ಅರ್ಧ ಜನಸಂಖ್ಯೆಗೆ ಲಸಿಕೆ; 127.61 ಕೋಟಿ ಡೋಸ್ ಲಸಿಕೆ; ಕೇಂದ್ರ ಸರಕಾರ ಘೋಷಣೆ
Team Udayavani, Dec 6, 2021, 6:20 AM IST
ಹೊಸದಿಲ್ಲಿ: ದೇಶದಲ್ಲಿ ಒಮಿಕ್ರಾನ್ ರೂಪಾಂತರಿ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದೆ. ಅದಕ್ಕೆ ಪೂರಕವಾಗಿ ಲಸಿಕೆ ಹಾಕಿಸಿಕೊಳ್ಳು ವವರ ಸಂಖ್ಯೆಯೂ ಹೆಚ್ಚಾಗತೊಡಗಿದೆ.
ರವಿವಾರಕ್ಕೆ ಮುಕ್ತಾಯವಾದಂತೆ ದೇಶದಲ್ಲಿ 18 ವರ್ಷ ಮೇಲ್ಪಟ್ಟವರ ಒಟ್ಟು ಸಂಖ್ಯೆಯ ಶೇ.50ರಷ್ಟು ಮಂದಿಗೆ ಪೂರ್ಣ ಪ್ರಮಾಣದಲ್ಲಿ ಲಸಿಕೆ ಹಾಕಲಾಗಿದೆ. ಈ ಬಗ್ಗೆ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಮನ್‌ಸುಖ್ ಮಾಂಡವೀಯಾ ಟ್ವೀಟ್ ಮಾಡಿದ್ದಾರೆ.
ದೇಶದಲ್ಲಿ 127.61 ಕೋಟಿ ಡೋಸ್ ಲಸಿಕೆ ನೀಡಲಾಗಿದೆ ಎಂದೂ ಅವರು ಬರೆದುಕೊಂಡಿದ್ದಾರೆ. ಶೇ.84.8 ಮಂದಿ 18 ವರ್ಷ ಮೇಲ್ಪಟ್ಟವರಿಗೆ ಮೊದಲ ಡೋಸ್ ಲಸಿಕೆ ನೀಡಲಾಗಿದೆ. ಅದಕ್ಕಾಗಿ 1,32,44,514 ಸೆಷನ್‌ಗಳನ್ನು ಬಳಕೆ ಮಾಡಿಕೊಳ್ಳಲಾಗಿದೆ ಎಂದು ಅವರು ಹೇಳಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರ ಸೂಚನೆ ಹಿನ್ನೆಲೆಯಲ್ಲಿ ಜ.16ರಂದು 18 ವರ್ಷ ಮೇಲ್ಪಟ್ಟವರಿಗೆ ಲಸಿಕೆ ನೀಡಲು ಆರಂಭಿಸಲಾಗಿತ್ತು. ಕೇವಲ 11 ತಿಂಗಳಲ್ಲಿ ಪ್ರಾಪ್ತ ವಯಸ್ಕರ ಪೈಕಿ ಶೇ.50ರಷ್ಟು ಮಂದಿಗೆ ಲಸಿಕೆ ಹಾಕಿಸಲಾಗಿದೆ ಎಂದು ಸಚಿವ ಮನ್‌ಸುಖ್ ಮಾಂಡವೀಯಾ ಟ್ವೀಟ್‌ನಲ್ಲಿ ಹರ್ಷ ವ್ಯಕ್ತಪಡಿಸಿದ್ದಾರೆ. ಮಾ.1ರಿದ 60 ವರ್ಷ ಮೇಲ್ಪಟ್ಟ ವರಿಗೆ ಮತ್ತು ಎ.1ರಿಂದ 45 ವರ್ಷ ಮೇಲ್ಪಟ್ಟವರಿಗೆ ಲಸಿಕೆ ಹಾಕಿಸುವ ಕಾರ್ಯಕ್ರಮ ಕೈಗೆತ್ತಿಕೊಳ್ಳಲಾಗಿತ್ತು.
ಇಂದು ನಿರ್ಧಾರ?
ಸಹಜವಾಗಿ ರೋಗ ನಿರೋಧಕ ಲಕ್ಷಣ ಹೊಂದಿಲ್ಲದ ವ್ಯಕ್ತಿಗಳಿಗೆ ಹೆಚ್ಚವರಿ ಡೋಸ್ ಲಸಿಕೆ ನೀಡುವ ಬಗ್ಗೆ ಸೋಮ ವಾರ (ಡಿ.6) ನಿರ್ಧರಿಸಲಾಗುತ್ತದೆ. ಲಸಿಕೆ ಹಾಕುವುದಕ್ಕಾಗಿನ ರಾಷ್ಟ್ರೀಯ ಸಲಹಾ ಸಮಿತಿ (ಎನ್‌ಟಿಎಜಿಐ) ಸಭೆ ನಡೆಯ ಲಿದೆ. ಅದರಲ್ಲಿ ಈ ಬಗ್ಗೆ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ.
