ನಮ್ಮ ಗುರಿ ಭಾರತೀಯ ಕ್ರಿಕೆಟ್ ಬೆಳವಣಿಗೆ: ವಿರಾಟ್ ಕೊಹ್ಲಿ
Team Udayavani, Dec 7, 2021, 5:10 AM IST
ಮುಂಬಯಿ: ನ್ಯೂಜಿಲ್ಯಾಂಡ್ ಎದುರಿನ ಮುಂಬಯಿ ಟೆಸ್ಟ್ ಪಂದ್ಯ ಗೆದ್ದ ಬಳಿಕ ಪ್ರಧಾನ ಕೋಚ್ ರಾಹುಲ್ ದ್ರಾವಿಡ್ ಅವರೊಂದಿಗೆ ಕಾರ್ಯ ನಿರ್ವಹಿಸಿದ ಅನುಭವ ಮತ್ತು ಮುಂದಿನ ದಕ್ಷಿಣ ಆಫ್ರಿಕಾ ಪ್ರವಾಸದ ಬಗ್ಗೆ ನಾಯಕ ವಿರಾಟ್ ಕೊಹ್ಲಿ ಮಹತ್ವದ ಹೇಳಿಕೆ ನೀಡಿದ್ದಾರೆ.
“ನಾವೆಲ್ಲರೂ ಭಾರತೀಯ ಕ್ರಿಕೆಟ್‌ಗಾಗಿ ದುಡಿಯುತ್ತಿದ್ದೇವೆ. ಈ ಹಿಂದಿನ ಆಡಳಿತ ಮಂಡಳಿ ಕೂಡ ಅಮೋಘ ರೀತಿಯಲ್ಲಿ ಕರ್ತವ್ಯ ನಿರ್ವಹಿಸಿತ್ತು. ಇದೀಗ ರಾಹುಲ್ ಭಾಯ್ ಆಗಮಿಸಿದ್ದಾರೆ. ದ್ರಾವಿಡ್ ಭಾರತ ಕ್ರಿಕೆಟ್ ಕಂಡ ಯಶಸ್ವಿ ಆಟಗಾರ. ಅವರ ಗರಡಿಯಲ್ಲಿ ಬೆಳೆದ ಹಲವಾರು ಕ್ರಿಕೆಟಿಗರು ಇಂದು ಟೀಮ್ ಇಂಡಿಯಾದಲ್ಲಿ ಮಿಂಚುತ್ತಿರುವುದನ್ನು ಕಾಣಬಹುದು. ಅವರೊಂದಿಗೆ ಕರ್ತವ್ಯ ನಿರ್ವಹಿಸುತ್ತಿರುವುದು ನನ್ನ ಪಾಲಿಗೆ ಅದೃಷ್ಟವೇ ಸರಿ. ಅದರಂತೆ ನಮ್ಮ ಗುರಿ ಹೊಸ ಆಡಳಿತ ಮಂಡಳಿಯಲ್ಲಿ ಭಾರತೀಯ ಕ್ರಿಕೆಟನ್ನು ಉತ್ತುಂಗಕ್ಕೆ ಏರಿಸಿ ಭಾರತೀಯ ಕ್ರಿಕೆಟಿನ ಗೌರವವನ್ನು ಉಳಿಸಿಕೊಳ್ಳುವುದಾಗಿದೆ’ ಎಂದು ಕೊಹ್ಲಿ ಹೇಳಿದರು.
ಇದನ್ನೂ ಓದಿ:ಸಂಸತ್ ಟಿವಿಯಿಂದ ಹೊರಬಂದ ಶಶಿ ತರೂರ್
ದ.ಆಫ್ರಿಕಾದಲ್ಲಿ ಪ್ರಬಲ ಸವಾಲು
ಈ ತಿಂಗಳಾಂತ್ಯ ಆರಂಭವಾಗಲಿರುವ ದಕ್ಷಿಣ ಆಫ್ರಿಕಾ ಪ್ರವಾಸದ ಬಗ್ಗೆಯೂ ಮಾತನಾಡಿದ ವಿರಾಟ್ ಕೊಹ್ಲಿ, “ನಮಗಲ್ಲಿ ಪ್ರಬಲ ಸವಾಲು ಎದುರಾಗಲಿದೆ. ಅಲ್ಲಿ ಗೆಲುವು ಸಾಧಿಸುವುದು ಸುಲಭವಿಲ್ಲ. ಆದರೆ ನಮ್ಮ ತಂಡ ಬಲಿಷ್ಠವಾಗಿದೆ. ಆಸ್ಟ್ರೇಲಿಯದಲ್ಲಿ ನಾವು ಈಗಾಗಲೇ ಯಶಸ್ವಿಯಾಗಿದ್ದೇವೆ. ಅದೇ ಮನಃಸ್ಥಿತಿಯಲ್ಲಿ ದಕ್ಷಿಣ ಆಫ್ರಿಕಾದಲ್ಲಿಯೂ ಕಣಕ್ಕೆ ಇಳಿಯುತ್ತೇವೆ’ ಎಂಬ ವಿಶ್ವಾಸ ವ್ಯಕ್ತಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Team India: ವೇಗಿ ಮೊಹಮ್ಮದ್ ಶಮಿಗೆ ಕಟ್ಟುನಿಟ್ಟಿನ ಗಡುವು ನೀಡಿದ ಬಿಸಿಸಿಐ!
Team Indiaಕ್ಕೆ ಆಸೀಸ್ ಪ್ರಧಾನಿ ಔತಣ: ಆಟದಲ್ಲಿ ಸ್ವಲ್ಪ ಮಸಾಲೆ ಬೇಕು
ICC ಇಂದು ಸಭೆ: ಚಾಂಪಿಯನ್ಸ್ ಟ್ರೋಫಿ; ಹೈಬ್ರಿಡ್ ಮಾದರಿಗೆ ಮತದಾನ?
Test; ದಕ್ಷಿಣ ಆಫ್ರಿಕಾ ಎದುರು ನಿಕೃಷ್ಟ ಮೊತ್ತಕ್ಕೆ ಶ್ರೀಲಂಕಾ ಆಲೌಟ್
Badminton; ಸಯ್ಯದ್ ಮೋದಿ ಇಂಟರ್‌ನ್ಯಾಶನಲ್: ಸಿಂಧು, ಸೆನ್ ಕ್ವಾರ್ಟರ್‌ಫೈನಲಿಗೆ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Commando: ಮೋದಿ ರಕ್ಷಣೆಯ ಮಹಿಳಾ ಕಮಾಂಡೋ ಫೋಟೊ ವೈರಲ್: ಏನಿದರ ಅಸಲೀಯತ್ತು?
Team India: ವೇಗಿ ಮೊಹಮ್ಮದ್ ಶಮಿಗೆ ಕಟ್ಟುನಿಟ್ಟಿನ ಗಡುವು ನೀಡಿದ ಬಿಸಿಸಿಐ!
SPB: ಎಸ್‌ಪಿಬಿ ಸ್ಮಾರಕ ನಿರ್ಮಾಣಕ್ಕಾಗಿ ಡಿ.8ರಂದು ಸಂಗೀತ ಕಛೇರಿ
Sandalwood: ನಿಮ್ಮ ನಿರೀಕ್ಷೆಗೆ ನಾವು ಜವಾಬ್ದಾರರು: ʼನಾ ನಿನ್ನ ಬಿಡಲಾರೆ’ ಇಂದು ತೆರೆಗೆ
ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.