ಪಾಟೀಲ ಗೆಲ್ಲಿಸಿ ಪಕ್ಷ ಬಲಪಡಿಸಲು ಶ್ರಮಿಸಿ: ಸಿದ್ದಾಜಿ
Team Udayavani, Dec 6, 2021, 10:28 AM IST
ಕಲಬುರಗಿ: ಜಿಲ್ಲೆಯಲ್ಲಿ ಭಾರತೀಯ ಜನತಾ ಪಕ್ಷವನ್ನು ಮತ್ತಷ್ಟು ಬಲ ಪಡಿಸಲು ಕಾರ್ಯಕರ್ತರು ಶ್ರಮವಹಿಸಿ ಕೆಲಸ ಮಾಡಬೇಕೆಂದು ಪಕ್ಷದ ನಗರಾಧ್ಯಕ್ಷ ಸಿದ್ಧಾಜಿ ಪಾಟೀಲ ಕರೆ ನೀಡಿದರು.
ನಗರದ ಸಂಗಮೇಶ್ವರ ಕಾಲೋನಿಯಲ್ಲಿರುವ ಯಜ್ಞವಲ್ಕ ಸಭಾಗಂಣದಲ್ಲಿ ಬಿಜೆಪಿ ದಕ್ಷಿಣ ಮಂಡಲ ಕಾರ್ಯಕಾರಿಣಿ ಸಭೆಯನ್ನು ಭಾರತಮಾತೆ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮುಖಾಂತರ ಚಾಲನೆ ನೀಡಿ ಅವರು ಮಾತನಾಡಿದರು.
ಕಲಬುರಗಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಯಾಘನ ಧಾರವಾಡಕರ್ ಮಾತನಾಡಿ, ಪ್ರಸ್ತುತ ನಡೆಯುತ್ತಿರುವ ವಿಧಾನಪರಿಷತ್ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಯಾದ ಬಿ.ಜಿ.ಪಾಟೀಲ ಅವರನ್ನು ಗೆಲ್ಲಿಸಲು ಕಾರ್ಯಕರ್ತರು ಶ್ರಮ ವಹಿಸಬೇಕಾಗಿದೆ ಎಂದರು.
ದಕ್ಷಿಣ ಮಂಡಲದ ಪ್ರಧಾನ ಕಾರ್ಯದರ್ಶಿ ವಿಶ್ವನಾಥ ಸಾಲಿಮಠ ಮಾತನಾಡಿ, ಕಳೆದ ಮೂರು ತಿಂಗಳಲ್ಲಿ ನಡೆದ ಪಕ್ಷದ ಕಾರ್ಯ ಕ್ರಮಗಳನ್ನು ವಿವರಿಸಿದರು. ದಕ್ಷಿಣ ಮಂಡಲದ ಅಧ್ಯಕ್ಷ ರಾಮಚಂದ್ರ ಗುಮ್ಮಟ್ ಸ್ವಾಗತ ಭಾಷಣ ಮಾಡಿದರು. ಕಾರ್ಯಕಾರಿಣಿ ಆರಂಭಕ್ಕೂ ಮುಂಚೆ ಇತ್ತೀಚೆಗೆ ನಿಧನರಾದ ಕರ್ನಾಟಕ ರತ್ನ ಪವರ್ ಸ್ಟಾರ್ ಪುನೀತ್ ರಾಜಕುಮಾರ ಹಾಗೂ ಹಿರಿಯ ನಟ ಶಿವರಾಮ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು.
ಮುಖಂಡರಾದ ಮಹದೇವ ಬೆಳ ಮಗಿ, ಸುರಜ ಪ್ರಸಾದ ತಿವಾರಿ, ವಿಶ್ವನಾಥ ಸಾಲಿಮಠ, ಸತೀಶ ಜಮಖಂಡಿ, ರಂಜಿತ್ ಮೂಲಿಮನಿ, ಮಹಾನಗರ ಪಾಲಿಕೆ ಸದಸ್ಯರಾದ ವಿಶಾಲ ದರ್ಗಿ, ಮಲ್ಲು ಉದನೂರು, ವೀರಣ್ಣ ಹೊನ್ನಳ್ಳಿ, ಶಂಭು ಬಳಬಟ್ಟಿ, ಗುರು ಪಟ್ಟಣ, ಮೋರ್ಚಾ ಅಧ್ಯಕ್ಷೆ ಶೋಭಾ ಪಾಟೀಲ ಬಾಗೆವಾಡಿ, ವಿಜಯಲಕ್ಷ್ಮೀ ಗೊಬ್ಬುರ, ಮಹಾದೇವಿ, ಆರತಿ ತಿವಾರಿ, ಸತೀಶ ಜಮಖಂಡಿ, ರಂಜಿತ ಮೂಲಿಮನಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ
Kalaburagi: ಶಿಗ್ಗಾವಿ ಫಲಿತಾಂಶ ಅನಿರೀಕ್ಷಿತ; ನಾವು ಒಪ್ಪುವುದಿಲ್ಲ: ಸಿ.ಟಿ.ರವಿ
School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ
Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್: ಛಲವಾದಿ
Report: ರಾಜ್ಯ ಗುತ್ತಿಗೆದಾರರ ಸಂಘದಿಂದ ಲೋಕಾಯುಕ್ತಕ್ಕೆ ದೂರು ಕೊಟ್ಟಿಲ್ಲ: ಜಗನ್ನಾಥ ಶೇಗಜಿ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್‌ನ ಕೃಷ್ಣದಾಸ್ ಸೆರೆ
Parliament Session: ಗೂಂಡಾಗಿರಿ ಮೂಲಕ ಸಂಸತ್ ಮೇಲೆ ನಿಯಂತ್ರಣ ಸಾಧಿಸಲು ಯತ್ನ: ಮೋದಿ
Sullia: ರಬ್ಬರ್ ಸ್ಮೋಕ್ ಹೌಸ್‌ಗೆ ಬೆಂಕಿ
Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ
Mosque survey: ಸಂಭಲ್ ಹಿಂಸೆ: ಎಸ್ಪಿ ಸಂಸದ ಸೇರಿ ಹಲವರ ವಿರುದ್ಧ ಕೇಸು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.