ದನಗಳನ್ನು ಕದ್ದು ಮಾಂಸ ಮಾರುತ್ತಿದ್ದ ಇಬ್ಬರ ಬಂಧನ
Team Udayavani, Dec 6, 2021, 10:01 AM IST
ಭಟ್ಕಳ: ದನಗಳನ್ನು ಕದ್ದು ಮಾಂಸ ಮಾರಾಟ ಮಾಡುತ್ತಿದ್ದ ತಾಲೂಕಿನ ಗುಳ್ಮಿಯ ಮನೆ ಮೇಲೆ ದಾಳಿ ನಡೆಸಿದ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.
ಕಾರ್ಯಾಚರಣೆ ವೇಳೆ ಇನ್ನೋರ್ವ ಆರೋಪಿ ತಪ್ಪಿಸಿಕೊಂಡಿದ್ದಾನೆ. ಕಾರ್ಕಳ ಮೂಲದ ಜಲೀಲ್ ಹುಸೇನ್ ಹಾಗೂ ಕಿನ್ನಿಗೋಳಿಯ ಮುಸ್ತಫಾ ಮೊಹಮ್ಮದ್ ಬಂಧಿತ ಆರೋಪಿಗಳು.
ತಾಲೂಕಿನ ಗುಳ್ಮಿಯಲ್ಲಿನ ಮನೆಯೊಂದರಲ್ಲಿ ಆರೋಪಿಗಳು ವಾಸವಾಗಿದ್ದು ದನಗಳನ್ನು ಕಳ್ಳತನ ಮಾಡಿ ಮಾಂಸವನ್ನು ಮಾರಾಟ ಮಾಡುತ್ತಿದ್ದರು ಎನ್ನಲಾಗಿದೆ. ಈ ಬಗ್ಗೆ ಖಚಿತ ಮಾಹಿತಿ ಪಡೆದ ಪೊಲೀಸರು ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ. ಇನ್ನೋರ್ವ ಆರೋಪಿ ಕುಂದಾಪುರದ ಜಬ್ಟಾರ್ ಎಂಬಾತ ತಪ್ಪಿಕೊಂಡಿದ್ದು ಆತನ ಬಂಧನಕ್ಕೆ ಬಲೆ ಬೀಸಲಾಗಿದೆ.
ಆರೋಪಿಗಳಿಂದ ಮಾಂಸ ತೆಗೆದುಕೊಳ್ಳುತ್ತಿದ್ದ ಭಟ್ಕಳದ ಇಬ್ರಾಹಿಂ ಎನ್ನುವವನ ಮೇಲೂ ಪ್ರಕರಣ ದಾಖಲಿಸಿಕೊಂಡಿದ್ದು ಆತನ ಪತ್ತೆಗೆ ಕೂಡಾ ಪೊಲೀಸರು ಬಲೆ ಬೀಸಿದ್ದಾರೆ. ಆರೋಪಿಗಳು ಕೃತ್ಯಕ್ಕೆ ಬಳಸುತ್ತಿದ್ದ ಮಾರುತಿ ಓಮ್ನಿ ಕಾರನ್ನು ವಶಕ್ಕೆ ಪಡೆದುಕೊಂಡಿದ್ದು, ಎಲ್ಲೆಲ್ಲಿ ಕಳ್ಳತನ ಮಾಡಿದ್ದಾರೆ ಎನ್ನುವ ಕುರಿತು ಮಾಹಿತಿ ಕಲೆ ಹಾಕುತ್ತಿದ್ದಾರೆ. ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dandeli: ಅಧಿಕಾರಿಗಳಿಂದ ರೈಲು ಮಾರ್ಗದ ವಿದ್ಯುದ್ದೀಕರಣ ಪರಿಶೀಲನೆ
Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ
Thailand ನಲ್ಲಿ ಜೇನಿನ ಆಯುರ್ವೇದ ಔಷಧ ಕಥೆ ಹೇಳಿದ ಅಪ್ಪ,ಮಗಳು
Dandeli: ವಿದ್ಯುತ್ ಕಂಬದ ಜಿಓಎಸ್ ಕಳವು ಮಾಡಿದ್ದ ಆರೋಪಿ;ಮಾಲು ಸಹಿತ ವಶಕ್ಕೆ ಪಡೆದ ಪೊಲೀಸರು
Gujjar Kere: ಕೆರೆ ಪರಿಸರದ ರಕ್ಷಣೆಗೆ ಆದ್ಯತೆ ಅಗತ್ಯ; ತಹಶೀಲ್ದಾರ್ಗೆ ಮರು ಮನವಿ
MUST WATCH
ಹೊಸ ಸೇರ್ಪಡೆ
Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ
Road Mishap: ಬೈಕ್ ಗೆ ಕಾರು ಡಿಕ್ಕಿ: ಓರ್ವ ಸಾವು, ಇಬ್ಬರಿಗೆ ಗಾಯ
IFFI 2024: ಇದು ಕನ್ನಡದಲ್ಲೇ ಸಿನಿಮಾಗಳನ್ನು ಮಾಡುವ ಕಾಲ: ಚಿದಾನಂದ ಎಸ್. ನಾಯಕ್
School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ
Shimoga: ಅರಣ್ಯ ಇಲಾಖೆ ಜತೆ ಸೇರಿ ಕಾಡಾನೆಗಳನ್ನು ಓಡಿಸಿದ ಜನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.