಮಿಸಿದರು. ತರವಾಡು ದೈವಸ್ಥಾನದ ಆಶೀರ್ವಾದ ಪಡೆದ ನಂತರ ತನ್ನ ಮನೆಯಲ್ಲಿ ನಡೆದ ಸತ್ಯನಾರಾಯಣ ಪೂಜೆಯಲ್ಲಿ ಭಾಗಿಯಾದ ನಂತರ ಕಾರಿಂಜ ಕುಟುಂಬಸ್ಥರ ಪರವಾಗಿ ಸನ್ಮಾನ ಕಾರ್ಯಕ್ರಮ ನಡೆಯಿತು.
ನಿವೃತ್ತ ಹಿರಿಯ ಶಿಕ್ಷಕ ಕೇಪು ಸುಂದರ್ ಮಾಸ್ತರ್ ಅವರು ನಿವೃತ್ತ ಸೈನಿಕ ದಂಪತಿಗಳನ್ನು ಸನ್ಮಾನಿಸಿ ಶುಭ ಹಾರೈಸಿದರು.
ರಾಷ್ಟ್ರೀಯ ಸ್ವಯಂಸೇವಕ ಸಂಘದ ನ. ಸೀತಾರಾಮ, ಕಾರಿಂಜ ದೈವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ ಕುಶಾಲಪ್ಪ ಕಾರಿಂಜ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಕಾರಿಂಜ ಬಾಲಕೃಷ್ಣ ಗೌಡ ದಂಪತಿಗಳು, ಲೋಲಾಕ್ಷ ಕಾರಿಂಜ, ಉಮೇಶ್ ಕಾರಿಂಜ, ಭಾಸ್ಕರ ಕಾರಿಂಜರ ಧರ್ಮಪತ್ನಿ ಶ್ರೀಮತಿ ಆರತಿ ಮತ್ತು ಮಕ್ಕಳು ಸೇರಿದಂತೆ ಕುಟುಂಬಸ್ಥರು ಬಂಧು ಮಿತ್ರರು ಉಪಸ್ಥಿತರಿದ್ದರು.
ನಿವೃತ್ತ ಶಿಕ್ಷಕ ಸೀತಾರಾಮ ಬುಡ್ಲೆಗುತ್ತು ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಶಿಕ್ಷಕ ಜಯಪ್ರಸಾದ್ ಕಾರಿಂಜ ವಂದಿಸಿದರು. ಇದೇ ಸಂದರ್ಭ ಹಿರಿಯ ನಿವೃತ್ತ ಶಿಕ್ಷಕ ಕೇಪು ಸುಂದರ್ ಮಾಸ್ತರ್ ಅವರನ್ನು ಸನ್ಮಾನಿಸಲಾಯಿತು. ರಾಷ್ಟ್ರೀಯ ಸ್ವಯಂಸೇವಕ ಸಂಘಕ್ಕೆ ಮಂಗಳ ನಿಧಿಯನ್ನು ಸಮರ್ಪಿಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Cricket: ಚಾಂಪಿಯನ್ಸ್ ಟ್ರೋಫಿ ವೇಳಾಪಟ್ಟಿ ಅಂತಿಮ; ಭಾರತದ ಪಂದ್ಯಗಳಿಗೆ ಯುಎಇ ಆತಿಥ್ಯ
Arrested: ನಟ ಸುನಿಲ್ ಪಾಲ್, ಮುಸ್ತಾಕ್ ಅಪಹರಣ; ಎನ್‌ಕೌಂಟರ್ ಮೂಲಕ ಪ್ರಮುಖ ಆರೋಪಿ ಬಂಧನ
Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ
Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್
ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.