ಸಿದ್ದೇಶ್ವರ ಶ್ರೀಗಳು ನಡೆದಾಡುವ ದೇವರು – ಬೊಮ್ಮಾಯಿ
Team Udayavani, Dec 6, 2021, 10:35 AM IST
ಭಾಲ್ಕಿ: ವಿಜಯಪುರ ಜ್ಞಾನ ಯೋಗಾಶ್ರಮದ ಶ್ರೀ ಸಿದ್ದೇಶ್ವರ ಮಹಾಸ್ವಾಮಿಗಳು ನಡೆದಾಡುವ ದೇವರಾಗಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಭಿಪ್ರಾಯ ವ್ಯಕ್ತಪಡಿಸಿದರು.
ಪಟ್ಟಣದ ಚನ್ನಬಸವಾಶ್ರಮದಲ್ಲಿ ಸೋಮವಾರ ನಡೆದ ಶ್ರೀ ಸಿದ್ದೇಶ್ವರ ಮಹಾಸ್ವಾಮಿಗಳ ಪ್ರವಚನ ಕಾರ್ಯಕ್ರಮದಲ್ಲಿ ಹಿರೇಮಠ ಸಂಸ್ಥಾನದ ವತಿಯಿಂದ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು.
ಶ್ರೀ ಸಿದ್ದೇಶ್ವರ ಮಹಾಸ್ವಾಮಿಗಳ ಪ್ರವಚನ ಆಲಿಸಲು ಬಂದವನು ನಾನು, ಇಲ್ಲಿ ಮಾತನಾಡಲು ನನಗೆ ಏನೂ ಇಲ್ಲ. ಸಿದ್ದೇಶ್ವರ ಅಪ್ಪನವರ ಮಾತು ನಿಮ್ಮ ಹೃದಯ ತುಂಬಿದೆ. ತುಂಬಿದ ಹೃದಯದಲ್ಲಿ ನನ್ನ ಮಾತು ಬೇಕಿಲ್ಲ. ಪೂಜ್ಯರ ಮಾತುಗಳೇ ನನಗೆ ಪ್ರೇರಣೆ. ನನ್ನ ಹೃದಯ ಅಂತರಾಳದ ಪರಮ ಹೂಗಳು ಅವರ ಮಾತುಗಳು. ಅವರ ಮಾತುಗಳು ಪ್ರತಿನಿತ್ಯ ನನ್ನ ಜೀವನದಲ್ಲಿ ಅಳವಡಿಸಿಕೊಳ್ಳಲು ನಾನು ಪ್ರಯತ್ನಿಸುತ್ತೇನೆ ಎಂದು ಹೇಳಿದರು.
ಹಿರೇಮಠ ಸಂಸ್ಥಾನದ ಹಿರಿಯ ಸ್ವಾಮೀಜಿಗಳೂ ಆದ ಬಸವಕಲ್ಯಾಣ ಅನುಭವ ಮಂಟಪದ ಅಧ್ಯಕ್ಷ ಡಾ| ಬಸವಲಿಂಗ ಪಟ್ಟ ದೇವರು ಸಾನಿಧ್ಯವಹಿಸಿ ಮಾತನಾಡಿದರು. ಕೇಂದ್ರ ಮಂತ್ರಿ ಭಗವಂತ ಖೂಬಾ, ಪುರಸಭೆ ಅಧ್ಯಕ್ಷ ಬಸವರಾಜ ವಂಕೆ, ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವ್ಹಾಣ ವೇದಿಕೆಯಲ್ಲಿ ಉಪಸ್ಥಿತರಿದ್ದು ಶ್ರೀಮಠದಿಂದ ಸನ್ಮಾನ ಸ್ವೀಕರಿಸಿದರು.
ಇದನ್ನೂ ಓದಿ:ಪಾಟೀಲ ಗೆಲ್ಲಿಸಿ ಪಕ್ಷ ಬಲಪಡಿಸಲು ಶ್ರಮಿಸಿ: ಸಿದ್ದಾಜಿ
ಹಿರೇಮಠ ಸಂಸ್ಥಾನದ ಪೀಠಾಧಿಪತಿ ಶ್ರೀ ಗುರುಬಸವ ಪಟ್ಟದ್ದೇವರು, ಮಾಜಿ ಶಾಸಕ ಪ್ರಕಾಶ ಖಂಡ್ರೆ, ಬಿಜೆಪಿ ಯುವ ಮುಖಂಡ ಡಿ.ಕೆ.ಸಿದ್ರಾಮ, ಡಾ| ಶೈಲೇಂದ್ರ ಬೆಲ್ದಾಳೆ, ಬಾಬು ವಾಲಿ, ಬಸವರಾಜ ಧನ್ನೂರ, ಮಾರುತಿರಾವ ಮುಳೆ, ಸೂರ್ಯಕಾಂತ ನಾಗಮಾರಪಳ್ಳಿ ಸೇರಿದಂತೆ ವಿವಿಧ ಮಠಗಳ ಪೀಠಾಧ್ಯಕ್ಷರು ಉಪಸ್ತಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
By Polls Result: ಪ್ರತಿಪಕ್ಷಗಳ ಸುಳ್ಳು ಆರೋಪಕ್ಕೆ ಜನಾದೇಶದ ಉತ್ತರ: ಖಂಡ್ರೆ
Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ
Bidar: ಬಿಜೆಪಿಯವರು ಅಧಿಕಾರಕ್ಕಾಗಿ ಏನು ಮಾಡಲೂ ಹೇಸದವರು: ಈಶ್ವರ್ ಖಂಡ್ರೆ
Bidar: ದೇಶದ ಆರ್ಥಿಕತೆಗೆ ‘ಸಹಕಾರʼದ ಕೊಡುಗೆ ಶ್ರೇಷ್ಠ: ಸಚಿವ ಈಶ್ವರ ಖಂಡ್ರೆ
Bidar: ವಾಂತಿ-ಭೇದಿ… ವಸತಿ ಶಾಲೆಯ 50ಕ್ಕೂ ಹೆಚ್ಚು ಮಕ್ಕಳು ಆಸ್ಪತ್ರೆಗೆ ದಾಖಲು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.