ಇದನ್ನೂ ಓದಿ:ಲಾವಾ ಸ್ಫೋಟಕ್ಕೆ 13 ಸಾವು : ಇಂಡೋನೇಷ್ಯಾದ ಪೂರ್ವಭಾಗದಲ್ಲಿರುವ ಲುಮಾಜಂಗ್‌ನಲ್ಲಿ ಘಟನೆ
ಒಂದೇ ದಿನ 2,796 ಸಾವು
ಬಿಹಾರದಲ್ಲಿ ಸೋಂಕಿನಿಂದ ಅಸುನೀಗಿರುವವರ ಲೆಕ್ಕಾಚಾರ ಪರಿಷ್ಕರಣೆ ಮಾಡಿದ್ದರಿಂದ ಶನಿವಾರದಿಂದ ರವಿವಾರದ ಅವಧಿಯಲ್ಲಿ ಸಾವಿನ ಸಂಖ್ಯೆ 2,796ಕ್ಕೆ ಏರಿಕೆಯಾಗಿದೆ. ಜು.21ರಂದು 3,998 ಮಂದಿ ದಿನವಹಿ ಸಾವಿನ ಸಂಖ್ಯೆ ಏರಿಕೆಯಾಗಿತ್ತು. 24 ಗಂಟೆಗಳ ಅವಧಿಯಲ್ಲಿ 8,895 ಹೊಸ ಸೋಂಕು ಪ್ರಕರಣಗಳು ದೃಢಪಟ್ಟಿವೆ.
ಯಾವ್ಯಾವ ದೇಶಗಳಲ್ಲಿ ಕಡ್ಡಾಯ?
ಆಸ್ಟ್ರಿಯಾ, ಜರ್ಮನಿ, ಗ್ರೀಸ್, ಯುಕೆ, ಇಟಲಿ, ಫ್ರಾನ್ಸ್, ಸ್ವೀಡನ್, ಇಂಡೋನೇಷ್ಯಾ, ತುರ್ಕ್ ಮೆನಿಸ್ಥಾನ್, ಕೆನಡಾ, ಕೋಸ್ಟರಿಕಾ, ಡೆನ್ಮಾರ್ಕ್, ಈಜಿಪ್ಟ್, ಫಿಜಿ, ಹಂಗೇರಿ, ಲಾಟ್ವಿಯಾ, ರಷ್ಯಾ, ಸೌದಿ ಅರೇಬಿಯಾ, ಟ್ಯುನೀಶಿಯಾ, ಟರ್ಕಿ, ಉಕ್ರೇನ್, ಯುನೈಟೆಡ್ ಸ್ಟೇಟ್ಸ್, ನ್ಯೂಜಿಲ್ಯಾಂಡ್, ಚೀನ, ಸ್ವಿಟ್ಸರ್ಲೆಂಡ್ ಇತ್ಯಾದಿ.
ಪುದುಚೇರಿಯಲ್ಲಿ
“ಲಸಿಕೆ ಕಡ್ಡಾಯ’
ಪುದುಚೇರಿ: ಕೇಂದ್ರಾಡಳಿತ ಪ್ರದೇಶ ಪುದುಚೇರಿಯಲ್ಲಿ ಇನ್ನು ಎಲ್ಲರೂ ಕಡ್ಡಾಯವಾಗಿ ಕೊರೊನಾ ಲಸಿಕೆ ಪಡೆದುಕೊಳ್ಳಲೇಬೇಕು. ಇಲ್ಲದಿದ್ದರೆ, ಅಂಥವರ ವಿರುದ್ಧ ಕಠಿಣ ಕಾನೂನು ಕ್ರಮ ಗ್ಯಾರಂಟಿ!
ಜಾಗತಿಕವಾಗಿ ಒಮಿಕ್ರಾನ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಹಲವು ದೇಶಗಳು, ರಾಜ್ಯಗಳು ಕೊರೊನಾ ಪ್ರಸರಣ ತಡೆಯಲು ವಿವಿಧ ಕ್ರಮಗಳನ್ನು ಘೋಷಿಸುತ್ತಿರುವ ನಡುವೆಯೇ ಪುದುಚೇರಿ ಸರಕಾರ ಇಂಥದ್ದೊಂದು ಘೋಷಣೆ ಮಾಡಿದೆ. “ಲಸಿಕೆ ಕಡ್ಡಾಯ’ ನಿಯಮವು ರವಿವಾರದಿಂದಲೇ ಜಾರಿಗೆ ಬಂದಿದೆ. ಪುದುಚೇರಿ ಸಾರ್ವಜನಿಕ ಆರೋಗ್ಯ ಕಾಯ್ದೆ, 1973ರ ಸೆಕ್ಷನ್ 6 ಮತ್ತು ಸೆಕ್ಷನ್ 54(1)ರ ನಿಬಂಧನೆಗಳ ಪ್ರಕಾರ ಇದನ್ನು ಜಾರಿ ಮಾಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
JPC on Adani issue;ನಿಯಮ 267 ಅಡಿಯಲ್ಲಿ ಪ್ರಸ್ತಾಪಿಸಲು ಅವಕಾಶ ನೀಡದ್ದಕ್ಕೆ ಖರ್ಗೆ ಆಕ್ರೋಶ
Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ
Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ
Andaman: ಕೋಸ್ಟ್ ಗಾರ್ಡ್ ಕಾರ್ಯಾಚರಣೆ… ಮೀನುಗಾರಿಕಾ ದೋಣಿಯಲ್ಲಿದ್ದ 5ಟನ್ ಮಾದಕ ವಸ್ತು ವಶ
Maharashtra: ಕಾಂಗ್ರೆಸ್ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.